ಬಿಗ್ ನ್ಯೂಸ್
Tirumala Honda-‘ಸಾರಥಿ’ ಗಳಿಗೆ ವಿಶೇಷ ರಿಯಾಯಿತಿ ..! ಚಾಲಕರಿಗೆ ‘ತಿರುಮಲ ಹೋಂಡಾ’ದಲ್ಲಿ ಯಾವುದೇ ಹೋಂಡಾ ದ್ವಿಚಕ್ರ ಖರೀದಿಗೆ ರೂ.2500 ಡಿಸ್ಕೌಂಟ್
ಸಮಾಜದ ಚಕ್ರಗಳು ನಿರಂತರವಾಗಿ ಉರುಳಲು ಕಾರಣಕರ್ತರಾದವರು ನಮ್ಮ ಹೆಮ್ಮೆಯ ಚಾಲಕರು. ಹಗಲಿರುಳು ರಸ್ತೆಯ ಮೇಲೆ ಶ್ರಮಿಸುವ ಈ ‘ಸಾರಥಿ’ಗಳ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ದ್ವಿಚಕ್ರ ವಾಹನ ಕ್ಷೇತ್ರದ ವಿಶ್ವಾಸಾರ್ಹ ಸಂಸ್ಥೆ ‘ತಿರುಮಲ ಹೋಂಡಾ’ ಈಗ ಒಂದು ವಿಶೇಷ ಸೌಲಭ್ಯವನ್ನು ಘೋಷಿಸಿದೆ.
ಪುತ್ತೂರು: ಸಮಾಜದ ಚಕ್ರಗಳು ನಿರಂತರವಾಗಿ ಉರುಳಲು ಕಾರಣಕರ್ತರಾದವರು ನಮ್ಮ ಹೆಮ್ಮೆಯ ಚಾಲಕರು. ಹಗಲಿರುಳು ರಸ್ತೆಯ ಮೇಲೆ ಶ್ರಮಿಸುವ ಈ ‘ಸಾರಥಿ’ಗಳ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ದ್ವಿಚಕ್ರ ವಾಹನ ಕ್ಷೇತ್ರದ ವಿಶ್ವಾಸಾರ್ಹ ಸಂಸ್ಥೆ ‘ತಿರುಮಲ ಹೋಂಡಾ’ ಈಗ ಒಂದು ವಿಶೇಷ ಸೌಲಭ್ಯವನ್ನು ಘೋಷಿಸಿದೆ.
ಬ್ಯಾಡ್ಜ್ ಹೊಂದಿರುವ ಚಾಲಕರಿಗಾಗಿಯೇ ವಿನ್ಯಾಸಗೊಳಿಸಲಾದ ‘ಸಾರಥಿ ಸ್ಪೆಷಲ್ ಸ್ಕೀಮ್’ ಮೂಲಕ ಹೋಂಡಾ ದ್ವಿಚಕ್ರ ವಾಹನಗಳ ಖರೀದಿಯ ಮೇಲೆ ವಿಶೇಷ ರಿಯಾಯಿತಿ ಹಾಗೂ ಆಕರ್ಷಕ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಸಾರಥಿಗಳಿಗೆ ವಿಶೇಷ ಗೌರವ – ₹2,500 ನೇರ ರಿಯಾಯಿತಿ:
ತಮ್ಮ ಬ್ಯಾಡ್ಜ್ ಮೂಲಕ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಚಾಲಕರು ಯಾವುದೇ ಹೋಂಡಾ ದ್ವಿಚಕ್ರ ವಾಹನ ಖರೀದಿಸಿದರೂ ಅವರಿಗೆ ನೇರವಾಗಿ ₹2,500 ರೂಪಾಯಿಗಳ ವಿಶೇಷ ರಿಯಾಯಿತಿ (Flat Discount) ನೀಡಲಾಗುತ್ತದೆ. ಶ್ರಮಜೀವಿಗಳಾದ ಚಾಲಕ ಮಿತ್ರರಿಗೆ ಆರ್ಥಿಕ ಹೊರೆಯಾಗದಂತೆ ಈ ಯೋಜನೆಯನ್ನು ರೂಪಿಸಲಾಗಿದೆ.
ಈ ಆಫರನ್ನು ತಮ್ಮದಾಗಿಸಲು ಇಂದೇ ಸಂಪರ್ಕಿಸಿ : 96065 90399
ಶೂನ್ಯ ಮುಂಗಡ ಪಾವತಿ (Zero Down Payment) ಸೌಲಭ್ಯ:
ಸಾಮಾನ್ಯವಾಗಿ ಹೊಸ ಬೈಕ್ ಖರೀದಿಸುವಾಗ ದೊಡ್ಡ ಮೊತ್ತದ ಮುಂಗಡ ಹಣ ಪಾವತಿಸುವುದು ದೊಡ್ಡ ಸವಾಲಾಗಿರುತ್ತದೆ. ಆದರೆ ತಿರುಮಲ ಹೋಂಡಾ ಸಾರಥಿಗಳಿಗಾಗಿ ‘ಶೂನ್ಯ ಮುಂಗಡ ಪಾವತಿ’ಯ ಅವಕಾಶವನ್ನು ನೀಡಿದೆ. ಅಂದರೆ, ಯಾವುದೇ ಆರಂಭಿಕ ಬಂಡವಾಳವಿಲ್ಲದೆ ಸುಲಭ ಕಂತುಗಳ ಮೂಲಕ ನಿಮ್ಮ ನೆಚ್ಚಿನ ಹೋಂಡಾ ಬೈಕ್ ಅನ್ನು ನಿಮ್ಮ ಮನೆಗೆ ಕೊಂಡೊಯ್ಯಬಹುದು.
ಕೈಗೆಟಕುವ ದರದಲ್ಲಿ ಹೋಂಡಾ ಬೈಕ್:
ಹೋಂಡಾ ಬೈಕ್‌ಗಳ ಎಕ್ಸ್-ಶೋರೂಂ ಬೆಲೆ ಕೇವಲ ₹66,800 ರಿಂದ ಪ್ರಾರಂಭವಾಗುತ್ತಿದ್ದು, ಅತ್ಯುತ್ತಮ ಮೈಲೇಜ್ ಹಾಗೂ ದೀರ್ಘ ಬಾಳಿಕೆಗೆ ಹೆಸರಾಗಿವೆ. ಬ್ಯಾಡ್ಜ್ ಹೊಂದಿರುವ ಚಾಲಕರು ಈ ಸುವರ್ಣ ಅವಕಾಶವನ್ನು ಬಳಸಿಕೊಂಡು ತಮ್ಮ ಸ್ವಂತ ವಾಹನದ ಕನಸನ್ನು ನನಸಾಗಿಸಿಕೊಳ್ಳಬಹುದಾಗಿದೆ.
ಸೇವೆ ಎಲ್ಲಿ ಲಭ್ಯ?
ತಿರುಮಲ ಹೋಂಡಾದ ಈ ವಿಶೇಷ ಕೊಡುಗೆಯು ಪುತ್ತೂರಿನ (ಬೋಳುವಾರು ಮತ್ತು ಎಪಿಎಂಸಿ), ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಬೆಳ್ಳಾರೆ ಹಾಗೂ ಸುಳ್ಯದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದೆ.
ರಸ್ತೆಯ ಮೇಲೆ ಸದಾ ಜಾಗರೂಕರಾಗಿ ವಾಹನ ಚಾಲನೆ ಮಾಡುವ ನಮ್ಮ ಸಾರಥಿಗಳ ನೆರವಿಗೆ ನಿಲ್ಲುವುದು ನಮ್ಮ ಹೆಮ್ಮೆ ಎನ್ನುತ್ತದೆ ತಿರುಮಲ ಹೋಂಡಾ ಸಂಸ್ಥೆ. ಆಸಕ್ತ ಚಾಲಕರು ಹೆಚ್ಚಿನ ಮಾಹಿತಿಗಾಗಿ ಇಂದೇ ನಿಮ್ಮ ಸಮೀಪದ ತಿರುಮಲ ಹೋಂಡಾ ಶೋರೂಂಗೆ ಭೇಟಿ ನೀಡಿ.
ಈ ಆಫರನ್ನು ತಮ್ಮದಾಗಿಸಲು ಇಂದೇ ಸಂಪರ್ಕಿಸಿ : 96065 90399
ಅಂತರ ರಾಜ್ಯ
Nana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.
ನವದೆಹಲಿ: ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.
ನಾನಾ ಪಾಟೇಕರ್ ಕೇವಲ ಬೆಳ್ಳಿತೆರೆಯ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಸರಳತೆ, ಸಾಮಾಜಿಕ ಕಳಕಳಿ ಹಾಗೂ ದೇಶಪ್ರೇಮಕ್ಕೂ ಅವರು ಹೆಸರಾಗಿದ್ದರು. ಭಾರತೀಯ ಸೇನೆಯೊಂದಿಗೆ ಅವರಿಗಿದ್ದ ನಂಟು ಕೂಡ ಅವರ ಬದುಕಿನ ಪ್ರಮುಖ ಅಧ್ಯಾಯವಾಗಿತ್ತು.
ಸೇನಾ ತರಬೇತಿ ಪಡೆದು ಟೆರಿಟೋರಿಯಲ್ ಆರ್ಮಿಗೆ ಸೇರ್ಪಡೆ
1991ರಲ್ಲಿ ತೆರೆಕಂಡ ತಮ್ಮ ಪ್ರಸಿದ್ದ ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು ಯಾವುದೇ ಶಾರ್ಟ್‌ಕಟ್ ಬಳಸದೆ, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಮಿಲಿಟರಿ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ (ಪ್ರಾದೇಶಿಕ ಸೇನೆ) ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.
1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾದಾಗ ಗಡಿಯಲ್ಲಿ ಸೈನಿಕರೊಂದಿಗೆ ಸೇವೆ ಸಲ್ಲಿಸುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದರು. ಅನುಮತಿ ಪಡೆದ ಬಳಿಕ ತಮ್ಮ ನಟನಾ ವೃತ್ತಿಜೀವನವನ್ನು ಕೆಲಕಾಲ ಬದಿಗೊತ್ತಿ ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್‌ನೊಂದಿಗೆ ಗಡಿ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.
ಶ್ರೀನಗರ, ಡ್ರಾಸ್ ಹಾಗೂ ಲೇಹ್ ಸೇರಿದಂತೆ ಕಠಿಣ ಹವಾಮಾನವಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು ಎರಡು ತಿಂಗಳು ಕಳೆದಿದ್ದರು. ಈ ಅವಧಿಯಲ್ಲಿ ಸುಮಾರು 20 ಕೆ.ಜಿ. ತೂಕ ಕಳೆದುಕೊಂಡಿದ್ದಾಗಿ ಅವರು ಹಿಂದಿನ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.
ಗಣ್ಯರಿಂದ ಸಂತಾಪ
ನಾನಾ ಪಾಟೇಕರ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್ ಸೇರಿದಂತೆ ದೇಶದ ಪ್ರಮುಖ ರಾಜಕಾರಣಿಗಳು, ಚಲನಚಿತ್ರ ರಂಗದ ಗಣ್ಯರು ಹಾಗೂ ಕ್ರೀಡಾಪಟುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ”ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾನಾ ಪಾಟೇಕರ್‌ಜಿ ಅವರ ಅಭಿನಯದಲ್ಲಿನ ವಿಶಿಷ್ಟತೆ, ತೀವ್ರತೆ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವ ಕೆಲವೇ ಕೆಲವು ಕಲಾವಿದರಲ್ಲಿ ಮಾತ್ರ ಕಾಣಸಿಗುತ್ತದೆ. ತಮ್ಮ ಪಾತ್ರಗಳ ಮೂಲಕ ಜ್ವಾಲಾಮುಖಿಯಂತೆ ಸ್ಫೋಟಿಸುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಅವರು ಪ್ರದರ್ಶಿಸುತ್ತಿದ್ದರು. ಬೆಳ್ಳಿತೆರೆಯ ಮೇಲೆ ಅವರು ಜೀವ ತುಂಬಿದ ಪಾತ್ರಗಳು ಹಲವು ತಲೆಮಾರುಗಳ ನೆನಪಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ನೇರ ಹಾಗೂ ಸ್ಪಷ್ಟ ಅಭಿಪ್ರಾಯಗಳಿಗೆ ಹೆಸರಾಗಿದ್ದ ನಾನಾ ಪಾಟೇಕರ್ ಅವರದು ಅದೇ ವಿಶಿಷ್ಟ ಛಾಪು. ತಾವು ಕಂಡ ಸಂಗತಿಗಳ ಕುರಿತು ಯಾವುದೇ ಮುಚ್ಚುಮರೆಯಿಲ್ಲದೆ ಅತ್ಯಂತ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು’ ಎಂದು ಹೇಳಿದ್ದಾರೆ.
ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ನಟ ಅಕ್ಷಯ್ ಕುಮಾರ್, “ಅವರ ಗಂಭೀರ ಧ್ವನಿ, ನಟನೆಯಲ್ಲಿನ ತೀವ್ರತೆ ಹಾಗೂ ಪ್ರಾಮಾಣಿಕತೆ ಅವರನ್ನು ಅನನ್ಯ ವ್ಯಕ್ತಿಯನ್ನಾಗಿ ಮಾಡಿತ್ತು. ವೆಲ್ಕಮ್ ಹಾಗೂ ಇತ್ತೀಚಿನ ಹೌಸ್‌ಫುಲ್ 5 ಚಿತ್ರಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ ನೆನಪುಗಳು ಎಂದಿಗೂ ನನ್ನೊಂದಿಗಿರುತ್ತವೆ” ಎಂದಿದ್ದಾರೆ.
ನಟ ರಿತೇಶ್ ದೇಶ್‌ಮುಖ್ ಪ್ರತಿಕ್ರಿಯಿಸಿ, “ನಾನಾ ಪಾಟೇಕರ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಒಬ್ಬ ರಿಯಲ್ ಹೀರೋ ಆಗಿದ್ದರು. ಅವರು ಕೈಗೊಂಡ ಸಾಮಾಜಿಕ ಕಾರ್ಯಗಳು ಅಪಾರವಾದವು. ನಾಯಕನಾಗಿ, ಖಳನಾಯಕನಾಗಿ ಹಾಗೂ ಹಾಸ್ಯನಟನಾಗಿ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಅವರ ಅಗಲಿಕೆ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ” ಎಂದು ಸ್ಮರಿಸಿದ್ದಾರೆ.
ಬಿಗ್ ನ್ಯೂಸ್
Reservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.
ಜಿಲ್ಲೆಯ ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಡಿ ಮೀಸಲಿಡಲಾಗಿದೆ.
ತಾಲೂಕು ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪಂಚಾಯಿತಿಗಳಲ್ಲಿ ಒಟ್ಟು 126 ಸ್ಥಾನಗಳಿದ್ದು, 65 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 13 ಸ್ಥಾನಗಳಿದ್ದು, ಈ ಪೈಕಿ 9 ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ 10 ಸ್ಥಾನಗಳಿದ್ದು, 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಹಿಂದುಳಿದ ವರ್ಗ ‘ಎ’ಗೆ 29 ಸ್ಥಾನಗಳು ಮೀಸಲಾಗಿದ್ದು, 16 ಸ್ಥಾನಗಳು ಮಹಿಳೆಯರಿಗೆ ಮೀಸಲು. ಹಿಂದುಳಿದ ವರ್ಗ ‘ಬಿ’ಗೆ 7 ಸ್ಥಾನಗಳಿದ್ದು, 4 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಸಾಮಾನ್ಯ ವರ್ಗದ 67 ಸ್ಥಾನಗಳ ಪೈಕಿ 27 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ತಾಲೂಕುವಾರು ಗಮನಿಸಿದರೆ ಮೂಲ್ಕಿಯಲ್ಲಿ 7, ಮೂಡುಬಿದಿರೆಯಲ್ಲಿ 9, ಸುಳ್ಯದಲ್ಲಿ 11, ಉಳ್ಳಾಲದಲ್ಲಿ 12, ಪುತ್ತೂರಿನಲ್ಲಿ 12, ಮಂಗಳೂರಿನಲ್ಲಿ 14, ಬೆಳ್ತಂಗಡಿಯಲ್ಲಿ 14, ಕಡಬದಲ್ಲಿ 22 ಹಾಗೂ ಬಂಟ್ವಾಳದಲ್ಲಿ 25 ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ. ಬಂಟ್ವಾಳದಲ್ಲಿ ಅತಿ ಹೆಚ್ಚು 25 ಹಾಗೂ ಮೂಲ್ಕಿಯಲ್ಲಿ ಅತಿ ಕಡಿಮೆ 7 ಕ್ಷೇತ್ರಗಳಿವೆ.
ಜಿಲ್ಲಾ ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 35 ಸ್ಥಾನಗಳಿದ್ದು, 18 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 3 ಸ್ಥಾನಗಳಿದ್ದು, 2 ಮಹಿಳೆಯರಿಗೆ ಮೀಸಲು. ಪರಿಶಿಷ್ಟ ಪಂಗಡಕ್ಕೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ.
ಹಿಂದುಳಿದ ವರ್ಗ ‘ಎ’ಗೆ 10 ಸ್ಥಾನಗಳಿದ್ದು, 5 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಹಿಂದುಳಿದ ವರ್ಗ ‘ಬಿ’ಗೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲು. ಸಾಮಾನ್ಯ ವರ್ಗದ 18 ಸ್ಥಾನಗಳ ಪೈಕಿ 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಮೀಸಲಾತಿ ವಿವರ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ. ಯಾವ ಕ್ಷೇತ್ರದಲ್ಲಿ ಯಾವ ವರ್ಗಕ್ಕೆ ಮೀಸಲಾತಿ ದೊರೆತಿದೆ ಎಂಬುದನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.
ಅಂತರ ರಾಜ್ಯ
CEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.
ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.
ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಿಲ್ಲಿಯಲ್ಲಿ ವಿವಿಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗಳು ದೇಶದ ವಿವಿಧೆಡೆ ತೀವ್ರಗೊಳ್ಳುತ್ತಿರುವ ನಡುವೆಯೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
-
Uncategorized14 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್8 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು12 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized13 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ12 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ13 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ12 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್13 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















