ನಿಧನ ವಾರ್ತೆ
Murali Krishna-ಗಾಯಕಿ ಎಸ್. ಜಾನಕಿ ಪುತ್ರ ಮುರಳಿ ಕೃಷ್ಣ ಹೃದಯಾಘಾತದಿಂದ ನಿಧನ
ಭಾರತೀಯ ಚಿತ್ರರಂಗದ ದಂತಕಥೆ, ಖ್ಯಾತ ಗಾಯಕಿ ಎಸ್. ಜಾನಕಿ ಅವರ ಏಕೈಕ ಪುತ್ರ ಮುರಳಿ ಕೃಷ್ಣ (65) ಅವರು ಗುರುವಾರ (ಜ.22) ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. ಮುರಳಿ ಕೃಷ್ಣ ಅವರಿಗೆ ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತವಾಗಿದ್ದು, ಹೈದರಾಬಾದ್‌ನ ತಮ್ಮ ನಿವಾಸದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು: ಭಾರತೀಯ ಚಿತ್ರರಂಗದ ದಂತಕಥೆ, ಖ್ಯಾತ ಗಾಯಕಿ ಎಸ್. ಜಾನಕಿ ಅವರ ಏಕೈಕ ಪುತ್ರ ಮುರಳಿ ಕೃಷ್ಣ (65) ಅವರು ಗುರುವಾರ (ಜ.22) ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. ಮುರಳಿ ಕೃಷ್ಣ ಅವರಿಗೆ ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತವಾಗಿದ್ದು, ಹೈದರಾಬಾದ್‌ನ ತಮ್ಮ ನಿವಾಸದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ತಾಯಿಯಂತೆ ಕಲಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದ ಇವರು ಭರತನಾಟ್ಯದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದರು.
ನೃತ್ಯ ಸಂಯೋಜಕರಾಗಿ ಗುರುತು:
ಮುರಳಿ ಕೃಷ್ಣ ಅವರು ಕೇವಲ ಗಾಯಕಿ ಜಾನಕಿ ಅವರ ಮಗನಾಗಿ ಮಾತ್ರವಲ್ಲದೆ, ಪ್ರತಿಭಾವಂತ ಭರತನಾಟ್ಯ ಕಲಾವಿದ ಮತ್ತು ನೃತ್ಯ ಸಂಯೋಜಕರಾಗಿ (Choreographer) ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅನೇಕ ಚಲನಚಿತ್ರಗಳಿಗೆ ಅವರು ಭರತನಾಟ್ಯ ನೃತ್ಯ ಸಂಯೋಜನೆ ಮಾಡಿದ್ದರು.
ವೈಯಕ್ತಿಕ ಜೀವನ:
ಮುರಳಿ ಕೃಷ್ಣ ಅವರು ಭರತನಾಟ್ಯ ಮತ್ತು ಕುಚುಪುಡಿ ಪ್ರವೀಣೆ ಉಮಾ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ, ಕಳೆದ ಕೆಲವು ವರ್ಷಗಳಿಂದ ದಂಪತಿ ಪರಸ್ಪರ ದೂರವಾಗಿದ್ದರು. ಮುರಳಿ ಕೃಷ್ಣ ಅವರು ಮೈಸೂರಿನಲ್ಲಿಯೂ ಕೆಲವು ಕಾಲ ನೆಲೆಸಿದ್ದರು. ಆ ಸಮಯದಲ್ಲಿ ತಾಯಿ ಜಾನಕಿ ಅವರು ಕೂಡ ಅವರ ಜೊತೆಗಿದ್ದರು ಎನ್ನಲಾಗಿದೆ.
ಮುರಳಿ ಕೃಷ್ಣ ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ದಿಗ್ಗಜರು, ಸಂಗೀತಗಾರರು ಹಾಗೂ ಕಲಾ ಪ್ರೇಮಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಿಧನ ವಾರ್ತೆ
Kerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
ಕೇರಳದ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಲಕ್ಷಾಂತರ ಆನೆ ಪ್ರಿಯರ ಮನಗೆದ್ದಿದ್ದ ಪ್ರಸಿದ್ಧ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿದೆ. ಎರಟ್ಟುಪೆಟ್ಟಾ ಸಮೀಪದ ಮೇಲಂಪಾರದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಕೊಟ್ಟಾಯಂ (ಕೇರಳ): ಕೇರಳದ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಲಕ್ಷಾಂತರ ಆನೆ ಪ್ರಿಯರ ಮನಗೆದ್ದಿದ್ದ ಪ್ರಸಿದ್ಧ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿದೆ. ಎರಟ್ಟುಪೆಟ್ಟಾ ಸಮೀಪದ ಮೇಲಂಪಾರದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಕಳೆದ ಒಂದು ತಿಂಗಳಿನಿಂದ ಮಾಲೀಕ ರಾಜೇಶ್ ಪಲ್ಲಟ್ ಅವರ ನಿವಾಸದ ಸಮೀಪದ ತಾತ್ಕಾಲಿಕ ಶೆಡ್‌ನಲ್ಲಿ ಬ್ರಹ್ಮದತ್ತನ್ ವಿಶ್ರಾಂತಿ ಪಡೆಯುತ್ತಿತ್ತು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿದೆ ಎನ್ನಲಾಗಿದೆ.
ಸುಮಾರು 28 ವರ್ಷಗಳ ಹಿಂದೆ ಅರುಣಾಚಲ ಪ್ರದೇಶದ ದಟ್ಟ ಕಾಡುಗಳಲ್ಲಿ ಮರದ ಆನೆಯಾಗಿ ಕೆಲಸ ಮಾಡುತ್ತಿದ್ದ ಬ್ರಹ್ಮದತ್ತನ್‌ನ್ನು ಕೊಟ್ಟಾಯಂನ ಪುತುಪ್ಪಳ್ಳಿಯ ಪೋಥನ್ ವರ್ಗೀಸ್ ಹಾಗೂ ಚಾಕೊ ಸಹೋದರರು ಕೇರಳಕ್ಕೆ ಕರೆತಂದಿದ್ದರು. ಆರಂಭದಲ್ಲಿ ‘ಪುತುಪ್ಪಳ್ಳಿ ಬ್ರಹ್ಮದತ್ತನ್’ ಎಂದು ಕರೆಯಲಾಗುತ್ತಿದ್ದ ಆನೆಯನ್ನು 16 ವರ್ಷಗಳ ಹಿಂದೆ ಪಲ್ಲಟ್ ಕುಟುಂಬ ಖರೀದಿಸಿದ ಬಳಿಕ ‘ಪಲ್ಲಟ್ಟು ಬ್ರಹ್ಮದತ್ತನ್’ ಎಂದು ಮರುನಾಮಕರಣ ಮಾಡಲಾಗಿತ್ತು.
10 ಅಡಿ 2 ಇಂಚು ಎತ್ತರ, ಅಗಲವಾದ ಹಣೆ ಹಾಗೂ ಉದ್ದನೆಯ ದಂತಗಳನ್ನು ಹೊಂದಿದ್ದ ಬ್ರಹ್ಮದತ್ತನ್ ಮಧ್ಯ ಕೇರಳದ ಪ್ರಮುಖ ದೇವಾಲಯ ಉತ್ಸವಗಳಲ್ಲಿ ಪ್ರಸಿದ್ಧಿ ಪಡೆದಿತ್ತು. ತ್ರಿಶೂರ್ ಪೂರಂನ ಪರಮೆಕ್ಕಾವು ದೇವಸ್ಥಾನದ ‘ರಾತ್ರಿ ಪೂರಂ’ನಲ್ಲಿ ದೇವರ ವಿಗ್ರಹವನ್ನು ಹೊತ್ತು ಸಾಗುತ್ತಿದ್ದ ಇದು, ಎಟ್ಟುಮನೂರು ಎಝರಪೊನ್ನನ ಹಾಗೂ ವೈಕಥಷ್ಟಮಿ ಉತ್ಸವಗಳ ಪ್ರಮುಖ ಆಕರ್ಷಣೆಯಾಗಿತ್ತು.
