ಅಂತರ ರಾಜ್ಯ
Arijit Singh-ಬಾಲಿವುಡ್ಗೆ ಅರಿಜಿತ್ ಸಿಂಗ್ ಗುಡ್ ಬೈ: ಗಾಯಕನ ನಿವೃತ್ತಿ ಹಿಂದೆ ಸಲ್ಮಾನ್ ಖಾನ್ ಕೈವಾಡವಿದೆಯೇ?
ಬಾಲಿವುಡ್ನ ಜನಪ್ರಿಯ ಹಿನ್ನೆಲೆ ಗಾಯಕ ಅರಿಜಿತ್ ಸಿಂಗ್ ಅವರು ಗಾಯನ ಲೋಕಕ್ಕೆ ಹಠಾತ್ ವಿದಾಯ ಘೋಷಿಸಿರುವುದು ಅವರ ಅಭಿಮಾನಿಗಳಲ್ಲಿ ಆಘಾತ ತಂದಿದೆ. ‘ಆಶಿಕಿ 2’, ‘ಟೈಗರ್ 3’ ಅಂತಹ ಸೂಪರ್ ಹಿಟ್ ಚಿತ್ರಗಳಿಗೆ ಧ್ವನಿಯಾಗಿದ್ದ ಅರಿಜಿತ್, ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ಅಭಿನಯದ ‘ನಿನ್ನಿಂದಲೇ’ ಚಿತ್ರದ “ಬದಲಾಯಿತೇನು ಕಣ್ಣ ಹೊಳಪು…” ಹಾಡಿನ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಈಗ ಅವರು ಬಾಲಿವುಡ್ನಿಂದ ದೂರ ಸರಿಯಲು ನಟ ಸಲ್ಮಾನ್ ಖಾನ್ ಅವರೇ ಕಾರಣ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ.
ಮುಂಬೈ: ಬಾಲಿವುಡ್ನ ಜನಪ್ರಿಯ ಹಿನ್ನೆಲೆ ಗಾಯಕ ಅರಿಜಿತ್ ಸಿಂಗ್ ಅವರು ಗಾಯನ ಲೋಕಕ್ಕೆ ಹಠಾತ್ ವಿದಾಯ ಘೋಷಿಸಿರುವುದು ಅವರ ಅಭಿಮಾನಿಗಳಲ್ಲಿ ಆಘಾತ ತಂದಿದೆ. ‘ಆಶಿಕಿ 2’, ‘ಟೈಗರ್ 3’ ಅಂತಹ ಸೂಪರ್ ಹಿಟ್ ಚಿತ್ರಗಳಿಗೆ ಧ್ವನಿಯಾಗಿದ್ದ ಅರಿಜಿತ್, ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ಅಭಿನಯದ ‘ನಿನ್ನಿಂದಲೇ’ ಚಿತ್ರದ “ಬದಲಾಯಿತೇನು ಕಣ್ಣ ಹೊಳಪು…” ಹಾಡಿನ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಈಗ ಅವರು ಬಾಲಿವುಡ್ನಿಂದ ದೂರ ಸರಿಯಲು ನಟ ಸಲ್ಮಾನ್ ಖಾನ್ ಅವರೇ ಕಾರಣ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ.
ವೃತ್ತಿಜೀವನ ಹಾಳು ಮಾಡಿದರೇ ಸಲ್ಲು?
ಸಲ್ಮಾನ್ ಖಾನ್ ವಿರುದ್ಧ ಇಂತಹ ಆರೋಪಗಳು ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ವಿವೇಕ್ ಓಬೆರಾಯ್, ನಿರ್ದೇಶಕರಾದ ಅನುರಾಗ್ ಕಶ್ಯಪ್ ಮತ್ತು ಅಭಿನವ್ ಕಶ್ಯಪ್ ಸೇರಿದಂತೆ ಹಲವರು ತಮ್ಮ ಕೆರಿಯರ್ ಹಾಳಾಗಲು ಸಲ್ಮಾನ್ ಖಾನ್ ಅವರ ಪ್ರಭಾವವೇ ಕಾರಣ ಎಂದು ನೇರವಾಗಿಯೇ ದೂರಿದ್ದರು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲೂ ಸಲ್ಮಾನ್ ಹೆಸರನ್ನು ಎಳೆಯಲಾಗಿತ್ತು. ಈಗ ಅರಿಜಿತ್ ಸಿಂಗ್ ಅವರ ನಿವೃತ್ತಿಯ ವಿಷಯದಲ್ಲೂ ಸಲ್ಲು ಹೆಸರೇ ಮುನ್ನೆಲೆಗೆ ಬಂದಿದೆ.
