Connect with us

ಅಪರಾಧ

FIR-ಟಿವಿ ಡಿಬೇಟ್ ಬೆನ್ನಲ್ಲೇ ಹರೀಶ್ ಭೈರಪ್ಪ ಮೇಲೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್..!

Published

on



Ad Widget

Ad Widget

Ad Widget

Ad Widget

ಖಾಸಗಿ ಸುದ್ದಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದ ವೇಳೆ ನಡೆದ ಗಲಾಟೆ ಮತ್ತು ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತರಾದ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಮತ್ತು ಕಿರಿಕ್ ಕೀರ್ತಿ (ಕೀರ್ತಿ ಶಂಕರಘಟ್ಟ) ವಿರುದ್ಧ ಬೆಂಗಳೂರಿನ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಖಾಸಗಿ ಸುದ್ದಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದ ವೇಳೆ ನಡೆದ ಗಲಾಟೆ ಮತ್ತು ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತರಾದ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಮತ್ತು ಕಿರಿಕ್ ಕೀರ್ತಿ (ಕೀರ್ತಿ ಶಂಕರಘಟ್ಟ) ವಿರುದ್ಧ ಬೆಂಗಳೂರಿನ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆಯ ಹಿನ್ನೆಲೆ:
2025ರ ಅಕ್ಟೋಬರ್ 9ರಂದು ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ 13 ವರ್ಷ ತುಂಬಿದ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯೊಂದು ಚರ್ಚಾ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಣಧೀರ ಪಡೆಯ ಹರೀಶ್ ಭೈರಪ್ಪ ಮತ್ತು ವಸಂತ್ ಗಿಳಿಯಾರ್ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಚರ್ಚೆಯ ವೇಳೆ ಉಭಯ ನಾಯಕರ ನಡುವೆ ತೀವ್ರ ವಾಗ್ವಾದ ನಡೆದಿತ್ತು.

Ad Widget

Ad Widget <> Ad Widget

ದೂರಿನಲ್ಲಿ ಏನಿದೆ?
ಕಾರ್ಯಕ್ರಮ ಮುಗಿದು ಹರೀಶ್ ಭೈರಪ್ಪ ಅವರು ಕಚೇರಿಯಿಂದ ಹೊರಬರುವ ವೇಳೆ, ವಸಂತ್ ಗಿಳಿಯಾರ್ ತಮ್ಮ ಬೆಂಬಲಿಗರಾದ ಪುನೀತ್ ಕೆರೆಹಳ್ಳಿ ಮತ್ತು ಕಿರಿಕ್ ಕೀರ್ತಿ ಅವರನ್ನು ವಾಹಿನಿಯ ಕಚೇರಿಗೆ ಕರೆಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ವೇಳೆ ಆರೋಪಿಗಳು ಹರೀಶ್ ಭೈರಪ್ಪ ಅವರೊಂದಿಗೆ ದಾಂಧಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಪ್ರಾಣ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.



Ad Widget

ಕಾನೂನು ಕ್ರಮ:
ಘಟನೆ ನಡೆದ ಸಂದರ್ಭದಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದರು. ಹರೀಶ್ ಭೈರಪ್ಪ ಅವರು ನೀಡಿದ ದೂರಿನನ್ವಯ ಪೊಲೀಸರು ಈಗ ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 352, 251(2), 351(3), ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಕ್ಟೋಬರ್‌ನಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಈಗ ಅಧಿಕೃತವಾಗಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಮುಂದುವರಿಸಿದ್ದಾರೆ.

Click to comment

Leave a Reply

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಸ್ಥಳೀಯ

Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ

Published

on



Ad Widget

Ad Widget

Ad Widget

Ad Widget

ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget

Ad Widget

ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.

Ad Widget

Ad Widget <> Ad Widget

ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.



Ad Widget

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

ಅಪರಾಧ

Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!

Published

on



Ad Widget

Ad Widget

Ad Widget

Ad Widget

ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು



Ad Widget

ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.

Ad Widget

Ad Widget

ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading