ಸ್ಥಳೀಯ
Viral Post-“ಪೊಲೀಸ್ ಕೆಲಸಕ್ಕಿಂತ ಎಗ್ ರೈಸ್ ಮಾರೋದೇ ಲೇಸು!”: ಇಲಾಖೆಯ ವಿರುದ್ಧ ಪೇದೆಯ ಆಕ್ರೋಶದ ಪೋಸ್ಟ್ ವೈರಲ್
ಪೊಲೀಸ್ ಇಲಾಖೆಯಲ್ಲಿ ವರ್ಷದ 365 ದಿನವೂ ಕೆಲಸ ಮಾಡಬೇಕು, ಒಂದು ದಿನವೂ ರಜೆ ಸಿಗುವುದಿಲ್ಲ. ಇಂತಹ ಕೆಲಸ ಮಾಡುವುದಕ್ಕಿಂತ ಎಗ್ ರೈಸ್ ಮಾರಿಕೊಂಡು ಬದುಕುವುದು ಎಷ್ಟೋ ಉತ್ತಮ!” – ಹೀಗೆಂದು ತಾಲ್ಲೂಕಿನ ಹನುಮಸಾಗರ ಪೊಲೀಸ್ ಠಾಣೆಯ ಪೇದೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಈಗ ಜಿಲ್ಲಾದ್ಯಂತ ಸಂಚಲನ ಮೂಡಿಸಿದೆ.
ಕುಷ್ಟಗಿ: “ಪೊಲೀಸ್ ಇಲಾಖೆಯಲ್ಲಿ ವರ್ಷದ 365 ದಿನವೂ ಕೆಲಸ ಮಾಡಬೇಕು, ಒಂದು ದಿನವೂ ರಜೆ ಸಿಗುವುದಿಲ್ಲ. ಇಂತಹ ಕೆಲಸ ಮಾಡುವುದಕ್ಕಿಂತ ಎಗ್ ರೈಸ್ ಮಾರಿಕೊಂಡು ಬದುಕುವುದು ಎಷ್ಟೋ ಉತ್ತಮ!” – ಹೀಗೆಂದು ತಾಲ್ಲೂಕಿನ ಹನುಮಸಾಗರ ಪೊಲೀಸ್ ಠಾಣೆಯ ಪೇದೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಈಗ ಜಿಲ್ಲಾದ್ಯಂತ ಸಂಚಲನ ಮೂಡಿಸಿದೆ.
ಘಟನೆಯ ಹಿನ್ನೆಲೆ:
ಹನುಮಸಾಗರ ಠಾಣೆಯ ಪೇದೆ ಬ್ರಹ್ಮಾನಂದ ಗದ್ದಿ ಎಂಬುವವರು ತಮ್ಮ ಮಾತೃ ಇಲಾಖೆಯ ಕೆಲಸದ ಒತ್ತಡ ಮತ್ತು ರಜೆ ಇಲ್ಲದ ಪರಿಸ್ಥಿತಿಯ ಬಗ್ಗೆ ವಾಟ್ಸಾಪ್ ಸ್ಟೇಟಸ್ ಮೂಲಕ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇತ್ತೀಚೆಗೆ ಡಿಜಿ-ಐಜಿಪಿ ಅವರು ರಾಜ್ಯದಲ್ಲಿ ಈ ವರ್ಷ 8,300 ಪೊಲೀಸ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪೇದೆ ಬ್ರಹ್ಮಾನಂದ ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ.
ಅಭ್ಯರ್ಥಿಗಳಿಗೆ ಎಚ್ಚರಿಕೆ:
ಪೊಲೀಸ್ ಇಲಾಖೆ ಸೇರಬಯಸುವ ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿರುವ ಅವರು, “ಪೊಲೀಸ್ ಇಲಾಖೆಗೆ ಸೇರುವ ಮುನ್ನ ನೂರು ಬಾರಿ ಯೋಚನೆ ಮಾಡಿ. ಈ ಇಲಾಖೆಗಿಂತ ಬೇರೆ ಇಲಾಖೆಗೆ ಹೋಗುವುದು ಸಾವಿರ ಪಟ್ಟು ಲೇಸು” ಎಂದು ಬರೆದುಕೊಂಡಿದ್ದಾರೆ. ಇಲಾಖೆಯ ಶಿಸ್ತು ಮತ್ತು ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ದೂರು ನೀಡುವ ಎಚ್ಚರಿಕೆ:
ಪೇದೆಯ ಈ ನಡವಳಿಕೆಗೆ ದಲಿತ ಸಂಘಟನೆಯ ಮುಖಂಡ ಹುಸೇನಪ್ಪ ಮುದೇನೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸರ್ಕಾರಿ ಕೆಲಸದಲ್ಲಿದ್ದುಕೊಂಡು ಇಲಾಖೆಯ ಬಗ್ಗೆ ಈ ರೀತಿ ಬಹಿರಂಗವಾಗಿ ಪೋಸ್ಟ್ ಹಾಕುವುದು ಶಿಸ್ತು ಉಲ್ಲಂಘನೆಯಾಗಿದೆ” ಎಂದು ಅವರು ದೂರಿದ್ದಾರೆ. ಈ ಬಗ್ಗೆ ಸ್ಥಳೀಯ ಸಿಪಿಐ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (SP) ದೂರು ನೀಡುವುದಾಗಿ ಅವರು ತಿಳಿಸಿದ್ದಾರೆ.
