ಸ್ಥಳೀಯ
Kamalakar Bhat Guruji-ಸಿದ್ದಾಪುರ: ವ್ಯಕ್ತಿಯ ಬರ್ಬರ ಹತ್ಯೆ; ಕಮಲಾಕರ್ ಭಟ್ ಗುರೂಜಿ ಸಹಿತ ಏಳು ಜನ ಪೊಲೀಸ್ ವಶ
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಗುರೂಜಿಯೊಬ್ಬನ ಜೊತೆಗಿನ ಅಕ್ರಮ ಸಂಬಂಧದ ವಿಚಾರವಾಗಿ ನಡೆದ ಗಲಾಟೆ ಬರ್ಬರ ಹತ್ಯೆಯಲ್ಲಿ ಅಂತ್ಯವಾಗಿದೆ. ಜ್ಯೋತಿಷಿ ಮತ್ತು ವಿವಾಹಿತ ಮಹಿಳೆಯ ಸಂಬಂಧದ ಬಗ್ಗೆ ದೂರು ನೀಡಿದ್ದೇ ಈ ಘಟನೆಗೆ ಮೂಲ ಕಾರಣವಾಗಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಗುರೂಜಿಯೊಬ್ಬನ ಜೊತೆಗಿನ ಅಕ್ರಮ ಸಂಬಂಧದ ವಿಚಾರವಾಗಿ ನಡೆದ ಗಲಾಟೆ ಬರ್ಬರ ಹತ್ಯೆಯಲ್ಲಿ ಅಂತ್ಯವಾಗಿದೆ. ಜ್ಯೋತಿಷಿ ಮತ್ತು ವಿವಾಹಿತ ಮಹಿಳೆಯ ಸಂಬಂಧದ ಬಗ್ಗೆ ದೂರು ನೀಡಿದ್ದೇ ಈ ಘಟನೆಗೆ ಮೂಲ ಕಾರಣವಾಗಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಘಟನೆಯ ವಿವರ:
ಶಿವಮೊಗ್ಗದ ಜ್ಯೋತಿಷಿ ಕಮಲಾಕರ್ ಭಟ್ ಗುರೂಜಿ ಎಂಬಾತನೊಂದಿಗೆ ಸುಚಿತ್ರಾ ಎಂಬ ವಿವಾಹಿತ ಮಹಿಳೆ ವಾಸವಿದ್ದರು. ತನ್ನ ತಾಯಿ ಮತ್ತು ಗುರೂಜಿಯ ನಡುವಿನ ಈ ಅಕ್ರಮ ಸಂಬಂಧದ ವಿಚಾರ ಸುಚಿತ್ರಾಳ ಮಗಳಿಗೆ ತಿಳಿದಿತ್ತು. ಕೂಡಲೇ ಆಕೆ ಈ ವಿಷಯವನ್ನು ತನ್ನ ತಂದೆ ಮಹೇಶ್ ನಾಯ್ಕ ಅವರಿಗೆ ತಿಳಿಸಿದ್ದಳು. ಅಷ್ಟೇ ಅಲ್ಲದೆ, ತಾಯಿಗೆ ಮಾಹಿತಿ ನೀಡದೆ ಸಿದ್ದಾಪುರದಲ್ಲಿರುವ ತನ್ನ ಚಿಕ್ಕಪ್ಪ ವಸಂತ ನಾಯ್ಕ ಅವರ ಮನೆಗೆ ಮಗಳು ಬಂದು ಆಶ್ರಯ ಪಡೆದಿದ್ದಳು.
ದಾಳಿ ಮತ್ತು ಹತ್ಯೆ:
ಮಗಳನ್ನು ಹುಡುಕಿಕೊಂಡು ಬಂದ ಸುಚಿತ್ರಾ, ತನ್ನ ಜೊತೆ ಕೆಲ ಯುವಕರನ್ನು ಕರೆತಂದಿದ್ದಳು. ವಸಂತ ನಾಯ್ಕ ಅವರ ಮನೆಯಲ್ಲಿ ಈ ವಿಚಾರವಾಗಿ ತೀವ್ರ ವಾಗ್ವಾದ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಸುಚಿತ್ರಾ ಜೊತೆ ಬಂದಿದ್ದ ಯುವಕರು ಚಾಕುವಿನಿಂದ ಮನಬಂದಂತೆ ಇರಿದಿದ್ದಾರೆ. ಈ ಭೀಕರ ದಾಳಿಯಲ್ಲಿ ವಸಂತ ನಾಯ್ಕ (41), ಮಹೇಶ್ ಮತ್ತು ಪಕ್ಕದ ಮನೆಯ ಕುಮಾರ್ ಅವರಿಗೆ ಗಂಭೀರ ಗಾಯಗಳಾಗಿವೆ.
ದುರದೃಷ್ಟವಶಾತ್, ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ವಸಂತ ನಾಯ್ಕ ಕೊನೆಯುಸಿರೆಳೆದಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಮಹೇಶ್ ಮತ್ತು ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್ ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
-
ರಾಜಕೀಯ23 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್6 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್

















