ಅಪರಾಧ
Mangalore-ಮಂಗಳೂರು ಪೊಲೀಸರ ಭರ್ಜರಿ ಭೇಟೆ : ನೇಪಾಳದಲ್ಲಿ ಕುಳಿತು ಸೈಬರ್ ವಂಚನೆ ನಡೆಸುತ್ತಿದ್ದ ಬೃಹತ್ ಜಾಲ ಬಲೆಗೆ – ಇಲ್ಲಿದೆ ಸಂಪೂರ್ಣ ವಿವರ
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿತರನ್ನು ದಸ್ತಗಿರಿ ಮಾಡಿರುತ್ತಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ದಸ್ತಗಿರಿ ಮಾಡಿರುತ್ತಾರೆ. ಐದು ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿತರನ್ನು ದಸ್ತಗಿರಿ ಮಾಡಿರುತ್ತಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ದಸ್ತಗಿರಿ ಮಾಡಿರುತ್ತಾರೆ. ಐದು ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಆರೋಪಿತರ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಬ್ಯಾಂಕ್ ಖಾತೆಗಳ ಮೇಲೆ ಒಟ್ಟು 4580 ಕ್ಕೂ ಹೆಚ್ಚು NCRP PORTAL ನಲ್ಲಿ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1 ಬ್ಯಾಂಕ್ ಖಾತೆಯಲ್ಲಿ 167 ಕೋಟಿ ಹಣ ವರ್ಗಾವಣೆಯಾಗಿರುತ್ತದೆ. ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಬಳಸಿದ 10 ಬ್ಯಾಂಕ್ ಖಾತೆಗಳಲ್ಲಿ ಸುಮಾರು ರೂ 30,70,26,725 ಹಣ ವರ್ಗಾವಣೆ ಆಗಿದ್ದು, ಉಳಿದ 623 ಬ್ಯಾಂಕ್ ಖಾತೆಗಳ ವಿವರಣೆಗಳನ್ನು ಪಡೆಯಬೇಕಾಗಿದೆ.
ಪ್ರಕರಣದ ವಿವರ:
ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣಾ ಅ.ಕ್ರ 02/2026 ಕಲಂ 66(ಸಿ), 66(ಡಿ), ಐಟಿ ಕಾಯ್ದೆ ಕಲಂ 318(4), 308(5) ಬಿಎನ್ ಎಸ್ ಪ್ರಕರಣದಲ್ಲಿ ದೂರುದಾರರಿಂದ 1 ಕೋಟಿ 38 ಲಕ್ಷ ಹಣವನ್ನು 10 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದು, ಸದ್ರಿ ವಂಚಕರು ನೇಪಾಳದಲ್ಲಿ ಕುಳಿತು ವಂಚನೆ ಮಾಡುತ್ತಿದ್ದ ಬಗ್ಗೆ ತನಿಖೆಯಿಂದ ಹಾಗೂ ತಾಂತ್ರಿಕ ವಿಶ್ಲೇಷಣೆಯಿಂದ ಪತ್ತೆ ಹಚ್ಚಿ ವಂಚಕರ ಗ್ಯಾಂಗ್ ನ್ನು ದಸ್ತಗಿರಿ ಮಾಡಲಾಗಿದೆ.
ಒಂದು ವಂಚಕರ ತಂಡ ನೇಪಾಳದಲ್ಲಿ ಕುಳಿತು ಸಾಮಾಜಿಕ ಜಾಲತಾಣದ ಮೂಲಕ ಖಾತೆದಾರರನ್ನು ಮತ್ತು ಏಜೆಂಟ್ ರವರನ್ನು ನೇಮಕ ಮಾಡಿಕೊಂಡು, ವಂಚನೆಯ ಹಣವನ್ನು ವರ್ಗಾವಣೆ ಮಾಡುವುದು ಹಾಗೂ ಹಣವನ್ನು USDT ನಲ್ಲಿ ಬದಲಾಯಿಸಿ ನಂತರ ವಿದೇಶಕ್ಕೆ ಕಳುಹಿಸುತ್ತಾರೆ.