ವಿವಾದದ ಮೂಲ: 2014ರ ಆ ಪ್ರಶಸ್ತಿ ಪ್ರದಾನ ಸಮಾರಂಭ!
ಇವರಿಬ್ಬರ ನಡುವಿನ ಮನಸ್ತಾಪ ಶುರುವಾಗಿದ್ದು 2014ರಲ್ಲಿ. ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ನಿರೂಪಣೆ ಮಾಡುತ್ತಿದ್ದ ಸಲ್ಮಾನ್ ಖಾನ್, ಪ್ರಶಸ್ತಿ ಸ್ವೀಕರಿಸಲು ಬಂದ ಅರಿಜಿತ್ ಸಿಂಗ್ ಅವರನ್ನು ನೋಡಿ “ಏನ್ರೀ, ಮುಖದಲ್ಲಿ ಕಳೆಯೇ ಇಲ್ಲ? ನಿದ್ರೆ ಮಾಡ್ತಿದ್ದೀರಾ?” ಎಂದು ಕಿಚಾಯಿಸಿದ್ದರು. ಅದಕ್ಕೆ ಅರಿಜಿತ್ ಸಿಂಗ್ ಸಹಜವಾಗಿ “ನಿಮ್ಮಂಥ ಹಿರಿಯರು ನಮ್ಮನ್ನು ಮಲಗಿಸಿದ ಮೇಲೆ ನಾವು ಎದ್ದೇಳಲು ಸಾಧ್ಯವೇ?” ಎಂದು ತಮಾಷೆಯಾಗಿ ಉತ್ತರಿಸಿದ್ದರು. ಆದರೆ ಈ ಮಾತು ಸಲ್ಮಾನ್ ಖಾನ್ ಅವರ ಅಹಂಗೆ ಪೆಟ್ಟು ನೀಡಿತ್ತು ಎನ್ನಲಾಗಿದೆ.
ಅವಕಾಶಗಳ ಕಡಿತ ಮತ್ತು ಬಹಿರಂಗ ಕ್ಷಮೆಯಾಚನೆ:
ಆ ಘಟನೆಯ ನಂತರ ಅರಿಜಿತ್ ಸಿಂಗ್ ಅವರಿಗೆ ಬಾಲಿವುಡ್ನಲ್ಲಿ ದೊಡ್ಡ ಮಟ್ಟದ ಹಿನ್ನಡೆಯಾಯಿತು. ಸಲ್ಮಾನ್ ಅಭಿನಯದ ‘ಸುಲ್ತಾನ್’ ಚಿತ್ರದ ‘ಜಗ್ ಘೂಮೇಯ’ ಹಾಡನ್ನು ಅರಿಜಿತ್ ಹಾಡಿದ್ದರೂ, ಸಲ್ಮಾನ್ ಒತ್ತಾಯದ ಮೇರೆಗೆ ಅದನ್ನು ಕಿತ್ತುಹಾಕಿ ರಾಹತ್ ಫತೇ ಅಲಿ ಖಾನ್ ಅವರ ಕೈಯಲ್ಲಿ ಹಾಡಿಸಲಾಯಿತು.
2016ರಲ್ಲಿ ಈ ಬಗ್ಗೆ ಫೇಸ್ಬುಕ್ನಲ್ಲಿ ಸುದೀರ್ಘ ಪತ್ರ ಬರೆದಿದ್ದ ಅರಿಜಿತ್, “ನಾನು ನಿಮ್ಮನ್ನು ಅವಮಾನಿಸುವ ಉದ್ದೇಶದಿಂದ ಆ ಮಾತು ಹೇಳಿರಲಿಲ್ಲ. ನನ್ನ ಹಾಡನ್ನು ಚಿತ್ರದಿಂದ ತೆಗೆಯಬೇಡಿ, ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಸಲ್ಮಾನ್ ಅವರಲ್ಲಿ ಬಹಿರಂಗವಾಗಿ ಬೇಡಿಕೊಂಡಿದ್ದರು.
ಆನಂತರ ಇಬ್ಬರ ನಡುವೆ ಸಂಧಾನ ನಡೆದು, ಕೆಲವು ಹಾಡುಗಳನ್ನು ಅರಿಜಿತ್ ಹಾಡಿದ್ದರಾದರೂ, ಅವರಿಗೆ ಮೊದಲಿನಂತೆ ಮುಕ್ತ ಅವಕಾಶಗಳು ಸಿಗದಂತೆ ಸಲ್ಮಾನ್ ತಡೆದಿದ್ದರು ಎಂಬ ಮಾತುಗಳು ಕೇಳಿಬರುತ್ತಿವೆ.
ಸತತವಾಗಿ ಅವಕಾಶಗಳು ಕೈತಪ್ಪುತ್ತಿರುವುದು ಮತ್ತು ಬಾಲಿವುಡ್ನ ಆಂತರಿಕ ರಾಜಕೀಯದಿಂದ ಬೇಸತ್ತು ಅರಿಜಿತ್ ಸಿಂಗ್ ಈಗ ಗಾಯನಕ್ಕೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗುತ್ತಿದ್ದು, ಇದು ಬಾಲಿವುಡ್ನಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಸಿನೆಮಾ
Dawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
‘ಧುರಂಧರ್’ ಸಿನಿಮಾದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಾ ಹಾಸಿಗೆ ಹಿಡಿದಿರುವ ವೃದ್ಧನಂತೆ ಚಿತ್ರಿಸಲಾಗಿರುವ ದಾವೂದ್, ವಾಸ್ತವದಲ್ಲಿ ಇನ್ನೂ ಸಕ್ರಿಯನಾಗಿದ್ದು ತನ್ನ ಅಪರಾಧ ಜಾಲವನ್ನು ಮುನ್ನಡೆಸುತ್ತಿದ್ದಾನೆ ಎಂದು ಅಮೆರಿಕದ ಮಾಜಿ ಎಫ್ಬಿಐ ಅಧಿಕಾರಿ ಕಮ್ರಾನ್ ಫರೀದಿ ಇಂಡಿಯಾ ಟುಡೇಗೆ ನೀಡಿದ ಪಾಡ್ಕಾಸ್ಟ್ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನವದೆಹಲಿ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟಗಳ ಬಳಿಕ ಭಾರತದಿಂದ ಪರಾರಿಯಾಗಿ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ ಎನ್ನಲಾದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬದುಕು ಇಂದಿಗೂ ನಿಗೂಢವಾಗಿದೆ. ಕಳೆದ ಹಲವು ವರ್ಷಗಳಿಂದ ಆತನ ಯಾವುದೇ ಅಧಿಕೃತ ಛಾಯಾಚಿತ್ರ ಸಾರ್ವಜನಿಕವಾಗಿ ಲಭ್ಯವಾಗಿಲ್ಲ. ಇದೀಗ ದಾವೂದ್ನ ಡಿ-ಕಂಪನಿಯೊಳಗೆ ರಹಸ್ಯವಾಗಿ ಕಾರ್ಯನಿರ್ವಹಿಸಿದ್ದಾಗಿ ಹೇಳಿಕೊಂಡಿರುವ ಅಮೆರಿಕದ ಮಾಜಿ ಎಫ್ಬಿಐ ಅಧಿಕಾರಿ ಕಮ್ರಾನ್ ಫರೀದಿ, ಡಾನ್ನ ವೈಯಕ್ತಿಕ ಜೀವನ, ಭದ್ರತಾ ವ್ಯವಸ್ಥೆ ಹಾಗೂ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆಗಿನ ಸಂಪರ್ಕದ ಕುರಿತು ಹಲವು ಅಚ್ಚರಿಯ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.
‘ಧುರಂಧರ್’ ಸಿನಿಮಾದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಾ ಹಾಸಿಗೆ ಹಿಡಿದಿರುವ ವೃದ್ಧನಂತೆ ಚಿತ್ರಿಸಲಾಗಿರುವ ದಾವೂದ್, ವಾಸ್ತವದಲ್ಲಿ ಇನ್ನೂ ಸಕ್ರಿಯನಾಗಿದ್ದು ತನ್ನ ಅಪರಾಧ ಜಾಲವನ್ನು ಮುನ್ನಡೆಸುತ್ತಿದ್ದಾನೆ ಎಂಬುದು ಫರೀದಿ ಅವರ ಪ್ರಮುಖ ಹೇಳಿಕೆ. ಇಂಡಿಯಾ ಟುಡೇಗೆ ನೀಡಿದ ಪಾಡ್ಕಾಸ್ಟ್ ಸಂದರ್ಶನದಲ್ಲಿ ಅವರು ಈ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಧುರಂಧರ್ ಸಿನಿಮಾದ ದಾವೂದ್ಗೂ ನೈಜ ವ್ಯಕ್ತಿಗೂ ವ್ಯತ್ಯಾಸ!
‘ಧುರಂಧರ್’ ಚಿತ್ರದಲ್ಲಿ ‘ಬಡೇ ಸಾಹಬ್’ ಎಂದು ಉಲ್ಲೇಖಿಸಲಾಗಿರುವ ದಾವೂದ್ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾನೆ. ಆದರೆ, ದಾವೂದ್ ಜೊತೆ ಹಲವು ಪಾರ್ಟಿ ಹಾಗೂ ವ್ಯವಹಾರಿಕ ಸಭೆಗಳಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿಕೊಂಡಿರುವ ಫರೀದಿ, ಆತ ಇಂದಿಗೂ ತನ್ನ ಅಪರಾಧ ಜಾಲದ ಕಾರ್ಯಾಚರಣೆಗಳನ್ನು ನಿಯಂತ್ರಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದಲ್ಲಿ ನಡೆಯುತ್ತಿರುವ ಮಾದಕವಸ್ತು ವ್ಯಾಪಾರದ ಮೇಲೂ ದಾವೂದ್ ನಿಗಾ ಇರಿಸಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಪಾಕಿಸ್ತಾನದ ಭದ್ರತಾ ವಲಯದಲ್ಲಿ ಆತನನ್ನು ‘ಬಡೇ ಸಾಹಬ್’ ಅಥವಾ ‘ಬಡೆ ವಾಲೆ’ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.
ಕರಾಚಿಯ ಕ್ಲಿಫ್ಟನ್ನಲ್ಲೇ ಡಾನ್ ವಾಸ!
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾದರೂ ದಾವೂದ್ ತನ್ನ ವಾಸಸ್ಥಳವನ್ನು ಬದಲಿಸಿಲ್ಲ. ಕರಾಚಿಯ ಅತ್ಯಂತ ಬಿಗಿ ಭದ್ರತೆಯ ಕ್ಲಿಫ್ಟನ್ ಪ್ರದೇಶದಲ್ಲಿ ಕುಟುಂಬದ ಸದಸ್ಯರೊಂದಿಗೆ ವಾಸಿಸುತ್ತಿದ್ದಾನೆ ಎಂದು ಫರೀದಿ ಹೇಳಿಕೊಂಡಿದ್ದಾರೆ.
ಆದರೆ, ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾದ ಸಂದರ್ಭಗಳಲ್ಲಿ ಆತ ಇಸ್ಲಾಮಾಬಾದ್ ಸೇರಿದಂತೆ ಮೂರು ಸುರಕ್ಷಿತ ಅಡಗುತಾಣಗಳಿಗೆ ಸ್ಥಳಾಂತರಗೊಳ್ಳುತ್ತಾನೆ ಎಂದು ತಿಳಿಸಿದ್ದಾರೆ.
ದಾವೂದ್ ನಿವಾಸದ ಕೆಳಗೆ ರಹಸ್ಯ ಸುರಂಗವಿದೆ ಎಂಬ ವದಂತಿಯನ್ನು ತಳ್ಳಿಹಾಕಿರುವ ಅವರು, ಮನೆಯ ಹಿಂಭಾಗದಿಂದ ಜನಸಂದಣಿ ಹೆಚ್ಚಿರುವ ದರ್ಗಾವೊಂದಕ್ಕೆ ಸಂಪರ್ಕ ಕಲ್ಪಿಸುವ ಪರ್ಯಾಯ ನಿರ್ಗಮನ ಮಾರ್ಗವಿದೆ ಎಂದು ಹೇಳಿದ್ದಾರೆ.
ಡಿ-ಕಂಪನಿಯೊಳಗೆ ನುಸುಳಿದ್ದೇಗೆ?
ದಾವೂದ್ನ ಅಪರಾಧ ಜಾಲದೊಳಗೆ ತಾನು ಹೇಗೆ ಪ್ರವೇಶಿಸಿದೆ ಎಂಬುದನ್ನೂ ಫರೀದಿ ವಿವರಿಸಿದ್ದಾರೆ. 1995ರಲ್ಲಿ ಎಫ್ಬಿಐಗೆ ಸೇರ್ಪಡೆಯಾಗಿದ್ದ ತಮಗೆ 2009ರಲ್ಲಿ ದಾವೂದ್ ಗ್ಯಾಂಗ್ನೊಳಗೆ ರಹಸ್ಯವಾಗಿ ನುಸುಳುವ ಜವಾಬ್ದಾರಿ ನೀಡಲಾಗಿತ್ತು ಎಂದು ಹೇಳಿದ್ದಾರೆ.
ಈ ಕಾರ್ಯಾಚರಣೆಗಾಗಿ ರಷ್ಯಾದ ಮಾಫಿಯಾ ಸದಸ್ಯನಂತೆ ಗುರುತಿಸಿಕೊಂಡು, ತಮ್ಮ ಪಾಕಿಸ್ತಾನಿ ಮೂಲವನ್ನು ಮರೆಮಾಚಿದ್ದಾಗಿ ತಿಳಿಸಿದ್ದಾರೆ. ದಾವೂದ್ನ ಆಪ್ತ ಸಹಚರ ಜಬೀರ್ ಮೊತಿವಾಲಾ ಮೂಲಕ ಆತನಿಗೆ ಪರಿಚಯವಾಗಿತ್ತು ಎಂದಿದ್ದಾರೆ.
2018ರಲ್ಲಿ ಲಂಡನ್ನಲ್ಲಿ ಜಬೀರ್ ಮೊತಿವಾಲಾ ಬಂಧನಕ್ಕೂ ತಾನೇ ಕಾರಣ ಎಂದು ಫರೀದಿ ಹೇಳಿಕೊಂಡಿದ್ದಾರೆ. ಕರಾಚಿಯಲ್ಲಿ ಡಿ-ಕಂಪನಿಗಾಗಿ ಹವಾಲಾ ಹಣಕಾಸು ವ್ಯವಹಾರಗಳನ್ನು ಸ್ಥಾಪಿಸಲು ಸಹಾಯ ಮಾಡಿದ್ದಾಗಿಯೂ ತಿಳಿಸಿದ್ದಾರೆ. ದಾವೂದ್ನ ಸಹೋದರ ಅನೀಸ್ ಇಬ್ರಾಹಿಂ ಪುತ್ರ ಅಲಿ ಕಾಸ್ಕರ್ ತಮ್ಮ ಮಾಹಿತಿಯ ಪ್ರಮುಖ ಮೂಲವಾಗಿದ್ದ ಎಂದು ಹೇಳಿದ್ದಾರೆ.
ರಾತ್ರಿ 10ರ ಬಳಿಕವೇ ಹೊರಗೆ ಬರುವ ಡಾನ್!
ದಾವೂದ್ನ ದಿನಚರಿಯ ಕುರಿತು ಮಾತನಾಡಿರುವ ಫರೀದಿ, ಆತ ಹಗಲು ಹೊತ್ತಿನಲ್ಲಿ ಮನೆಯಿಂದ ಹೊರಬರುವುದಿಲ್ಲ ಎಂದು ತಿಳಿಸಿದ್ದಾರೆ. ರಾತ್ರಿ 10 ಗಂಟೆಯ ಬಳಿಕ ಹೊರಗೆ ಬಂದು, ಮುಂಜಾನೆ ಫಜರ್ ಪ್ರಾರ್ಥನೆಗೂ ಮುನ್ನ ಮನೆಗೆ ಮರಳುತ್ತಾನೆ. ಈ ಕಾರಣದಿಂದ ಆತನನ್ನು ‘ರಾತ್ ಕಾ ಬಾದ್ಶಾ’ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.
ದಾವೂದ್ಗೆ ದಿನದ 24 ಗಂಟೆಯೂ ಬಿಗಿ ಭದ್ರತೆ ಇರುತ್ತದೆ. ಸುಮಾರು 35ರಿಂದ 45 ಮಂದಿ ಭದ್ರತಾ ಸಿಬ್ಬಂದಿ ಆತನ ಸುತ್ತಲೂ ಕಾವಲು ಕಾಯುತ್ತಾರೆ. ಅವರ ಬಳಿ ಎಕೆ-47 ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿರುತ್ತವೆ ಎಂದು ಫರೀದಿ ಆರೋಪಿಸಿದ್ದಾರೆ.
ದಾವೂದ್ನ ಭದ್ರತಾ ವ್ಯವಸ್ಥೆಯನ್ನು ಛೋಟಾ ಶಕೀಲ್ ನಿರ್ವಹಿಸುತ್ತಾನೆ. ಆತ ಪಾಕಿಸ್ತಾನದ ಐಎಸ್ಐ ಜೊತೆ ಸಂಪರ್ಕ ಹೊಂದಿದ್ದು, ಪ್ರತಿ ಶುಕ್ರವಾರ ಆ ಸಂಸ್ಥೆಯ ಕೇಂದ್ರ ಕಚೇರಿಗೆ ತೆರಳಿ ಭದ್ರತಾ ವರದಿಗಳನ್ನು ಪಡೆಯುತ್ತಾನೆ ಎಂದು ಫರೀದಿ ಹೇಳಿದ್ದಾರೆ.
ದಾವೂದ್ ಮತ್ತು ಛೋಟಾ ಶಕೀಲ್ ದುಬೈನಿಂದ ತರಿಸಿಕೊಂಡಿರುವ ಗುಂಡು ನಿರೋಧಕ ವಾಹನಗಳಲ್ಲಿ ಸಂಚರಿಸುತ್ತಾರೆ. ಬಾಂಬ್, ರಾಕೆಟ್ ಹಾಗೂ ಸ್ನೈಪರ್ ದಾಳಿಗಳನ್ನು ತಡೆದುಕೊಳ್ಳುವ ಸಾಮರ್ಥ್ಯ ಈ ವಾಹನಗಳಿಗಿದೆ ಎಂದು ತಿಳಿಸಿದ್ದಾರೆ.
ಐಎಸ್ಐ, ಲಷ್ಕರ್ ಜೊತೆ ನಂಟಿನ ಆರೋಪ
ದಾವೂದ್ ಪಾಕಿಸ್ತಾನದ ಐಎಸ್ಐ ಆಶ್ರಯದಲ್ಲಿದ್ದಾನೆ ಎಂದು ಫರೀದಿ ನೇರ ಆರೋಪ ಮಾಡಿದ್ದಾರೆ. ಲಷ್ಕರ್-ಎ-ತೊಯ್ಬಾ ಸಂಘಟನೆ ಹಾಗೂ 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ಹಫೀಜ್ ಸಯೀದ್ ಜೊತೆ ದಾವೂದ್ಗೆ ನಿಕಟ ವ್ಯವಹಾರಿಕ ಸಂಪರ್ಕವಿದೆ ಎಂದೂ ಹೇಳಿದ್ದಾರೆ.
1993ರ ಮುಂಬೈ ಸ್ಫೋಟ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಟೈಗರ್ ಮೆಮನ್ ಬಗ್ಗೆಯೂ ಮಾತನಾಡಿರುವ ಅವರು, ಮೆಮನ್ ಹೆಚ್ಚು ಹೊರಗೆ ಸಂಚರಿಸುವುದಿಲ್ಲ ಎಂದಿದ್ದಾರೆ. ಇದೇ ವೇಳೆ, ಅನೀಸ್ ಇಬ್ರಾಹಿಂ ಮತ್ತು ಛೋಟಾ ಶಕೀಲ್ ನಡುವೆ ಗ್ಯಾಂಗ್ನ ನಿಯಂತ್ರಣ ಹಾಗೂ ಉತ್ತರಾಧಿಕಾರದ ವಿಚಾರದಲ್ಲಿ ಭಿನ್ನಾಭಿಪ್ರಾಯವಿದೆ ಎಂದು ಆರೋಪಿಸಿದ್ದಾರೆ.
ಐಷಾರಾಮಿ ಜೀವನ, ಕೊಕೇನ್ ಸೇವನೆ, ಎರಡನೇ ಮದುವೆ!
ಧಾರ್ಮಿಕ ವ್ಯಕ್ತಿಯಂತೆ ತನ್ನನ್ನು ಬಿಂಬಿಸಿಕೊಳ್ಳುವ ದಾವೂದ್ ಖಾಸಗಿ ಬದುಕಿನಲ್ಲಿ ಐಷಾರಾಮಿ ಜೀವನ ನಡೆಸುತ್ತಾನೆ ಎಂದು ಫರೀದಿ ಆರೋಪಿಸಿದ್ದಾರೆ. ಮುಜ್ರಾ ನೃತ್ಯ ಕಾರ್ಯಕ್ರಮಗಳನ್ನು ವೀಕ್ಷಿಸುವ ಆಸಕ್ತಿ ಹೊಂದಿದ್ದಾನೆ. ಹಿಂದೆ ಮದ್ಯ ಸೇವಿಸುತ್ತಿದ್ದ ಆತ ಇದೀಗ ಕೊಕೇನ್ ಸೇವನೆಗೆ ಹೆಚ್ಚು ಒಲವು ತೋರಿದ್ದಾನೆ ಎಂದು ಹೇಳಿದ್ದಾರೆ.
ದಾವೂದ್ಗಾಗಿ ತಾನೇ ಮದ್ಯ ಖರೀದಿಸಿದ್ದಾಗಿ ಹಾಗೂ ಸುಮಾರು 1.78 ಲಕ್ಷ ರೂಪಾಯಿ ಮೌಲ್ಯದ ದುಬಾರಿ ಮದ್ಯದ ಬಾಟಲಿಯನ್ನು ಆತ ತರಿಸಿಕೊಂಡಿದ್ದಾಗಿ ಸಂದರ್ಶನದಲ್ಲಿ ವಿವರಿಸಿದ್ದಾರೆ.
ಕರಾಚಿಯ ’22 ಜಮ್ಮಮಾ’ ಎಂಬ ಅತ್ಯಂತ ಬಿಗಿ ಭದ್ರತೆಯ, ಶಬ್ದ ನಿರೋಧಕ ಕಟ್ಟಡದಲ್ಲಿ ದಾವೂದ್ ಪಾಕಿಸ್ತಾನದ ಅಧಿಕಾರಿಗಳು ಮತ್ತು ಉದ್ಯಮಿಗಳೊಂದಿಗೆ ಸಭೆ ನಡೆಸುತ್ತಾನೆ ಎಂದಿದ್ದಾರೆ.
ಒಂದು ಸಂದರ್ಭದಲ್ಲಿ ತನ್ನ ಸಹಾಯಕನಿಗೆ ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್ನಲ್ಲಿ ಉದ್ಯೋಗ ಕೊಡಿಸುವ ಸಲುವಾಗಿ ದಾವೂದ್ ಮಧ್ಯರಾತ್ರಿಯಲ್ಲಿ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರಿಗೆ ಕರೆ ಮಾಡಿದ್ದನ್ನು ನೋಡಿದ್ದೇನೆ ಎಂದೂ ಫರೀದಿ ಹೇಳಿಕೊಂಡಿದ್ದಾರೆ.
ಇದಲ್ಲದೆ, ದಾವೂದ್ ಪಾಕಿಸ್ತಾನದಲ್ಲಿ ಎರಡನೇ ಮದುವೆಯಾಗಿದ್ದಾನೆ ಎಂಬ ಮಾಹಿತಿಯನ್ನೂ ಅವರು ಬಹಿರಂಗಪಡಿಸಿದ್ದಾರೆ. ಆಯೇಷಾ ಭಾಭಿ ಎಂದು ಕರೆಯಲಾಗುವ ಈ ಮಹಿಳೆ ದಾವೂದ್ಗಿಂತ ಸುಮಾರು 20 ವರ್ಷ ಚಿಕ್ಕವಳು. ಆಕೆ ಕರಾಚಿಯಲ್ಲಿ ಕಪ್ಪು ಬಣ್ಣದ ಮರ್ಸಿಡಿಸ್ ಕಾರಿನಲ್ಲಿ ಸಂಚರಿಸುತ್ತಾಳೆ ಎಂದು ತಿಳಿಸಿದ್ದಾರೆ.
2023ರಲ್ಲಿ ದಾವೂದ್ನ ಸಹೋದರಿ ಹಸೀನಾ ಪಾರ್ಕರ್ ಪುತ್ರ ಅಲಿಶಾ ಪಾರ್ಕರ್ ಕೂಡ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮುಂದೆ ಇದೇ ರೀತಿಯ ಮಾಹಿತಿ ನೀಡಿದ್ದ ಎನ್ನಲಾಗಿದೆ. ಮೊದಲ ಪತ್ನಿ ಮೆಹಜಬೀನ್ ಜೊತೆಗಿನ ವಿವಾಹ ಸಂಬಂಧ ಮುಂದುವರಿದಿರುವಾಗಲೇ ದಾವೂದ್ ಪಾಕಿಸ್ತಾನದ ಪಠಾಣ್ ಸಮುದಾಯದ ಮಹಿಳೆಯನ್ನು ಎರಡನೇ ಮದುವೆಯಾಗಿದ್ದಾನೆ ಎಂದು ಅಲಿಶಾ ಹೇಳಿದ್ದ.
ದಾವೂದ್ ಜೊತೆಗಿದ್ದ ಮುಂಬೈನ ಫಕೀರ!
ದಾವೂದ್ ಪಾಕಿಸ್ತಾನಕ್ಕೆ ತೆರಳುವಾಗ ಮುಂಬೈ ಮೂಲದ ‘ಇಸ್ಲಾಂ ಬಾಬಾ’ ಎಂಬ ಫಕೀರನನ್ನೂ ತನ್ನೊಂದಿಗೆ ಕರೆದೊಯ್ದಿದ್ದ ಎಂದು ಫರೀದಿ ತಿಳಿಸಿದ್ದಾರೆ. ಡಿ-ಕಂಪನಿಯ ಯಾವುದೇ ಕಾರ್ಯಾಚರಣೆ ಆರಂಭಿಸುವ ಮೊದಲು ಈ ಫಕೀರನ ಅನುಮತಿ ಪಡೆಯಲಾಗುತ್ತದೆ ಎಂಬ ಕುತೂಹಲಕಾರಿ ವಿಚಾರವನ್ನೂ ಅವರು ಹಂಚಿಕೊಂಡಿದ್ದಾರೆ.
ಒಟ್ಟಿನಲ್ಲಿ, ದಶಕಗಳಿಂದ ನಿಗೂಢವಾಗಿರುವ ದಾವೂದ್ ಇಬ್ರಾಹಿಂನ ವೈಯಕ್ತಿಕ ಬದುಕು, ಭದ್ರತಾ ವ್ಯವಸ್ಥೆ ಹಾಗೂ ಅಪರಾಧ ಜಾಲದ ಕುರಿತು ಕಮ್ರಾನ್ ಫರೀದಿ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆದರೆ, ಸಂದರ್ಶನದಲ್ಲಿ ಅವರು ನೀಡಿರುವ ಮಾಹಿತಿಗಳಿಗೆ ಸ್ವತಂತ್ರ ದೃಢೀಕರಣ ಲಭ್ಯವಾಗಿರುವ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ ಈ ಹೇಳಿಕೆಗಳನ್ನು ದೃಢಪಟ್ಟ ಅಧಿಕೃತ ಮಾಹಿತಿಯೆಂದು ಪರಿಗಣಿಸಲಾಗದು.
-
ದಕ್ಷಿಣ ಕನ್ನಡ20 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು20 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















