Connect with us

ಕಾರ್ಯಕ್ರಮಗಳು

Kallega-ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ ಸೂಟೆಯ ಬೆಳಕಿನಲ್ಲಿ ಕಲ್ಲೇಗಕ್ಕೆ ದೈವಗಳ ಭಂಡಾರ ಆಗಮನ; ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ವೈಭವದ ವಾರ್ಷಿಕ ಜಾತ್ರೆ; ಸಹಸ್ರ ಸಹಸ್ರ ಸಂಖ್ಯೆಯ ಭಕ್ತರಿಗೆ ಅನ್ನಪ್ರಸಾದ ವಿತರಣೆ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಎಂದೇ ಕರೆಯಲಾಗುತ್ತಿರುವ, ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಜ.31 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಎಂದೇ ಕರೆಯಲಾಗುತ್ತಿರುವ, ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಜ.31 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು. ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ ರಾತ್ರಿ ವಿವಿಧ ಬಿರುದಾವಳಿಗಳು, ದಂಡ್ ಶಿಲಾಲ್, ಕೊಂಬು, ಶಂಖ, ಜಾಗಟೆ, ಟಾಸೆ, ಚೆಂಡೆಯ ಸದ್ದು ಮತ್ತು ಬೆಳಕಿನ ಸೂಟೆಯೊಂದಿಗೆ ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ ದೈವಗಳ ಭಂಡಾರ ಬರುವುದೇ ವಿಶೇಷವಾಗಿತ್ತು. ದೈವಗಳ ಭಂಡಾರದ ಜೊತೆ ಪಲ್ಲಕ್ಕಿಯ ಅಕ್ಕಪಕ್ಕ ದಂಡ್ ಶಿಲಾಲ್ ಬೆಳಕಿತ್ತು. ಮುಂದೆ ಚೆಂಡೆಯ, ಸರ್ವವಾದ್ಯ, ಠಾಣೆಯ ಸದ್ದಿತ್ತು. ಮಧ್ಯಾಹ್ನ ಕಲ್ಲೇಗ ದೈವಸ್ಥಾನದಲ್ಲಿ ಸಹಸ್ರಾರು ಮಂದಿ ಭಕ್ತರಿಗೆ ಅನ್ನಪ್ರಸಾದ ವಿತರಣೆ ಮಾಡಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಬೆಳಿಗ್ಗೆ ಕಾರ್ಜಾಲು ಗುತ್ತಿನಲ್ಲಿ ಸ್ಥಳಶುದ್ಧಿ ಹೋಮ, ಕಲಶ ಪ್ರತಿಷ್ಠೆ, ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ, ನಾಗತಂಬಿಲ, ಮಧ್ಯಾಹ್ನ ಶ್ರೀ ದೈವಸ್ಥಾನದ ಬಳಿ ಶ್ರೀ ದೈವಗಳ ಭಂಡಾರದ ವತಿಯಿಂದ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಕಾರ್ಜಾಲು ಗುತ್ತಿನಿಂದ ಶ್ರೀ ದೈವಗಳ ಭಂಡಾರ ಹೊರಟು ದೈವಸ್ಥಾನಕ್ಕೆ ಬಂದ ಬಳಿಕ ಗೋಂದೊಲು ಪೂಜೆ, ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು.

Ad Widget

Ad Widget <> Ad Widget

ಶ್ರೀ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಕಲ್ಲೇಗ, ಜಿನ್ನಪ್ಪ ಗೌಡ, ನಾರಾಯಣ ಮುಗೇರ, ಪ್ರತೀಕ ಪಿ, ಜಾನಕಿ, ಚಂದ್ರಶೇಖರ, ಕೃಷ್ಣಪ್ಪ, ಪ್ರಶಾಂತ್ ಮುರ, ಪಿ.ರಾಮಚಂದ್ರ ನಗರಸಭಾ ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ಕಲ್ಲೇಗ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ನ ಅಧ್ಯಕ್ಷ ಕಲ್ಲೇಗ ಸಂಜೀವ ನಾಯಕ್ ಕಲ್ಲೇಗ, ನವೀನ್ ಕುಮಾರ್, ವಸಂತ ಕಾರೆಕ್ಕಾಡು, ದಿನೇಶ್ ಶೆವಿರೆ, ಕಬಕ ಗ್ರಾ.ಪಂ ಸದಸ್ಯ ವಿನಯ ಕಲ್ಲೇಗ, ಜಿನ್ನಪ್ಪ ಪೂಜಾರಿ ಮುರ, ಪ್ರಶಾಂತ್ ಎಸ್, ರಾಘವೇಂದ್ರ ಪ್ರಭು, ಮಾಧವ ಪೂಜಾರಿ ಪಟ್ಲ, ಪ್ರಸಾದ್ ಬೀಡಿಗೆ, ಬಿ.ರವಿಕಿರಣ, ಚಂದ್ರಶೇಖರ್ ಗೌಡ ಕಲ್ಲೇಗ, ಸಂತೋಷ್ ಶೆಟ್ಟಿ, ಶ್ರೀಧರ್ ಪಟ್ಲ, ಉಮೇಶ್ ಅಜೇಯನಗರ, ಮಹೇಶ್ ಕಲ್ಲೇಗ, ಉಳಿಯ ಶ್ರೀಧರ್, ರಂಜಿತ್ ಬಂಗೇರ, ಪೂರ್ಣೇಶ್, ಅಣ್ಣಿ ಪೂಜಾರಿ ಸಹಿತ ಸಾವಿರಾರು ಭಕ್ತರು ರಾತ್ರಿ ಭಂಡಾರ ಬರುವ ಸಂದರ್ಭ ಜೊತೆಗಿದ್ದರು. ಶಾಸಕ ಅಶೋಕ್ ಕುಮಾರ್ ರೈ , ಮಾಜಿ ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸಹಿತ ಹಲವಾರು ಮಂದಿ ದೈವಸ್ಥಾನದಲ್ಲಿ ಉಪಸ್ಥಿತರಿದ್ದರು. ಸುದ್ದಿ ಯುಟ್ಯೂಬ್ ಚಾನೆಲ್‌ನಲ್ಲಿ ಭಂಡಾರದ ಸ್ಥಾನದಿಂದಲೇ ಕಲ್ಲೇಗ ಜಾತ್ರೋತ್ಸವದ ನೇರಪ್ರಸಾರ ಮಾಡಲಾಗಿತ್ತು.



Ad Widget

ರಸ್ತೆಯುದ್ದಕ್ಕೂ ವೃತ್ತಾಕರ ಕಂಬದ ಮಾದರಿಯ ವಿದ್ಯುತ್ ಅಲಂಕಾರ ವಿಶೇಷ ಸುಡುಮದ್ದು ಪ್ರದರ್ಶನ:
ರಾತ್ರಿ ಕಾರ್ಜಾಲು ಗುತ್ತುವಿನಿಂದ ಭಂಡಾರ ಬರುವ ಸಂದರ್ಭ ಕಲ್ಲೇಗದಿಂದ ಮಂಜಲ್ಪಡ್ಪು ತನಕ ಮುಖ್ಯರಸ್ತೆಯುದ್ದಕ್ಕೂ ಮಾಲೆ ಪಟಾಕಿ, ಬಣ್ಣ ಬಣ್ಣದ ಸುಡುಮದ್ದು ಪ್ರದರ್ಶನಗೊಂಡಿತು. ಅದೇ ರೀತಿ ರಸ್ತೆಯುದ್ದಕ್ಕೂ ಬಣ್ಣ ಬಣ್ಣದ, ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಈ ಭಾರಿ ರಸ್ತೆಯ ಅಕ್ಕಪಕ್ಕದಲ್ಲಿ ಕಂಬದ ಮಾದರಿಯ ವೃತ್ತಾಕಾರದ ವಿದ್ಯುತ್ ದೀಪಗಳು ವಿಶೇಷ ಆಕರ್ಷಣೆಯಾಗಿತ್ತು. ದೈವಸ್ಥಾನವನ್ನು ಹೂವಿನಿಂದ ಅಲಂಕರಿಸಲಾಗಿತ್ತು.

Ad Widget

Ad Widget

ಮಧ್ಯಾಹ್ನವೇ ದೈವಸ್ಥಾನದಲ್ಲಿ ಭಕ್ತಸಾಗರ
ಬೆಳಿಗ್ಗೆ ಕಾರ್ಜಾಲು ಗುತ್ತಿನಲ್ಲಿ ವೈದಿಕ ಕಾರ್ಯಕ್ರಮದ ಬಳಿಕ ಕಲ್ಲೇಗ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ, ನಾಗತಂಬಿಲ, ಮಧ್ಯಾಹ್ನ ಶ್ರೀ ದೈವಸ್ಥಾನದ ಬಳಿ ಶ್ರೀ ದೈವಗಳ ಭಂಡಾರದ ವತಿಯಿಂದ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ದೈವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿದರು. ಬಳಿಕ ಅನ್ನಪ್ರಸಾದ ಸ್ವೀಕರಿಸಿದರು. ಭಕ್ತರ ಸಂಖ್ಯೆ ರಾತ್ರಿ ದೈವಗಳ ಭಂಡಾರ ಸಂದರ್ಭ ಮತಷ್ಟು ಜಾಸ್ತಿಯಾಗಿ ಮಂಜಲ್ಪಡ್ಪುವಿನಿಂದ ನೆಹರುನಗರದ ತನಕ ರಸ್ತೆಯಲ್ಲೇ ಭಕ್ತರು ಕಾಲ್ನಡಿಗೆಯಲ್ಲಿ ದೈವಸ್ಥಾನಕ್ಕೆ ಬರುತ್ತಿದ್ದರು. ಒಟ್ಟಿನಲ್ಲಿ ಭಕ್ತಸಾಗಾರವೇ ದೈವಸಾನದಲ್ಲಿತ್ತು.

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

Published

on



Ad Widget

Ad Widget

Ad Widget

Ad Widget

ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.

Ad Widget

Ad Widget

Ad Widget

Ad Widget

ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.

Ad Widget

Ad Widget <> Ad Widget

ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.



Ad Widget

ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.

Ad Widget

Ad Widget

ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.

ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.

ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ

ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading