ಬಿಗ್ ನ್ಯೂಸ್
SIT shocks IT officials-ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ಐಟಿ ಅಧಿಕಾರಿಗಳಿಗೆ ಶಾಕ್ ನೀಡಿದ ಎಸ್ಐಟಿ; ಬೆಂಗಳೂರು ಬಿಟ್ಟು ಹೋಗದಂತೆ ಸೂಚನೆ..!
ಕರ್ನಾಟಕದ ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಐಟಿ ಅಧಿಕಾರಿಗಳ ಕಿರುಕುಳ, ವ್ಯವಹಾರಿಕ ಸಂಕಷ್ಟ ಅಥವಾ ವೈಯಕ್ತಿಕ ಕಾರಣಗಳೇ ಎಂಬ ಹಲವು ಆಯಾಮಗಳಲ್ಲಿ ತನಿಖೆ ಆರಂಭವಾಗಿದೆ.
ಬೆಂಗಳೂರು: ಕರ್ನಾಟಕದ ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಐಟಿ ಅಧಿಕಾರಿಗಳ ಕಿರುಕುಳ, ವ್ಯವಹಾರಿಕ ಸಂಕಷ್ಟ ಅಥವಾ ವೈಯಕ್ತಿಕ ಕಾರಣಗಳೇ ಎಂಬ ಹಲವು ಆಯಾಮಗಳಲ್ಲಿ ತನಿಖೆ ಆರಂಭವಾಗಿದೆ.
ಐಟಿ ಅಧಿಕಾರಿಗಳಿಗೆ ಎಸ್ಐಟಿ ಬಿಸಿ:
ಕೊಚ್ಚಿಯಿಂದ ಬಂದಿದ್ದ ಐಆರ್ಎಸ್ ಅಧಿಕಾರಿ ಕೃಷ್ಣಪ್ರಸಾದ್ ನೇತೃತ್ವದ ಐಟಿ ತಂಡವು ಇತ್ತೀಚೆಗೆ ಸಿಜೆ ರಾಯ್ ಅವರ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಈ ದಾಳಿಯೇ ರಾಯ್ ಅವರ ಆತ್ಮಹತ್ಯೆಗೆ ಪ್ರೇರಣೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ತನಿಖೆ ಮುಗಿಯುವವರೆಗೆ ಬೆಂಗಳೂರು ಬಿಟ್ಟು ತೆರಳದಂತೆ ಐಟಿ ಅಧಿಕಾರಿಗಳ ತಂಡಕ್ಕೆ ಎಸ್ಐಟಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಗತ್ಯಬಿದ್ದಲ್ಲಿ ಇವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
ಕುಟುಂಬಸ್ಥರ ಮತ್ತು ಸಿಬ್ಬಂದಿ ವಿಚಾರಣೆ:
ಹೆಚ್ಚುವರಿ ಪೊಲೀಸ್ ಕಮಿಷನರ್ ವಂಶಿಕೃಷ್ಣ ಮತ್ತು ಡಿಸಿಪಿ ಲೋಕೇಶ್ ಜಗಲಾಸರ ನೇತೃತ್ವದ ತಂಡವು ಈಗಾಗಲೇ ಸಿಜೆ ರಾಯ್ ಅವರ ಸಹೋದರ ಬಾಬು ಮತ್ತು ಪುತ್ರ ಮೋಹನ್ ಅವರ ಹೇಳಿಕೆ ದಾಖಲಿಸಿಕೊಂಡಿದೆ. ಇಂದು ರಾಯ್ ಅವರ ಪತ್ನಿ ಮತ್ತು ಪುತ್ರಿಯ ವಿಚಾರಣೆ ನಡೆಯುವ ಸಾಧ್ಯತೆಯಿದೆ. ಐಟಿ ದಾಳಿಯ ಸಂದರ್ಭದಲ್ಲಿ ರಾಯ್ ಅವರು ಅನುಭವಿಸಿದ ಮಾನಸಿಕ ಒತ್ತಡದ ಬಗ್ಗೆ ಕುಟುಂಬದವರಿಗೆ ಏನಾದರೂ ಮಾಹಿತಿ ನೀಡಿದ್ದರೇ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಜೊತೆಗೆ ಕಂಪನಿಯ ಹಣಕಾಸು ವಿಭಾಗದ ಸಿಬ್ಬಂದಿ ಹಾಗೂ ಆಪ್ತರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.
