Connect with us

ಬಿಗ್ ನ್ಯೂಸ್

‘Khadi’ dress code-ಸರ್ಕಾರಿ ನೌಕರರಿಗೆ ಇನ್ಮುಂದೆ ‘ಖಾದಿ’ ಡ್ರೆಸ್ ಕೋಡ್; ತಿಂಗಳ ಮೊದಲ ಶನಿವಾರ ಕಡ್ಡಾಯ; ಏಪ್ರಿಲ್ 21ರಿಂದ ಹೊಸ ನಿಯಮ ಜಾರಿ

Published

on



Ad Widget

Ad Widget

Ad Widget

Ad Widget

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ‘ಖಾದಿ’ ಬಟ್ಟೆಯ ಕಂಪು ಪಸರಿಸಲಿದೆ. ದೇಶಿ ಉತ್ಪನ್ನವಾದ ಖಾದಿಗೆ ಉತ್ತೇಜನ ನೀಡುವ ಉದ್ದೇಶದಿಂದ, ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಇನ್ಮುಂದೆ ತಿಂಗಳಿಗೊಮ್ಮೆ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ‘ಖಾದಿ’ ಬಟ್ಟೆಯ ಕಂಪು ಪಸರಿಸಲಿದೆ. ದೇಶಿ ಉತ್ಪನ್ನವಾದ ಖಾದಿಗೆ ಉತ್ತೇಜನ ನೀಡುವ ಉದ್ದೇಶದಿಂದ, ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಇನ್ಮುಂದೆ ತಿಂಗಳಿಗೊಮ್ಮೆ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಏಪ್ರಿಲ್ 21ರಿಂದ ಜಾರಿ:
ಜನವರಿ 29ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಏಪ್ರಿಲ್ 21ರಂದು ನಡೆಯಲಿರುವ ‘ಸರ್ಕಾರಿ ನೌಕರರ ದಿನಾಚರಣೆ’ಯ ದಿನದಂದೇ ಈ ಹೊಸ ನಿಯಮ ಅಧಿಕೃತವಾಗಿ ಜಾರಿಗೆ ಬರಲಿದೆ.

Ad Widget

Ad Widget <> Ad Widget

ನಿಯಮ ಏನು ಹೇಳುತ್ತದೆ?
ಯಾವಾಗ?: ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸಿ ಕೆಲಸಕ್ಕೆ ಹಾಜರಾಗಬೇಕು.
ಯಾರಿಗೆ ಅನ್ವಯ?: ಕೇವಲ ಸರ್ಕಾರಿ ಇಲಾಖೆಗಳು ಮಾತ್ರವಲ್ಲದೆ, ಸರ್ಕಾರದ ಅಧೀನದಲ್ಲಿರುವ ನಿಗಮ-ಮಂಡಳಿಗಳು, ಪ್ರಾಧಿಕಾರಗಳು, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಸಂಸ್ಥೆಗಳ ಎಲ್ಲಾ ಸಿಬ್ಬಂದಿಗೂ ಇದು ಅನ್ವಯಿಸುತ್ತದೆ.



Ad Widget

ಖರೀದಿಗೆ ವಿಶೇಷ ರಿಯಾಯಿತಿ:
ನೌಕರರು ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಬಟ್ಟೆ ಖರೀದಿಸಲು ಸೂಚಿಸಲಾಗಿದೆ. ಈಗಾಗಲೇ ಮಂಡಳಿಯು ನೀಡುತ್ತಿರುವ ರಿಯಾಯಿತಿಯ ಜೊತೆಗೆ, ಸರ್ಕಾರಿ ನೌಕರರಿಗೆ ಹೆಚ್ಚುವರಿಯಾಗಿ ಶೇ. 5ರಷ್ಟು ವಿಶೇಷ ರಿಯಾಯಿತಿ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.

Ad Widget

Ad Widget

ಡ್ರೆಸ್ ಕೋಡ್ ವಿವರ:
ಪುರುಷ ನೌಕರರಿಗೆ ಖಾದಿ ಬಟ್ಟೆಯ ಶರ್ಟ್-ಪ್ಯಾಂಟ್ / ಒವರ್ ಕೋಟ್ ಹಾಗೂ ಇತರೆ
ಮಹಿಳಾ ನೌಕರರಿಗೆ ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ/ ಚೂಡಿದಾರ್ ಇತ್ಯಾದಿ…

ಸರ್ಕಾರಿ ನೌಕರರ ಸಂಘದ ಸಹಮತದೊಂದಿಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದು ದೇಶಿ ನೇಕಾರರಿಗೆ ಮತ್ತು ಖಾದಿ ಉದ್ಯಮಕ್ಕೆ ದೊಡ್ಡ ಮಟ್ಟದ ಬೆಂಬಲ ನೀಡುವ ನಿರೀಕ್ಷೆಯಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ

Published

on



Ad Widget

Ad Widget

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.



Ad Widget

ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

Ad Widget

Ad Widget

ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading