ಶಿಕ್ಷಣ
Vivekananda-ಸಮೂಹ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ
ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ಇನ್ನರ್ ವೀಲ್ ಕ್ಲಬ್ ಪುತ್ತೂರು, ಇದರ ಜಂಟಿ ಆಶ್ರಯದಲ್ಲಿ ಸಂಘ ಶತಾಬ್ದಿಯ ಪ್ರಯುಕ್ತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಜನವರಿ 25ರ ಆದಿತ್ಯವಾರದಂದು ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಪುತ್ತೂರು: ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ಇನ್ನರ್ ವೀಲ್ ಕ್ಲಬ್ ಪುತ್ತೂರು, ಇದರ ಜಂಟಿ ಆಶ್ರಯದಲ್ಲಿ ಸಂಘ ಶತಾಬ್ದಿಯ ಪ್ರಯುಕ್ತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಜನವರಿ 25ರ ಆದಿತ್ಯವಾರದಂದು ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಸ್ತುತಿ ಜೈನ್ , ರಿತ್ವಿಕ್ ಆರ್ ರೈ, ಅನಘ ಹರಿಹರ ಭಟ್, ಅನಘ ಸರಸ್ವತಿ ,ಪೂರ್ವಿ ಭಟ್ ,ವೈಷ್ಣವಿ ಕೆ. ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರೊಂದಿಗೆ ಐದು ಸಾವಿರ ನಗದು ಮತ್ತು ಪ್ರಶಸ್ತಿಪತ್ರವನ್ನು ಪಡೆದಿರುತ್ತಾರೆ.
ಹಾಗೆಯೇ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ನಿನಾದ , ಸಿರಿ ಹಿಳ್ಳೆಮನೆ ಕ್ಷಮಾ ಜೆ. ರೈ , ದೀಪ್ತಿ ಕುಬಣುರಾಯ, ಅನಿಕಾ ರಾವ್, ರಚನಾ ಬಾಯಾರ್ ದ್ವಿತೀಯ ಸ್ಥಾನವನ್ನು ಪಡೆದು 3000 ನಗದು ಮತ್ತು ಪ್ರಶಸ್ತಿ ಪತ್ರವನ್ನು ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಗುರುಗಳು ಮತ್ತು ಅಧ್ಯಾಪಕ ವೃಂದದವರು ಶುಭ ಹಾರೈಸಿ ಅಭಿನಂದಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
-
Uncategorized23 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized11 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು9 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized10 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ10 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ9 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ9 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್5 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?


