ಡಿಜಿಟಲ್ ಸಾಕ್ಷ್ಯಗಳ ಜಪ್ತಿ:
ತನಿಖೆಯ ಭಾಗವಾಗಿ ಸಿಜೆ ರಾಯ್ ಬಳಸುತ್ತಿದ್ದ ಎರಡು ಐಫೋನ್ಗಳು, ಒಂದು ಲ್ಯಾಪ್ಟಾಪ್ ಮತ್ತು ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದ್ದು, ಸಾವಿಗೂ ಮುನ್ನ ಅವರು ಯಾರೊಂದಿಗೆ ಮಾತನಾಡಿದ್ದರು ಮತ್ತು ಅವರ ಮೇಲೆ ಯಾವ ರೀತಿಯ ಒತ್ತಡವಿತ್ತು ಎಂಬುದು ಈ ಮೂಲಕ ಬಯಲಾಗಲಿದೆ. ಘಟನೆಗೆ ಬಳಸಲಾದ ಪಿಸ್ತೂಲನ್ನು ಕೂಡ ಜಪ್ತಿ ಮಾಡಲಾಗಿದೆ.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
ಸ್ಥಳೀಯ
Valaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.
ಬಿ.ಸಿ.ರೋಡ್ನಿಂದ ಪೆರಿಯಶಾಂತಿವರೆಗಿನ ಸುಮಾರು 46 ಕಿ.ಮೀ. ಹೆದ್ದಾರಿ ಕಾಮಗಾರಿಯಲ್ಲಿ ಈಗಾಗಲೇ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ನಡುವೆ ಇದೀಗ ಟೋಲ್ ಪ್ಲಾಜಾ ನಿರ್ಮಾಣಗೊಂಡಿದೆ.
ಟೋಲ್ ಪ್ಲಾಜಾ ನಿರ್ಮಾಣದ ಗುತ್ತಿಗೆ ಪಡೆದಿದ್ದ ಕೆಎನ್ಆರ್ ಕನ್ಸ್ಟ್ರಕ್ಷನ್ ಸಂಸ್ಥೆಯು ಕಾಮಗಾರಿ ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದೆ. ಇತ್ತ ಶುಲ್ಕ ಸಂಗ್ರಹ ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು, ಮಂಗಳೂರಿನ ‘ಕೋರಲ್’ ಸಂಸ್ಥೆಯು ಗುತ್ತಿಗೆಯನ್ನು ಪಡೆದುಕೊಂಡಿದೆ.
8 ಲೇನ್ಗಳಲ್ಲಿ ಸಂಚಾರ ವ್ಯವಸ್ಥೆ
ಚತುಷ್ಪಥ ಹೆದ್ದಾರಿಯಲ್ಲಿ ಒಟ್ಟು 8 ಲೇನ್ಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡೂ ಬದಿಗಳಲ್ಲಿ ತಲಾ ನಾಲ್ಕು ಲೇನ್ಗಳಿದ್ದು, ಅವುಗಳಲ್ಲಿ 6 ಲೇನ್ಗಳು ಡೆಡಿಕೇಟೆಡ್ ಲೇನ್ಗಳಾಗಿರಲಿವೆ. ಈ ಲೇನ್ಗಳಲ್ಲಿ ಫಾಸ್ಟ್ಟ್ಯಾಗ್ ಹೊಂದಿರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರಲಿದೆ.
ಉಳಿದ ಎರಡು ಲೇನ್ಗಳಲ್ಲಿ ಫಾಸ್ಟ್ಟ್ಯಾಗ್ ಮೂಲಕ ಪಾವತಿಗೆ ಅವಕಾಶವಿದ್ದರೂ, ನಗದು ಪಾವತಿಗೆ ಅವಕಾಶ ಇರುವುದಿಲ್ಲ. ಬದಲಾಗಿ ಯುಪಿಐ ಅಥವಾ ಸ್ಕ್ಯಾನ್ ಮೂಲಕ ಡಿಜಿಟಲ್ ಪಾವತಿ ಮಾಡಬೇಕಾಗುತ್ತದೆ. ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸುಗಮ ಸಂಚಾರಕ್ಕಾಗಿ ಎರಡೂ ಬದಿಗಳಲ್ಲಿ ಪ್ರತ್ಯೇಕ ಲೇನ್ಗಳನ್ನು ವ್ಯವಸ್ಥೆ ಮಾಡಲಾಗಿದೆ.
ಟೋಲ್ ಶುಲ್ಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನಿಗದಿಪಡಿಸಲಾಗಿದೆ ಎಂದು ಮಂಗಳೂರಿನ ಕೋರಲ್ ಸಂಸ್ಥೆಯ ಆಡಳಿತ ಪಾಲುದಾರ ಯಜೇಶ್ ತಿಳಿಸಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ನಿಂದ 38 ಕಿ.ಮೀ. ಅಂತರ..!
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಒಟ್ಟು 7 ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರಿನ ನೆಲಮಂಗಲದಿಂದ ಸಕಲೇಶಪುರದವರೆಗೆ 5 ಟೋಲ್ ಪ್ಲಾಜಾಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಮಂಗಳೂರಿನ ಪಂಪ್ವೆಲ್ ನಡುವಿನ ಮಾರ್ಗದಲ್ಲಿ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಇದೀಗ ವಳಾಲು ಟೋಲ್ ಸೇರ್ಪಡೆಯಾದರೆ ಈ ಭಾಗದಲ್ಲಿ ಶುಲ್ಕ ಸಂಗ್ರಹಿಸುವ ಟೋಲ್ ಪ್ಲಾಜಾಗಳ ಸಂಖ್ಯೆ ಎರಡಕ್ಕೇರಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳ ಪ್ರಕಾರ ಒಂದು ಟೋಲ್ ಪ್ಲಾಜಾದಿಂದ ಮತ್ತೊಂದು ಟೋಲ್ ಪ್ಲಾಜಾಕ್ಕೆ ಕನಿಷ್ಠ 60 ಕಿ.ಮೀ. ಅಂತರ ಇರಬೇಕಿದೆ. ಆದರೆ, ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಿಂದ ಬಜತ್ತೂರು ವಳಾಲು ಟೋಲ್ ಪ್ಲಾಜಾಕ್ಕೆ ಇರುವ ಅಂತರ ಕೇವಲ 38 ಕಿ.ಮೀ. ಮಾತ್ರ. ಹೀಗಾಗಿ, ವಳಾಲು ಟೋಲ್ನಲ್ಲಿ ಶುಲ್ಕ ಸಂಗ್ರಹ ಆರಂಭವಾದರೆ ಸ್ಥಳೀಯರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಬೀರ್ ಅಹ್ಮದ್ ನೆಕ್ಕಿಲಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಹೋರಾಟ ತೀವ್ರಗೊಳ್ಳುವ ಸಾಧ್ಯತೆ
ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಅನಧಿಕೃತವಾಗಿದ್ದು, ನಿಗದಿತ ಅವಧಿ ಮುಗಿದಿದ್ದರೂ ಶುಲ್ಕ ಸಂಗ್ರಹ ಮುಂದುವರಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಈಗಾಗಲೇ ನಿರಂತರ ಹೋರಾಟ ನಡೆಸುತ್ತಿದ್ದಾರೆ.
ಬ್ರಹ್ಮರಕೂಟ್ಲು ಟೋಲ್ ಪ್ಲಾಜಾವನ್ನು ತೆರವುಗೊಳಿಸದೆ ವಳಾಲು ಟೋಲ್ ಪ್ಲಾಜಾದಲ್ಲಿ ಶುಲ್ಕ ಸಂಗ್ರಹ ಆರಂಭಿಸಿದರೆ ವಾಹನ ಸವಾರರಿಗೆ ಒಂದೇ ಮಾರ್ಗದಲ್ಲಿ ಎರಡು ಬಾರಿ ಟೋಲ್ ಪಾವತಿಸುವ ಪರಿಸ್ಥಿತಿ ಎದುರಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಕೂಟ್ಲು ಟೋಲ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹೋರಾಟಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಬಿಗ್ ನ್ಯೂಸ್
Heavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!
ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡ ಗಂಜೂರಿನಲ್ಲಿ ಗರಿಷ್ಠ 54 ಮಿ.ಮೀ. ಮಳೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 51 ಮಿ.ಮೀ. ಹಾಗೂ ಚಿಂತಾಮಣಿ ತಾಲ್ಲೂಕಿನ ಮುಂಗನಹಳ್ಳಿಯಲ್ಲಿ 47.5 ಮಿ.ಮೀ. ಮಳೆ ದಾಖಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಿಸ್ಕೂರಿನಲ್ಲಿ 47 ಮಿ.ಮೀ., ಹುಲ್ಲೇನಹಳ್ಳಿಯಲ್ಲಿ 46 ಮಿ.ಮೀ. ಹಾಗೂ ಅದರಂಗಿಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಪಶ್ಚಿಮ ಭಾಗದ ಕೋನೇನ ಅಗ್ರಹಾರ ಮತ್ತು ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರದಲ್ಲಿ ತಲಾ 40 ಮಿ.ಮೀ. ಮಳೆ ಸುರಿದಿದೆ.
ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹಾಗೂ ಚಿಂತಾಮಣಿ ತಾಲ್ಲೂಕಿನ ಪೆರಮಂಚನಹಳ್ಳಿಯಲ್ಲಿ ತಲಾ 35.5 ಮಿ.ಮೀ., ಸಂಕಿಘಟ್ಟದಲ್ಲಿ 35 ಮಿ.ಮೀ. ಮಳೆಯಾಗಿದೆ. ಆನೇಕಲ್ ತಾಲ್ಲೂಕಿನ ನೇರಿಗದಲ್ಲಿ 33.5 ಮಿ.ಮೀ., ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ 33 ಮಿ.ಮೀ. ಹಾಗೂ ಚಿಂತಾಮಣಿಯಲ್ಲಿ 32.8 ಮಿ.ಮೀ. ಮಳೆ ದಾಖಲಾಗಿದೆ.
ಬೆಂಗಳೂರು ನಗರದ ದಾಸನಪುರದಲ್ಲಿ 29 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರದಲ್ಲಿ 28.5 ಮಿ.ಮೀ., ಅರಿಕುಂಟೆಯಲ್ಲಿ 27.5 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ 27.25 ಮಿ.ಮೀ. ಮಳೆಯಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವಿರುಪಸಮುದ್ರದಲ್ಲಿ 26 ಮಿ.ಮೀ. ಹಾಗೂ ಮಧುಗಿರಿ ತಾಲ್ಲೂಕಿನ ಬೇಡತೂರಿನಲ್ಲಿ 25.5 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಮತ್ತು ಚಿಂತಾಮಣಿ ತಾಲ್ಲೂಕಿನ ಮಾಸ್ತೇನಹಳ್ಳಿಯಲ್ಲಿ ತಲಾ 24.5 ಮಿ.ಮೀ. ಮಳೆಯಾಗಿದೆ.
ಇನ್ನು ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿ 23.5 ಮಿ.ಮೀ., ಮುರುಗಮಲೆಯಲ್ಲಿ 23.25 ಮಿ.ಮೀ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟಾಪುರದಲ್ಲಿ 23 ಮಿ.ಮೀ. ಮಳೆಯಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಳಗುರುಕೋಟೆ ಹಾಗೂ ಗೌರಿಬಿದನೂರು ತಾಲ್ಲೂಕಿನ ಮೆಲ್ಯಾದಲ್ಲಿ ತಲಾ 22.75 ಮಿ.ಮೀ. ಮಳೆ ಸುರಿದಿದೆ. ಬೆಂಗಳೂರಿನ ಚಿಕ್ಕಬಾಣಾವರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ತಲಾ 22.5 ಮಿ.ಮೀ. ಮಳೆಯಾಗಿದೆ.
ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ 22 ಮಿ.ಮೀ., ಬೆಂಗಳೂರಿನ ಲಕ್ಕಸಂದ್ರ, ವನ್ನಾರಪೇಟೆ ಹಾಗೂ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದಲ್ಲಿ ತಲಾ 21.5 ಮಿ.ಮೀ. ಮಳೆಯಾಗಿದೆ.
ಆನೇಕಲ್ ತಾಲ್ಲೂಕಿನ ಮುಗಳೂರು ಮತ್ತು ನೆಲಮಂಗಲ ತಾಲ್ಲೂಕಿನ ವಿಶ್ವೇಶ್ವರಪುರದಲ್ಲಿ ತಲಾ 21 ಮಿ.ಮೀ. ಮಳೆಯಾಗಿದ್ದರೆ, ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ 20.75 ಮಿ.ಮೀ. ಮಳೆ ದಾಖಲಾಗಿದೆ.
ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಬುರುದಗುಂಟೆಯಲ್ಲಿ ತಲಾ 20.5 ಮಿ.ಮೀ., ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಪೈಲಗುರ್ಕಿಯಲ್ಲಿ 20 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಬಾಣವಾಡಿಯಲ್ಲಿ 19.5 ಮಿ.ಮೀ. ಮಳೆಯಾಗಿದೆ.
-
ಕ್ರೈಂ11 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ11 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು10 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಬಿಗ್ ನ್ಯೂಸ್11 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ9 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ5 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ9 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
-
ಸ್ಥಳೀಯ5 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!