ಇನ್ನೊಂದು ವಂಚಕರ ತಂಡವು ಕಾಂಬೋಡಿಯಾ ಮತ್ತು ಇತರ ದೇಶಗಳಲ್ಲಿ ಕುಳಿತು ಹೂಡಿಕೆದಾರರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ವಿದೇಶಗಳಿಗೆ ಕೆಲಸಕ್ಕೆ ಹೋಗಿರುವ ಭಾರತೀಯರನ್ನು ಕೂಡಿ ಹಾಕಿ ಅವರ ಮೂಲಕ ಸ್ಥಳೀಯ ಭಾಷೆಯಲ್ಲಿ ಹೂಡಿಕೆದಾರರಿಗೆ ಹೆಚ್ಚು ಹೆಚ್ಚು ಹಣ ಗಳಿಸುವ ಆಮೀಷ ಒಡ್ಡಿ ವಿವಿಧ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿಸುತ್ತಿದ್ದು, ಈ ಹಣದ ವಹಿವಾಟನ್ನು ನೇಪಾಳದಲ್ಲಿರುವ ತಂಡವು ನಿಯಂತ್ರಣ ಮಾಡುತ್ತಿರುವುದು ತಿಳಿದುಬಂದಿರುತ್ತದೆ.
ಸೆನ್ ಪೊಲೀ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಉಪಯೋಗಿಸಲು ಫಿರ್ಯಾದಿಗೆ ನೀಡಿದ 10 ಬ್ಯಾಂಕ್ ಖಾತೆಗಳಲ್ಲಿ ದೇಶ್ಯಾದಂತ NCRP PORTAL ನಲ್ಲಿ ಸುಮಾರು 128 ಪ್ರಕರಣಗಳು ಮತ್ತು ಒಟ್ಟು 36 FIR ದಾಖಲಾಗಿರುತ್ತದೆ.
ಬ್ಯಾಂಕ್ ಖಾತೆಗಳನ್ನು ಪಡೆಯಲು ವಂಚಕರು ಅನುಸರಿಸುವ ವಿಧಾನ
ವಂಚಕರು ಬೇರೆ ಬೇರೆ ಕಂಪನಿಯ ಹೆಸರಿನಲ್ಲಿ ಇನ್ ಸ್ಟಾಗ್ರಾಂ ಹಾಗೂ ಟೆಲಿಗ್ರಾಂ ಖಾತೆಗಳ ಮೂಲಕ ತಮ್ಮ ನಿಜವಾದ ಹೆಸರುಗಳನ್ನು ಮರೆ ಮಾಚಿ ಜಾಹೀರಾತು ಮೂಲಕ ಕಾರ್ಪೋರೇಟ್ ಖಾತೆಗಳು, ಕರೆಂಟ್ ಖಾತೆಗಳು, USDT TO INR Exchange, Management Operator ಗಳು ಮತ್ತು OTP Worker ರವರು ಬೇಕಾಗಿದ್ದಾರೆ ಎಂಬುದಾಗಿ ಟೆಲಿಗ್ರಾಂ ಮತ್ತು ಇನ್ಸಾಟ್ರಾ ಗ್ರಾಂ ಮೂಲಕ ಬ್ಯಾಂಕ್ ಖಾತೆದಾರರನ್ನು ಸಂಪರ್ಕಿಸುತ್ತಾರೆ.
ದುರಾಸೆಗೊಳಗಾದವರು ಅವರನ್ನು ಸಂಪರ್ಕಿಸಿದಾಗ 5% ರಿಂದ 10% ಕಮಿಷನ್ ಕೊಡುವುದಾಗಿ ಮತ್ತು ಅವರಿಗೆ ಬೇಕಾದ ವಿಮಾನ ಟಿಕೇಟ್, ಕ್ಯಾಬ್ ಬುಂಕಿಂಗ್, ಹೋಟೇಲ್, ಲಾಡ್ಜ್ ವ್ಯವಸ್ಥೆ ನೀಡಿವುದಾಗಿ ಹಾಗೂ ಇವರಿಗೆ ವಿವಿಧ ರೀತಿಯ ಆಮಿಷಗಳನ್ನು ನೀಡಿ, ದುಬೈ, ನೇಪಾಳ ಮುಂತಾದ ಕಡೆಗಳಲ್ಲಿ ಕರೆಸಿಕೊಳ್ಳುತ್ತಾರೆ. ನಂತರ ಖಾತೆದಾರರನ್ನು ಮತ್ತು ಖಾತೆಗಳನ್ನು ಪೂರೈಸುವವರನ್ನು ಒಂದು ನಿರ್ದಿಷ್ಟವಾದ ಸ್ಥಳದಲ್ಲಿ ವ್ಯವಸ್ಥೆ ಮಾಡಿರುತ್ತಾರೆ. ವಂಚಕರು ತಮಗೆ ಸೇರಿದ ವಿವಿಧ ಕಂಪನಿಯ ಮೊಬೈಲ್ ಫೋನ್ ಗಳಿಗೆ ಖಾತೆದಾರರ ಸಿಮ್ ಗಳನ್ನು ಹಾಕಿಕೊಂಡು, Net Banking, ಮುಖಾಂತರ ವಂಚನೆಯ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ. ವಂಚಕರು ವಂಚನೆ ಮಾಡಿದ ಹಣದಿಂದ USDT ಗಳನ್ನು ಬೇರೆ ಬೇರೆ ಕಡೆಯಿಂದ ಖರೀದಿ ಮಾಡಿ, ಪ್ರತಿದಿನ ವಿದೇಶದಲ್ಲಿನ ಆರೋಪಿತರಿಗೆ ಕಳುಹಿಸುತ್ತಾರೆ.
ಹೂಡಿಕೆದಾರರನ್ನು ಆಕರ್ಷಿಸುವ ವಿಧಾನ
ಕಾಂಬೋಡಿಯಾ ಮತ್ತು ದುಬೈಗಳಲ್ಲಿ ಕುಳಿತು, ನಮ್ಮ ದೇಶದ ನಾಗರಿಕರಿಗೆ ಮುಖ್ಯ ವಂಚಕರು ಅಪರಿಚಿತ ವಾಟ್ಸಾಪ್ ಮೊಬೈಲ್ ನಂಬ್ರಗಳ ಮೂಲಕ ಇನ್ ಸ್ಟಾಗ್ರಾಂ, ಟೆಲಿಗ್ರಾಂ, ಫೇಸ್ ಬುಕ್ ಗಳ ಮುಖಾಂತರ ಹೂಡಿಕೆದಾರರನ್ನು ಸಂಪರ್ಕಿಸಿ ಹೆಚ್ಚಿನ ಲಾಭಂಶ ನೀಡುವುದಾಗಿ ಆರ್ಕಷಿಸುತ್ತಾರೆ. ಹೂಡಿಕೆ ಮಾಡಿದ ಹಣಕ್ಕೆ ಹೆಚ್ಚಿನ ಲಾಭಂಶ ಬಂದಿರುವುದಾಗಿ ಆಪ್ ಮೂಲಕ ತೋರಿಸುತ್ತಾರೆ. ಪ್ರಾರಂಭದಲ್ಲಿ ಸ್ವಲ್ಪ ಪ್ರಮಾಣದ ಲಾಭಂಶದ ಹಣವನ್ನು ನೀಡಿ ನಂಬಿಕೆ ಬರುವ ಹಾಗೆ ಮಾಡಿದ ನಂತರ ಉಳಿದ ಹಣನ್ನು ಡ್ರಾ ಮಾಡಬೇಕಾದರೆ, ಹೆಚ್ಚಿನ ಹಣವನ್ನು ಹೂಡಿಕೆ ಮಾಡಬೇಕೆಂದು ಪುಸುಲಾಯಿಸಿ ಹಣವನ್ನು ಹೂಡಿಕೆ ಮಾಡಿಸುತ್ತಾರೆ. ಈ ರೀತಿ ಪ್ರತಿದಿನ ಈ ತಂಡವು ಭಾರತೀಯರನ್ನು 60 ಲಕ್ಷದಿಂದ 01 ಕೋಟಿಯವರೆಗೆ Investment fraud ಗೆ ಒಳಪಡಿಸುತ್ತಿದೆ.
ಡಿಜಿಟಲ್ ಸ್ಲೇವರಿ ಬಗ್ಗೆ ಎಚ್ಚರವಿರಲಿ
ವಿದೇಶಗಳಲ್ಲಿ ಕೆಲಸಕ್ಕಾಗಿ ನೋಡುತ್ತಿರುವ ಯುವಕರಿಗೆ ನಕಲೀ ಜಾಹಿರಾತುಗಳ, ಏಜೆಂಟ್ ಗಳ ಮೂಲಕ ನಂಬಿಸಿ, ಪುಸಲಾಯಿಸಿ ಅವರನ್ನು ಟೂರಿಸ್ಟ್ ವೀಸಾ ದಲ್ಲಿ ಮಧ್ಯ ಪ್ರಾಂಚ್ಯ ದೇಶಗಳಿಗೆ ಕರೆದುಕೊಂಡು ಹೋಗಿ ಅವರಿಂದ ದಾಖಲೆಗಳನ್ನು ಮತ್ತು ಪಾಸ್ ಪೋರ್ಟ್ ತೆಗೆದುಕೊಂಡು ಅವರನ್ನು ಅಲ್ಲಿ ಗೊತ್ತಿರದೇ ಇರುವ ಸ್ಥಳದಲ್ಲಿ ಬಂಧಿಸುತ್ತಾರೆ. ಅವರಿಂದ ಒತ್ತಾಯ ಪೂರಕವಾಗಿ ಮುಗ್ದ ಹೂಡಿಕೆದಾರರಿಗೆ ಅವರ ಮಾತೃ ಭಾಷೆಯಲ್ಲೇ ಮಾತನಾಡಿಸಿ ಪುಸಲಾಯಿಸಿ ಹಣ ವರ್ಗಾಹಿಸುವಂತೆ ಮಾಡಿಸುತ್ತಾರೆ. ಅವರಿಗೆ ಸರಿಯಾಗಿ ಊಟ ಉಪಹಾರ ನೀಡದೇ ಹಾಗೂ ಕುಟುಂಬದವರೊಂದಿಗೆ ಸಂಪರ್ಕವನ್ನು ಮಾಡಲು ಅವಕಾಶ ಕೊಡದೇ ಕೂಡಿ ಹಾಕಿ ಭಾರತದ ನಾಗರೀಕರಿಗೆ ವಂಚನೆ ಮಾಡಲು ಭಾರತೀಯರನ್ನೇ ಬಳಸುತ್ತಿದ್ದು, ಈ ಬಗ್ಗೆ ಯುವಕರು ಎಚ್ಚರಿಕೆಯಿಂದ ಇರುವುದು.
ಉದ್ಯೋಗಕ್ಕೆ ವಿದೇಶಗಳಿಗೆ ಏಜೆನ್ಸಿ ಮೂಲಕ ಹೋಗುವ ಯುವಕರು ಪ್ರೊಟೆಕ್ಟ್ಸ್ ಆಫ್ ಇಮಿಗ್ರೇಟ್ಸ್ ಬಳಿ ನೊಂದಣಿ ಆಗಿರುವ ಏಜೆನ್ಸಿ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಅವರ ಮೂಲಕ ವಷ್ಟೇ ಕೆಲಸಗಳನ್ನು ಪಡೆದು, ಚೆಕ್ ಮಾಡಿ ಉದ್ಯೋಗಕ್ಕೆ ವಿದೇಶಕ್ಕೆ ಹೋಗುವುದು ಉತ್ತಮ.
ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 06 ಜನರನ್ನು ವಿದೇಶದಲ್ಲಿ ಉತ್ತಮ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅವರನ್ನು ಸೈಬರ್ ಸ್ಲೇವರಿ ಆಗಿ ಕೆಲಸ ಮಾಡಿಸುತ್ತಿದ್ದವರನ್ನು ರಕ್ಷಿಸಲಾಗಿದ್ದು, ಅವರು ನೀಡದ ದೂರಿನ ಮೇಲೆ ಪ್ರಕರಣ ಕೂಡ ದಾಖಲಾಗಿರುತ್ತದೆ.
ದೂರುದಾರರು ಕಳೆದುಕೊಂಡ ಹಣ ಮರಳಿ ಸಿಗದೇ ಇರುವುದಕ್ಕೆ ಕಾರಣಗಳು:
ವಂಚಕರು ವಂಚನೆಯಾದ ಹಣದಲ್ಲಿ ಆನ್ ಲೈನ್ ಮೂಲಕ USDT ಗಳನ್ನು ಖರೀದಿ ಮಾಡಿಕೊಂಡು ಅದೇ ದಿನ ಬೇರೆ ದೇಶಗಳಿಗೆ ಕಳುಹಿಸುವುದರಿಂದ ವಿದೇಶಕ್ಕೆ ಹಣ ಹೋಗುತ್ತದೆ.
ವಂಚನೆಗೊಳಗಾದ ದೂರುದಾರರು ಅದೇ ದಿನ ದೂರನ್ನು ನೀಡಲು ವಿಳಂಬ ಮಾಡುವುದರಿಂದ ಹಣ ಮರಳಿ ಸಿಗುವುದು ಕಷ್ಟವಾಗುತ್ತದೆ.
ಬ್ಯಾಂಕ್ ಖಾತೆ ನೀಡುವರೇ ಎಚ್ಚರ:
ಕಮೀಷನ್ ಆಸೆಗೆ ಒಳಗಾಗಿ ಬ್ಯಾಂಕ್ ಖಾತೆಯನ್ನು ವಂಚಕರಿಗೆ ನೀಡಿದಲ್ಲಿ ಖಾತೆದಾರರು ಸಹ ಆರೋಪಿತರಾಗುತ್ತಾರೆ. ಮುಖ್ಯ ವಂಚಕರು ವಿದೇಶದಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದರಿಂದ ಪ್ರಮುಖ ಆರೋಪಿಗಿಂತ ಮೊದಲೇ ಕಮಿಷನ್ ಆಸೆಗೆ ಒಳಗಾದವರು ಕಾನೂನು ಪ್ರಕಾರ ಶೀಘ್ರವಾಗಿ ದಸ್ತಗಿರಿಯಾಗುತ್ತಾರೆ.
ಹೂಡಿಕೆದಾರರೇ ಎಚ್ಚರ:
ವಿದೇಶದಲ್ಲಿ ಕುಳಿತುಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ರೀತಿಯ ಆಕರ್ಷಿತ ಜಾಹೀರಾತುಗಳನ್ನು ನೋಡಿ, ಹೆಚ್ಚಿನ ಲಾಭಾಂಶದ ವಂಚನೆಗೆ ಒಳಗಾಗಬೇಡಿ. ಹಾಗೂ ಹೂಡಿಕೆಯನ್ನು ಮಾಡುವಾಗ ನಕಲಿ ಸೆಬಿ ಸರ್ಟಿಪೀಕೇಟ್, ನಕಲಿ ಡಿಮೇಟ್ ಖಾತೆಗಳನ್ನು ನೋಡಿ ಮೋಸ ಹೋಗಬೇಡಿ.
ಹೆಚ್ಚು ಹಣ ಗಳಿಸಬೇಕೆಂಬ ಆಸೆಗೆ ಬಿದ್ದ ಹೆಚ್ಚಿನ ವಿದ್ಯಾವಂತರು ಇತ್ತಿಚೀನ ದಿನಗಳಲ್ಲಿ ಆನ್ ಲೈನ್ ಹೂಡಿಕೆ, ಹಣ ದ್ವಿಗುಣ, ಟ್ರೇಡಿಂಗ್ ಹೂಡಿಕೆಯಲ್ಲಿ ವಿಚಾರಿಸದೇ ವಂಚಕರ ಮೋಸದ ಬಲೆಗೆ ಬಿದ್ದು, ಹಣವನ್ನು ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದೆ.
ಹೂಡಿಕೆ ಮಾಡಬೇಕಾದರೆ SEBI Registration ಆಗಿರುವ ಸಂಸ್ಥೆ ಅಥವಾ ಬ್ರೋಕರ್ ರವರಲ್ಲಿ ಡಿಮ್ಯಾಟ್ ಮತ್ತು ಟ್ರೇಡಿಂಗ್ ಅಕೌಂಟ್ ಮಾಡಿಸುವುದು. ಹೆಚ್ಚಿನ ಲಾಭಾಂಶ ಭರವಸೆಯ ಹೂಡಿಕೆ ಬಗ್ಗೆ ಅತೀ ಹೆಚ್ಚಿನ ಕಾಳಜಿ ಅವಶ್ಯವಾಗಿದೆ.
ಸೈಬರ್ ವಂಚನೆಗೆ ಪರಿಹಾರಗಳು:
ವಂಚನೆಯಾದ ಒಂದು ಗಂಟೆಯ ಒಳಗೆ 1930 ಗೆ ಕರೆ ಮಾಡುವುದು ಹಾಗೂ ಹತ್ತಿರದ ಪೊಲೀಸ್ ಠಾಣೆಗೆ ತಕ್ಷಣವೇ ದೂರು ಸಲ್ಲಿಸುವುದು.
ಆನ್ ಲೈನ್ ಗೇಮ್, ನಕಲಿ ಲೋನ್ ಆ್ಯಪ್, ನಕಲಿ ಪಾರ್ಟ ಟೈಮ್ ಜಾಬ್, ನಕಲಿ ಜಾಬ್ ಆಫರ್, ಗಳಿಂದ ದೂರ ಇರುವುದು.
APK ಫೈಲ್ ಮತ್ತು ಲಿಂಕ್ ಗಳ ಬಗ್ಗೆ ಜಾಗ್ರತೆಯಿಂದ ಇರುವುದು.
ಸಾಮಾಜಿಕ ಜಾಲತಾಣಗಳಲ್ಲಿ ಬರುವ ಜಾಹೀರಾತುಗಳು, ಆಕರ್ಷಿಕ ಹೂಡಿಕೆಗಖ ಬಗ್ಗೆ ಜಾಗ್ರೂತರಾಗಿರವುದು.
ಸಾಮಾಜಿಕ ಜಾಲತಾಣದಲ್ಲಿ ಪ್ರೀತಿ ಪ್ರೇಮ, ಗೆಳೆತನದ ಮೂಲಕ ಬ್ಯಾಂಕ್ ಖಾತೆಗಳನ್ನು ಮತ್ತು ಸಿಮ್ ಗಳನ್ನು ನೀಡುವುದು, ನಿಮ್ಮ ಅರೆ ನಗ್ನ, ಮತ್ತು ನಗ್ನ ಚಿತ್ರಗಳನ್ನು ಹಂಚಿಕೊಳ್ಳುವುದು, ಗಿಫ್ಟ್ ಕಳುಹಿಸುವುದಾಗಿ ವಂಚನಗೆ ಒಳಗಾಗಿ ಹಣವನ್ನು ಕಳುಹಿಸುವುದರಿಂದ ದೂರವಿರಿ.
ವಿಡೀಯೋ ಕಾಲ್ ಮೂಲಕ CBI, POLICE, JUDGES, CUSTOMS, SEBI, TRAI, ಮುಂತಾದ ಇಲಾಖೆಗಳನ್ನು ಬಳಸಿಕೊಳ್ಳುವ ನಕಲಿ ಅಧಿಕಾರಿಗಳಂತೆ ನಟಿಸಿ, ನಿಮಗೆ ದಸ್ತಗಿರಿ ಬೆದರಿಕೆ ನೀಡಿ ಹಣವನ್ನು ಲೂಟಿ ಮಾಡುವ ವ್ಯಕ್ತಿಗಳಿಂದ ದೂರವಿರಿ. ಯಾವುದೇ ವಿಡೀಯೋ ಕಾಲ್ ಮೂಲಕ ದಸ್ತಗಿರಿ ಮಾಡುವ ಕ್ರಮವನ್ನು ಯಾವ ಇಲಾಖೆಯೂ ಅನುಸರಿಸುತ್ತಿಲ್ಲ. ಹಾಗೂ ಭಾರತೀಯ ಕಾನೂನಿನಲ್ಲಿ ಇರುವುದಿಲ್ಲ. ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡುವುದು.
ಆನ್ ಲೈನ್ ಮೂಲಕ ಹೋಟೆಲ್, ಕ್ಯಾಬ್, ಫ್ಲೈಟ್ಸ್ ಬುಕ್ಕಿಂಗ್ ಮಾಡುವಾಗ ಎಚ್ಚರದಿಂದರಬೇಕು.
