ನಿಧನ ವಾರ್ತೆ
Accident-ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಸೇರಿ 7 ಮಂದಿ ಬೀದಿ ಹೆಣ
ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಏಳು ಮಂದಿ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬಂದ ಎಸ್ಯುವಿ ಕಾರು, ಬೈಕ್ ಮತ್ತು ಕ್ಯಾಂಟರ್ ನಡುವೆ ನಡೆದ ಈ ಭೀಕರ ಡಿಕ್ಕಿಯಿಂದಾಗಿ ಹೆದ್ದಾರಿಯುದ್ದಕ್ಕೂ ರಕ್ತದ ಮಡುವಿನಂತಾಗಿದೆ.
ಬೆಂಗಳೂರು: ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಏಳು ಮಂದಿ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬಂದ ಎಸ್ಯುವಿ ಕಾರು, ಬೈಕ್ ಮತ್ತು ಕ್ಯಾಂಟರ್ ನಡುವೆ ನಡೆದ ಈ ಭೀಕರ ಡಿಕ್ಕಿಯಿಂದಾಗಿ ಹೆದ್ದಾರಿಯುದ್ದಕ್ಕೂ ರಕ್ತದ ಮಡುವಿನಂತಾಗಿದೆ.
ಸಾವಿನ ಮನೆ ಸೇರಿದ ಆಧಾರಸ್ತಂಭ:
ಈ ಅಪಘಾತದಲ್ಲಿ ಅತಿ ಹೆಚ್ಚು ಮರುಕ ಹುಟ್ಟಿಸಿರುವುದು ಬೈಕ್ ಸವಾರ ಗಗನ್ (26) ಸಾವು. ದೇವನಹಳ್ಳಿಯ ದೇವನಾಯಕನಹಳ್ಳಿಯ ನಿವಾಸಿಯಾದ ಗಗನ್, ಅಂಧ ತಾಯಿಗೆ ಏಕೈಕ ಆಸರೆಯಾಗಿದ್ದವರು. ಹಗಲು ಓದಿಕೊಂಡು, ರಾತ್ರಿ ವೇಳೆ ಹಾಪ್ಕಾಮ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಗಗನ್, ರಾತ್ರಿ ಪಾಳಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ತನ್ನದಲ್ಲದ ತಪ್ಪಿಗೆ ಬಲಿಯಾದ ಮಗನನ್ನು ನೆನೆದು ಆತನ ತಾಯಿಯ ಆಕ್ರಂದನ ನೆರೆದವರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ.
ಮೃತರ ವಿವರ:
ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಗಗನ್ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದವರನ್ನು ಅಶ್ವಿನ್, ಅಯಾನ್ ಅಲಿ, ಭರತ್, ಅರ್ಹಾನ್ ಮತ್ತು ಈತನ್ ಜಾರ್ಜ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಕೊತ್ತನೂರು ನಿವಾಸಿಗಳಾಗಿದ್ದು, ಪ್ರಸಿದ್ಧ ಆರ್ವಿ (RV) ಮತ್ತು ಸಿಎಂಆರ್ (CMR) ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಅಯಾನ್ ಅಲಿ ಕೂಡ ತನ್ನ ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದನು.
ಅಪಘಾತ ನಡೆದಿದ್ದು ಹೇಗೆ?:
ಹೊಸಕೋಟೆಯಿಂದ ದೇವನಹಳ್ಳಿ ಕಡೆಗೆ ಅತಿ ವೇಗವಾಗಿ ಚಲಿಸುತ್ತಿದ್ದ ಎಕ್ಸ್ಯುವಿ (XUV) ಕಾರು ಮೊದಲು ಗಗನ್ ಚಲಾಯಿಸುತ್ತಿದ್ದ ಬೈಕ್ಗೆ ಗುದ್ದಿದೆ. ಬಳಿಕ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಲಾರಿಗೆ ಜೋರಾಗಿ ಅಪ್ಪಳಿಸಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಳಗಿದ್ದವರು ಹೊರಬರಲಾಗದ ಸ್ಥಿತಿಯಲ್ಲಿದ್ದರು.
ಪೊಲೀಸ್ ತನಿಖೆ:
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದ್ದು, ಅತಿ ವೇಗ ಮತ್ತು ಅಜಾಗರೂಕ ಚಾಲನೆಯೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಭವಿಷ್ಯದ ಕನಸುಗಳನ್ನು ಹೊಂದಿದ್ದ ಏಳು ಮಂದಿ ಯುವಕರು ಅಕಾಲಿಕವಾಗಿ ಸಾವನ್ನಪ್ಪಿರುವುದು ನಗರದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.
ನಿಧನ ವಾರ್ತೆ
One-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್ಐಆರ್ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
-
ಸ್ಥಳೀಯ22 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ15 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು15 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್21 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್17 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು16 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ15 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















