ಕ್ರೈಂ
Kottur murder case-ಕೊಟ್ಟೂರು ಹತ್ಯಾಕಾಂಡಕ್ಕೆ ಟ್ವಿಸ್ : ಮನೆಯ ಹಾಲ್ ನಲ್ಲೇ ಸಮಾಧಿ..! ಮೂರಲ್ಲ 4 ಹತ್ಯೆ ..! ಬೆಂಗಳೂರು ಪೊಲೀಸರಿಂದ ಸತ್ಯ ಬಯಲು
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಕೊಟ್ಟೂರಿನ ತ್ರಿವಳಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಸತ್ಯಗಳು ಹೊರಬರುತ್ತಿವೆ. ತನ್ನ ತಂದೆ, ತಾಯಿ ಹಾಗೂ ತಂಗಿಯನ್ನು ಹತ್ಯೆಗೈದಿದ್ದ ಹಂತಕ ಅಕ್ಷಯ್, ತಂಗಿಯ ಒಡಲಲ್ಲಿದ್ದ ಮೂರು ತಿಂಗಳ ಭ್ರೂಣವನ್ನೂ ಹತ್ಯೆಗೈದಿರುವುದು ಈಗ ಬಯಲಾಗಿದೆ.
ವಿಜಯನಗರ (ಕೊಟ್ಟೂರು): ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಕೊಟ್ಟೂರಿನ ತ್ರಿವಳಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಸತ್ಯಗಳು ಹೊರಬರುತ್ತಿವೆ. ತನ್ನ ತಂದೆ, ತಾಯಿ ಹಾಗೂ ತಂಗಿಯನ್ನು ಹತ್ಯೆಗೈದಿದ್ದ ಹಂತಕ ಅಕ್ಷಯ್, ತಂಗಿಯ ಒಡಲಲ್ಲಿದ್ದ ಮೂರು ತಿಂಗಳ ಭ್ರೂಣವನ್ನೂ ಹತ್ಯೆಗೈದಿರುವುದು ಈಗ ಬಯಲಾಗಿದೆ.
ಮರ್ಯಾದೆಗಾಗಿ ಇಡೀ ಕುಟುಂಬವನ್ನೇ ಮುಗಿಸಿದ:
ಆರೋಪಿ ಅಕ್ಷಯ್‌ನ ತಂಗಿ ಅಮೃತಾ (17) ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದು, ಮೂರು ತಿಂಗಳ ಗರ್ಭಿಣಿಯಾಗಿದ್ದಳು. ಈ ವಿಷಯ ತಿಳಿದ ಅಕ್ಷಯ್ ಮರ್ಯಾದೆಗೆ ಅಂಜಿ ಗರ್ಭಪಾತ ಮಾಡಿಸಲು ಹಠ ಹಿಡಿದಿದ್ದ. ಆದರೆ ಪೋಷಕರು ಇದಕ್ಕೆ ಒಪ್ಪದಿದ್ದಾಗ, ಊರಿನ ಮುಂದೆ ಮರ್ಯಾದೆ ಹೋಗುತ್ತದೆ ಎಂದು ಭಾವಿಸಿ ತನ್ನ ಕುಟುಂಬವನ್ನೇ ಕೊನೆಗಾಣಿಸಲು ಸಂಚು ರೂಪಿಸಿದ್ದನು.
ಮನೆಯ ಹಾಲ್‌ನಲ್ಲೇ ಸಮಾಧಿ:
ಆರೋಪಿ ಅಕ್ಷಯ್ ತನ್ನ ತಂದೆ ಭೀಮರಾವ್ (50), ತಾಯಿ ಜಯಲಕ್ಷ್ಮೀ (45) ಮತ್ತು ತಂಗಿ ಅಮೃತಾ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಸಾಕ್ಷ್ಯ ನಾಶಪಡಿಸಲು ಮನೆಯ ಹಾಲ್‌ನಲ್ಲಿದ್ದ ಟೈಲ್ಸ್‌ಗಳನ್ನು ಕಿತ್ತು ಕುಣಿ ತೋಡಿ ಮೂವರ ಶವಗಳನ್ನು ಹೂತಿಟ್ಟಿದ್ದಾನೆ. ಕೇವಲ 4 ಅಡಿ ಆಳದ ಕುಣಿಯಲ್ಲಿ ತಂದೆಯ ಶವ ಪೂರ್ತಿಯಾಗಿ ಹಿಡಿಯದ ಕಾರಣ, ಕ್ರೂರವಾಗಿ ತಂದೆಯ ಎರಡು ಕಾಲುಗಳನ್ನು ಕತ್ತರಿಸಿ ಸಮಾಧಿ ಮಾಡಿದ್ದಾನೆ.
ಬೆಂಗಳೂರು ಪೊಲೀಸರಿಂದ ಸತ್ಯ ಬಯಲು:
ಕೊಲೆ ಮಾಡಿದ ಬಳಿಕ ಯಾರೂ ಸಂಶಯ ಪಡಬಾರದೆಂದು ಆರೋಪಿ ಅಕ್ಷಯ್, ಡಿಸೆಂಬರ್ 28ರಂದು ತನ್ನ ಪೋಷಕರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವುದಾಗಿ ನಾಟಕವಾಡಿದ್ದ. ನಂತರ ಬೆಂಗಳೂರಿನ ತಿಲಕ್ ನಗರ ಠಾಣೆಗೆ ತೆರಳಿ ತನ್ನ ಕುಟುಂಬ ಕಾಣೆಯಾಗಿದೆ ಎಂದು ದೂರು ನೀಡಿದ್ದ. ಆದರೆ ಆತನ ನಡವಳಿಕೆಯಿಂದ ಅನುಮಾನಗೊಂಡ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಕೊಲೆಯ ಸತ್ಯ ಹೊರಬಂದಿದೆ. ವಿಚಾರಣೆ ವೇಳೆ ಮೂವರನ್ನು ತಾನೇ ಕೊಲೆ ಮಾಡಿ ಮನೆಯಲ್ಲಿ ಹೂತಿಟ್ಟಿರುವುದಾಗಿ ಆರೋಪಿ ಮಾಹಿತಿ ನೀಡಿದ್ದು ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಾಗಿತ್ತು.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
Uncategorized10 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized9 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized7 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized11 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized10 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized9 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