ಸ್ಥಳೀಯ
Wedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಉಜಿರೆ: ಕ್ಯಾಸೆಟ್ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.
ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.
ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.
ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮತ್ತು ರಶ್ಮಿತಾ ಜೈನ್ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.
ಶಿಕ್ಷಣ
Science Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ (ರಿ.), ಪುತ್ತೂರು ಹಾಗೂ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ – 2026’ ಶನಿವಾರ, ನವೆಂಬರ್ 21ರಂದು ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.
ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಕುತೂಹಲ ಹಾಗೂ ಪ್ರಾಯೋಗಿಕ ಕಲಿಕೆಯನ್ನು ಬೆಳೆಸುವ ಉದ್ದೇಶದಿಂದ ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ (ರಿ.), ಪುತ್ತೂರು ಹಾಗೂ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ – 2026’ ಶನಿವಾರ, ನವೆಂಬರ್ 21ರಂದು ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.

ಶಾಲಾ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಯಶಸ್ವಿ ಪಯಣ:
“ಉತ್ತಮ ಜೀವನಕ್ಕಾಗಿ ವಿಜ್ಞಾನ” ಎಂಬ ಆಶಯದೊಂದಿಗೆ ಆರಂಭಗೊಂಡ ಈ ಅಭಿಯಾನದ ಮೊದಲ ಹಂತದಲ್ಲಿ ಜಿಲ್ಲೆಯ 41 ಗ್ರಾಮೀಣ ಶಾಲೆಗಳಲ್ಲಿ ಶಾಲಾ ಮಟ್ಟದ ವಿಜ್ಞಾನ ಮೇಳಗಳನ್ನು ಆಯೋಜಿಸಲಾಗಿತ್ತು. ಇದರಲ್ಲಿ 1,189 ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು 650 ವಿನೂತನ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದ್ದರು. ಶಾಲಾ ಮಟ್ಟದಲ್ಲಿ ವಿಜೇತರಾದ ತಂಡಗಳು ಜಿಲ್ಲಾ ಮಟ್ಟದ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಜಿಲ್ಲಾ ಮಟ್ಟದ ಅಂತಿಮ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ 66 ಹಾಗೂ ಪ್ರೌಢಶಾಲಾ ವಿಭಾಗದ 57 ತಂಡಗಳು ಸೇರಿದಂತೆ ಒಟ್ಟು 123 ತಂಡಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಬಂಟರ ಭವನದಲ್ಲಿ ಸಂಪನ್ಮೂಲ ವ್ಯಕ್ತಿ ಅನಿರುದ್ಧ್ ವಾಗ್ಳೆ ವಿದ್ಯಾರ್ಥಿಗಳಿಗೆ ವಿಶೇಷ ಪ್ರೇರಣಾದಾಯಕ ಅವಧಿ ನಡೆಸಿಕೊಟ್ಟರು. ಮಾರ್ಗದರ್ಶಿ ಶಿಕ್ಷಕರಿಗಾಗಿ ಶಾಲೆಯ ಅಟಲ್ ಟಿಂಕರಿಂಗ್ ಪ್ರಯೋಗಾಲಯದಲ್ಲಿ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಿರಂತರ ಪರಿಶ್ರಮವಿದ್ದಾಗ ಮಾತ್ರ ಹೊಸ ಆವಿಷ್ಕಾರಗಳು ಸಾಧ್ಯವಾಗುತ್ತವೆ. ನಿರಂತರ ಕಲಿಕೆಯಿಂದ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು” ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್ನ ಸಹ-ಸಂಸ್ಥಾಪಕ ಶ್ರೀ ಪ್ರವೀಣ್ ಕ್ಯಾಸ್ಟಲಿನೋ, “ವಿದ್ಯಾರ್ಥಿಗಳಲ್ಲಿರುವ ಕುತೂಹಲವೇ ಹೊಸ ಆವಿಷ್ಕಾರಗಳಿಗೆ ದಾರಿ ಮಾಡಿಕೊಡುತ್ತದೆ. ಪ್ರಶ್ನಿಸುವ ಹಾಗೂ ಪ್ರಯೋಗ ಮಾಡುವ ಮನೋಭಾವ ಬೆಳೆಸಿಕೊಂಡಾಗ ಗ್ರಾಮೀಣ ಪ್ರತಿಭೆಗಳು ದೊಡ್ಡ ಮಟ್ಟದ ಸಾಧನೆ ಮಾಡಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೋಡ್ಕ್ರಾಫ್ಟ್ ಟೆಕ್ನಾಲಜೀಸ್ನ ಆಪರೇಷನ್ಸ್ ಲೀಡ್ ಜೋಬಿನ್ ಜೋಸೆಫ್ ಹಾಗೂ ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಡಾ. ಶ್ರೀಶ ಬೈಪದವು ಉಪಸ್ಥಿತರಿದ್ದರು. ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್. ಸ್ವಾಗತಿಸಿದರು. ರಾಜೇಶ್ವರಿ ಎನ್. ನಿರೂಪಿಸಿ, ನೇತ್ರಾ ಡಿ. ರಾವ್ ವಂದಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕದ ವತಿಯಿಂದ ಕಾಲೇಜಿನ ಎಲ್ಲಾ ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ನವೆಂಬರ್ 16ರಿಂದ 20ರವರೆಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಪುತ್ತೂರು, ನ. 22: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ತರಬೇತಿ ಮತ್ತು ಉದ್ಯೋಗ ನಿಯೋಜನಾ ಘಟಕದ ವತಿಯಿಂದ ಕಾಲೇಜಿನ ಎಲ್ಲಾ ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ನವೆಂಬರ್ 16ರಿಂದ 20ರವರೆಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ತರಬೇತಿ ಕಾರ್ಯಕ್ರಮವು ಕಾಲೇಜಿನ ನಿರಂತರ ಉದ್ಯೋಗ ಸಿದ್ಧತಾ (Placement Readiness) ಉಪಕ್ರಮದ ಭಾಗವಾಗಿದ್ದು, ವಿದ್ಯಾರ್ಥಿಗಳನ್ನು ಕ್ಯಾಂಪಸ್ ಮತ್ತು ಆಫ್-ಕ್ಯಾಂಪಸ್ ಉದ್ಯೋಗ ನೇಮಕಾತಿ ಪ್ರಕ್ರಿಯೆಗಳಿಗೆ ಸಮರ್ಥವಾಗಿ ಸಿದ್ಧಗೊಳಿಸುವ ಉದ್ದೇಶವನ್ನು ಹೊಂದಿದೆ. ಉದ್ಯಮಗಳ ಪ್ರಸ್ತುತ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳ ಡಿಜಿಟಲ್ಕೌ ಶಲ್ಯ, ಉದ್ಯೋಗಾರ್ಹ ಸಾಮರ್ಥ್ಯ, ಸಂವಹನ ಕೌಶಲ್ಯ ಹಾಗೂ ವೃತ್ತಿಪರ ಆತ್ಮವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ತರಬೇತಿಯನ್ನು ರೂಪಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕೃತಕ ಬುದ್ಧಿಮತ್ತೆ (Artificial Intelligence – AI) ಮತ್ತು ಉದ್ಯೋಗಾರ್ಹತಾ ಕೌಶಲ್ಯಗಳು (Employability Skills – Lifelong Profession) ಎಂಬ ಪ್ರಮುಖ ವಿಷಯಗಳ ಕುರಿತು ತರಬೇತಿ ನೀಡಲಾಯಿತು.

ತರಬೇತುದಾರರಾದ ದೀಪಕ್ ಬಡಿಗೇರ್ ಮತ್ತು ಆಯೆಶತ್ ಹಫೀಝಾ ಅವರು ವಿವಿಧ ಪ್ರಾಯೋಗಿಕ ಚಟುವಟಿಕೆಗಳು ಹಾಗೂ ಸಂವಾದಾತ್ಮಕ ಅಧಿವೇಶನಗಳ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಕೃತಕ ಬುದ್ಧಿಮತ್ತೆಯ ಮೂಲ ಪರಿಕಲ್ಪನೆಗಳು, ಉದಯೋನ್ಮುಖ ತಂತ್ರಜ್ಞಾನಗಳ ಬಳಕೆ, ಸಂವಹನ ಕೌಶಲ್ಯ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ, ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯ ಹಾಗೂ ವೃತ್ತಿಪರ ಜೀವನಕ್ಕೆ ಅಗತ್ಯವಾದ ಸಾಮರ್ಥ್ಯಗಳ ಕುರಿತು ಮಾರ್ಗದರ್ಶನ ನೀಡಲಾಯಿತು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ IBM SkillsBuild ಡಿಜಿಟಲ್ ಕಲಿಕಾ ವೇದಿಕೆಯ ಪರಿಚಯ
ಮಾಡಿಕೊಡಲಾಯಿತು. ನಿಗದಿತ ಕಲಿಕಾ ಅವಶ್ಯಕತೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ IBM SkillsBuild ವತಿಯಿಂದ ಪ್ರಮಾಣಪತ್ರಗಳನ್ನು ನೀಡಲಾಯಿತು. ಈ ಪ್ರಮಾಣಪತ್ರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಅರ್ಹತೆಯೊಂದಿಗೆ ಹೆಚ್ಚುವರಿ ವೃತ್ತಿಪರ ಕೌಶಲ್ಯಗಳನ್ನು ಗುರುತಿಸಲು ಸಹಕಾರಿಯಾಗಲಿವೆ.
ಶೈಕ್ಷಣಿಕ ಜ್ಞಾನ ಮತ್ತು ಉದ್ಯಮ ಕ್ಷೇತ್ರದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ಸನ್ನದ್ಧರನ್ನಾಗಿಸುವ ನಿಟ್ಟಿನಲ್ಲಿ ಈ ಐದು ದಿನಗಳ ತರಬೇತಿ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು.
ಉದ್ಯೋಗಮುಖಿ ಶಿಕ್ಷಣದೊಂದಿಗೆ ಉಜ್ವಲ ಭವಿಷ್ಯಕ್ಕೆ ಮುನ್ನುಡಿ!
ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉದ್ಯಮ ಕ್ಷೇತ್ರದ ಅಗತ್ಯಗಳಿಗೆ ಪೂರಕವಾದ ಕೌಶಲ್ಯಗಳನ್ನು ಬೆಳೆಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪದವಿ ಮಾತ್ರವಲ್ಲದೆ, ಡಿಜಿಟಲ್ ಜ್ಞಾನ, ಕೃತಕ ಬುದ್ಧಿಮತ್ತೆಯ ಅರಿವು, ಸಂವಹನ ಕೌಶಲ್ಯ ಮತ್ತು ವೃತ್ತಿಪರ ಸಾಮರ್ಥ್ಯಗಳೂ ಅತ್ಯಂತ ಅವಶ್ಯಕವಾಗಿವೆ.
ಸ್ವಾಯತ್ತ ಶಿಕ್ಷಣ ವ್ಯವಸ್ಥೆಯಡಿ ನವೀನ ಕಲಿಕಾ ವಿಧಾನಗಳು, ಕೌಶಲ್ಯಾಧಾರಿತ ತರಬೇತಿ, ಉದ್ಯೋಗ ನಿಯೋಜನೆಗೆ ಪೂರಕ ಕಾರ್ಯಕ್ರಮಗಳು ಹಾಗೂ ಉದ್ಯಮ ಸಂಪರ್ಕದ ಮೂಲಕ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕಾಲೇಜು ಬದ್ಧವಾಗಿದೆ.
ನಿಮ್ಮ ಉನ್ನತ ಶಿಕ್ಷಣದ ಕನಸುಗಳಿಗೆ ಸಂತ ಫಿಲೋಮಿನಾ ಕಾಲೇಜು ಸೂಕ್ತ ವೇದಿಕೆ. ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳೊಂದಿಗೆ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇಂದೇ ನಮ್ಮ ಕಾಲೇಜನ್ನು ಆಯ್ಕೆಮಾಡಿ. ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು – ನಿಮ್ಮ ಉಜ್ವಲ ಭವಿಷ್ಯದತ್ತ ಮೊದಲ ಹೆಜ್ಜೆ!
– ರೆವ್. ಡಾ. ಆಂಟನಿ ಪ್ರಕಾಶ್ ಮೊಂತೆರೋ
ಪ್ರಾಂಶುಪಾಲರು, ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು
-
ಶಿಕ್ಷಣ1 hour agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ1 hour agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಸ್ಥಳೀಯ7 minutes agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!















