ಮಂಗಳೂರು
ರಾಷ್ಟ್ರದ ಪ್ರಗತಿಯನ್ನು GDP ಯಿಂದ ಮಾತ್ರವಲ್ಲ, ಆ ದೇಶ ತನ್ನ ನಾಗರಿಕನನ್ನು ಘನತೆಯಿಂದ ನಡೆಸಿಕೊಳ್ಳುವ ಮತ್ತು ಮತ್ತು ಪ್ರತಿಯೊಬ್ಬ ಪ್ರಜೆಯೂ ಎಷ್ಟು civilize ಆಗಿದ್ದಾನೆ, ಎಷ್ಟು ನಾಗರಿಕನಾಗಿದ್ದಾನೆ ಎನ್ನುವುದರ ಮೇಲೂ ಅಳೆಯಲಾಗುತ್ತದೆ : ಮಂಗಳೂರು ವಿಶ್ವವಿದ್ಯಾಲಯ ಗಣರಾಜ್ಯೋತ್ಸವದಲ್ಲಿ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್
ಮಂಗಳೂರು ಜ.26:
ಗಣರಾಜ್ಯಗಳ ಅಧಿಪತಿ ಭಾರತ ಎಂದು ನಾವು ಹೆಮ್ಮೆ ಪಡುವಾಗ ನಮಗೆ ಒಕ್ಕೂಟ ವ್ಯವಸ್ಥೆಯ ಬಗ್ಗೆಯೂ ಹೆಮ್ಮೆ ಇರಬೇಕು.
ಹುತಾತ್ಮರ ಕನಸು ನನಸು ಮಾಡುವ ಕನಸು ನಿಮ್ಮದಾದಾಗ ಮಾತ್ರ ಹುತಾತ್ಮರಿಗೆ ಗೌರವ ಕೊಟ್ಟಂತಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಮಂಗಳೂರು ವಿಶ್ವ ವಿದ್ಯಾಲಯ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಇಲ್ಲಿ ಕುಳಿತಿರುವ ವಿದ್ಯಾರ್ಥಿಗಳು ಈ ದೇಶದ ನಾಳೆಯ Architect ಗಳು ಮಾತ್ರವಲ್ಲ. ನಿಮ್ಮ ಬದುಕು ಮತ್ತು ಭವಿಷ್ಯದ Architect ಗಳೂ ಹೌದು. ನಿಮ್ಮ ಭವಿಷ್ಯದ ವಾಸ್ತುಶಿಲ್ಪಿಗಳಾಗುವುದು ಮತ್ತು ದೇಶದ ಭವಿಷ್ಯದ ವಾಸ್ತು ಶಿಲ್ಪಿಗಳಾಗುವುದು ಎರಡೂ ಬೇರೆ ಬೇರೆ ಸಂಗತಿಗಳಲ್ಲ. ಇವರೆಡರ ನಡುವೆ ಪರಸ್ಪರತೆ ಇದೆ ಎಂದರು.
ಕಾಲೇಜು ವಿದ್ಯಾರ್ಥಿಗಳು ಜನವರಿ 26 ಅಂದರೆ, ಒಂದು ಸರ್ಕಾರಿ ರಜಾ ದಿನ ಅಂತ ಮಾತ್ರ ಖುಷಿ ಪಡಬಾರದು. ಅದರಲ್ಲೂ ಈ ಬಾರಿಯ ಗಣರಾಜ್ಯೋತ್ಸವವನ್ನು “Long week end” ಎಂದು ಸಂಭ್ರಮ ಪಡುತ್ತಿರುವವರ ಸಂಖ್ಯೆಯೇ ಹೆಚ್ಚಾಗಿದೆ ಎಂದರು.
ಈ ತ್ರಿವರ್ಣ ಧ್ವಜವನ್ನು ನೋಡಿದಾಗ ನಮಗೆ ಥ್ರಿಲ್ ಆಗತ್ತೆ. ರೋಮಾಂಚನ ಆಗತ್ತೆ. ಈ ರೋಮಾಂಚನದ ಹಿಂದೆ ನಮ್ಮ ಹಿರಿಯರ ಹೋರಾಟ, ತ್ಯಾಗ, ಬಲಿದಾನದ ಸುದೀರ್ಘ ಚರಿತ್ರೆಯೇ ಇದೆ. ಇವರೆಲ್ಲರ ಬಲಿದಾನದ ಹಿಂದೆ ಒಂದು ಕನಸಿತ್ತು.
ಸ್ವತಂತ್ರ ಮತ್ತು ಸದೃಡ ಹಾಗೂ ಸರ್ವಧರ್ಮ ಸಮನ್ವಯದ ಭಾರತವನ್ನು ಕಟ್ಟಿ ನಿಲ್ಲಿಸುವ ಗಟ್ಟಿ ಕನಸಿತ್ತು. ನಮ್ಮ ಹಿರಿಯರು ಈ ಕನಸನ್ನು ಸ್ವತಂತ್ರ ಭಾರತದ ಯುವಕ/ ಯುವತಿಯರ ಅಂಗೈಗಳಿಗೆ ಕೊಟ್ಟು ಅವರು ಹುತಾತ್ಮರಾಗಿದ್ದಾರೆ.
ಈ ಕನಸನ್ನು ನನಸು ಮಾಡಬೇಕಾದವರು “long week end”ಗಳಲ್ಲಿ ಕಳೆದು ಹೋಗುವುದು ಬೇಸರದ ಸಂಗತಿ ತಾನೇ ? ಎಂದು ಪ್ರಶ್ನಿಸಿದ ಅವರು ಹುತಾತ್ಮರ ಕನಸನ್ನು ನನಸು ಮಾಡುವಭಾರತಕ್ಕೆ ಕನಸು ನಮ್ಮದಾಗಲಿ ಎಂದು ಕರೆ ನೀಡಿದರು.
1950 ಜನವರಿ 26 ಸ್ವತಂತ್ರ ಭಾರತ ಗಣರಾಜ್ಯವಾಗಿ ಪುನರ್ ಪ್ರತಿಷ್ಠಾಪನೆಯಾದ ದಿನ. ಗಣಗಳ ಅಧಿಪತಿಯನ್ನು ಗಣಪತಿ ಎಂದು ಕರೆಯುತ್ತೇವೆ. ಹಾಗೆಯೇ ಗಣರಾಜ್ಯಗಳ ಅಧಿಪತಿ ಭಾರತ.
ಸ್ವತಂತ್ರ ಭಾರತಕ್ಕೆ ಗಟ್ಟಿ ಸಂವಿಧಾನದ ಮುದ್ರೆ ಬಿದ್ದು Rule of Law ಅಂದರೆ ಕಾನೂನೀ ಆಡಳಿತ ಜಾರಿಯಾದ ದಿನ ಕೂಡ ಹೌದು.
ನಮ್ಮ ಸಂವಿಧಾನ ಕೇವಲ ಕಾನೂನು ಪಠ್ಯವಲ್ಲ; ಇದು ಪ್ರತಿಯೊಬ್ಬ ಭಾರತೀಯನ ಪ್ರಥಮ User Manual ಅಂದರೆ “ಕೈಪಿಡಿ” ಆಗಿದೆ ಎಂದು ವಿವರಿಸಿದರು.
ಸಂವಿಧಾನ ನಮಗೆ ಮಾತನಾಡುವ, ಭಿನ್ನಾಭಿಪ್ರಾಯ ವ್ಯಕ್ತಪಡಿಸುವ, ಕನಸು ಕಾಣುವ ಮತ್ತು ನಾವು ಯಾರೆಂದು ನಿಖರವಾಗಿ ಹೇಳುವ ಹಕ್ಕನ್ನು ನೀಡುತ್ತದೆ.
ಕಾಲೇಜು ವಿದ್ಯಾರ್ಥಿಗಳಾದ ನೀವು ನಿಮ್ಮ ಜೀವನದ ಅತ್ಯಂತ ಶಕ್ತಿಶಾಲಿ ಮತ್ತು ನಿರ್ಣಾಯಕ ಹಂತದಲ್ಲಿದ್ದೀರಿ.
ಹಳತಾದ ವ್ಯವಸ್ಥೆಗಳನ್ನು ಪ್ರಶ್ನಿಸುವ ಕುತೂಹಲದ ಜೊತೆಗೆ, ಬದಲಾವಣೆಯನ್ನು ಒತ್ತಾಯಿಸುವ ಮತ್ತು ರೂಪಿಸುವ ಶಕ್ತಿ ನಿಮಗಿದೆ.
ಸೆಕೆಂಡುಗಳಲ್ಲಿ ಪ್ರಪಂಚದಾದ್ಯಂತ ನಿಮ್ಮ ಧ್ವನಿಯನ್ನು ಹರಡುವ ತಂತ್ರಜ್ಞಾನ ನಿಮ್ಮ ಅಂಗೈಯಲ್ಲಿದೆ.
ಗಣರಾಜ್ಯವು ನಮ್ಮ ನಾಗರಿಕರ ಪಾಲ್ಗೊಳ್ಳುವಿಕೆಯಿಂದಷ್ಟೇ ಪ್ರಬಲವಾಗುತ್ತದೆ ಎನ್ನುವುದನ್ನು ಅರಿತು ಕಾರ್ಯೋನ್ಮುಖರಾಗಿ ಎಂದು ಕರೆ ನೀಡಿದರು.
ಪ್ರಜಾಪ್ರಭುತ್ವ ಅಂದರೆ ನಾವು ಪ್ರೇಕ್ಷಕರಾಗಿ ನೋಡುತ್ತಾ ಕೂರುವ ಕ್ರೀಡೆಯಲ್ಲ. ನಾವು, ನೀವು ಇಲ್ಲಿ ಕುಳಿತಿರುವ ಪ್ರತಿಯೊಬ್ಬರೂ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಸಾಧನಗಳು, ಅಸ್ತ್ರಗಳಾಗಬೇಕು.
ನಮ್ಮ ಪೂರ್ವಜರು ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಆದರೆ ನಾವು ಸ್ವಾತಂತ್ರ್ಯದ ಮೌಲ್ಯ ಮತ್ತು ಇದರ ಶ್ರೇಷ್ಠತೆ ಕಾಪಾಡಲು ಹೋರಾಡಬೇಕು ಎಂದರು.
ಸಂವಿಧಾನದ ಕತೃ ಡಾ.ಬಿ.ಆರ್.ಅಂಬೇಡ್ಕರ್ ಅವರು, “ಸಂವಿಧಾನವು ಕೇವಲ ವಕೀಲರ ದಾಖಲೆಯಲ್ಲ, ಅದು ಜೀವನದ ವಾಹಕ, ಮತ್ತು ಅದರ ಚೈತನ್ಯವು ಯಾವಾಗಲೂ ಯುಗದ ಚೈತನ್ಯವಾಗಿದೆ.” ಎಂದು ಹೇಳಿರುವುದು ಈ ಉದ್ದೇಶಕ್ಕೇ.
ನೀವು ಈ ಕ್ಯಾಂಪಸ್‌ನಿಂದ ಹೊರಡುವಾಗ, ಡಿಗ್ರಿ ಪಡೆದ ಹೆಮ್ಮೆಯನ್ನು ಮಾತ್ರ ಹೊತ್ತುಕೊಂಡು ಹೋಗಬೇಡಿ. ಸ್ವತಂತ್ರ ಭಾರತದ ಹುತಾತ್ಮರ ಕನಸುಗಳನ್ನು ನನಸು ಮಾಡುವ ಸೇನಾನಿಗಳಾಗಿ ಹೊರಡಿ. ಉದ್ಯೋಗಗಳನ್ನು ಸೃಷ್ಟಿಸುವ ಉದ್ಯಮಿಯಾಗಿ, ಔಷಧಿಗಳನ್ನು ಕಂಡುಕೊಳ್ಳುವ ವಿಜ್ಞಾನಿಯಾಗಿ, ಸತ್ಯವನ್ನು ಮಾತನಾಡುವ ಕಲಾವಿದನಾಗಿ ಮತ್ತು ಪ್ರತಿಯೊಬ್ಬ ಭಾರತೀಯನನ್ನು ಘನತೆಯಿಂದ ನಡೆಸಿಕೊಳ್ಳುವ ನಾಗರಿಕನಾಗಿ ಕ್ಯಾಂಪಸ್ಸಿನ ಒಳಗೆ ಮತ್ತು ಹೊರಗೆ ಅತ್ಯುನ್ನತ ನಾಗರಿಕತೆಯನ್ನು ಆಚರಿಸುವ ಸೇನಾನಿಯಾಗಿ ಎಂದು ನಾನು ಹಾರೈಸುತ್ತೇನೆ ಎಂದರು.
ಭಾರತ ಗಣರಾಜ್ಯವಾಗಿ ಸ್ಥಾಪನೆಯಾಗುವ 1950 ರಲ್ಲಿ ಸಾಕ್ಷರತೆ ದೇಶದ ದೊಡ್ಡ ಸವಾಲಾಗಿತ್ತು. 2026 ರಲ್ಲಿ, ಸತ್ಯದ ಸಾಕ್ಷರತೆ ಸವಾಲಾಗಿದೆ.
ಡೀಪ್‌ಫೇಕ್‌ಗಳ
ಕಾಲದಲ್ಲಿ ಸತ್ಯದ ಸೇನಾನಿಗಳಾಗಬೇಕಿದೆ. ನಾವು ಸವಕಲು ಯುವ ಸಮೂಹದಿಂದ ಸಮೃದ್ಧ ಗಣರಾಜ್ಯವನ್ನು ಹೊಂದಲು ಸಾಧ್ಯವಿಲ್ಲ.
“ಒಂದು ರಾಷ್ಟ್ರದ ಪ್ರಗತಿಯನ್ನು ಅದರ GDP ಯಿಂದ ಮಾತ್ರ ಅಳೆಯಲಾಗುವುದಿಲ್ಲ, ಬದಲಿಗೆ ಅದು ಅದರ ನಾಗರಿಕನನ್ನು ಘನತೆಯಿಂದ ನಡೆಸಿಕೊಳ್ಳುವ ಮತ್ತು ಮತ್ತು ಪ್ರತಿಯೊಬ್ಬ ಪ್ರಜೆಯೂ ಎಷ್ಟು civilize ಆಗಿದ್ದಾನೆ, ಎಷ್ಟು ನಾಗರಿಕನಾಗಿದ್ದಾನೆ ಎನ್ನವುದರ ಮೇಲೂ ಅಳೆಯಲಾಗುತ್ತದೆ ಎಂದು ವಿವರಿಸಿದರು.
*ಆದ್ದರಿಂದ ವಿದ್ಯಾರ್ಥಿಗಳು ಈ ಗಣರಾಜ್ಯ ದಿನದ ಮೂಲ ತತ್ವಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವವನ್ನು ಅರ್ಥಮಾಡಿಕೊಳ್ಳುವುದಷ್ಟೆ ಅಲ್ಲ ಆಚರಿಸಬೇಕು.
*ಭಾಷೆ, ಧರ್ಮ, ಜಾತಿಗಳ ಭೇದವಿಲ್ಲದೆ ಎಲ್ಲರನ್ನೂ ಗೌರವಿಸುವ ಮೂಲಕ ದೇಶದ ಏಕತೆಯನ್ನು ಎತ್ತಿ ಹಿಡಿಯಬೇಕು.
*ವಿಶ್ವವಿದ್ಯಾಲಯಗಳು ಕೇವಲ ಪದವಿ ನೀಡುವ ಕೇಂದ್ರಗಳಾಗದೆ, ವಿದ್ಯಾರ್ಥಿಗಳಲ್ಲಿ ನಾಗರಿಕ ಪ್ರಜ್ಞೆಯನ್ನು ಬೆಳೆಸುವ ಕಾರ್ಯಾಗಾರಗಳಾಗಬೇಕು ಎಂದು ಎಂದು ಆಶಿಸುತ್ತಾ, ಹಾರೈಸುತ್ತಾ ಮಾತು ಮುಗಿಸುತ್ತೇನೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಬಿಗ್ ನ್ಯೂಸ್14 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ12 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು7 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸಿನೆಮಾ12 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ13 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ13 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ13 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
-
ಅಂತರ ರಾಜ್ಯ6 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!















