ಕಾರ್ಯಕ್ರಮಗಳು
Puttur-ಪುತ್ತೂರು: ನೆಲ್ಲಿಕಟ್ಟೆ ಮಿತ್ರ ಮಂಡಲದ ‘ಸುವರ್ಣ ಸಂಭ್ರಮ’; ಶಾಸಕ ಅಶೋಕ್ ರೈಯಿಂದ ಲೋಗೋ ಅನಾವರಣ
ಪುತ್ತೂರು ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ನೆಲ್ಲಿಕಟ್ಟೆ ಮಿತ್ರ ಮಂಡಲದ 50ನೇ ವರ್ಷದ ‘ಸುವರ್ಣ ಸಂಭ್ರಮ-2026’ ಕಾರ್ಯಕ್ರಮವು ಫೆಬ್ರವರಿ 1ರಂದು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ವಿವಿಧ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮಗಳೊಂದಿಗೆ ಅತ್ಯಂತ ವೈಭವದಿಂದ ಜರುಗಿತು.
ಪುತ್ತೂರು: ನಗರದ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ನೆಲ್ಲಿಕಟ್ಟೆ ಮಿತ್ರ ಮಂಡಲದ 50ನೇ ವರ್ಷದ ‘ಸುವರ್ಣ ಸಂಭ್ರಮ-2026’ ಕಾರ್ಯಕ್ರಮವು ಫೆಬ್ರವರಿ 1ರಂದು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ವಿವಿಧ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮಗಳೊಂದಿಗೆ ಅತ್ಯಂತ ವೈಭವದಿಂದ ಜರುಗಿತು.

ಮಿತ್ರ ಮಂಡಲದ ಲೋಗೋ ಅನಾವರಣ:
ಸಂಜೆ ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ಲಕ್ಷ್ಮೀಶ ತಂತ್ರಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮಿತ್ರ ಮಂಡಲದ ಸುವರ್ಣ ಮಹೋತ್ಸವದ ಲೋಗೋ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, “50 ವರ್ಷಗಳ ಹಿಂದೆ ಸಣ್ಣದಾಗಿ ಆರಂಭವಾದ ಈ ಸಂಘಟನೆ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ದೇವಸ್ಥಾನದ ಅಭಿವೃದ್ಧಿ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಈ ಮಂಡಲದ ಪಾತ್ರ ದೊಡ್ಡದು,” ಎಂದು ಶ್ಲಾಘಿಸಿದರು.

ದೇವಸ್ಥಾನ ಅಭಿವೃದ್ಧಿಗೆ ಬೃಹತ್ ಯೋಜನೆ:
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಯ ಕನಸು ನಮ್ಮದಾಗಿದೆ. ಸುಬ್ರಹ್ಮಣ್ಯ, ಧರ್ಮಸ್ಥಳ, ಕಟೀಲು ದೇವಸ್ಥಾನಗಳಿಗೆ ಹೋಗುವ ಭಕ್ತರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಬರುವಂತಾಗಬೇಕು. ಈ ನಿಟ್ಟಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಪ್ರವಾಸೋದ್ಯಮವನ್ನಾಗಿ ಮಾಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. 10 ಕೋಟಿ ರೂ.ವೆಚ್ಚದಲ್ಲಿ ದೇವಸ್ಥಾನದ ಎದುರಿನ ಕೆರೆಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿ ಮಾಡಿ ಅಲ್ಲಿ ಮೈಸೂರಿನ ಕೆಆರ್ ಎಸ್‌ನಲ್ಲಿ ಇದ್ದಂತೆ ಕಾರಂಜಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಪುತ್ತೂರಿಗೆ ಮೆಡಿಕಲ್ ಕಾಲೇಜು ಬಾರದಂತೆ ಎಷ್ಟೋ ಜನ ಕೈ ಕಾಲು ಎಳೆದಿದ್ದಾರೆ. ಜೀವಮಾನದಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಬರುವುದಿಲ್ಲವೆಂದು ಹೇಳಿದವರೂ ಇದ್ದಾರೆ. ಆದರೆ ದೇವರ ದಯೆಯಿಂದ ಅದರಲ್ಲಿ ನಾವು ಸಫಲರಾಗಿದ್ದೇವೆ ಎಂದು ಅಶೋಕ್ ರೈ ಹೇಳಿದರು.

ನೆಲ್ಲಿಕಟ್ಟೆ ಮಿತ್ರ ಮಂಡಲದ ಸುವರ್ಣ ಮಹೋತ್ಸವ ದಿನದಂದೇ ನೆಲ್ಲಿಕಟ್ಟೆಯಲ್ಲಿ 280 ಅಡಿ ಎತ್ತರದ ರಾಷ್ಟ್ರಧ್ವಜ ಸ್ತಂಭ ಅಳವಡಿಕೆ ಮಾಡಲಾಗಿದೆ. ಈ ರೀತಿಯ ಸ್ತಂಭ ಅಳವಡಿಕೆ ಮಾಡಿರುವುದು ರಾಜ್ಯದಲ್ಲೇ ಪುತ್ತೂರು ಮಾತ್ರವಾಗಿದೆ. ಇದು ಕೂಡ ಪುತ್ತೂರಿನ 6 ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪುತ್ತೂರಿನ ಅಭಿವೃದ್ಧಿ ನಿಟ್ಟಿನಲ್ಲಿ ಡ್ರೈನೇಜ್ ಸಿಸ್ಟಮ್ಗೆ ಚಾಲನೆ ನೀಡಲಾಗುವುದು. ಬಿರುಮಲೆ ಬೆಟ್ಟದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಅಶೋಕ್ ಕುಮಾರ್ ರೈ ಹೇಳಿದರು.

ನೆಲ್ಲಿಕಟ್ಟೆ ಪುತ್ತೂರಿನ ರಾಜಧಾನಿ- ಸೂತ್ರಬೆಟ್ಟು ಜಗನ್ನಾಥ ರೈ
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸ್ಥಾಪಕ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ ಅವರು ಮಾತನಾಡಿ, “ನೆಲ್ಲಿಕಟ್ಟೆಯು ಸರ್ವ ಧರ್ಮೀಯರು ಒಂದು ಕುಟುಂಬದಂತೆ ಬಾಳುತ್ತಿರುವ ಸುಂದರ ಪ್ರದೇಶ. ಇಲ್ಲಿ ದೇವಸ್ಥಾನ, ಮಸೀದಿ, ಚರ್ಚ್‌ಗಳು ಒಂದೇ ಸಾಲಿನಲ್ಲಿದ್ದು, ಸೌಹಾರ್ದತೆಯ ಕೇಂದ್ರವಾಗಿದೆ. ಹೀಗಾಗಿ ನೆಲ್ಲಿಕಟ್ಟೆಯೇ ಪುತ್ತೂರಿನ ರಾಜಧಾನಿ ಎನ್ನಬಹುದು,” ಎಂದರು.

ನೆಲ್ಲಿಕಟ್ಟೆ ಪುತ್ತೂರಿನ ಕೇಂದ್ರಬಿಂದು- ಈಶ್ವರ ಭಟ್:
ನೆಲ್ಲಿಕಟ್ಟೆ ಮಿತ್ರ ಮಂಡಲ ಜಾತ್ಯತೀತ ತತ್ವದ ನೆಲೆಯಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಮಾಜಮುಖ ಕೆಲಸದ ಮೂಲಕ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ. ಮಿತ್ರ ಮಂಡಲ ಅಸ್ತಿತ್ವಕ್ಕೆ ಬಂದಲ್ಲಿಂದ ನೆಲ್ಲಿಕಟ್ಟೆ ಪುತ್ತೂರಿನ ಕೇಂದ್ರ ಬಿಂದುವಾಗಿದೆ. ನೆಲ್ಲಿಕಟ್ಟೆ ಮಿತ್ರ ಮಂಡಲದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಮತ್ತು ಅವರ ತಂಡ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಯಲ್ಲಿ ಸಹಕರಿಸುತ್ತಿದೆ. ನೆಲ್ಲಿಕಟ್ಟೆ ಶ್ರೀ ಮಹಾಲಿಂಗೇಶ್ವರನ ಸನ್ನಿಧಿ ಎದುರು ಇರುವುದು ನೆಲ್ಲಿಕಟ್ಟೆಯವರ ಭಾಗ್ಯ. ನೆಲ್ಲಿಕಟ್ಟೆ ಮಿತ್ರ ಮಂಡಲವು ನೂರಾರು ವರ್ಷಗಳ ಕಾಲ ಸಮಾಜ ಸೇವೆಯನ್ನು ಮಾಡುತ್ತಾ ಹುಣ್ಣಿಮೆಯ ಚಂದ್ರನಂತೆ ಕಂಗೊಳಿಸುವಂತೆ ಆಗಲಿ ಎಂದು ಹೇಳಿದರು.

ನೆಲ್ಲಿಕಟ್ಟೆ ಮಿತ್ರಮಂಡಲಿ ಮಾದರಿಯಾಗಿದೆ- ಉಜ್ವಲ್ ಪ್ರಭು:
ಯು.ಆರ್.ಪ್ರಾಪರ್ಟೀಸ್ ಆಡಳಿತ ನಿರ್ದೇಶಕ ಉಜ್ವಲ್ ಪ್ರಭುರವರು ಮಾತನಾಡಿ, ನೆಲ್ಲಿಕಟ್ಟೆ ಮಿತ್ರ ಮಂಡಲದ ಕಾರ್ಯವೈಖರಿ ಶ್ಲಾಘನೀಯವಾಗಿದೆ.. ನೆಲ್ಲಿಕಟ್ಟೆ ಮಿತ್ರ ಮಂಡಲವು 50 ವರ್ಷಗಳಿಂದ ತನ್ನ ಹುಮ್ಮಸ್ಸು ಕಳೆದುಕೊಳ್ಳದೆ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಆತ್ಮಹತ್ಯೆ ಮಾಡಿಕೊಳ್ಳಬೇಡಿ, ಹೋದ ಜೀವ ಮರಳಿ ಬಾರದು-ಈಶ್ವರ್ ಮಲ್ಪೆ:
ಸನ್ಮಾನ ಸ್ವೀಕರಿಸಿ ಮಾತನಾಡಿದ ಜೀವ ರಕ್ಷಕ ಈಶ್ವರ್ ಮಲ್ಪೆ ಅವರು, ಇಂದಿನ ಕಾಲಘಟ್ಟದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಗೀಲು ಹೆಚ್ಚಾಗುತ್ತಿದೆ. ಒಮ್ಮೆ ಹೋದ ಪ್ರಾಣ ಮರಳಿ ಎಂದೂ ಬರೋದಿಲ್ಲ. ಎಂತಹ ಕಷ್ಟಕರ ಕಾಲದಲ್ಲೂ ಇದ್ದು ಜಯಿಸುವಂತಹ ಮನೋಭಾವನೆ ಪ್ರತಿಯೊಬ್ಬರಲ್ಲೂ ಇರಬೇಕು. ಈಗ ಸಣ್ಣ ವಯಸ್ಸಿನ ಮಕ್ಕಳು ನೀರಿಗೆ ಬಿದ್ದು ಸಾಯುವ ಪ್ರಕರಣಗಳು ಹೆಚ್ಚಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಮೊಬೈಲ್ ಹಿತಮಿತವಾಗಿ ನೀಡಿ. ಒಂದು ಬಾರಿ ಮಕ್ಕಳು ಮೊಬೈಲ್ ಗೀಲಿಗೆ ಬಲಿಯಾದರೆ ಮತ್ತೆ ಅದರಿಂದ ಹೊರಬರಲು ಬಹಳ ಕಷ್ಟಕರವಿದೆ ಎಂದರು. ಹಲವು ವರ್ಷಗಳಿಂದ ನೀರಲ್ಲಿ ಬಿದ್ದ ಮೃತ ದೇಹವನ್ನು ಎತ್ತುವ ಕೆಲಸ ಮಾಡುತ್ತಾ ಬಂದಿದ್ದೇನೆ. ನನ್ನ ಮೂವರು ಮಕ್ಕಳೂ ವಿಶೇಷ ಚೇತನರು. ಆದರೆ ನಾನು ಯಾವುದೇ ಚಿಂತೆಗೆ ಒಳಗಾಗದೆ ಸಮಾಜ ಸೇವೆ ಮಾಡುತ್ತಾ ಬದುಕುತ್ತಿದ್ದೇನೆ ಎಂದು ಹೇಳಿದರು.

ನೆಲ್ಲಿಕಟ್ಟೆ ಮಹಾಲಿಂಗೇಶ್ವರ ದೇವರಿಗೆ ಹತ್ತಿರವಿರುವುದು ನಮ್ಮ ಭಾಗ್ಯ- ಹರಿಪ್ರಸಾದ್ ಶೆಟ್ಟಿ:
ಸ್ವಾಗತಿಸಿ ಮಾತನಾಡಿದ ನೆಲ್ಲಿಕಟ್ಟೆ ಮಿತ್ರ ಮಂಡಲದ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಅವರು ನೆಲ್ಲಿಕಟ್ಟೆ ಮಹಾಲಿಂಗೇಶ್ವರ ದೇವರಿಗೆ ಹತ್ತಿರವಿರುವುದು ನಮ್ಮ ಭಾಗ್ಯ. ನೆಲ್ಲಿಕಟ್ಟೆ ಮಿತ್ರ ಮಂಡಲ ಅನೇಕ ಕಾರ್ಯಕ್ರಮಗಳ ಮೂಲಕ ಸಮಾಜಕ್ಕೆ ಕೊಡುಗೆ ನೀಡಿದೆ. ಅದೆಲ್ಲವೂ ನಮ್ಮ ಹಿರಿಯರ ಶ್ರಮದಿಂದ ಆಗಿದೆ. ಸಂಘಟನೆ ಕಳೆದ 50 ವರ್ಷಗಳಿಂದ ಅತ್ಯುತ್ತಮ ಕೆಲಸ ಮಾಡುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರವಾಗಿದೆ. ಮುಂದೆಯೂ ಎಲ್ಲರ ಸಹಕಾರ, ಆಶೀರ್ವಾದ ಬೇಕಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ಜಿ.ಎಲ್ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಬಲರಾಮ್
ಆಚಾರ್ಯ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಜಿ ನಿರ್ದೇಶಕ ನವೀನ್ ಭಂಡಾರಿ, ಉದ್ಯಮಿ ಶಿವರಾಮ ಆಳ್ವ ಕುರಿಯ, ಪುತ್ತೂರು ಮಾನಕ ಜ್ಯುವೆಲ್ಲರ್ಸ್ ಮಾಲಕ ಸಿದ್ದನಾಥ್ ಎಸ್.ಕೆ., ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಪುತ್ತೂರು ದೇವತಾ ಸಮಿತಿ ಗಣೇಶೋತ್ಸವದ ಅಧ್ಯಕ್ಷ ಅಭಿಜಿತ್ ಶೆಟ್ಟಿ ನೆಲ್ಲಿಕಟ್ಟೆ, ಉದ್ಯಮಿ ರೋಶನ್ ರೈ ಬನ್ನೂರು, ಪುತ್ತೂರು ಸಿಜ್ಜರ್ ಗ್ರೂಪ್ನ ಮಾಲಕ ಪ್ರಸನ್ನ ಕುಮಾರ್ ಶೆಟ್ಟಿ, ಕರ್ನಾಟಕ ಬೀಚ್ ರೆಸ್ಲಿಂಗ್ ಕಮಿಟಿ ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ ನೆಲ್ಲಿಕಟ್ಟೆ, ಪುತ್ತೂರು ರೋಟರಿ ಕ್ಲಬ್ ಸಿಟಿ ಅಧ್ಯಕ್ಷ ಉಲ್ಲಾಸ್ ಪೈ, ನೆಲ್ಲಿಕಟ್ಟೆ ಮಿತ್ರ ಮಂಡಲದ ಗೌರವ ಸಲಹೆಗಾರ ಜನಾರ್ದನ ರಾವ್, ಸ್ಯಾಕ್ಸೋಫೋನ್ ವಾದಕ ಪಿ.ಕೆ. ಗಣೇಶ್, ಪುತ್ತೂರು ವಿಶ್ವೇಶ್ವರ ಕನ್‌ಸ್ಟ್ರಕ್ಷನ್ ಮಾಲಕ ಸಂದೀಪ್ ನೆಲ್ಲಿಕಟ್ಟೆ, ಪುತ್ತೂರು ಅಸಹಾಯಕರ ಸೇವಾ ಟ್ರಸ್ಟ್, ಅಧ್ಯಕ್ಷೆ ನಯನ ಪುತ್ತೂರು, ನೆಲ್ಲಿಕಟ್ಟೆ ಮಿತ್ರಮಂಡಲದ ಸಂಚಾಲಕ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಹಾಗೂ ಸುದ್ದಿ ಬಿಡುಗಡೆಯ ಯುಪಿ ಶಿವಾನಂದರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೆಲ್ಲಿಕಟ್ಟೆ ಮಿತ್ರ ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ಎಸ್.ರೋಹಿತ್ ಕುಮಾರ್ ನೆಲ್ಲಿಕಟ್ಟೆ, ಕೋಶಾಧಿಕಾರಿ ಜಗನ್ನಾಥ ಜೋಗಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ;
ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಜೀವ ರಕ್ಷಕ ಈಶ್ವರ್ ಮಲ್ಪೆ, ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಜಯ್ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಮೀನಾಕ್ಷಿ, ನಿವೃತ್ತ ಅಂಗನವಾಡಿ ಸಹಾಯಕಿ ಕುಸುಮ ನೆಲ್ಲಿಕಟ್ಟೆ, ಸ್ಮಶಾನ ಪಾಲಕ ಸತೀಶ್ ಮಡಿವಾಳ ಚಿಕ್ಕಪುತ್ತೂರು, ನಿವೃತ್ತ ಸೈನಿಕರಾದ ಜೋ ಡಿ’ಸೋಜಾ ಚಿಕ್ಕಪುತ್ತೂರು, ನರಸಿಂಹ ಭಂಡಾರ್ಕರ್ ನೆಲ್ಲಿಕಟ್ಟೆ, ಕುಶಾಲಪ್ಪ ಗೌಡ ಚಿಕ್ಕ ಪುತ್ತೂರು, ಎಡ್ವರ್ಡ್ ಡಿ’ಸೋಜಾ ನೆಲ್ಲಿಕಟ್ಟೆ, ಬ್ಲಡ್ ಗ್ರೂಪಿನ ಶರತ್ ಕುಮಾರ್ ಆಳ್ವ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುದರ್ಶನ್ ನ್ಯಾಕ್ ಕಂಪ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮಗಳು
Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.
ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.
ಮಂಗಳೂರು
Mangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ ಹಾಗೂ ನವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಹಾಗೂ ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಿನಿ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.
ರವಿವಾರದ ರಜೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯರ ವಿಗ್ರಹಗಳ ಪ್ರತಿಷ್ಠಾಪನೆಯ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.
ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿಯ ಟ್ರಸ್ಟಿಗಳು, ಕ್ಷೇತ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಬಾರಿ ಮಹಿಳಾ ದಸರಾ ವಿಶೇಷ ಆಕರ್ಷಣೆ
ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಈ ಬಾರಿಯ ಮಂಗಳೂರು ದಸರಾ ನಡೆಯುತ್ತಿದೆ ಎಂದು ತಿಳಿಸಿದರು.
ಕಳೆದ ವರ್ಷ ಆರಂಭಿಸಿದ್ದ ಮಕ್ಕಳ ದಸರಾ ಮತ್ತು ಕಿನ್ನಿಪಿಲಿ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು. ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಭಕ್ತರ ಬೇಡಿಕೆಯಂತೆ ಅಕ್ಟೋಬರ್ 20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಶೇ. 25ರಿಂದ 30ರಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಆಗಮನ ಮುಂದೂಡಿಕೆ
ಸೋಮವಾರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ಆದರೆ ತುರ್ತು ಕಾರಣದಿಂದ ದೆಹಲಿಗೆ ತೆರಳಬೇಕಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ. ಅಕ್ಟೋಬರ್ 15 ಅಥವಾ 16ರಂದು ಮುಖ್ಯಮಂತ್ರಿ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
-
ಮಂಗಳೂರು19 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್20 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ23 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಅಪರಾಧ23 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
Uncategorized16 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಅಂತರ ರಾಜ್ಯ23 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್
-
ಮಂಗಳೂರು20 hours agoABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
-
ಕ್ರೀಡೆ19 hours agoMCC:ಎಂಸಿಸಿಯಿಂದ ಕ್ರಿಕೆಟ್ ನಿಯಮಗಳ ಪರಿಷ್ಕರಣೆ: ಅ.1ರಿಂದ ಹೊಸ ಬದಲಾವಣೆಗಳು ಜಾರಿ




















