ಬಿಗ್ ನ್ಯೂಸ್
Legacy Homes-ಪುತ್ತೂರು: ಲೆಗಸಿ ಹೋಮ್ಸ್ನಿಂದ ‘ಬಂಪರ್ ಸ್ಕೀಂ ಸೀಸನ್-01ʼ ಉಳಿತಾಯ ಯೋಜನೆ; ಹ್ಯುಂಡೈ ಎಕ್ಸ್ಟರ್ ಕಾರು ಗೆಲ್ಲುವ ಅದೃಷ್ಟ..!
ಪುತ್ತೂರಿನ ನೆಹರು ನಗರದ ಮುಖ್ಯ ರಸ್ತೆಯಲ್ಲಿರುವ ಖ್ಯಾತ ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ಹಾಗೂ ಗೃಹೋಪಯೋಗಿ ವಸ್ತುಗಳ ಮಳಿಗೆ ‘ಲೆಗಸಿ ಹೋಮ್ಸ್’ (Legacy Homes) ತನ್ನ ಗ್ರಾಹಕರಿಗಾಗಿ ಅತ್ಯಂತ ಆಕರ್ಷಕವಾದ “ಬಂಪರ್ ಸ್ಕೀಂ ಸೀಸನ್ – 01” ಎಂಬ ವಿಶೇಷ ಉಳಿತಾಯ ಯೋಜನೆಯನ್ನು ಘೋಷಿಸಿದೆ.
ಪುತ್ತೂರು: ಇಲ್ಲಿನ ನೆಹರು ನಗರದ ಮುಖ್ಯ ರಸ್ತೆಯಲ್ಲಿರುವ ಖ್ಯಾತ ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ಹಾಗೂ ಗೃಹೋಪಯೋಗಿ ವಸ್ತುಗಳ ಮಳಿಗೆ ‘ಲೆಗಸಿ ಹೋಮ್ಸ್’ (Legacy Homes) ತನ್ನ ಗ್ರಾಹಕರಿಗಾಗಿ ಅತ್ಯಂತ ಆಕರ್ಷಕವಾದ “ಬಂಪರ್ ಸ್ಕೀಂ ಸೀಸನ್ – 01” ಎಂಬ ವಿಶೇಷ ಉಳಿತಾಯ ಯೋಜನೆಯನ್ನು ಘೋಷಿಸಿದೆ.
ಸಾಮಾನ್ಯ ಜನರಿಗೂ ಹೊರೆಯಾಗದಂತೆ ತಿಂಗಳಿಗೆ ಕೇವಲ ₹1,000 ಮೀಸಲಿಡುವ ಮೂಲಕ ಈ ಯೋಜನೆಯಲ್ಲಿ ಪಾಲ್ಗೊಳ್ಳಬಹುದು. ಒಟ್ಟು 24 ತಿಂಗಳ ಕಂತುಗಳನ್ನು ಹೊಂದಿರುವ ಈ ಯೋಜನೆಯು 2026ರ ಏಪ್ರಿಲ್ 5ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.
ಈ ಯೋಜನೆಯ 24 ಲಕ್ಕಿ ಡ್ರಾಗಳಲ್ಲಿ ಭಾಗವಹಿಸುವ ಮೂಲಕ ಗ್ರಾಹಕರು ಹ್ಯುಂಡೈ ಎಕ್ಸ್ಟರ್ (Hyundai Exter) ಕಾರು ಗೆಲ್ಲುವ ಅವಕಾಶ ಹೊಂದಿದ್ದಾರೆ.

ಬಹುಮಾನಗಳ ವಿವರ:
1ನೇ ಡ್ರಾ: ಬಜಾಜ್ Pulsar ಬೈಕ್
2ನೇ ಡ್ರಾ: ₹1 ಲಕ್ಷ ಮೌಲ್ಯದ ಚಿನ್ನದ ಸರ
3ನೇ ಡ್ರಾ: ಸಿಂಗಲ್ ಡೋರ್ ಫ್ರಿಡ್ಜ್
4ನೇ ಡ್ರಾ: ವುಡ್ ಕಾಟ್ ವಿದ್ ಬೆಡ್ (6.25X5)
5ನೇ ಡ್ರಾ: ಕಾರ್ನರ್ ಸೋಫಾ ಸೆಟ್ ಮತ್ತು ಟಿಪಾಯಿ
6ನೇ ಡ್ರಾ: ಡೈನಿಂಗ್ ಟೇಬಲ್ ಸೆಟ್
7ನೇ ಡ್ರಾ: 43 ಇಂಚಿನ ಸ್ಮಾರ್ಟ್ ಟಿವಿ
8ನೇ ಡ್ರಾ: ₹30,000 ಮೌಲ್ಯದ ಚಿನ್ನದ ಉಂಗುರ
9ನೇ ಡ್ರಾ: ವಾಷಿಂಗ್ ಮೆಷಿನ್
10ನೇ ಡ್ರಾ: ಇನ್ವರ್ಟರ್ 160 AH
11ನೇ ಡ್ರಾ: 3 ಡೋರ್ ಬೆಡ್ರೂಮ್ ಸೆಟ್ ಮತ್ತು ಬೆಡ್
12ನೇ ಡ್ರಾ: ಸುಜುಕಿ ಎಕ್ಸೆಸ್ ಸ್ಕೂಟರ್
13ನೇ ಡ್ರಾ: ಕಿಚನ್ ಸೆಟ್
14ನೇ ಡ್ರಾ: ₹50,000 ಮೌಲ್ಯದ ಚಿನ್ನದ ನಾಣ್ಯ
15ನೇ ಡ್ರಾ: 4 ಡೋರ್ ಬೆಡ್ರೂಮ್ ಸೆಟ್ ಮತ್ತು ಬೆಡ್
16ನೇ ಡ್ರಾ: 2 ಡೋರ್ ಫ್ರಿಡ್ಜ್
17ನೇ ಡ್ರಾ: ₹30,000 ಮೌಲ್ಯದ ಮೊಬೈಲ್ ಫೋನ್
18ನೇ ಡ್ರಾ: 4 ಡೋರ್ ಬೆಡ್ರೂಮ್ ಸೆಟ್ ಯುವಿ ಮತ್ತು ಬೆಡ್
19ನೇ ಡ್ರಾ: 1 ಟನ್ ಎಸಿ (AC)
20ನೇ ಡ್ರಾ: ₹50,000 ನಗದು ಬಹುಮಾನ
21ನೇ ಡ್ರಾ: ₹1 ಲಕ್ಷ ಮೌಲ್ಯದ ಚಿನ್ನದ ಸರ
22ನೇ ಡ್ರಾ: ಐಫೋನ್ 17 ಪ್ರೊ ಮ್ಯಾಕ್ಸ್
23ನೇ ಡ್ರಾ: ಹೋಂಡಾ ಶೈನ್ ಬೈಕ್
24ನೇ ಡ್ರಾ (ಬಂಪರ್): ಹ್ಯುಂಡೈ ಎಕ್ಸ್ಟರ್ ಕಾರು (Hyundai Exter Car)
ಪ್ರತೀ ಡ್ರಾ ದಲ್ಲಿಯೂ ಅಚ್ಚರಿಯ ಉಡುಗೊರೆಗಳು ಸಹ ಗ್ರಾಹಕರಿಗೆ ಲಭ್ಯವಿರಲಿದೆ.

ಪ್ರೋತ್ಸಾಹಕ ಬಹುಮಾನಗಳು :
24,000 WORTH 3 ಡೋರ್ ಬೆಡ್ರೂಮ್ ಸೆಟ್, ಸೋಫಾ ಸೆಟ್ ಹಾಗೂ ಟಿಪಾಯಿ, ವುಡ್ ಕಟ್ ವಿದ್ ಸ್ಪ್ರಿಂಗ್ ಬೆಡ್, ವುಡ್ ಡೈನಿಂಗ್ ಟೇಬಲ್ ಸೆಟ್, 2 ಡೋರ್ ಫ್ರಿಡ್ಜ್, 2 ಡೋರ್ ಟಾಪ್ ಲೋಡ್ ವಾಷಿಂಗ್ ಮೆಷಿನ್ (8 ಕೆ.ಜಿ.), 2 ಇನ್ವರ್ಟರ್ 160 ಎಎಚ್, 24,000 WORTH COMBO (10 ಲೀ. ಕುಕ್ಕರ್ + 3 ಪೀಸ್ ಕುಕ್ವೇರ್ ಸೆಟ್), ಸುಜಾತ ಸುಪರ್ ಮಿಕ್ಸರ್ ಗ್ರೈಂಡರ್, ಎಕ್ಸಾಸ್ಟ್ ಚಿಮಿನಿ, ಸೂರ್ಯ ಬ್ರಾಂಡ್ 3 ಬರ್ನರ್ ಗ್ಯಾಸ್ ಸ್ಟವ್.
ಯಾವುದೇ ಬಹುಮಾನ ಗೆಲ್ಲದವರಿಗೂ ಲಾಭ:
ವಿಶೇಷವೆಂದರೆ, ಯಾವುದೇ ಲಕ್ಕಿ ಡ್ರಾದಲ್ಲಿ ಬಹುಮಾನ ಗೆಲ್ಲದ ಸದಸ್ಯರಿಗೂ ಯೋಜನೆಯ ಕೊನೆಯಲ್ಲಿ ಅವರು ಪಾವತಿಸಿದ ಒಟ್ಟು ಮೊತ್ತಕ್ಕೆ ಸಮನಾದ (₹24,000 ಮೌಲ್ಯದ) ಗೃಹೋಪಯೋಗಿ ವಸ್ತುಗಳನ್ನು ನೀಡಲಾಗುತ್ತದೆ. ಇದರಲ್ಲಿ ಬೆಡ್ ರೂಮ್ ಸೆಟ್, ಸೋಫಾ ಸೆಟ್, ಇನ್ವರ್ಟರ್ ಅಥವಾ ಕಿಚನ್ ಕಾಂಬೋ ಸೆಟ್ಗಳನ್ನು ಆಯ್ದುಕೊಳ್ಳುವ ಅವಕಾಶವಿದೆ.
ಪಾರದರ್ಶಕ ಲಕ್ಕಿ ಡ್ರಾ:
ಪ್ರತಿ ತಿಂಗಳ ಎರಡನೇ ಭಾನುವಾರ ಸಂಜೆ 4 ಗಂಟೆಗೆ ಸಂಸ್ಥೆಯ ಕಚೇರಿಯಲ್ಲಿ ಗ್ರಾಹಕರ ಸಮ್ಮುಖದಲ್ಲೇ ಡ್ರಾ ನಡೆಸಲಾಗುವುದು. ಇದರ ನೇರಪ್ರಸಾರವನ್ನು ಸಂಸ್ಥೆಯ ಯುಟ್ಯೂಬ್ (Legacy Home Furnitures and Electronics) ಚಾನಲ್ನಲ್ಲಿಯೂ ವೀಕ್ಷಿಸಬಹುದಾಗಿದೆ. ಅಲ್ಲದೇ ಪತ್ರಿಕೆ ಮತ್ತು ವೆಬ್ ನ್ಯೂಸ್ಗಳಲ್ಲಿ ಪ್ರಕಟಿಸಲಾಗುವುದು.
ಮಾಹಿತಿಗಾಗಿ ಸಂಪರ್ಕಿಸಿ:
ಹೆಚ್ಚಿನ ಮಾಹಿತಿಗಾಗಿ ಹಾಗೂ ಸದಸ್ಯತ್ವ ನೋಂದಣಿಗಾಗಿ ನೆಹರು ನಗರದ ಲೆಗಸಿ ಹೋಮ್ಸ್ ಮಳಿಗೆಯನ್ನು ಅಥವಾ ಈ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ:
9945897244 | 9481766243 | 81976 87391 | 9108149233
ಬಿಗ್ ನ್ಯೂಸ್
G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.
ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ9 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ7 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ9 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized8 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಬಿಗ್ ನ್ಯೂಸ್9 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ನಿಧನ ವಾರ್ತೆ8 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಮಂಗಳೂರು8 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
-
ಕಾರ್ಯಕ್ರಮಗಳು2 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ


