ತ್ರಿಶೂರ್ ಪೂರಂ ಬಳಿಕ ಗುರುವಾಯೂರು ದೇವಸ್ಥಾನಕ್ಕೆ ತೆರಳಿ ದೇವರಿಗೆ ಸೊಂಡಿಲೆತ್ತಿ ನಮಸ್ಕರಿಸುತ್ತಿದ್ದ ದೃಶ್ಯವೂ ಭಕ್ತರ ಗಮನ ಸೆಳೆಯುತ್ತಿತ್ತು. ಸಾಮಾಜಿಕ ಜಾಲತಾಣದಲ್ಲೂ ‘ಗಜಕೌಸ್ತುಭಂ ಪಲ್ಲಟ್ಟು ಬ್ರಹ್ಮದತ್ತನ್’ ಹೆಸರಿನ ಇನ್‌ಸ್ಟಾಗ್ರಾಂ ಪುಟದ ಮೂಲಕ ಆನೆಗೆ ಅಪಾರ ಅಭಿಮಾನಿಗಳಿದ್ದರು.
ಮಾವುತನೊಂದಿಗೆ ಅಪರೂಪದ ಬಾಂಧವ್ಯ
ಬ್ರಹ್ಮದತ್ತನ್ ತನ್ನ ದೀರ್ಘಕಾಲದ ಮಾವುತ ದಾಮೋದರನ್ ನಾಯರ್ ಅವರೊಂದಿಗೆ ವಿಶೇಷ ಭಾವನಾತ್ಮಕ ಬಾಂಧವ್ಯ ಹೊಂದಿತ್ತು. ಆರಂಭದಲ್ಲಿ ಮಲಯಾಳಂ ಅರ್ಥವಾಗದಿದ್ದ ಆನೆಗೆ ದಾಮೋದರನ್ ಪ್ರೀತಿಯಿಂದ ಹಿಂದಿ ಭಾಷೆಯ ಮೂಲಕ ತರಬೇತಿ ನೀಡಿದ್ದರು.
ವಡನಪ್ಪಳ್ಳಿ ಗಣೇಶಮಂಗಲಂ ಉತ್ಸವದ ವೇಳೆ ಮತ್ತೊಂದು ಆನೆ ದಾಮೋದರನ್ ನಾಯರ್ ಅವರ ಮೇಲೆ ದಾಳಿ ಮಾಡಲು ಮುಂದಾದಾಗ, ಬ್ರಹ್ಮದತ್ತನ್ ಮಧ್ಯಪ್ರವೇಶಿಸಿ ಆ ಆನೆಯನ್ನು ಓಡಿಸಿ ತನ್ನ ಮಾವುತನನ್ನು ರಕ್ಷಿಸಿತ್ತು ಎನ್ನಲಾಗಿದೆ.
2021ರ ಜೂನ್‌ನಲ್ಲಿ ದಾಮೋದರನ್ ನಾಯರ್ (74) ನಿಧನರಾದಾಗ, ಬ್ರಹ್ಮದತ್ತನ್ ಅವರ ಪಾರ್ಥಿವ ಶರೀರದ ಬಳಿ ಸೊಂಡಿಲೆತ್ತಿ ಅಂತಿಮ ನಮನ ಸಲ್ಲಿಸಿದ್ದ ದೃಶ್ಯ ಭಾರೀ ವೈರಲ್ ಆಗಿತ್ತು. ಈ ಘಟನೆ ಆನೆ ಮತ್ತು ಮಾವುತನ ನಡುವಿನ ಅಪರೂಪದ ಬಾಂಧವ್ಯಕ್ಕೆ ಸಾಕ್ಷಿಯಾಗಿತ್ತು.
ಇದೀಗ ಬ್ರಹ್ಮದತ್ತನ್ ನಿಧನದ ಸುದ್ದಿ ತಿಳಿದು ಸಾವಿರಾರು ಅಭಿಮಾನಿಗಳು ಹಾಗೂ ಸ್ಥಳೀಯರು ಮೇಲಂಪಾರಕ್ಕೆ ಆಗಮಿಸಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಗಜರಾಜನ ಅಕಾಲಿಕ ನಿಧನಕ್ಕೆ ಕೇರಳದ ದೇವಸ್ವಂ ಮಂಡಳಿ ಹಾಗೂ ಉತ್ಸವ ಪ್ರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಶಾಂತ ಸ್ವಭಾವದ ಬ್ರಹ್ಮದತ್ತನ್ ಜೊತೆ ಮಾವುತರು ಸಾಮಾನ್ಯವಾಗಿ ಅಂಕುಶ ಬಳಸುತ್ತಿರಲಿಲ್ಲ. ಜಾತ್ರೆ ಹಾಗೂ ಉತ್ಸವಗಳ ಸಂದರ್ಭಗಳಲ್ಲಿ ಮಾತ್ರ ನೆಪಕ್ಕಾಗಿ ಅಂಕುಶವನ್ನು ಕೈಯಲ್ಲಿ ಹಿಡಿದುಕೊಳ್ಳುತ್ತಿದ್ದರು ಎನ್ನಲಾಗಿದೆ. ಗಾಂಭೀರ್ಯದ ನಡೆ ಹಾಗೂ ಸೌಮ್ಯ ಸ್ವಭಾವದಿಂದ ‘ಗಜರಾಜ’ ಎಂಬ ಹೆಸರಿಗೆ ಅನ್ವರ್ಥವಾಗಿದ್ದ ಬ್ರಹ್ಮದತ್ತನ್‌ನ ದುರಂತ ಅಂತ್ಯ ಆನೆ ಪ್ರಿಯರಲ್ಲಿ ತೀವ್ರ ನೋವು ಮೂಡಿಸಿದೆ.
