ಬೆಂಗಳೂರು
ಬಾಂಗ್ಲದೇಶದ ಅಕ್ರಮ ವಲಸಿಗರೆಂದು ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಚಾರ – ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಬಾಂಗ್ಲಾದೇಶದ ಅಕ್ರಮ ವಲಸಿಗರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಜನವರಿ 22ರಂದು ಪುನೀತ್ ಕೆರೆಹಳ್ಳಿ ಮತ್ತು ಸಹಚರರು ಸೋಲದೇವನಹಳ್ಳಿ ಬಳಿಯ ಕೆಂಪಾಪುರದ ಶ್ವೇತಾ ಫಾರಂ ರಸ್ತೆಯಲ್ಲಿನ ಸಕೀನಾ ತನ್ನೀಮ್ ಎಂಬುವರಿಗೆ ಸೇರಿದ ಜಾಗಕ್ಕೆ ಹೋಗಿ ಗಲಾಟೆ ಮಾಡಿದ್ದರು.
ಬಾಂಗ್ಲಾದೇಶದವರನ್ನು ಮಾನವ ಕಳ್ಳ ಸಾಗಾಣಿಕೆ ಮೂಲಕ ಕರೆತಂದು ಅಕ್ರಮ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಾಗ್ವಾದ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಶ್ವೇತಾ ಫಾರಂ ರಸ್ತೆಯ ಜಾಗವು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರ ಬೇನಾಮಿ ಆಸ್ತಿ ಎಂದು ಪುನೀತ್ ಮತ್ತು ಸಹಚರರು ಸುಳ್ಳು ಆರೋಪ ಮಾಡಿ ಸ್ಥಳದಲ್ಲಿ ವಿಡಿಯೊ ಮಾಡಿದ್ದರು. ಅಲ್ಲದೆ, ಆ ಜಾಗದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲಸಿದ್ದಾರೆ ಎಂದು ವಿಡಿಯೊ ಚಿತ್ರೀಕರಿಸಿ ಫೇಸ್‌ಬುಕ್ ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಟ್ಟು ಸಮಾಜದಲ್ಲಿ ಶಾಂತಿ ಕದಡಿದ, ಕೋಮು ಸಾಮರಸ್ಯಕ್ಕೆ ಧಕ್ಕೆ ತಂದ, ಸಾರ್ವಜನಿಕರನ್ನು ಪ್ರಚೋದಿಸಿದ, ಸಮುದಾಯಗಳ ನಡುವೆ ದ್ವೇಷ ಮೂಡಿಸಿದ ಹಾಗೂ ಮಾಹಿತಿ ತಂತ್ರಜ್ಞಾನ ದುರ್ಬಳಕೆ ಆರೋಪದಡಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಅಪರಾಧ
FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.
ಬಿಗ್ ನ್ಯೂಸ್
Athletes-ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ; ಸರ್ಕಾರದಿಂದ ಅಧಿಸೂಚನೆ
ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯ ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮ’ಗಳಿಗೆ ಸಚಿವ ಸಂಪುಟ ಈಗಾಗಲೇ ಅನುಮೋದನೆ ನೀಡಿತ್ತು. 2022ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು.
ಎಲ್ಲ ವರ್ಗಗಳಿಗೂ ಅನ್ವಯ
ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಲ್ಲೂ ಶೇ.2ರಷ್ಟು ಮೀಸಲಾತಿ ಅನ್ವಯವಾಗಲಿದೆ.
ಮೀಸಲಾತಿ ಪಡೆಯಲು ಅರ್ಹರಾಗುವ ಕ್ರೀಡಾಪಟುಗಳು ನಿರ್ದಿಷ್ಟ ಕ್ರೀಡೆ ಅಥವಾ ಸ್ಪರ್ಧೆಯಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ವೈಯಕ್ತಿಕವಾಗಿ ಅಥವಾ ತಂಡದ ಸದಸ್ಯರಾಗಿ ಭಾಗವಹಿಸಿರಬೇಕು. ಇತರ ರಾಜ್ಯಗಳು ಅಥವಾ ಭಾರತೀಯ ರೈಲ್ವೆಯಂತಹ ಸಂಸ್ಥೆಗಳನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು ಕನಿಷ್ಠ ಒಂದು ರಾಷ್ಟ್ರೀಯ ಚಾಂಪಿಯನ್‌ಷಿಪ್ ಅಥವಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪರ್ಧಿಸಿರುವುದು ಅಗತ್ಯವಾಗಿರುತ್ತದೆ.
ಅರ್ಹ ಕ್ರೀಡಾಪಟುಗಳಿಗೆ ಅವರ ಕ್ರೀಡಾ ಸಾಧನೆಗೆ ಅನುಗುಣವಾಗಿ ಕೃಪಾಂಕಗಳನ್ನು ನೀಡಲಾಗುತ್ತದೆ. ಒಲಿಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದವರಿಗೆ 50, ಬೆಳ್ಳಿ ಪದಕ ಪಡೆದವರಿಗೆ 49 ಹಾಗೂ ಕಂಚಿನ ಪದಕ ವಿಜೇತರಿಗೆ 48 ಕೃಪಾಂಕಗಳನ್ನು ನಿಗದಿಪಡಿಸಲಾಗಿದೆ. ಇದೇ ರೀತಿ ಅಧಿಸೂಚಿತ 34 ಕ್ರೀಡೆಗಳಲ್ಲಿ ಸಾಧನೆಗೆ ಅನುಗುಣವಾಗಿ ಕೃಪಾಂಕ ನೀಡಲಾಗುತ್ತದೆ.
‘ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಬೆಂಬಲ’
ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಜಿ. ಪರಮೇಶ್ವರ, “ಕ್ರೀಡಾಪಟುಗಳು ಪದಕ ಗೆಲ್ಲುವ ಕ್ಷಣದಲ್ಲಿ ಮಾತ್ರವಲ್ಲ, ಅವರ ಕ್ರೀಡಾ ಪಯಣದ ಪ್ರತಿ ಹಂತದಲ್ಲೂ ಸರ್ಕಾರ ಅವರ ಜೊತೆಗೆ ನಿಲ್ಲಲಿದೆ. ಪ್ರತಿಭೆಗೆ ಅವಕಾಶ, ಸಾಧನೆಗೆ ಗೌರವ ಮತ್ತು ಭವಿಷ್ಯಕ್ಕೆ ಭದ್ರತೆ ನೀಡುವುದು ನಮ್ಮ ಕರ್ತವ್ಯ” ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನದ ಮೊತ್ತವನ್ನು ಇತರ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಮೊತ್ತಕ್ಕೆ ಹೋಲಿಕೆ ಮಾಡಿ ಪರಿಷ್ಕರಿಸಲಾಗುವುದು ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.
ರಾಜಕೀಯ
DK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ
ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಬೆಂಗಳೂರು: ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ ನಗದು ಬಹುಮಾನ ಘೋಷಿಸಿದರು. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ 20 ಕ್ರೀಡಾಪಟುಗಳಿಗೆ ತಲಾ ₹5 ಲಕ್ಷ
ಏಷ್ಯನ್ ಗೇಮ್ಸ್ 2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಸ್ಪರ್ಧಿಸಿದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ₹5 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗಿದೆ. ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ರಿಕೆಟ್, ಸೈಕ್ಲಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್ ವಿಭಾಗದ ಕ್ರೀಡಾಪಟುಗಳು ಇದರ ಫಲಾನುಭವಿಗಳಾಗಿದ್ದಾರೆ.
ಪದಕ ವಿಜೇತರ ಬಹುಮಾನ ಮೊತ್ತ ಭಾರೀ ಹೆಚ್ಚಳ
ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ನೀಡುತ್ತಿದ್ದ ನಗದು ಬಹುಮಾನವನ್ನು ಸರ್ಕಾರ ಹೆಚ್ಚಿಸಿದೆ. ಈ ಹಿಂದೆ ಚಿನ್ನದ ಪದಕಕ್ಕೆ ₹35 ಲಕ್ಷ, ಬೆಳ್ಳಿಗೆ ₹25 ಲಕ್ಷ ಹಾಗೂ ಕಂಚಿಗೆ ₹15 ಲಕ್ಷ ನೀಡಲಾಗುತ್ತಿತ್ತು.
ಇನ್ನು ಮುಂದೆ ಚಿನ್ನದ ಪದಕ ವಿಜೇತರಿಗೆ ₹1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ₹75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹50 ಲಕ್ಷ ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ.
ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಪದಕ ವಿಜೇತರಿಗೆ ನೇರ ನೇಮಕಾತಿ
ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಗುಂಪು-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಒಲಿಂಪಿಕ್ಸ್ ತಯಾರಿಗೆ ತಲಾ ₹10 ಲಕ್ಷ
ಮುಂದಿನ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೂ ಸರ್ಕಾರ ಪ್ರೋತ್ಸಾಹ ನೀಡಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್. ಹಾಗೂ ಶ್ರೇಯಾಂಕಾ ಪಾಟೀಲ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು 2026-27ನೇ ಸಾಲಿನ ‘ಗುರಿ ಒಲಿಂಪಿಕ್ಸ್’ ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಇವರಿಗೆ ಒಲಿಂಪಿಕ್ಸ್ ತಯಾರಿಗಾಗಿ ತಲಾ ₹10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುತ್ತದೆ.
ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ
ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೇರ ನೇಮಕಾತಿಗಳಲ್ಲಿ ಶೇ.2ರಷ್ಟು ಮೀಸಲಾತಿ ಜಾರಿಗೆ ತರಲಾಗಿದೆ. ಗುಂಪು-ಎ, ಗುಂಪು-ಬಿ, ಗುಂಪು-ಸಿ ಹಾಗೂ ಗುಂಪು-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಈ ಕುರಿತು ಅಕ್ಟೋಬರ್ 3, 2026ರಂದು ಅಧಿಸೂಚನೆ ಹೊರಡಿಸಲಾಗಿದೆ.
8 ಪದಕ ವಿಜೇತ ಕ್ರೀಡಾಪಟುಗಳು
ಶ್ರೇಯಾಂಕ ಆರ್. ಪಾಟೀಲ್ – ಮಹಿಳಾ ಕ್ರಿಕೆಟ್ ತಂಡ, ಚಿನ್ನ
ಎಂ.ಆರ್. ಪೂವಮ್ಮ – 4×400 ಮೀ. ಮಿಶ್ರ ರಿಲೇ, 4×400 ಮೀ. ಮಹಿಳಾ ರಿಲೇ – ಚಿನ್ನ ಮತ್ತು ಬೆಳ್ಳಿ
ತಿಲೋತ್ತಮಾ ಸೇನ್ – ಮಹಿಳೆಯರ 50 ಮೀ. ರೈಫಲ್, ಬೆಳ್ಳಿ
ಆಯುಷ್ ಆರ್. ಶೆಟ್ಟಿ – ಪುರುಷರ ತಂಡ ಬ್ಯಾಡ್ಮಿಂಟನ್, ಬೆಳ್ಳಿ
ಸ್ನೇಹಾ ಎಸ್.ಎಸ್. – 4×100 ಮೀ. ಮಿಶ್ರ ರಿಲೇ, ಕಂಚು
ಅದಿತಿ ಅಶೋಕ್ – ಮಹಿಳಾ ತಂಡ ಗಾಲ್ಫ್, ಬೆಳ್ಳಿ
ಪ್ರಣವಿ ಎಸ್. ಅರಸ್ – ಮಹಿಳಾ ತಂಡ ಗಾಲ್ಫ್ ಹಾಗೂ ವೈಯಕ್ತಿಕ ಸ್ಪರ್ಧೆ, ಬೆಳ್ಳಿ ಮತ್ತು ಚಿನ್ನ
ಮೋಹಿತ್ ಎಚ್.ಎಸ್. – ಪುರುಷರ ಹಾಕಿ ತಂಡ, ಚಿನ್ನ
ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದ 20 ಕ್ರೀಡಾಪಟುಗಳು
ಯಶಸ್ ಪಾಲಾಕ್ಷ, ಸುಪ್ರಿಯಾ ಸಿಂಡಿಗೆರೆ ಬಸವರಾಜು, ಉನ್ನತಿ ಅಯ್ಯಪ್ಪ, ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಆಯುಷ್ ಶೆಟ್ಟಿ, ಶ್ರೇಯಾಂಕ ಆರ್. ಪಾಟೀಲ್, ಕೀರ್ತಿ ರಂಗಸ್ವಾಮಿ, ಫವಾದ್ ಮಿರ್ಜಾ, ಅದಿತಿ ಅಶೋಕ್, ಪ್ರಣವಿ ಎಸ್. ಅರಸ್, ಮೋಹಿತ್ ಎಚ್.ಎಸ್., ತಿಲೋತ್ತಮಾ ಸೇನ್, ಆಕಾಶ್ ಮಣಿ, ಶ್ರೀಹರಿ ನಟರಾಜ್, ದಕ್ಷಣ್ ಎಸ್., ಅನೀಶ್ ಗೌಡ, ಯಶಸ್ವಿನಿ ಘೋರ್ಪಡೆ, ಸಿಂಧುಶ್ರೀ ಹಾಗೂ ದೀಪು ಮಲ್ಲೇಶ್ ಅವರು ತಲಾ ₹5 ಲಕ್ಷ ಪ್ರೋತ್ಸಾಹಧನ ಪಡೆದಿದ್ದಾರೆ.
-
ಬಿಗ್ ನ್ಯೂಸ್21 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized22 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ21 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized21 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಮಂಗಳೂರು10 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ8 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ರಾಜಕೀಯ9 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ
-
ಸ್ಥಳೀಯ8 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