ಗೂಗಲ್ ನಲ್ಲಿ ಸಿಗುವಂತಹ ಯಾವುದೇ ಕಸ್ಟಮರ್ ಕೇರ್ ಗಳ ಬಗ್ಗೆ ಎಚ್ಚರದಿಂದರಬೇಕು ಹಾಗೂ ಯಾವುದೇ ಓಟಿಪಿಗಳನ್ನು ಶೇರ್ ಮಾಡದೇ ಇರುವುದು.
ದಸ್ತಗಿರಿಯಾದ ಆರೋಪಿತರ ವಿವರ:
ಗುಜರಾತ್ ನ ಮಕವನ್ ವಿಕ್ರಂ (25), ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21) ಕೊಲ್ಲತ್ತಾ, ಪುಪ್ಲ ಶಿವ ಕುಮಾರ್ ರಾವ್ (32) ಜಾರ್ಖಾಂಡ್, ಗೌರವ್ ಪಾಂಡೆ (24)ಉತ್ತರ ಪ್ರದೇಶ,
ಹರ್ಷ್ ಮಿಸ್ರಾ (22) ಉತ್ತರ ಪ್ರದೇಶ, ರಾಜೇಶ್ ಮಂಡನ್ (30) ಜಾರ್ಖಾಂಡ್, ಮೊಹಮ್ಮದ್ ಆಕೀಬ್ ಅಲಿ (27) ಉತ್ತರ ಪ್ರದೇಶ, ರಾಜೀವ್ ರಂಜನ್ ಕುಮಾರ್ (30) ಬಿಹಾರ್, ಮಿಥುನ್ ಕುಮಾರ್ ಮಂಗರಾಜ್ (38) ಜಾರ್ಖಾಂಡ್, ನೌಶಾದ್ ಅಲಿ (34) ಉತ್ತರ ಪ್ರದೇಶ, ಓಂ ಪ್ರಕಾಶ್ ಯಾಧವ್ (37) ಜೈಪುರ್ ರಾಜಸ್ಥಾನ.
ವಶಪಡಿಸಿಕೊಂಡ ಸೊತ್ತುಗಳ ವಿವರ:
ಲ್ಯಾಪ್ ಟಾಪ್ -1,
ಮೊಬೈಲ್ ಪೋನ್ ಗಳು-21
ವಿವಿಧ ಕಂಪನಿಯ ಸಿಮ್ ಕಾರ್ಡ್ ಗಳು – 20
ಬೇರೆ ಬೇರೆ ಬ್ಯಾಂಕ್ ಡೆಬಿಟ್ ಕ್ರೆಡಿಟ್ ಕಾರ್ಡ್ ಗಳು – 20
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಅಪರಾಧ
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ

ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ.
ಪೆರುವಾಯಿ ಗ್ರಾಮದ ಸಾರ್ವಜನಿಕ ಜಾಗದಲ್ಲಿ ಜೂಜು ಕಟ್ಟಿ ಕೋಳಿ ಅಂಕ ಆಡಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರನ್ವಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡಿಸುತ್ತಿರುವುದು ಕಂಡು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಳಿಯ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. . ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗಿದ್ದ 3,050 ರೂಪಾಯಿ ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಇನ್ನಿತರ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಸ್ಥಳೀಯ
Kollur-ಕೊಲ್ಲೂರು: ದನವನ್ನು ಕಾರಿಗೆ ತುಂಬಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ
ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ.
ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದರು. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನಿಬ್ಬರಿಗಾಗಿ ಶೋಧ
ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಕಾರ್ಯಾಚರಣೆ
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಹೆಡ್‌ಕಾನ್‌ಸ್ಟೆಬಲ್ ನಾಗೇಂದ್ರ, ಕಾನ್‌ಸ್ಟೆಬಲ್‌ಗಳಾದ ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ ಹಾಗೂ ನಾಗರಾಜ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
-
ಪುತ್ತೂರು19 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್22 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು22 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್21 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ22 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ20 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ21 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ21 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