ನಿಧನ ವಾರ್ತೆ
Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ಸುಂದರ ಆಚಾರ್ಯ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಂದರ ಆಚಾರ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅ.6ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿಧನ ವಾರ್ತೆ
Dead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ರಂಕದಗುತ್ತು, ಕಸಬಾ ಗ್ರಾಮದ ಮೂಲದ ಶ್ರೇಯಸ್ ಅ.4ರಂದು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿಗೆ ತೆರಳಿದ್ದರು. ನಾಲ್ವರು ಅಪ್ರಾಪ್ತ ಸ್ನೇಹಿತರೊಂದಿಗೆ ಬೆಳಗ್ಗೆ ಸುಮಾರು 10 ಗಂಟೆಗೆ ಮಂಗಳೂರಿಗೆ ಬಂದು ಹುಲಿ ವೇಷದ ತರಬೇತಿಯಲ್ಲಿ ಭಾಗವಹಿಸಿದ್ದರು.
ತರಬೇತಿ ಮುಗಿದ ಬಳಿಕ ಶ್ರೇಯಸ್ ಹಾಗೂ ಸ್ನೇಹಿತರು ಸ್ಟೇಟ್ ಬ್ಯಾಂಕ್‌ನಿಂದ ಪಣಂಬೂರು ಬೀಚ್‌ಗೆ ತೆರಳಿದ್ದರು. ಸಂಜೆ ಸುಮಾರು 4.30ರಿಂದ 5 ಗಂಟೆಯ ವೇಳೆಗೆ ಕೂರಿಕಟ್ಟ ಸಮುದ್ರ ಕಿನಾರೆಗೆ ತೆರಳಿದ್ದು, ಸುಮಾರು 6 ಗಂಟೆಗೆ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾರೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು.
ಶ್ರೇಯಸ್ ನೀರು ಪಾಲಾದ ವಿಚಾರವನ್ನು ಆತನ ಅಪ್ರಾಪ್ತ ಸ್ನೇಹಿತರು ಭಯಗೊಂಡು ಮನೆಯವರಿಗೆ ತಿಳಿಸಿರಲಿಲ್ಲ. ಅ.5ರಂದು ಬೆಳಗ್ಗೆ ಈ ವಿಚಾರ ಶ್ರೇಯಸ್ ಕುಟುಂಬಸ್ಥರಿಗೆ ತಿಳಿದುಬಂದಿದೆ.
ಬಾಲಕನ ತಂದೆ ಶೇಷಪ್ಪ ನೀಡಿದ ದೂರಿನ ಆಧಾರದಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಬಾಲಕನ ಪತ್ತೆಗಾಗಿ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಹಾಗೂ ಸಮುದ್ರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿತ್ತು. ಲೈಫ್‌ಗಾರ್ಡ್‌ಗಳು, ಮುಳುಗು ತಜ್ಞರು ಹಾಗೂ ಸ್ಥಳೀಯ ಮೀನುಗಾರರ ಸಹಕಾರದಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
-
ಬಿಗ್ ನ್ಯೂಸ್24 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ರಾಜಕೀಯ24 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
ಅಂತರ ರಾಜ್ಯ11 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು13 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಮಂಗಳೂರು6 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಸ್ಥಳೀಯ11 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ12 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಅಂತರ ರಾಜ್ಯ11 hours agoFire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ


















