ಬಿಗ್ ನ್ಯೂಸ್
Puttur-ರಾಮಚಂದ್ರಾಪುರ ಮಠಕ್ಕೆ ಮಲ್ಲಿಕಾ ಶರಾವತ್ ಭೇಟಿ ಬಗ್ಗೆ ರಾಘವೇಶ್ವರ ಶ್ರೀಗಳ ಕುರಿತು ‘ಪೋರಿ ಹಿಂದೆ ಹೋರಿ’ ಲೇಖನ ಪ್ರಕಟ : ಅಂಕಣಕಾರ ಬಿಳಿದಾಳೆ ಈಶ ದೋಷಮುಕ್ತ – ಪುತ್ತೂರಿನ ನೂತನ ನ್ಯಾಯಾಲಯದಲ್ಲಿ ಮೊದಲ ತೀರ್ಪು..!
ಹೊಸನಗರ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು ಮಠದ ವಿರುದ್ಧ ‘ಗೌರಿ ಲಂಕೇಶ್’ ಪತ್ರಿಕೆಯಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿದ್ದ ಪತ್ರಿಕೆಯ ಅಂಕಣಕಾರ, ವಿಚಾರವಾದಿ ಬಿಳಿದಾಳೆ ಈಶ ಅವರನ್ನು ದೋಷಮುಕ್ತಿಗೊಳಿಸಿ ಪುತ್ತೂರು ನ್ಯಾಯಾಲಯ ತೀರ್ಪು ನೀಡಿದೆ.
ಪುತ್ತೂರು: ಹೊಸನಗರ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು ಮಠದ ವಿರುದ್ಧ ‘ಗೌರಿ ಲಂಕೇಶ್’ ಪತ್ರಿಕೆಯಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿದ್ದ ಪತ್ರಿಕೆಯ ಅಂಕಣಕಾರ, ವಿಚಾರವಾದಿ ಬಿಳಿದಾಳೆ ಈಶ ಅವರನ್ನು ದೋಷಮುಕ್ತಿಗೊಳಿಸಿ ಪುತ್ತೂರು ನ್ಯಾಯಾಲಯ ತೀರ್ಪು ನೀಡಿದೆ.
ಬಾಲಿವುಡ್ ನಟಿ ಮಲ್ಲಿಕಾ ಶರಾವತ್ ಮಠಕ್ಕೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ದಿನಾಂಕ 27-5-2009ರ ‘ಗೌರಿ ಲಂಕೇಶ್’ ಪತ್ರಿಕೆಯಲ್ಲಿ, ‘ಪೋರಿ ಹಿಂದೆ ಹೋರಿ’ ಎಂಬ ತಲೆಬರಹದಲ್ಲಿ ಲೇಖನ ಪ್ರಕಟವಾಗಿತ್ತು. ಸ್ವಾಮೀಜಿ ಹಾಗೂ ಮಠದ ಕುರಿತು ಅವಹೇಳನಕಾರಿ ಮತ್ತು ಜಾತಿ ಜಾತಿ ಮಧ್ಯೆ ವೈರುಧ್ಯ ಉಂಟು ಮಾಡುವ ಬರಹ ಪ್ರಕಟ ಮಾಡಲಾಗಿದೆ ಎಂದು ಆರೋಪಿಸಿ, ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್ ಮತ್ತು ಅಂಕಣಕಾರ ಬಿಳಿದಾಳೆ ಈಶ ಅವರ ವಿರುದ್ದ ಮಠದ ಭಕ್ತ ಉಪ್ಪಿನಂಗಡಿಯ ಕೇಶವಕೃಷ್ಣ ಎಂಬವರು ಪುತ್ತೂರು ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಇದು ಎರಡೂ ಕಡೆಯವರಿಗೂ ಪ್ರತಿಷ್ಠಿತ ಪ್ರಕರಣವಾಗಿ ಪರಿಗಣಿಸಲ್ಪಟ್ಟಿತ್ತು.ಈ ನಡುವೆ ಒಂದನೇ ಆರೋಪಿ ಗೌರಿ ಲಂಕೇಶ್ ಅವರು ಹತ್ಯೆಯಾಗಿದ್ದರಿಂದ ಎರಡನೇ ಆರೋಪಿ ಬಿಳಿದಾಳೆ ಈಶ ಅವರ ವಿರುದ್ದ ಸುದೀರ್ಘ ಹದಿನಾರು ವರ್ಷ ಕಾಲ ವಿಚಾರಣೆ ನಡೆದು ಇದೀಗ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಪುತ್ತೂರಿನ ಹಿರಿಯ ಶ್ರೇಣಿ ನ್ಯಾಯಾಲಯ ಆನೆಮಜಲು ಹೊಸ ಕಟ್ಟಡದಲ್ಲಿ ಆರಂಭವಾದ ಬಳಿಕ ಇದು ಮೊದಲ ತೀರ್ಪು ಎನ್ನಲಾಗಿದೆ.
ಮಂಗಳೂರು
Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.
“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
ಬಿಗ್ ನ್ಯೂಸ್
Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
ನಟ ದರ್ಶನ್ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಬೆಂಗಳೂರು: ನಟ ದರ್ಶನ್ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಈಗಾಗಲೇ ಪ್ರಕರಣದ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿರುವ ಅವರು, ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಈ ಬೆಳವಣಿಗೆ ಪ್ರಕರಣದ ಮುಂದಿನ ವಿಚಾರಣೆಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
ಇನ್ನೊಂದೆಡೆ, ಪ್ರಕರಣದ ಆರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದಿದೆ. ಜಾಮೀನು ಅರ್ಜಿಗಳ ಕುರಿತ ಆದೇಶವನ್ನು ನ್ಯಾಯಾಲಯ ಅಕ್ಟೋಬರ್ 17ಕ್ಕೆ ಕಾಯ್ದಿರಿಸಿದೆ.
ವಿನಯ್ ಮಾಫಿ ಸಾಕ್ಷಿಯಾಗುವ ಅರ್ಜಿಯನ್ನು ವಾಪಸ್ ಪಡೆದಿರುವುದು ಪ್ರಕರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆದರೆ, ಈ ಬೆಳವಣಿಗೆಯಿಂದ ಪ್ರಕರಣದ ಇತರ ಆರೋಪಿಗಳ ಮೇಲೆ ಯಾವ ರೀತಿಯ ಪರಿಣಾಮ ಉಂಟಾಗಲಿದೆ ಎಂಬುದು ಮುಂದಿನ ಕಾನೂನು ಪ್ರಕ್ರಿಯೆಯಿಂದ ಸ್ಪಷ್ಟವಾಗಬೇಕಿದೆ.
ಬಿಗ್ ನ್ಯೂಸ್
G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.
ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.
-
ಸ್ಥಳೀಯ13 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ರಾಜಕೀಯ7 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ಅಪರಾಧ7 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ಅಪರಾಧ11 hours agoB.R. Shetty-ಬ್ಯಾಂಕ್ ಆಫ್ ಬರೋಡಾ ವಿರುದ್ಧ ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಕಾನೂನು ಸಮರ; ₹1.25 ಲಕ್ಷ ಕೋಟಿ ಪರಿಹಾರ ಬೇಡಿಕೆ
-
ಮಂಗಳೂರು7 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ಬಿಗ್ ನ್ಯೂಸ್13 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಅಂತರ ರಾಜ್ಯ13 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ರಾಜಕೀಯ11 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ


















