ಬಾಲಕ […]" /> ಬಾಲಕ […]"> Harish Poonja-ಬಾಲಕ ಸುಮಂತ್ ಸಾವು ಪ್ರಕರಣ; ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಆಗ್ರಹ - Nikhara News | Kannada News Website
Connect with us

ಸ್ಥಳೀಯ

Harish Poonja-ಬಾಲಕ ಸುಮಂತ್ ಸಾವು ಪ್ರಕರಣ; ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಆಗ್ರಹ

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಎಂಬಾತನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಅವರು ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಶೀಘ್ರ ತನಿಖೆಗೆ ಒತ್ತಾಯಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಎಂಬಾತನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಅವರು ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಶೀಘ್ರ ತನಿಖೆಗೆ ಒತ್ತಾಯಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಬಾಲಕ ಸುಮಂತ್‌ನ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಇದು ಕೇವಲ ಸಾಧಾರಣ ಸಾವಲ್ಲ ಎಂಬ ಅನುಮಾನಗಳು ಕುಟುಂಬಸ್ಥರಲ್ಲಿ ಹಾಗೂ ಸ್ಥಳೀಯ ಸಾರ್ವಜನಿಕರಲ್ಲಿ ದಟ್ಟವಾಗಿವೆ. ಈ ನಿಟ್ಟಿನಲ್ಲಿ ನ್ಯಾಯಕ್ಕಾಗಿ ಆಗ್ರಹಿಸುತ್ತಿರುವ ಗ್ರಾಮಸ್ಥರ ಪರವಾಗಿ ಧ್ವನಿ ಎತ್ತಿರುವ ಶಾಸಕ ಪೂಂಜ, ಗೃಹ ಸಚಿವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು.

Ad Widget

Ad Widget <> Ad Widget

“ಈ ಪ್ರಕರಣದ ತನಿಖೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗಬಾರದು. ಎಲ್ಲಾ ಆಯಾಮಗಳಿಂದಲೂ ಅತ್ಯಂತ ಕೂಲಂಕುಷವಾಗಿ ತನಿಖೆ ನಡೆಸಿ, ಶೀಘ್ರದಲ್ಲೇ ಪ್ರಕರಣದ ನೈಜ ಸತ್ಯಾಂಶವನ್ನು ಜನರ ಮುಂದಿಡಬೇಕು” ಎಂದು ಶಾಸಕರು ಗೃಹ ಸಚಿವರಿಗೆ ಮನವಿ ಮಾಡಿದರು. ಬಾಲಕನ ಸಾವಿನಿಂದ ಆಘಾತಕ್ಕೊಳಗಾಗಿರುವ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಅವರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.

Ad Widget
Click to comment

Leave a Reply

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!