ಬಿಗ್ ನ್ಯೂಸ್
Puttur-ಪುತ್ತೂರು: ಅವೈಜ್ಞಾನಿಕ ಇಂಟರ್ಲಾಕ್ ಕಾಮಗಾರಿ – ಸರಣಿ ಅಪಘಾತ; ಸಾರ್ವಜನಿಕರ ಆಕ್ರೋಶದ ಬಳಿಕ ಎಚ್ಚೆತ್ತ ನಗರಸಭೆ, ದುರಸ್ತಿ ಕಾರ್ಯ ಆರಂಭ
ಪುತ್ತೂರು ನಗರದ ಜನನಿಬಿಡ ದರ್ಬೆ ಧನ್ವಂತರಿ ಆಸ್ಪತ್ರೆ ಸಮೀಪದ ಮುಖ್ಯರಸ್ತೆಗೆ ಅಳವಡಿಸಲಾದ ಇಂಟರ್ಲಾಕ್ಗಳು ಅವೈಜ್ಞಾನಿಕ ಕಾಮಗಾರಿಯಿಂದಾಗಿ ಕಿತ್ತು ಹೋಗಿದ್ದು, ಸರಣಿ ಅಪಘಾತಗಳಿಗೆ ಕಾರಣವಾಗುತ್ತಿದೆ. ಸಾರ್ವಜನಿಕರ ತೀವ್ರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನಗರಸಭೆ ಮಂಗಳವಾರದಿಂದ ದುರಸ್ತಿ ಕಾರ್ಯಕ್ಕೆ ಮುಂದಾಗಿದೆ.
ಪುತ್ತೂರು: ನಗರದ ಜನನಿಬಿಡ ದರ್ಬೆ ಧನ್ವಂತರಿ ಆಸ್ಪತ್ರೆ ಸಮೀಪದ ಮುಖ್ಯರಸ್ತೆಗೆ ಅಳವಡಿಸಲಾದ ಇಂಟರ್ಲಾಕ್ಗಳು ಅವೈಜ್ಞಾನಿಕ ಕಾಮಗಾರಿಯಿಂದಾಗಿ ಕಿತ್ತು ಹೋಗಿದ್ದು, ಸರಣಿ ಅಪಘಾತಗಳಿಗೆ ಕಾರಣವಾಗುತ್ತಿದೆ. ಸಾರ್ವಜನಿಕರ ತೀವ್ರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನಗರಸಭೆ ಮಂಗಳವಾರದಿಂದ ದುರಸ್ತಿ ಕಾರ್ಯಕ್ಕೆ ಮುಂದಾಗಿದೆ.

ಅಪಘಾತಗಳ ತಾಣವಾದ ರಸ್ತೆ:
ಮಳೆಗಾಲದಲ್ಲಿ ಡಾಮಾರು ಕಾಮಗಾರಿ ಬಾಳಿಕೆ ಬರುವುದಿಲ್ಲ ಎಂಬ ಕಾರಣ ನೀಡಿ ನಗರಸಭೆಯು ಸುಮಾರು 6 ತಿಂಗಳ ಹಿಂದೆ ನಗರದ ಮೂರು ಕಡೆಗಳಲ್ಲಿ ರಸ್ತೆಗೆ ಇಂಟರ್ಲಾಕ್ ಅಳವಡಿಸಿತ್ತು. ಆದರೆ, ದರ್ಬೆ ಸಮೀಪ ಅಳವಡಿಸಲಾದ ಇಂಟರ್ಲಾಕ್ಗಳು ಘನ ವಾಹನಗಳ ಭಾರ ತಾಳಲಾರದೆ ತುಂಡಾಗಿ ಮೇಲೆದ್ದಿವೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಆಯತಪ್ಪಿ ಬೀಳುವುದು ನಿರಂತರವಾಗಿ ನಡೆಯುತ್ತಿದೆ. ಫೆಬ್ರವರಿ 6ರಂದು ಮಧ್ಯಾಹ್ನ ಸ್ಕೂಟರ್ ಸವಾರರೊಬ್ಬರು ಇಲ್ಲಿ ಬಿದ್ದು ಗಾಯಗೊಂಡಿದ್ದು, ಸ್ಥಳೀಯ ರಿಕ್ಷಾ ಚಾಲಕರು ರಕ್ಷಣೆಗೆ ಧಾವಿಸಿದ್ದರು.

ಎಚ್ಚರಿಕೆ ನೀಡಿದ್ದ ಸಾಮಾಜಿಕ ಕಾರ್ಯಕರ್ತರು:
ಪುತ್ತೂರು-ದರ್ಬೆ ರಸ್ತೆಯು ಅತ್ಯಂತ ಜನನಿಬಿಡ ಪ್ರದೇಶವಾಗಿದ್ದು, ಇಲ್ಲಿ ನಿತ್ಯ ನೂರಾರು ಘನ ವಾಹನಗಳು ಸಂಚರಿಸುತ್ತವೆ. ಈ ರಸ್ತೆಗೆ ಇಂಟರ್ಲಾಕ್ ಅಳವಡಿಸುವ ಯೋಜನೆಯ ಆರಂಭದಲ್ಲೇ ಸಾಮಾಜಿಕ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಇಂಟರ್ಲಾಕ್ಗಳು ಭಾರೀ ವಾಹನಗಳ ಒತ್ತಡ ತಡೆಯುವ ಶಕ್ತಿ ಹೊಂದಿಲ್ಲ ಎಂದು ಎಚ್ಚರಿಸಿದರೂ ನಗರಸಭೆ ನಿರ್ಲಕ್ಷ್ಯ ವಹಿಸಿತ್ತು ಎನ್ನುವುದು ಸಾರ್ವಜನಿಕರ ಆರೋಪವಾಗಿದೆ.
ದುರಸ್ತಿ ಕಾರ್ಯ ಚುರುಕು:
ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ಫೆಬ್ರವರಿ 10ರಂದು (ಮಂಗಳವಾರ) ಕಿತ್ತುಹೋಗಿರುವ ಇಂಟರ್ಲಾಕ್ಗಳನ್ನು ತೆರವುಗೊಳಿಸಿ ಹೊಸದಾಗಿ ಮರು ಜೋಡಣೆ ಮಾಡುವ ಕಾರ್ಯ ಆರಂಭವಾಗಿದೆ. ಇದರಿಂದಾಗಿ ರಸ್ತೆಯ ಒಂದು ಬದಿಯನ್ನು ಬಂದ್ ಮಾಡಲಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹಳೆಯದರಲ್ಲಿ ಉತ್ತಮವಾಗಿರುವ ಇಂಟರ್ಲಾಕ್ಗಳನ್ನು ಮರು ಬಳಸಿ, ತುಂಡಾದ ಜಾಗಕ್ಕೆ ಹೊಸದನ್ನು ಅಳವಡಿಸಲಾಗುತ್ತಿದೆ.

ಇಂಜಿನಿಯರ್ ಸಮಜಾಯಿಷಿ:
“ಜುಲೈ ತಿಂಗಳ ಭಾರೀ ಮಳೆಯ ಸಂದರ್ಭದಲ್ಲಿ ಈ ಇಂಟರ್ಲಾಕ್ಗಳನ್ನು ಅಳವಡಿಸಲಾಗಿತ್ತು. ಮಳೆಯ ಕಾರಣದಿಂದ ಅವು ಸರಿಯಾಗಿ ನೆಲಕ್ಕೆ ‘ಸೆಟ್’ ಆಗದ ಹಿನ್ನೆಲೆಯಲ್ಲಿ ಕಿತ್ತು ಬಂದಿವೆ. ಇದೀಗ ಯಾವುದೇ ಹೊಸ ಟೆಂಡರ್ ಕರೆಯದೆ, ಗುತ್ತಿಗೆದಾರರ ಸ್ವಂತ ಖರ್ಚಿನಲ್ಲೇ ಮರು ಅಳವಡಿಕೆ ಕಾರ್ಯ ಮಾಡಿಸಲಾಗುತ್ತಿದೆ,” ಎಂದು ನಗರಸಭೆ ಇಂಜಿನಿಯರ್ ಸ್ಪಷ್ಟನೆ ನೀಡಿದ್ದಾರೆ.
ನಗರದ ಮೂರು ಕಡೆಗಳಲ್ಲಿ ಅಳವಡಿಸಲಾದ ಇಂಟರ್ಲಾಕ್ಗಳೂ ಇದೇ ರೀತಿ ಸಮಸ್ಯೆಗೆ ಈಡಾಗಿದ್ದು, ಅಭಿವೃದ್ಧಿ ಹೆಸರಿನಲ್ಲಿ ಸಾರ್ವಜನಿಕರ ಹಣ ವ್ಯರ್ಥವಾಗುತ್ತಿದೆ ಎಂಬ ಆಕ್ರೋಶ ಕೇಳಿಬಂದಿದೆ. ಮುಂದಾದರೂ ವೈಜ್ಞಾನಿಕವಾಗಿ ಶಾಶ್ವತ ರಸ್ತೆ ಕಾಮಗಾರಿ ನಡೆಸಲಿ ಎಂಬುದು ಪುತ್ತೂರು ಜನರ ಒತ್ತಾಯವಾಗಿದೆ.
ಬಿಗ್ ನ್ಯೂಸ್
Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.
ಬಿಗ್ ನ್ಯೂಸ್
Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.
ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.
ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.
ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.
ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.
ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.
ಸಮಗ್ರ ತೋಟಗಾರಿಕಾ ಸೇವೆ:
ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
ಬಿಗ್ ನ್ಯೂಸ್21 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ23 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ6 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ5 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ5 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ5 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ5 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಸಿನೆಮಾ4 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು















