ಸ್ಥಳೀಯ
Priyanka Kharge-ಅಮಾನ್ಯಗೊಂಡ 400 ಕೋಟಿ ಹಣ ದರೋಡೆ : ಗುಜರಾತ್ ನಿಂದ ಹಣ ಸಾಗಿಸುವಾಗ ಅಮಿತ್ ಷಾ ಮಲಗಿದ್ದಾರಾ..? ಸರ್ಕಾರದ ಬಳಿ ಇಲ್ಲದ ಮಾಹಿತಿ ಬಿಜೆಪಿ ನಾಯಕರಿಗೆ ಹೇಗೆ ಗೊತ್ತು? ಸರಿಯಾಗಿ ತನಿಖೆ ನಡೆಯಲಿ ಪ್ರಿಯಾಂಕ ಖರ್ಗೆ
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ನಡೆದಿದೆ ಎನ್ನಲಾದ ಅಮಾನ್ಯಗೊಂಡ ₹2000 ಮುಖಬೆಲೆಯ ₹400 ಕೋಟಿ ರೂಪಾಯಿಗಳ ಬೃಹತ್ ದರೋಡೆ ಪ್ರಕರಣವು ಈಗ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.
ಕಲಬುರಗಿ/ಯಾದಗಿರಿ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ನಡೆದಿದೆ ಎನ್ನಲಾದ ಅಮಾನ್ಯಗೊಂಡ ₹2000 ಮುಖಬೆಲೆಯ ₹400 ಕೋಟಿ ರೂಪಾಯಿಗಳ ಬೃಹತ್ ದರೋಡೆ ಪ್ರಕರಣವು ಈಗ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಕಳೆದ ವರ್ಷದ ಅಕ್ಟೋಬರ್ 22 ರಂದು ಚೋರ್ಲಾ ಘಾಟ್‌ನಲ್ಲಿ ಎರಡು ಟ್ರಕ್‌ಗಳಲ್ಲಿ ಸಾಗಿಸಲಾಗುತ್ತಿದ್ದ ಹಣವನ್ನು ಆರು ಮಂದಿಯ ಗ್ಯಾಂಗ್ ಅಪಹರಿಸಿತ್ತು. ಈ ಬಗ್ಗೆ ಇತ್ತೀಚೆಗೆ ಸಂದೀಪ್ ದತ್ತ ಪಾಟೀಲ್ ಎಂಬುವವರು ನಾಸಿಕ್ ಪೊಲೀಸರಿಗೆ ದೂರು ನೀಡಿದ ನಂತರ ಈ ದಗಾಕೋರತನ ಬೆಳಕಿಗೆ ಬಂದಿದೆ.
ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳು:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಈ ಘಟನೆಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಪಾತ್ರವನ್ನು ಪ್ರಶ್ನಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ ಹಣವನ್ನು ಗುಜರಾತ್ ನಿಂದ ಹಣವನ್ನು ಗೋವಾಕ್ಕೆ ಹಣವನ್ನು ಸಾಗಿಸಲಾಗುತಿತ್ತು ಎನ್ನಲಾಗಿದೆ. ಆದರೆ ಅದು ಯಾರ ಹಣ ಎಂಬುದು ನಮಗೆ ತಿಳಿದಿಲ್ಲ. ಇದು ಕಾಂಗ್ರೆಸ್, ಬಿಜೆಪಿ, ಎನ್‌ಸಿಪಿ ಅಥವಾ ಶಿವಸೇನೆಗೆ ಸೇರಿದೆಯೇ ಎಂಬುರದ ಬಗ್ಗೆ ತನಿಖೆ ನಡೆಯಲಿ ಎಂದು ತಿಳಿಸಿದರು.
“ಬಿಜೆಪಿ ಸರ್ಕಾರಗಳು ಏನು ಮಾಡುತ್ತಿವೆ ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ಮೂರು ಸರ್ಕಾರಗಳ ಆಡಳಿತದಲ್ಲಿ ಈ ಘಟನೆ ಹೇಗೆ ನಡೆಯಿತು. ಅಮಾನ್ಯಗೊಂಡ 2000 ರೂ. ನೋಟುಗಳನ್ನು ಕಪ್ಪುಹಣದಿಂದ ಬಿಳಿ ಹಣಕ್ಕೆ ಪರಿವರ್ತಿಸಲು ತಿರುಪತಿಗೆ ಸಾಗಿಸಲಾಗುತಿತ್ತು ಎಂದು ಕೆಲ ಬಿಜೆಪಿ ಶಾಸಕರು ಹೇಳುತ್ತಿದ್ದಾರೆ. ಸರ್ಕಾರಗಳ ಬಳಿಯೂ ಇಲ್ಲದ ಮಾಹಿತಿ ಅವರಿಗೆ ಹೇಗೆ ತಿಳಿಯಿತು. ತಿರುಪತಿಯಲ್ಲಿ ಆಡಳಿತ ನಡೆಸುತ್ತಿರುವವರು ಯಾರು? ಈ ಪ್ರಶ್ನೆಗಳಿಗೆ ಕೇಂದ್ರವೇ ಉತ್ತರಿಸಬೇಕಿದೆ ಎಂದರು.
Gen Z ಮತ್ತು ಭಜನ್ ಕ್ಲಬ್‌ಗಳ ಬಗ್ಗೆ ಮಾತನಾಡಲು ಪ್ರಧಾನಿಗೆ ಸಮಯವಿದೆ. ಆದರೆ ಟ್ರಕ್‌ಗಳಲ್ಲಿ 400 ಕೋಟಿ ರೂ. ನಗದು ಸಾಗಣೆ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮಲಗಿದ್ದಾರಾ? ಅವರು ಎಲ್ಲಿದ್ದಾರೆ, ಅವರು ಬಿಜೆಪಿ ನಾಯಕರು ಚುನಾವಣಾ ಸಮಯದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಹಣದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಖರ್ಗೆ, 2000 ರೂ. ನೋಟು ಇನ್ನೂ ಏಕೆ ಚಾಲ್ತಿಯಲ್ಲಿದೆ? ಎಲ್ಲೂ ಕಾಣದಿರುವಾಗ ಅದನ್ನು ಯಾರು ಮತ್ತು ಹೇಗೆ ಮುದ್ರಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು. ತನಿಖಾ ಸಂಸ್ಥೆಗಳು ವಿರೋಧ ಪಕ್ಷಗಳ ಮೇಲೆ ಮಾತ್ರ ಗಮನಹರಿಸುತ್ತಿವೆ ಎಂದು ಹೇಳಿದರು. ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಕೇವಲ ವಿರೋಧ ಪಕ್ಷಗಳನ್ನು ಬಲೆಗೆ ಬೀಳಿಸಲು ಉದ್ದೇಶಿಸಿದೆಯೇ ಎಂದು ಪ್ರಶ್ನಿಸಿದರು.
ಬಿಜೆಪಿಯ ತಿರುಗೇಟು:
ಕಾಂಗ್ರೆಸ್ ಆರೋಪಗಳಿಗೆ ಪ್ರತಿಯಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ತನ್ನ ಪಾಲಿನ ಎಟಿಎಂ ಮಾಡಿಕೊಂಡಿದೆ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಿಂದ ಹಣ ಬಾರದ ಕಾರಣ, ಎಲ್ಲಾ ಚುನಾವಣೆಗಳಿಗೆ ಕರ್ನಾಟಕದ ಹಣವನ್ನೇ ಬಳಸಲಾಗುತ್ತಿದೆ,” ಎಂದು ಆರೋಪಿಸಿದರು.
ಅಲ್ಲದೆ, “ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಯಾಗುತ್ತಿಲ್ಲ. ಜನರಿಗೆ ನೀಡಬೇಕಾದ ₹5,000 ಕೋಟಿಯಷ್ಟು ಹಣ ಬಾಕಿ ಉಳಿಸಿಕೊಂಡು ದುರುಪಯೋಗ ಮಾಡಲಾಗುತ್ತಿದೆ. ಇಂತಹ ಜನವಿರೋಧಿ ಕೆಲಸ ಮಾಡಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ,” ಎಂದು ಅವರು ಕಿಡಿಕಾರಿದರು.
ಒಟ್ಟಾರೆಯಾಗಿ, ಈ ₹400 ಕೋಟಿ ದರೋಡೆ ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಮೆಟ್ಟಿಲೇರುವ ಸಾಧ್ಯತೆಯಿದ್ದು, ಉಭಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೆ ಹೊಸ ವೇದಿಕೆ ಒದಗಿಸಿದೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ20 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಶಿಕ್ಷಣ24 hours agoGovernment schools-ಎಲ್ಕೆಜಿ, ಯುಕೆಜಿ ತರಗತಿಗಳಿಗೆ ನಿರೀಕ್ಷೆಗೂ ಮೀರಿದ ಬೇಡಿಕೆ; ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಕ್ಕೆ ಸರ್ಕಾರ ಚಿಂತನೆ..!















