ನಿಧನ ವಾರ್ತೆ
Ajit Pawar-ಭೀಕರ ವಿಮಾನ ದುರಂತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನ
ಮಹಾರಾಷ್ಟ್ರ ರಾಜಕಾರಣದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಅಧಿಕೃತವಾಗಿ ಖಚಿತಪಡಿಸಿದೆ.
ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಅಧಿಕೃತವಾಗಿ ಖಚಿತಪಡಿಸಿದೆ.
ದುರಂತದ ವಿವರ:
ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲು ಅಜಿತ್ ಪವಾರ್ ಅವರು ಮುಂಬೈನಿಂದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು. ವಿಮಾನವು ಬಾರಾಮತಿ ಬಳಿ ಇಳಿಯುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.
ಮೃತರ ವಿವರ:
ಈ ಭೀಕರ ಅಪಘಾತದಲ್ಲಿ ಅಜಿತ್ ಪವಾರ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ಅವರ ವೈಯಕ್ತಿಕ ಭದ್ರತಾ ಅಧಿಕಾರಿ (PSO) ಜಾಧವ್, ಓರ್ವ ಸಹಾಯಕ ಹಾಗೂ ಇಬ್ಬರು ಪೈಲಟ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ವಿಮಾನವು ಸಂಪೂರ್ಣವಾಗಿ ಜಖಂಗೊಂಡಿದೆ.
ಗಣ್ಯರ ಸಂತಾಪ:
ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಕರೆ ಮಾಡಿದ ಕೇಂದ್ರ ನಾಯಕರು, ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಜಿತ್ ಪವಾರ್ ಅವರ ನಿಧನವು ಮಹಾರಾಷ್ಟ್ರಕ್ಕೆ ಮತ್ತು ದೇಶದ ರಾಜಕೀಯ ವಲಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಗಣ್ಯರು ಕಂಬನಿ ಮಿಡಿದಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ರಾಜಕೀಯ23 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ24 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್7 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು6 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ24 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ















