Connect with us

ಸ್ಥಳೀಯ

Beltangadi-Big Breaking-ಸಂಚಲನ ಸೃಷ್ಟಿಸಿದ್ದ ಬೆಳ್ತಂಗಡಿ ಕಾಲೇಜ್ ವಿದ್ಯಾರ್ಥಿನಿ ಕಿಡ್ನಾಪ್ ಯತ್ನ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ‘ಡ್ರಾಮ ಕ್ವೀನ್’ ಆದ ವಿದ್ಯಾರ್ಥಿನಿ..! ಯಾಕೀಗೆ ಮಾಡಿದಳು ಗೊತ್ತೇ..?

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಪಿಯುಸಿ ವಿಧ್ಯಾರ್ಥಿನಿಯ ಕಿಡ್ನಾಪ್ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮಾ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ಫೆಬ್ರವರಿ 10: ಬೆಳ್ತಂಗಡಿಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಪಿಯುಸಿ ವಿದ್ಯಾರ್ಥಿನಿಯ ಕಿಡ್ನಾಪ್ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮಾ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾಶಿಬೆಟ್ಟು ಸರ್ಕಾರಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಸ್ಕೂಟರ್ ತಡೆದು ಕಾರಿನಲ್ಲಿ ಬಂದಿದ್ದ ಮುಸುಕುಧಾರಿಗಳು ಸುದೆಮುಗೇರು ಎಂಬಲ್ಲಿ ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ, ಈ ವೇಳೆ ತನ್ನ ಕೈಗೆ ಚೂರಿಯಿಂದ ಹಲ್ಲೆ ಮಾಡಿದ್ದಾರೆಂದು ಯುವತಿ ದೂರಿದ್ದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ಭಾರೀ ಸಂಚಲನ ಮೂಡಿಸಿದ್ದರಿಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಪೊಲೀಸರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಲ್ಲದೆ ಘಟನೆ ಬಗ್ಗೆ ಮಾಹಿತಿ ಪಡೆದಿದ್ದರು.

Ad Widget

Ad Widget <> Ad Widget

ಪ್ರಕರಣ ದಾಖಲಾಗುತ್ತಿದ್ದಂತೆ ಇಡೀ ದಿನ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿತ್ತು, ಪೊಲೀಸರು ಆಸುಪಾಸಿನಲ್ಲಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದರು. ಪೊಲೀಸರಿಗೆ ಸಾಂದರ್ಭಿಕ ಸಾಕ್ಷ್ಯಗಳು ಸಿಗದೇ ಇದ್ದುದರಿಂದ ವಿದ್ಯಾರ್ಥಿನಿಯನ್ನೇ ಹೆಚ್ಚುವರಿ ಮಾಹಿತಿ ಪಡೆಯಲು ವಿಧ್ಯಾರ್ಥಿನಿಯ ವಿಚಾರಣೆ ನಡೆಸಿದ್ದರು.



Ad Widget

ಈ ವೇಳೆ ನಾನು ಮಂಗಳೂರಿನ ಕಾಲೇಜು‌ ಸೇರುವುದಕ್ಕಾಗಿ ಅಪಹರಣದ ಕತೆ ಕಟ್ಟಿದ್ದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.‌ ಪೊಲೀಸ್‌ ಮೂಲಗಳ ಪ್ರಕಾರ ಗ್ರಾಮೀಣ ಭಾಗದ ಕಾಲೇಜು ಬದಲು ಮಂಗಳೂರು ನಗರದ ಕಾಲೇಜಿಗೆ ಹೋಗಲು ಬಯಸಿದ್ದು ಅದಕ್ಕಾಗಿ ತಾನೇ ಬ್ಲೇಡ್ ನಿಂದ ಕೈಯನ್ನು ಕೊಯ್ದುಕೊಂಡಿದ್ದಾಗಿ ತಿಳಿಸಿದ್ದಾಳೆ. ಇದಲ್ಲದೆ, ತನ್ನ ಮನೆಯ ಸಮೀಪವೇ ಪುಸ್ತಕಗಳನ್ನು ಸುಟ್ಟು ಹಾಕಿರುವುದಾಗಿಯೂ, ಬಳಿಕ , ತನ್ನ ಬ್ಯಾಗನ್ನು ಅಪಹರಣಕ್ಕೆ ಬಂದಿದ್ದವರು ಹೊತ್ತೊಯ್ದಿದ್ದಾರೆ ಎಂದು ಕತೆ ಸೃಷ್ಟಿಸಿರುವುದಾಗಿ ಆಕೆ ಪೊಲೀಸರ ಮುಂದೆ ಹೇಳಿಕೊಂಡಿರುವುದಾಗಿ ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ. ಹಾಗಾಗಿಯೂ ಪೊಳಿಸ್‌ ಇಲಾಖೆ ಈ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ನೀಡಬೇಕಿದೆ.

Ad Widget

Ad Widget

ಬೆಳ್ತಂಗಡಿಯ ಕಿಡ್ನಾಪ್ ಪ್ರಕರಣ ಭಾರೀ ಸಂಚಲನ ಮೂಡಿಸಿತ್ತು, ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರಿನ ಬಂದು ಮಾಹಿತಿ ಪಡೆದಿದ್ದರು. ಆದರೆ ವಿಧ್ಯಾರ್ಥಿನಿಯ ಕಿಡ್ನಾಪ್ ಡ್ರಾಮಾಕ್ಕೆ ಪೊಲೀಸರು ಸುಸ್ತಾಗಿ ಹೋಗಿದ್ದಾರೆ ಎನ್ನಲಾಗಿದೆ.

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್‌..!

Published

on



Ad Widget

Ad Widget

Ad Widget

Ad Widget

ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.



Ad Widget

ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

Ad Widget

Ad Widget

ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading