ರಾಜಕೀಯ
Puttur-ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷರಾಗಿ ಸುಪ್ರಿತ್ ಕಣ್ಣಾರಾಯ ನೇಮಕ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ ,ಯುವ ಕಾಂಗ್ರೆಸ್ ನಾಯಕರಾದ ಸುಪ್ರಿತ್ ಕಣ್ಣಾರಾಯರವರನ್ನು ನೇಮಕ ಮಾಡಲಾಗಿದೆ.
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ ,ಯುವ ಕಾಂಗ್ರೆಸ್ ನಾಯಕರಾದ ಸುಪ್ರಿತ್ ಕಣ್ಣಾರಾಯರವರನ್ನು ನೇಮಕ ಮಾಡಲಾಗಿದೆ.
ಸೋಮವಾರ ನಡೆದ ಸಾಮಾಜಿಕ ಜಾಲತಾಣದ ಪ್ರಮುಖರ ಸಭೆಯಲ್ಲಿ ಶಾಸಕ ಅಶೋಕ್ ರೈ ಅವರು ಈ ನೇಮಕಾತಿ ಮಾಡಿದ್ದಾರೆ.
ಇವರು ಈ ಹಿಂದೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಘಟಕದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿದ್ದರು. ಸಭೆಯಲ್ಲಿ ಒಮ್ಮತದಿಂದ ಇವರನ್ನು ಆಯ್ಕೆ ಮಾಡಲಾಗಿದೆ.
ಪುತ್ತೂರು ಬ್ಲಾಕ್, ವಿಟ್ಲ ಹಾಗೂ ಉಪ್ಪಿನಂಗಡಿಗೆ ಬ್ಲಾಕ್ ನ ಸಾಮಾಜಿಕ ಜಾಲತಾಣ ಘಟಕಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಮತ್ತು ಪ್ರತೀ ವಲಯ ಮತ್ತು ಬೂತ್ ಮಟ್ಟದಲ್ಲೂ ಸಾಮಾಜಿಕ ಜಾಲತಾಣಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ಶಾಸಕರು ತಿಳಿಸಿದ್ದಾರೆ.
ಅಂತರ ರಾಜ್ಯ
Rahul Gandhi-ಜಂತರ್ ಮಂತರ್ನಲ್ಲಿ ಪ್ರತಿಭಟಿಸಿದ ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಖಂಡನೆ
ದೆಹಲಿಯ ಜಂತರ್ ಮಂತರ್ನಲ್ಲಿ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಯುವಕರನ್ನು ಬಂಧಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಯುವಕರನ್ನು ಜೈಲಿಗೆ ತಳ್ಳುವುದು ಹೇಡಿತನದ ಕೆಲಸ ಎಂದು ಅವರು ಟೀಕಿಸಿದ್ದಾರೆ.
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಯುವಕರನ್ನು ಬಂಧಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಯುವಕರನ್ನು ಜೈಲಿಗೆ ತಳ್ಳುವುದು ಹೇಡಿತನದ ಕೆಲಸ ಎಂದು ಅವರು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರವು ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳವಾಗಿ ಬಳಸುವುದಕ್ಕೆ ನಿರ್ಬಂಧಗಳನ್ನು ವಿಧಿಸಿರುವುದನ್ನು ವಿರೋಧಿಸಿದ ರಾಹುಲ್ ಗಾಂಧಿ, ಜಂತರ್ ಮಂತರ್ ಭಾರತದ ಜನರಿಗೆ ಸೇರಿದ್ದು, ಅದನ್ನು ಮತ್ತೆ ಜನರ ಪಾಲಿಗೆ ಮರಳಿ ಪಡೆಯುವುದಾಗಿ ಹೇಳಿದ್ದಾರೆ.
ಸಿಜೆಪಿ ನಾಯಕರಿಗೆ ಐದು ದಿನಗಳ ನ್ಯಾಯಾಂಗ ಬಂಧನ
ಮಂಗಳವಾರ ಮುಂಜಾನೆ ಜಂತರ್ ಮಂತರ್ ಪ್ರದೇಶಕ್ಕೆ ತೆರಳಿ ತ್ರಿವರ್ಣ ಧ್ವಜ ಹಾರಿಸಿ ಘೋಷಣೆಗಳನ್ನು ಕೂಗಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಅಶುತೋಷ್ ರಂಕಾ, ಸೌರಭ್ ದಾಸ್ ಸೇರಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಬುಧವಾರ ನ್ಯಾಯಾಲಯವು ಬಂಧಿತರಿಗೆ ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧನವನ್ನು ಖಂಡಿಸಿರುವ ರಾಹುಲ್ ಗಾಂಧಿ ಅವರ ಬೆಂಬಲಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಧನ್ಯವಾದ ಅರ್ಪಿಸಿದ್ದಾರೆ.
ಸಂವಿಧಾನಿಕ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟ
ವಿದ್ಯಾರ್ಥಿಗಳು, ಯುವಕರು, ಪತ್ರಕರ್ತರು ಹಾಗೂ ಇಂಡಿಯಾ ಒಕ್ಕೂಟದ ಸದಸ್ಯರು ಪ್ರತ್ಯೇಕ ಬ್ಯಾನರ್ಗಳ ಅಡಿಯಲ್ಲಿ ಹೋರಾಟ ನಡೆಸುತ್ತಿದ್ದರೂ, ಅವರ ಉದ್ದೇಶ ಒಂದೇ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸಂವಿಧಾನಿಕ ಹಕ್ಕುಗಳಿಗಾಗಿ ಆಗ್ರಹಿಸುತ್ತಿರುವ ನಾಗರಿಕರ ಹೋರಾಟ ಇದಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಈ ಹಿಂದೆ ಸಿಜೆಪಿ ನಾಯಕರಿಂದ ರಾಹುಲ್ ಗಾಂಧಿ ದೂರ ಉಳಿದಿದ್ದಾರೆ ಎಂಬ ಚರ್ಚೆಗಳು ನಡೆದಿದ್ದವು. ಇದೀಗ ಬಂಧಿತ ನಾಯಕರ ಪರವಾಗಿ ಧ್ವನಿ ಎತ್ತಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಈ ಬೆಳವಣಿಗೆಯನ್ನು ಸಿಜೆಪಿ ನಾಯಕರಿಗೆ ರಾಹುಲ್ ಗಾಂಧಿ ಬಹಿರಂಗ ಬೆಂಬಲ ಸೂಚಿಸಿರುವ ಕ್ರಮವಾಗಿ ವಿಶ್ಲೇಷಿಸಲಾಗುತ್ತಿದೆ.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
-
ಕಾರ್ಯಕ್ರಮಗಳು18 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಕಾರ್ಯಕ್ರಮಗಳು18 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಕಾರ್ಯಕ್ರಮಗಳು17 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
Uncategorized18 hours agoAmbika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಬಹುಮಾನ
-
ಶಿಕ್ಷಣ17 hours agoSanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
-
ಶಿಕ್ಷಣ18 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್ಫೆಸ್ಟ್ 2K26’
-
ಬಿಗ್ ನ್ಯೂಸ್46 minutes agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಸ್ಥಳೀಯ43 minutes agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ


















