Connect with us

ಅಪರಾಧ

Mayur Patel-ಮದ್ಯದ ಅಮಲಿನಲ್ಲಿ ನಾಲ್ಕು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತವೆಸಗಿದ ನಟ ಮಯೂರ್ ಪಟೇಲ್ ವಿರುದ್ಧ ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಕನ್ನಡ ಚಿತ್ರರಂಗದ ನಟ ಮಯೂರ್ ಪಟೇಲ್ ಅವರು ಪಾನಮತ್ತರಾಗಿ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿರುವ ಘಟನೆ ಬುಧವಾರ ತಡರಾತ್ರಿ ನಗರದ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಸಮೀಪ ನಡೆದಿದೆ. ಅಪಘಾತದ ಬಳಿಕ ಸ್ಥಳೀಯರಾದ ಶ್ರೀನಿವಾಸ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಯೂರ್ ಪಟೇಲ್ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಮಯೂರ್ ಪಟೇಲ್ ಅವರು ಪಾನಮತ್ತರಾಗಿ ಕಾರು ಚಲಾಯಿಸಿ ಸರಣಿ ಅಪಘಾತ ಎಸಗಿರುವ ಘಟನೆ ಬುಧವಾರ ತಡರಾತ್ರಿ ನಗರದ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಸಮೀಪ ನಡೆದಿದೆ.

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ತಮ್ಮ ಫಾರ್ಚೂನರ್ ಕಾರನ್ನು ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಮಯೂರ್ ಪಟೇಲ್, ರಸ್ತೆ ಬದಿಯಲ್ಲಿ ನಿಂತಿದ್ದ ನಾಲ್ಕು ಕಾರುಗಳಿಗೆ ಜೋರಾಗಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ನಾಲ್ಕೂ ಕಾರುಗಳು ಜಖಂಗೊಂಡಿವೆ. ಘಟನೆಯ ಸಮಯದಲ್ಲಿ ಕಾರುಗಳಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ.

Ad Widget

Ad Widget <> Ad Widget

ಪೊಲೀಸ್ ಕ್ರಮ:
ಅಪಘಾತದ ಬಳಿಕ ಸ್ಥಳೀಯರಾದ ಶ್ರೀನಿವಾಸ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಯೂರ್ ಪಟೇಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಅಪಘಾತಕ್ಕೆ ಕಾರಣವಾದ ಫಾರ್ಚೂನರ್ ಕಾರನ್ನು ಜಪ್ತಿ ಮಾಡಿದ್ದಾರೆ.

ವಿಮೆ ಇಲ್ಲದ ಕಾರು:
ಪೊಲೀಸ್ ತನಿಖೆಯ ವೇಳೆ ನಟ ಚಲಾಯಿಸುತ್ತಿದ್ದ ಕಾರಿಗೆ ಇನ್ಸೂರೆನ್ಸ್ (ವಿಮೆ) ಕೂಡ ಇರಲಿಲ್ಲ ಎಂಬ ಸ್ಫೋಟಕ ಮಾಹಿತಿ ಹೊರಬಂದಿದೆ.

Ad Widget

Ad Widget

ಮಯೂರ್ ಪಟೇಲ್ ಅವರು ಕನ್ನಡದ ಕೆಲವು ಚಿತ್ರಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಪಾನಮತ್ತರಾಗಿ ವಾಹನ ಚಲಾಯಿಸಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗಿದೆ.

Ad Widget
Click to comment

Leave a Reply

ಅಂತರ ರಾಜ್ಯ

Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!

Published

on

Ad Widget

Ad Widget

Ad Widget

Ad Widget

14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget

Ad Widget

Ad Widget

ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget alt="Ad Widget"/>

Ad Widget

ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Ad Widget

Ad Widget <> Ad Widget

ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್‌ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.

ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.

Ad Widget

Ad Widget

ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.

ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.

ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!