ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]" /> ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]"> Puttur-ಪುತ್ತೂರು: ಫೆ.14, 15ರಂದು ಕೈಕಾರ ಸರಕಾರಿ ಶಾಲೆಯ ಶತಮಾನೋತ್ಸವ ಸಂಭ್ರಮ - Nikhara News | Kannada News Website
Connect with us

ಬಿಗ್ ನ್ಯೂಸ್

Puttur-ಪುತ್ತೂರು: ಫೆ.14, 15ರಂದು ಕೈಕಾರ ಸರಕಾರಿ ಶಾಲೆಯ ಶತಮಾನೋತ್ಸವ ಸಂಭ್ರಮ

Published

on

Ad Widget

Ad Widget

Ad Widget

Ad Widget

ದ.ಕ. ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೈಕಾರ ಇದರ ಶತಮಾನೋತ್ಸವ ಸಮಾರಂಭವು ಫೆ.14ಮತ್ತು 15 ರಂದು ವಿವಿಧ ಕಾರ್ಯಕ್ರಮಗಳ ಸಂಯೋಜನೆಯೊಂದಿಗೆ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಸಂಚಾಲಕ ಸೀತಾರಾಮ ರೈ ಚೆಲ್ಯಡ್ಕ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ದ.ಕ. ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೈಕಾರ ಇದರ ಶತಮಾನೋತ್ಸವ ಸಮಾರಂಭವು ಫೆ.14ಮತ್ತು 15 ರಂದು ವಿವಿಧ ಕಾರ್ಯಕ್ರಮಗಳ ಸಂಯೋಜನೆಯೊಂದಿಗೆ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಸಂಚಾಲಕ ಸೀತಾರಾಮ ರೈ ಚೆಲ್ಯಡ್ಕ ಹೇಳಿದರು.

Ad Widget

Ad Widget alt="Ad Widget"/>

Ad Widget

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ 50 ಲಕ್ಷದಲ್ಲಿ ನಿರ್ಮಿಸಿದ ಶತಮಾನೋತ್ಸವ ಭವನ ಉದ್ಘಾಟನೆ ನಡೆಯಲಿದೆ. ನೂತನ ಕ್ರೀಡಾಂಗಣ, ಆವರಣಗೋಡೆ, ರಂಗ ಮಂದಿರ ನಿರ್ಮಾಣ ಮಾಡಲಾಗಿದೆ ಎಂದರು.

Ad Widget

Ad Widget <> Ad Widget

ಫೆ.14ರಂದು ಬೆಳಗ್ಗೆ ಗಂಟೆ 10.30ಕ್ಕೆ ಕೈಕಾರ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ವೆಂಕಪ್ಪ ಗೌಡ ಧ್ವಜಾರೋಹಣ ಮಾಡಲಿದ್ದಾರೆ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶೀಲಾವತಿ ಅಧ್ಯಕ್ಷತೆ ವಹಿಸಲಿದ್ದಾರೆ. ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಶಿವರಾಮ ಶೆಟ್ಟಿ ಕೈಕಾರ ಅವರು ನೂತನ ಧ್ವಜಸ್ತಂಭ ಲೋಕಾರ್ಪಣೆ ಮಾಡಲಿದ್ದಾರೆ.

ಶತಮಾನೋತ್ಸವ ಉದ್ಘಾಟನೆ
ಸಂಜೆ ಗಂಟೆ 5.30ಕ್ಕೆ ನಡೆಯುವ ಶತಮಾನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶತಮಾನೋತ್ಸವವನ್ನು ಉದ್ಘಾಟಿಸಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಹುಮಾನ ವಿತರಿಸಲಿದ್ದಾರೆ.

Ad Widget

Ad Widget

ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿಯ ಶಾಲೆಯ ಸಾಧಕರಲ್ಲಿ ನೂರು ಮಂದಿ ಹಿರಿಯ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಸನ್ಮಾನಿಸಲಿದ್ದಾರೆ. ಎಂಆರ್‌ಪಿಎಲ್ ಗ್ರೂಪ್‌ನ ಜನರಲ್ ಮೆನೇಜರ್ ಕೃಷ್ಣ ಹೆಗ್ಡೆಯವರು ಶತಮಾನೋತ್ಸವ ಸಾಂಸ್ಕೃತಿಕ ಭವನ ಉದ್ಘಾಟಿಸಲಿದ್ದಾರೆ. ವಿಜಯ ಮಂಜುನಾಥ ಶೆಟ್ಟಿ ಕೈಕಾರ ಅವರು ಪನಡ್ಕ ಮಂಜುನಾಥ ಶೆಟ್ಟಿ ವೇದಿಕೆಯನ್ನು ಉದ್ಘಾಟಿಸಲಿದ್ದಾರೆ. ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತಸರ ಕೆ.ಕೆ.ಶೆಟ್ಟಿಯವರು ಕೈಕಾರ ಕುಸುಮ ಸುಬ್ಬಣ್ಣ ಶೆಟ್ಟಿ ರಂಗಮಂದಿರವನ್ನು ಉದ್ಘಾಟಿಸಲಿದ್ದಾರೆ.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಒಳಮೊಗ್ರು ಗ್ರಾ.ಪಂ. ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಒಳಮೊಗ್ರು ಗ್ರಾ.ಪಂ ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಸಹಿತ ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾವಹಿಸಲಿದ್ದಾರೆ. ಫೆ.15ಕ್ಕೆ ಮಧ್ಯಾಹ್ನ ಗಂಟೆ 12 ಕ್ಕೆ ಸಭಾ ಕಾರ್ಯಕ್ರಮದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಆದರ್ಶ ಆಸ್ಪತ್ರೆಯ ಡಾ. ಎಂ.ಕೆ.ಪ್ರಸಾದ್ ಅವರು ಬಹುಮಾನ ವಿತರಿಸಲಿದ್ದಾರೆ. ದೈಹಿಕ ಶಿಕ್ಷಣ ಪರಿವೀಕ್ಷಕ ಚಕ್ರಪಾಣಿ, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ನವೀನ್ ವೇಗಸ್ ಸಹಿತ ಅನೇಕರ ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ಗಂಟೆ 5ಕ್ಕೆ ಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ನಡೆಯಲಿದೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಭೋಜೇ ಗೌಡ, ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್ ಸಹಿತ ಅನೇಕ ಮಂದಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಫೆ.14ರಂದು ಮಧ್ಯಾಹ್ನ ಗಂಟೆ 3 ರಿಂದ ಕೈಕಾರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ. ರಾತ್ರಿ ಕೈಕಾರ ಶಾಲಾ ಮಕ್ಕಳಿಂದ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲಾ ಸೌರಭ, ಗೀತ್ ಮ್ಯೂಸಿಕಲ್ಸ್ ಮಂಗಳೂರು ಕರುಣಾಕರ್ ಇವರಿಂದ ದ್ವಿ ಕಂಠ ಸಿರಿ ಗಾಯನ, ಅಶೋಕ್ ಪೊಳಲಿ ಅವರಿಂದ ವಿಭಿನ್ನ ಶೈಲಿಯ ನೃತ್ಯ ಕಾರ್ಯಕ್ರಮ ನಡೆಯಲಿದೆ.

ಫೆ.15ಕ್ಕೆ ಬೆಳಗ್ಗೆ ಗಂಟೆ 10.30ಕ್ಕೆ ಶ್ರೀ ವಿಷ್ಣು ಕಲಾ ತಂಡ ದೂಮಡ್ಕ ಇರ್ದೆ ಇವರಿಂದ ನೃತ್ಯ ವೈಭವ ನಡೆಯಲಿದೆ. ಮಧ್ಯಾಹ್ನ ಗಂಟೆ 2ಕ್ಕೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಹಾಗೂ ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ ಬಳಗದವರಿಂದ ಯಕ್ಷಗಾನ ಬಯಲಾಟ ದಕ್ಷ ಯಜ್ಞ ಪ್ರದರ್ಶನಗೊಳ್ಳಲಿದೆ. ರಾತ್ರಿ ಗಂಟೆ ೮ಕ್ಕೆ ಹಿರಿಯ ವಿದ್ಯಾರ್ಥಿಗಳು ಮತ್ತು ಬಳಗದವರಿಂದ ತುಳು ಹಾಸ್ಯಭರಿತ ನಾಟಕ `ಮರ್ಲ್ ಕಟ್ಟೋರ್ಚಿ’ ಪ್ರದರ್ಶನಗೊಳ್ಳಲಿದೆ ಎಂದು ಸೀತಾರಾಮ ರೈ ಚೆಲ್ಯಡ್ಕ ಹೇಳಿದರು.

1983ರವರೆಗೆ 1ರಿಂದ 5ನೇ ತರಗತಿವರೆಗೆ, 1983ರಿಂದ ಹಿರಿಯ ಪ್ರಾಥಮಿಕ ಶಾಲೆಯಾಗಿ ಉನ್ನತೀಕರಣಗೊಂಡು ಪ್ರಸ್ತುತ 7ನೇ ತರಗತಿವರೆಗೆ ವಿದ್ಯಾರ್ಜನೆಯನ್ನು ನೀಡುತ್ತಿರುವುದು ಸಂತಸದ ವಿಷಯ. 2019ರಲ್ಲಿ ಆಂಗ್ಲ ಮಾಧ್ಯಮದಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ. ತರಗತಿಗಳನ್ನು ಆರಂಭಿಸಿ ಸುಮಾರು 200 ಪುಟಾಣಿಗಳು ಮುಂದಡಿಯಿಟ್ಟಿದ್ದಾರೆ. ಪ್ರಸ್ತುತ ವರ್ಷ ಶತಮಾನೋತ್ಸವ ಆಚರಣೆಯ ಸವಿ ನೆನಪಿಗಾಗಿ ಆಂಗ್ಲಮಾಧ್ಯಮ ತರಗತಿಗಳನ್ನು ಆರಂಭಿಸಲಾಗಿದ್ದು, ಸರಕಾರದ ಅನುಮೊದನೆಯೂ ದೊರಕಿರುವುದು ಸಂತಸದ ವಿಷಯ ಎಂದು ಸೀತಾರಾಮ ರೈ ಚೆಲ್ಯಡ್ಕ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಕೈಕಾರ ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಶಿವರಾಮ ಶೆಟ್ಟಿ ಶಿವಸದನ, ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಪ್ರಭಾರ ಮುಖ್ಯಗುರು ರಾಮಣ್ಣ ರೈ, ಎಲ್.ಕೆ.ಜಿ.-ಯು.ಕೆ.ಜಿ ಬೆಟರ್‌ಮೆಂಟ್ ಕಮಿಟಿಯ ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು.

Ad Widget
Click to comment

Leave a Reply

ಮಂಗಳೂರು

Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ

Published

on

Ad Widget

Ad Widget

Ad Widget

Ad Widget

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Ad Widget

Ad Widget <> Ad Widget

ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.

Ad Widget

Ad Widget

ಯೂಟ್ಯೂಬ್‌ನಲ್ಲಿ ಅಧಿಕೃತ ಪತ್ರಕರ್ತರು ಬಹಳ ಕಡಿಮೆ ಇದ್ದಾರೆ. ಕೆಲವರು ಮಾತ್ರ ಹಿರಿಯ ಹಾಗೂ ಪ್ರಬುದ್ಧ ಪತ್ರಕರ್ತರಾಗಿದ್ದಾರೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

Ad Widget
Continue Reading

ಸ್ಥಳೀಯ

Valaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್‌ನಿಂದ ‘ಡಬಲ್ ಟೋಲ್’ ಆತಂಕ..!

Published

on

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ ಒಂದು ವಾರದೊಳಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಬಳಿಕ ಟೋಲ್ ಶುಲ್ಕ ಸಂಗ್ರಹ ಅಧಿಕೃತವಾಗಿ ಆರಂಭವಾಗುವ ನಿರೀಕ್ಷೆಯಿದೆ.

Ad Widget

Ad Widget alt="Ad Widget"/>

Ad Widget

ಬಿ.ಸಿ.ರೋಡ್‌ನಿಂದ ಪೆರಿಯಶಾಂತಿವರೆಗಿನ ಸುಮಾರು 46 ಕಿ.ಮೀ. ಹೆದ್ದಾರಿ ಕಾಮಗಾರಿಯಲ್ಲಿ ಈಗಾಗಲೇ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ನಡುವೆ ಇದೀಗ ಟೋಲ್ ಪ್ಲಾಜಾ ನಿರ್ಮಾಣಗೊಂಡಿದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾ ನಿರ್ಮಾಣದ ಗುತ್ತಿಗೆ ಪಡೆದಿದ್ದ ಕೆಎನ್‌ಆರ್ ಕನ್ಸ್ಟ್ರಕ್ಷನ್ ಸಂಸ್ಥೆಯು ಕಾಮಗಾರಿ ಪೂರ್ಣಗೊಳಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದೆ. ಇತ್ತ ಶುಲ್ಕ ಸಂಗ್ರಹ ನಿರ್ವಹಣೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು, ಮಂಗಳೂರಿನ ‘ಕೋರಲ್’ ಸಂಸ್ಥೆಯು ಗುತ್ತಿಗೆಯನ್ನು ಪಡೆದುಕೊಂಡಿದೆ.

8 ಲೇನ್‌ಗಳಲ್ಲಿ ಸಂಚಾರ ವ್ಯವಸ್ಥೆ
ಚತುಷ್ಪಥ ಹೆದ್ದಾರಿಯಲ್ಲಿ ಒಟ್ಟು 8 ಲೇನ್‌ಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡೂ ಬದಿಗಳಲ್ಲಿ ತಲಾ ನಾಲ್ಕು ಲೇನ್‌ಗಳಿದ್ದು, ಅವುಗಳಲ್ಲಿ 6 ಲೇನ್‌ಗಳು ಡೆಡಿಕೇಟೆಡ್ ಲೇನ್‌ಗಳಾಗಿರಲಿವೆ. ಈ ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರಲಿದೆ.

Ad Widget

Ad Widget

ಉಳಿದ ಎರಡು ಲೇನ್‌ಗಳಲ್ಲಿ ಫಾಸ್ಟ್‌ಟ್ಯಾಗ್ ಮೂಲಕ ಪಾವತಿಗೆ ಅವಕಾಶವಿದ್ದರೂ, ನಗದು ಪಾವತಿಗೆ ಅವಕಾಶ ಇರುವುದಿಲ್ಲ. ಬದಲಾಗಿ ಯುಪಿಐ ಅಥವಾ ಸ್ಕ್ಯಾನ್ ಮೂಲಕ ಡಿಜಿಟಲ್ ಪಾವತಿ ಮಾಡಬೇಕಾಗುತ್ತದೆ. ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸುಗಮ ಸಂಚಾರಕ್ಕಾಗಿ ಎರಡೂ ಬದಿಗಳಲ್ಲಿ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಟೋಲ್ ಶುಲ್ಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಯಾಗಿರುವ ವಾಹನಗಳಿಗೆ ಶೇ.50ರಷ್ಟು ಶುಲ್ಕ ವಿನಾಯಿತಿ ನಿಗದಿಪಡಿಸಲಾಗಿದೆ ಎಂದು ಮಂಗಳೂರಿನ ಕೋರಲ್ ಸಂಸ್ಥೆಯ ಆಡಳಿತ ಪಾಲುದಾರ ಯಜೇಶ್ ತಿಳಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್‌ನಿಂದ 38 ಕಿ.ಮೀ. ಅಂತರ..!
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಒಟ್ಟು 7 ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರು ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರಿನ ನೆಲಮಂಗಲದಿಂದ ಸಕಲೇಶಪುರದವರೆಗೆ 5 ಟೋಲ್ ಪ್ಲಾಜಾಗಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಿಂದ ಮಂಗಳೂರಿನ ಪಂಪ್‌ವೆಲ್ ನಡುವಿನ ಮಾರ್ಗದಲ್ಲಿ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಇದೀಗ ವಳಾಲು ಟೋಲ್ ಸೇರ್ಪಡೆಯಾದರೆ ಈ ಭಾಗದಲ್ಲಿ ಶುಲ್ಕ ಸಂಗ್ರಹಿಸುವ ಟೋಲ್ ಪ್ಲಾಜಾಗಳ ಸಂಖ್ಯೆ ಎರಡಕ್ಕೇರಲಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿಗಳ ಪ್ರಕಾರ ಒಂದು ಟೋಲ್ ಪ್ಲಾಜಾದಿಂದ ಮತ್ತೊಂದು ಟೋಲ್ ಪ್ಲಾಜಾಕ್ಕೆ ಕನಿಷ್ಠ 60 ಕಿ.ಮೀ. ಅಂತರ ಇರಬೇಕಿದೆ. ಆದರೆ, ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಿಂದ ಬಜತ್ತೂರು ವಳಾಲು ಟೋಲ್ ಪ್ಲಾಜಾಕ್ಕೆ ಇರುವ ಅಂತರ ಕೇವಲ 38 ಕಿ.ಮೀ. ಮಾತ್ರ. ಹೀಗಾಗಿ, ವಳಾಲು ಟೋಲ್‌ನಲ್ಲಿ ಶುಲ್ಕ ಸಂಗ್ರಹ ಆರಂಭವಾದರೆ ಸ್ಥಳೀಯರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಶಬೀರ್ ಅಹ್ಮದ್ ನೆಕ್ಕಿಲಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಹೋರಾಟ ತೀವ್ರಗೊಳ್ಳುವ ಸಾಧ್ಯತೆ
ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಅನಧಿಕೃತವಾಗಿದ್ದು, ನಿಗದಿತ ಅವಧಿ ಮುಗಿದಿದ್ದರೂ ಶುಲ್ಕ ಸಂಗ್ರಹ ಮುಂದುವರಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಈಗಾಗಲೇ ನಿರಂತರ ಹೋರಾಟ ನಡೆಸುತ್ತಿದ್ದಾರೆ.

ಬ್ರಹ್ಮರಕೂಟ್ಲು ಟೋಲ್ ಪ್ಲಾಜಾವನ್ನು ತೆರವುಗೊಳಿಸದೆ ವಳಾಲು ಟೋಲ್ ಪ್ಲಾಜಾದಲ್ಲಿ ಶುಲ್ಕ ಸಂಗ್ರಹ ಆರಂಭಿಸಿದರೆ ವಾಹನ ಸವಾರರಿಗೆ ಒಂದೇ ಮಾರ್ಗದಲ್ಲಿ ಎರಡು ಬಾರಿ ಟೋಲ್ ಪಾವತಿಸುವ ಪರಿಸ್ಥಿತಿ ಎದುರಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಕೂಟ್ಲು ಟೋಲ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹೋರಾಟಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Ad Widget
Continue Reading

ಬಿಗ್ ನ್ಯೂಸ್

Heavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡ ಗಂಜೂರಿನಲ್ಲಿ ಗರಿಷ್ಠ 54 ಮಿ.ಮೀ. ಮಳೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 51 ಮಿ.ಮೀ. ಹಾಗೂ ಚಿಂತಾಮಣಿ ತಾಲ್ಲೂಕಿನ ಮುಂಗನಹಳ್ಳಿಯಲ್ಲಿ 47.5 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget <> Ad Widget

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಿಸ್ಕೂರಿನಲ್ಲಿ 47 ಮಿ.ಮೀ., ಹುಲ್ಲೇನಹಳ್ಳಿಯಲ್ಲಿ 46 ಮಿ.ಮೀ. ಹಾಗೂ ಅದರಂಗಿಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಪಶ್ಚಿಮ ಭಾಗದ ಕೋನೇನ ಅಗ್ರಹಾರ ಮತ್ತು ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರದಲ್ಲಿ ತಲಾ 40 ಮಿ.ಮೀ. ಮಳೆ ಸುರಿದಿದೆ.

ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹಾಗೂ ಚಿಂತಾಮಣಿ ತಾಲ್ಲೂಕಿನ ಪೆರಮಂಚನಹಳ್ಳಿಯಲ್ಲಿ ತಲಾ 35.5 ಮಿ.ಮೀ., ಸಂಕಿಘಟ್ಟದಲ್ಲಿ 35 ಮಿ.ಮೀ. ಮಳೆಯಾಗಿದೆ. ಆನೇಕಲ್ ತಾಲ್ಲೂಕಿನ ನೇರಿಗದಲ್ಲಿ 33.5 ಮಿ.ಮೀ., ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ 33 ಮಿ.ಮೀ. ಹಾಗೂ ಚಿಂತಾಮಣಿಯಲ್ಲಿ 32.8 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget

ಬೆಂಗಳೂರು ನಗರದ ದಾಸನಪುರದಲ್ಲಿ 29 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರದಲ್ಲಿ 28.5 ಮಿ.ಮೀ., ಅರಿಕುಂಟೆಯಲ್ಲಿ 27.5 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ 27.25 ಮಿ.ಮೀ. ಮಳೆಯಾಗಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವಿರುಪಸಮುದ್ರದಲ್ಲಿ 26 ಮಿ.ಮೀ. ಹಾಗೂ ಮಧುಗಿರಿ ತಾಲ್ಲೂಕಿನ ಬೇಡತೂರಿನಲ್ಲಿ 25.5 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಮತ್ತು ಚಿಂತಾಮಣಿ ತಾಲ್ಲೂಕಿನ ಮಾಸ್ತೇನಹಳ್ಳಿಯಲ್ಲಿ ತಲಾ 24.5 ಮಿ.ಮೀ. ಮಳೆಯಾಗಿದೆ.

ಇನ್ನು ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿ 23.5 ಮಿ.ಮೀ., ಮುರುಗಮಲೆಯಲ್ಲಿ 23.25 ಮಿ.ಮೀ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟಾಪುರದಲ್ಲಿ 23 ಮಿ.ಮೀ. ಮಳೆಯಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಳಗುರುಕೋಟೆ ಹಾಗೂ ಗೌರಿಬಿದನೂರು ತಾಲ್ಲೂಕಿನ ಮೆಲ್ಯಾದಲ್ಲಿ ತಲಾ 22.75 ಮಿ.ಮೀ. ಮಳೆ ಸುರಿದಿದೆ. ಬೆಂಗಳೂರಿನ ಚಿಕ್ಕಬಾಣಾವರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ತಲಾ 22.5 ಮಿ.ಮೀ. ಮಳೆಯಾಗಿದೆ.

ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ 22 ಮಿ.ಮೀ., ಬೆಂಗಳೂರಿನ ಲಕ್ಕಸಂದ್ರ, ವನ್ನಾರಪೇಟೆ ಹಾಗೂ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದಲ್ಲಿ ತಲಾ 21.5 ಮಿ.ಮೀ. ಮಳೆಯಾಗಿದೆ.

ಆನೇಕಲ್ ತಾಲ್ಲೂಕಿನ ಮುಗಳೂರು ಮತ್ತು ನೆಲಮಂಗಲ ತಾಲ್ಲೂಕಿನ ವಿಶ್ವೇಶ್ವರಪುರದಲ್ಲಿ ತಲಾ 21 ಮಿ.ಮೀ. ಮಳೆಯಾಗಿದ್ದರೆ, ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ 20.75 ಮಿ.ಮೀ. ಮಳೆ ದಾಖಲಾಗಿದೆ.

ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಬುರುದಗುಂಟೆಯಲ್ಲಿ ತಲಾ 20.5 ಮಿ.ಮೀ., ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಪೈಲಗುರ್ಕಿಯಲ್ಲಿ 20 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಬಾಣವಾಡಿಯಲ್ಲಿ 19.5 ಮಿ.ಮೀ. ಮಳೆಯಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!