ಶಿಕ್ಷಣ
Ambika-ಅಂಬಿಕಾ ಸಂಸ್ಥೆಯಲ್ಲಿ ಪರಾಕ್ರಮ ದಿವಸ್ ಹಾಗೂ ವಸಂತ ಪಂಚಮಿ ಆಚರಣೆ; ದೇಶಕ್ಕಾಗಿ ಸಮರ್ಪಿಸಿಕೊಂಡವರು ಸುಭಾಷ್ ಚಂದ್ರ ಬೋಸ್ : ಆದರ್ಶ ಗೋಖಲೆ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಲಾದ ವಸಂತ ಪಂಚಮಿ ಹಾಗೂ ಪರಾಕ್ರಮ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಮಾತನಾಡಿದರು.
ಪುತ್ತೂರು: ಸ್ವಾತಂತ್ರ‍್ಯವನ್ನು ನಾವು ಬೇಡಿಕೊಳ್ಳಬೇಕಾಗಿಲ್ಲ, ಪರಕೀಯರನ್ನು ದೇಶದಿಂದ ಹೊರಹಾಕಬೇಕು ಎಂಬ ಸುಭಾಷ್ ಚಂದ್ರ ಬೋಸ್ ಅವರ ಫೋಷಣೆ ಯುವಜನರಲ್ಲಿ ದೇಶಭಕ್ತಿಯ ಭಾವವನ್ನು ಮೂಡಿಸಿತು. ಅನೇಕ ಮಂದಿ ಬ್ರಿಟಿಷರ ವಿರುದ್ಧ ಸೆಟೆದು ನಿಲ್ಲುವಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಪ್ರೇರಣೆ ಗಮನಾರ್ಹವಾದದ್ದು ಎಂದು ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಲಾದ ವಸಂತ ಪಂಚಮಿ ಹಾಗೂ ಪರಾಕ್ರಮ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ತನ್ನ ಹದಿನಾರು ವರ್ಷದ ವಯಸ್ಸಿನಲ್ಲಿ ರಾಮಕೃಷ್ಣ ಆಶ್ರಮ ಸೇರಬೇಕೆಂದು ಆಸೆಪಟ್ಟ ಸುಭಾಷ್ ಚಂದ್ರ ಬೋಸ್ ಅವರು, ತಂದೆಯ ಕನಸಿನಂತೆ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಇಂಗ್ಲೆAಡಿನಲ್ಲಿ ಅಧ್ಯಯನ ಮುಗಿಸಿ ಭಾರತಕ್ಕೆ ಮರಳಿದರು. ಆದರೆ ಬ್ರಿಟಿಷರ ಸೇವೆಯನ್ನು ತಿರಸ್ಕರಿಸಿ, ಸ್ವಾತಂತ್ರö್ಯ ಹೋರಾಟದಲ್ಲಿ ತೊಡಗಿಸಿಕೊಂಡರು. ಬೋಸರು ತಮ್ಮ ಗುರುಗಳಾದ ಚಿತ್ತರಂಜನ್ ದಾಸ್ ಅವರ ಪ್ರೇರಣೆಯಿಂದ ಸ್ವಾತಂತ್ರ‍್ಯ ಹೋರಾಟಕ್ಕೆ ತೊಡಗಿ ನಂತರ ‘ಸ್ವರಾಜ್’ ಎಂಬ ದೇಶಭಕ್ತಿಯ ಪತ್ರಿಕೆಯನ್ನು ಆರಂಭಿಸಿದರು ಎಂದು ನುಡಿದರು. ವಸಂತ ಪಂಚಮಿ ಆಚರಣೆ ಬಗೆಗೆ ಮಾತನಾಡಿದ ಅವರು ಪ್ರಕೃತಿಯನ್ನು ಪ್ರೀತಿಸಿ ಆರಾಧಿಸುವ ಹಬ್ಬವೇ ವಸಂತ ಪಂಚಮಿ ಎಂದರು.
ಕಾರ್ಯಕ್ರಮದ ಅಂಗವಾಗಿ ಮೂರನೇ ತರಗತಿಯ ವಿದ್ಯಾರ್ಥಿಗಳಾದ ರಿಶಾನ್ ಸುರೇಶ್ ಸರಳಿಕಾನ, ಸಾನ್ವಿತ್, ಶ್ರಾವಣಿ ಎಂ, ನಾಲ್ಕನೇ ತರಗತಿಯ ವಿದ್ಯಾರ್ಥಿಗಳಾದ ಮೋಕ್ಷ್, ಅದ್ವಿತ್ ಸಾಲಿಯಾನ್, ಸುಭಾಷ್ ಚಂದ್ರ ಬೋಸರ ಕುರಿತು ಘೋಷವಾಕ್ಯಗಳನ್ನು ಹೇಳಿದರು. ಅಂತೆಯೇ ಎರಡನೇ ತರಗತಿಯ ವಿದ್ಯಾರ್ಥಿ ಸ್ವೋಜಸ್ ಸುಭಾಷ್ ಚಂದ್ರ ಬೋಸ್ ಅವರ ಕುರಿತು ಭಾಷಣ ಮಾಡಿದರು. ಮೂರನೇ ತರಗತಿಯ ವೇದ್ಯಾ ಸರಸ್ವತಿ ಭಟ್ ಅವರು ನೀರಾ ಆರ್ಯಾ ಅವರ ಕುರಿತು ಸಂಕ್ಷಿಪ್ತ ಪರಿಚಯವನ್ನು ನೀಡಿದರು. ವಸಂತ ಪಂಚಮಿಯ ಕುರಿತು ಕಿರು ನಾಟಕ ಹಾಗೂ ನೃತ್ಯವನ್ನು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ., ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.
ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಅಕ್ಷರಾ ಎಚ್.ಪಿ. ಪ್ರಾರ್ಥಿಸಿದರು. ಎರಡನೇ ತರಗತಿ ವಿದ್ಯಾರ್ಥಿಗಳಾದ ಅನ್ವಿತ ಎಚ್.ಪಿ., ಭುವಿ ಅವಿಷ್ಕ ಕೆ. ಹಾಗೂ ಮೂರನೇ ತರಗತಿ ವಿದ್ಯಾರ್ಥಿನಿ ಅಹನಾ ಎಲ್. ಕಾರ್ಯಕ್ರಮವನ್ನು ನಿರೂಪಿಸಿದರು. ನಾಲ್ಕನೇ ತರಗತಿ ವಿದ್ಯಾರ್ಥಿ ಅಮೋಘ್ ವೆಂಕಟರಾಜ ಪೆಲ್ತಾಜೆ ವಂದಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಮಂಗಳೂರು10 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ14 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ15 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್16 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್8 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು9 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ8 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಸಿನೆಮಾ14 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು


















