ಆರೋಗ್ಯ
Digestive problem-ಎಚ್ಚರ..! ಮೊಸರು-ಸೌತೆಕಾಯಿ ಒಟ್ಟಿಗೆ ಸೇವಿಸಿದರೆ ಕಾಡಬಹುದು ಜೀರ್ಣಕ್ರಿಯೆಯ ಸಮಸ್ಯೆ..!
ನಮ್ಮ ದೈನಂದಿನ ಊಟದಲ್ಲಿ ಮೊಸರು ಮತ್ತು ಸೌತೆಕಾಯಿ ಅತ್ಯಂತ ಸಾಮಾನ್ಯ ಪದಾರ್ಥಗಳು. ಅದರಲ್ಲೂ ಬಿಸಿಲ ಬೇಗೆಗೆ ಅಥವಾ ಮಸಾಲೆಯುಕ್ತ ಊಟದ ಜೊತೆಗೆ ತಂಪಾದ ‘ರೈತಾ’ ಸೇವಿಸುವುದು ನಮಗೆಲ್ಲಾ ಇಷ್ಟ. ಆದರೆ, ಆಯುರ್ವೇದದ ಪ್ರಕಾರ ಇವೆರಡನ್ನೂ ಒಟ್ಟಿಗೆ ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಅಷ್ಟು ಸೂಕ್ತವಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.
ನಮ್ಮ ದೈನಂದಿನ ಊಟದಲ್ಲಿ ಮೊಸರು ಮತ್ತು ಸೌತೆಕಾಯಿ ಅತ್ಯಂತ ಸಾಮಾನ್ಯ ಪದಾರ್ಥಗಳು. ಅದರಲ್ಲೂ ಬಿಸಿಲ ಬೇಗೆಗೆ ಅಥವಾ ಮಸಾಲೆಯುಕ್ತ ಊಟದ ಜೊತೆಗೆ ತಂಪಾದ ‘ರೈತಾ’ ಸೇವಿಸುವುದು ನಮಗೆಲ್ಲಾ ಇಷ್ಟ. ಆದರೆ, ಆಯುರ್ವೇದದ ಪ್ರಕಾರ ಇವೆರಡನ್ನೂ ಒಟ್ಟಿಗೆ ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಅಷ್ಟು ಸೂಕ್ತವಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.
ಆಯುರ್ವೇದದ ‘ವಿರುದ್ಧ ಆಹಾರ’ ಪರಿಕಲ್ಪನೆ:
ಆಯುರ್ವೇದದ ಪ್ರಕಾರ, ಪ್ರತಿಯೊಂದು ಆಹಾರಕ್ಕೂ ತನ್ನದೇ ಆದ ಗುಣ ಮತ್ತು ಶಕ್ತಿ ಇರುತ್ತದೆ. ಎರಡು ಬೇರೆ ಬೇರೆ ಗುಣವುಳ್ಳ ಆಹಾರಗಳನ್ನು ಒಟ್ಟಿಗೆ ಸೇವಿಸಿದಾಗ ಅವು ದೇಹದ ‘ಜೀರ್ಣಾಗ್ನಿ’ಯನ್ನು (Digestive Fire) ದುರ್ಬಲಗೊಳಿಸುತ್ತವೆ. ಇದನ್ನು ಆಯುರ್ವೇದದಲ್ಲಿ ‘ವಿರುದ್ಧ ಆಹಾರ’ ಎಂದು ಕರೆಯಲಾಗುತ್ತದೆ. ಮೊಸರು ಮತ್ತು ಸೌತೆಕಾಯಿ ಇದೇ ವರ್ಗಕ್ಕೆ ಸೇರುತ್ತವೆ.
ಮೊಸರು: ಇದು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವ ಭಾರವಾದ ಗುಣವನ್ನು ಹೊಂದಿದೆ.
ಸೌತೆಕಾಯಿ: ಇದು ತಂಪು ಸ್ವಭಾವದ ಮತ್ತು ಅಧಿಕ ನೀರಿನ ಅಂಶವನ್ನು ಹೊಂದಿರುವ ಪದಾರ್ಥ.
ಇವೆರಡನ್ನೂ ಒಟ್ಟಿಗೆ ತಿಂದಾಗ ಜೀರ್ಣಕ್ರಿಯೆ ಮಂದಗತಿಯಾಗುತ್ತದೆ. ಇದರಿಂದ ಆಹಾರವು ಹೊಟ್ಟೆಯಲ್ಲಿ ಸರಿಯಾಗಿ ಜೀರ್ಣವಾಗದೆ ವಿಷಕಾರಿ ಅಂಶಗಳು (Ama) ಸಂಗ್ರಹವಾಗಲು ಶುರುವಾಗುತ್ತದೆ.
ಆರೋಗ್ಯದ ಮೇಲೆ ಬೀರುವ ಪರಿಣಾಮಗಳು:
ಜೀರ್ಣಕ್ರಿಯೆಯ ತೊಂದರೆ: ಹೊಟ್ಟೆ ಉಬ್ಬರ, ಗ್ಯಾಸ್, ಹೊಟ್ಟೆ ನೋವು ಮತ್ತು ಅಜೀರ್ಣದಂತಹ ಸಮಸ್ಯೆಗಳು ತಕ್ಷಣಕ್ಕೆ ಕಾಣಿಸಿಕೊಳ್ಳಬಹುದು.
ಕಫ ದೋಷದ ಹೆಚ್ಚಳ: ಇವೆರಡೂ ತಂಪು ಗುಣ ಹೊಂದಿರುವುದರಿಂದ ದೇಹದಲ್ಲಿ ಕಫದ ಪ್ರಮಾಣ ಹೆಚ್ಚಾಗುತ್ತದೆ. ಇದು ಸತತ ಶೀತ, ಕೆಮ್ಮು, ಮೂಗು ಕಟ್ಟುವಿಕೆ ಮತ್ತು ಉಸಿರಾಟದ ತೊಂದರೆಗೆ ಕಾರಣವಾಗಬಹುದು.
ಚರ್ಮದ ಸಮಸ್ಯೆ: ಆಯುರ್ವೇದದ ಪ್ರಕಾರ ವಿರುದ್ಧ ಆಹಾರಗಳ ನಿರಂತರ ಸೇವನೆಯು ಚರ್ಮದ ಅಲರ್ಜಿ ಮತ್ತು ತುರಿಕೆಯಂತಹ ಸಮಸ್ಯೆಗಳನ್ನು ಉಂಟುಮಾಡಬಹುದು.
ಪರ್ಯಾಯ ಕ್ರಮಗಳೇನು?
ಮೊಸರು ಸೇವನೆಗೆ ಸರಿಯಾದ ಕ್ರಮ: ಮೊಸರನ್ನು ರೈತಾ ಮಾಡುವ ಬದಲು, ಅದಕ್ಕೆ ಹುರಿದ ಜೀರಿಗೆ ಪುಡಿ, ಕಪ್ಪು ಮೆಣಸಿನ ಪುಡಿ ಅಥವಾ ಸ್ವಲ್ಪ ಸೈಂಧವ ಲವಣ (Rock Salt) ಸೇರಿಸಿ ಸೇವಿಸುವುದು ಜೀರ್ಣಕ್ರಿಯೆಗೆ ಉತ್ತಮ. ಇದು ಮೊಸರಿನ ಭಾರವನ್ನು ಕಡಿಮೆ ಮಾಡಿ ಜೀರ್ಣಕ್ಕೆ ಸಹಕರಿಸುತ್ತದೆ.
ಸೌತೆಕಾಯಿ ಸೇವನೆ: ಸೌತೆಕಾಯಿಯನ್ನು ಊಟಕ್ಕೆ ಮುಂಚಿತವಾಗಿ ಪ್ರತ್ಯೇಕವಾಗಿ ಸಲಾಡ್ ರೂಪದಲ್ಲಿ ಸೇವಿಸುವುದು ಆರೋಗ್ಯಕರ. ಇದನ್ನು ಮೊಸರಿನೊಂದಿಗೆ ಬೆರೆಸುವ ಬದಲು ಸ್ವತಂತ್ರವಾಗಿ ಸೇವಿಸಿದರೆ ದೇಹಕ್ಕೆ ಅಗತ್ಯವಿರುವ ತೇವಾಂಶ ಮತ್ತು ತಂಪು ದೊರೆಯುತ್ತದೆ.
ಆರೋಗ್ಯವಾಗಿರಲು ನಾವು ಏನು ತಿನ್ನುತ್ತೇವೆ ಎಂಬುದು ಎಷ್ಟು ಮುಖ್ಯವೋ, ಅದನ್ನು ಯಾವುದರ ಜೊತೆಗೆ ತಿನ್ನುತ್ತೇವೆ ಎಂಬುದು ಅಷ್ಟೇ ಮುಖ್ಯ. ಆಯುರ್ವೇದದ ಈ ಸರಳ ನಿಯಮಗಳನ್ನು ಪಾಲಿಸುವ ಮೂಲಕ ನಮ್ಮ ಜೀರ್ಣಕ್ರಿಯೆಯನ್ನು ಉತ್ತಮವಾಗಿಟ್ಟುಕೊಳ್ಳಬಹುದು.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಬಿಗ್ ನ್ಯೂಸ್12 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ11 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಅಂತರ ರಾಜ್ಯ9 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ11 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ನಿಧನ ವಾರ್ತೆ11 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಸುಳ್ಯ6 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ9 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ11 hours agoDharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ















