ಬನ್ನೂರು […]" /> ಬನ್ನೂರು […]"> Puttur-ಪುತ್ತೂರು: 150 ವರ್ಷಗಳ ಇತಿಹಾಸವಿರುವ ಕೋರ್ಟ್‌ಗೆ ಹೈಟೆಕ್ ಸ್ಪರ್ಶ; 54.9 ಕೋಟಿ ರೂ. ವೆಚ್ಚದ ಸುಸಜ್ಜಿತ ಕೋರ್ಟ್ ಸಂಕೀರ್ಣ ಆನೆಮಜಲಿನಲ್ಲಿ ಜ.31ಕ್ಕೆ ಲೋಕಾರ್ಪಣೆ - Nikhara News | Kannada News Website
Connect with us

ಬಿಗ್ ನ್ಯೂಸ್

Puttur-ಪುತ್ತೂರು: 150 ವರ್ಷಗಳ ಇತಿಹಾಸವಿರುವ ಕೋರ್ಟ್‌ಗೆ ಹೈಟೆಕ್ ಸ್ಪರ್ಶ; 54.9 ಕೋಟಿ ರೂ. ವೆಚ್ಚದ ಸುಸಜ್ಜಿತ ಕೋರ್ಟ್ ಸಂಕೀರ್ಣ ಆನೆಮಜಲಿನಲ್ಲಿ ಜ.31ಕ್ಕೆ ಲೋಕಾರ್ಪಣೆ

Published

on

Ad Widget

Ad Widget

Ad Widget

Ad Widget

ಬನ್ನೂರಿನ ಆನೆಮಜಲಿನಲ್ಲಿ ಸುಮಾರು 6 ವರ್ಷಗಳ ಸತತ ಕಾಮಗಾರಿಯ ನಂತರ ಸುಸಜ್ಜಿತ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಗೊಂಡಿದ್ದು, ಜನವರಿ 31ರಂದು ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ. ಆನೆಮಜಲು ಪುದೇಶದ ವಿಶಾಲ ಜಾಗದಲ್ಲಿ ಸುಮಾರು 51.9 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಅಂತಸ್ತಿನ ನೂತನ ಸುಸಜ್ಜಿತ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಗೊಂಡಿದೆ.

Ad Widget

Ad Widget

Ad Widget

Ad Widget

ಪುತ್ತೂರು: ‌ಬನ್ನೂರಿನ ಆನೆಮಜಲಿನಲ್ಲಿ ಸುಮಾರು 6 ವರ್ಷಗಳ ಸತತ ಕಾಮಗಾರಿಯ ನಂತರ ಸುಸಜ್ಜಿತ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಗೊಂಡಿದ್ದು, ಜನವರಿ 31ರಂದು ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ.

Ad Widget

Ad Widget alt="Ad Widget"/>

Ad Widget

ಬನ್ನೂರು ಗ್ರಾಮದ ಆನೆಮಜಲು ಪುದೇಶದ ವಿಶಾಲ ಜಾಗದಲ್ಲಿ ಸುಮಾರು 51.9 ಕೋಟಿ ರೂ.ವೆಚ್ಚದಲ್ಲಿ ನಾಲ್ಕು ಅಂತಸ್ತಿನ ನೂತನ ಸುಸಜ್ಜಿತ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಗೊಂಡಿದೆ.

Ad Widget

Ad Widget <> Ad Widget

51.9 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಎರಡು ಹಂತದಲ್ಲಿ ನಡೆಸಲಾಗಿದೆ.ಮೊದಲ ಹಂತದ 25 ಕೋಟಿ ರೂ. ವೆಚ್ಚದ ಕಾಮಗಾರಿಗೆ 2018ರ ನ.10ರಂದು ಶಿಲಾನ್ಯಾಸ ನೆರವೇರಿಸಲಾಗಿತ್ತು.

ಎರಡನೇ ಹಂತದಲ್ಲಿ 26.9 ಕೋಟಿ ರೂ.ವೆಚ್ಚದ ಕಾಮಗಾರಿಗೆ 2021ರಲ್ಲಿ ಚಾಲನೆ ನೀಡಲಾಯಿತು. . ಒಟ್ಟು 5 ವರ್ಷ ನಡೆದ ಕಾಮಗಾರಿ ಇದೀಗ ಅಂತಿಮಗೊಂಡು ಒಂದು ವಾರದಲ್ಲಿ ಲೋಕಾರ್ಪಣೆಗೊಳ್ಳುತ್ತಿದೆ.

Ad Widget

Ad Widget

ನಿರ್ಮಾಣದ ಉಸ್ತುವಾರಿ:
ಮಂಗಳೂರಿನ ಸೀದಿ ಕನ್‌ಸ್ಯಕ್ಷನ್ ಕಂಪೆನಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿತ್ತು. ಲೋಕೋಪಯೋಗಿ ಇಲಾಖೆ ನಿರ್ಮಾಣದ ಉಸ್ತುವಾರಿ ನೋಡಿಕೊಂಡಿದೆ. ಮುಂದಿನ 2 ವರ್ಷ ಲೋಕೋಪಯೋಗಿ ಇಲಾಖೆಯೇ ಇದರ ನಿರ್ವಹಣೆ ಮಾಡಲಿದೆ.

ಉದ್ಘಾಟನಾ ಸಮಾರಂಭ:
ನೂತನವಾಗಿ ನಿರ್ಮಿಸಲಾಗಿರುವ ನ್ಯಾಯಾಲಯ ಕಟ್ಟಡದ ಉದ್ಘಾಟನಾ ಸಮಾರಂಭ ಜ.31ರಂದು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆಂಧ್ರಪ್ರದೇಶದ ರಾಜ್ಯಪಾಲರಾಗಿರುವ ಸುಪ್ರೀಂ ಕೋರ್ಟ್ನ ವಿಶ್ರಾಂತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರು ಉದ್ಘಾಟಿಸಲಿದ್ದಾರೆ.

ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ, ದ.ಕ.ದ ಆಡಳಿತಾತ್ಮಕ ನ್ಯಾಯಮೂರ್ತಿಗಳೂ ಆಗಿರುವ ಹೆಚ್.ಟಿ.ನರಂದ್ರಪ್ರಸಾದ್‌ರವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳಾಗಿರುವ ಮೊಹಮ್ಮದ್ ನವಾಜ್, ಅಶೋಕ್ ಎಸ್.ಕಿಣಗಿ, ಎಸ್.ವಿಶ್ವಜೀತ್ ಶೆಟ್ಟಿ, ರಾಜೇಶ್ ರೈ ಕೆ., ತ್ಯಾಗರಾಜ್ ಎನ್.ಇನವಳ್ಳಿ,ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ರಾಜ್ಯ ಕಾನೂನು ಸಚಿವ ಎಚ್.ಕೆ.ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೌರವಾನ್ವಿತ ಅತಿಥಿಗಳಾಗಿರುತ್ತಾರೆ. ಕರ್ನಾಟಕ ಉಚ್ಚನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇ ಗೌಡ, ದ.ಕ.ಸಂಸದ ಕ್ಯಾ | ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ, ಸರ್ವೋಚ್ಚ ನ್ಯಾಯಾಲಯದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಕರ್ನಾಟಕ ಉಚ್ಚನ್ಯಾಯಾಲಯದ ಮಹಾವಿಲೇಖನಾಧಿಕಾರಿ ಕೆ.ಎಸ್‌.ಭರತ್ ಕುಮಾರ್, ಕರ್ನಾಟಕ ಸರ್ಕಾರದ ಅಡ್ವಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ,ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ., ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಸದಸ್ಯ ಪಿ.ಪಿ.ಹೆಗ್ಡೆ ಅವರು ವಿಶೇಷ ಆಹ್ವಾನಿತರಾಗಿರುತ್ತಾರೆ.

12 ಕೋರ್ಟ್ಗಳು ಕಾರ್ಯನಿರ್ವಹಿಸಲಿದೆ
ನೂತನ ನ್ಯಾಯಾಲಯದ ಸಂಕೀರ್ಣದಲ್ಲಿ 12 ಕೋರ್ಟ್ ಹಾಲ್ ಇರಲಿದೆ. ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಮೇಲಿನ ಮೂರು ಅಂತಸ್ತಿನಲ್ಲಿ ತಲಾ 4 ಕೋರ್ಟ್ಗಳು ಕಾರ್ಯನಿರ್ವಹಿಸಲಿವೆ. ಪ್ರಸ್ತುತ ಇರುವ ಪುತ್ತೂರಿನ ನ್ಯಾಯಾಲಯದಲ್ಲಿ ನಡೆಯುತ್ತಿರುವ 6 ಕೋರ್ಟ್ಗಳು ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರಗೊಳ್ಳಲಿದೆ. ಜೊತೆಗೆ ಹೆಚ್ಚುವರಿಯಾಗಿ 1 ಪೋಕ್ಸೋ ವಿಶೇಷ ನ್ಯಾಯಾಲಯ ಮತ್ತು ಜಿಲ್ಲಾ ವಿಭಾಗದ ಹೆಚ್ಚುವರಿ 5 ಕೋರ್ಟ್ಗಳು ಮಂಜೂರುಗೊಂಡು ನ್ಯಾಯಾಲಯ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿವೆ.

Ad Widget
Click to comment

Leave a Reply

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!