Connect with us

Uncategorized

ದ.ಕ ಜಿಲ್ಲೆಯ ಐವರು ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿಯಲ್ಲಿ ಸೆಕೆಂಡ್‌ Rank – ಇವರ ಓದಿನ ಕ್ರಮ, ಭವಿಷ್ಯದ ಕನಸುಗಳ ಬಗ್ಗೆ ಇಲ್ಲಿದೆ ವಿವರ ದ ದ.ಕ ಜಿಲ್ಲೆಯ ಐವರು ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿಯಲ್ಲಿ ಸೆಕೆಂಡ್‌ Rank – ಇವರ ಓದಿನ ಕ್ರಮ, ಭವಿಷ್ಯದ ಕನಸುಗಳ ಬಗ್ಗೆ ಇಲ್ಲಿದೆ ವಿವರ .ಕ ಜಿಲ್ಲೆಯ ಐವರು ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿಯಲ್ಲಿ ಸೆಕೆಂಡ್‌ Rank – ಇವರ ಓದಿನ ಕ್ರಮ, ಭವಿಷ್ಯದ ಕನಸುಗಳ ಬಗ್ಗೆ ಇಲ್ಲಿದೆ ವಿವರ

Published

on

Ad Widget

Ad Widget

Ad Widget

Ad Widget

ಮಂಗಳೂರು: 2021–22ನೇ ಸಾಲಿನ ದ್ವಿತೀಯ ಪಿ.ಯು. ವಾರ್ಷಿಕ ಪರೀಕ್ಷೆಯ ಫಲಿತಾಂಶ ಜೂ.18ರಂದು ಪ್ರಕಟವಾಗಿದ್ದು ದಕ್ಷಿಣ ಜಿಲ್ಲೆ ಜಿಲ್ಲವಾರು ಪಟ್ಟಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮೆರೆದಿದೆ.   ಈ ಸಾಲಿನಲ್ಲಿ ‘ದಕ್ಷಿಣ ಕನ್ನಡ’ ಜಿಲ್ಲೆಯಲ್ಲಿ ಪರೀಕ್ಷೆ ಬರೆದ  ಶೇ. 90.71  ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.. ಕಳೆದ ವರ್ಷ ಕೂಡ ದಕ್ಷಿಣ ಕನ್ನಡ ಜಿಲ್ಲೆ ಶೇ. 88.02 ರಷ್ಟು ಫಲಿತಾಂಶ ಗಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿತ್ತು‌. ಈ ಬಾರಿ ಶೇ.2.69 ಹೆಚ್ಚುವರಿ ಫಲಿತಾಂಶ ಪಡೆಯುವ ಮೂಲಕ  ತನ್ನ ಸಾಧನೆಯನ್ನು ಉತ್ತಮ ಪಡಿಸಿಕೊಂಡಿದೆ

Ad Widget

Ad Widget

Ad Widget

Ad Widget

ಅಲ್ಲದೇ  ದಕ್ಷಿಣ ಕನ್ನಡ ಜಿಲ್ಲೆಯ ಐವರು ವಿದ್ಯಾರ್ಥಿಗಳು ವಿದ್ಯಾರ್ಥಿಗಳು 2021–22ನೇ ಸಾಲಿನ ದ್ವಿತೀಯ ಪಿ.ಯು. ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ ಮೂವರು ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿಜ್ಞಾನ ವಿಭಾಗದಲ್ಲಿ ಸೇಂಟ್‌ ಅಲೋಷಿಯಸ್‌ ಪಿ.ಯು ಕಾಲೇಜಿನ ಇಲ್‌ಹಮ್‌ ಮತ್ತು ಮೂಡುಬಿದಿರೆ ಆಳ್ವಾಸ್‌ ಪಿ.ಯು. ಕಾಲೇಜಿನ ಶ್ರೀಕೃಷ್ಣ ಪೆಜತ್ತಾಯ ಪಿ.ಎಸ್‌. ಅವರು 600ರಲ್ಲಿ 597 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮೂಡುಬಿದಿರೆಯ ಆಳ್ವಾಸ್‌ ಪಿ.ಯು. ಕಾಲೇಜಿನ ಸಮರ್ಥ್‌ ಜೋಷಿ, ಮಂಗಳೂರು ಕೊಡಿಯಾಲ್‌ಬೈಲಿನ ಸೇಂಟ್ ಅಲೋಷಿಯಸ್‌ ಪಿ.ಯು. ಕಾಲೇಜಿನ ಅನಿಶಾ ಮಲ್ಯ ಹಾಗೂ ಕೊಡಿಯಾಲ್‌ಬೈಲಿನ ಕೆನರಾ ಪಿ.ಯು. ಕಾಲೇಜಿನ ಆಚಲ್‌ ಉಳ್ಳಾಲ್‌ ಅವರು ವಾಣಿಜ್ಯ ವಿಭಾಗದಲ್ಲಿ 600ರಲ್ಲಿ 595 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

Ad Widget

Ad Widget <> Ad Widget

ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಇಲ್‌ಹಮ್‌ ಅವರು ಮಹಮ್ಮದ್‌ ರಫಿಕ್‌ ದಾವೂದ್‌ ಸಾಹೇಬ್ ಮತ್ತು ಮೊಯಿಜತುಲ್‌ ಕುಬ್ರಾ ದಂಪತಿಯ ಪುತ್ರಿ. ಮಹಮ್ಮದ್ ಅವರು ಚೈನ್‌ ಸ್ಟೋರ್‌ನಲ್ಲಿ ವ್ಯವಸ್ಥಾಪಕರು.

ಕ್ಲಿನಿಕಲ್‌ ಸೈಕಾಲಜಿ ಮುಂದಿನ ಗುರಿ : ಇಲ್‌ಹಮ್‌

Ad Widget

Ad Widget

‘ನಾನು ಯಾವುದೇ Rank  ನಿರೀಕ್ಷೆ ಮಾಡಿರಲಿಲ್ಲ. ದ್ವಿತೀಯ Rank  ಬಂದಿದ್ದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಬಿ.ಎಸ್ಸಿ ಕ್ಲಿನಿಕಲ್‌ ಸೈಕಾಲಜಿ ವ್ಯಾಸಂಗ ಮಾಡಬೇಕು ಎಂಬುದು ನನ್ನ ಗುರಿ. ನಾನು ಹತ್ತನೇ ತರಗತಿಯಲ್ಲಿರುವಾಗಲೇ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದು ಇಲ್‌ಹಮ್‌  ತಿಳಿಸಿದರು.‌

‘ವೈದ್ಯನಾಗುವೆ :  ಪೆಜತ್ತಾಯ

‘Rank  ಬರುವ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. 590ಕ್ಕಿಂತ ಹೆಚ್ಚು ಅಂಕ ಬರಬಹುದು ಎಂದು ಊಹಿಸಿದ್ದೆ. ವೈದ್ಯನಾಗಬೇಕು ಎಂಬುದು ನನ್ನಾಸೆ. ನೀಟ್‌ಗೆ ತಯಾರಿ ನಡೆಸುತ್ತಿದ್ದೇನೆ. ಆಳ್ವಾಸ್‌ ಕಾಲೇಜಿನಲ್ಲಿ ಕಲಿಕಾ ವಾತಾವರಣ ಚೆನ್ನಾಗಿದೆ. ಪಠ್ಯ ವಿಷಯಗಳಿಗೆ ಸಂಬಂಧಿಸಿದ ಸಂದೇಹ ನೀಗಿಸಲು ಗುರುಗಳು ನೆರವಾಗುತ್ತಿದ್ದರು. ಪರೀಕ್ಷೆಗಳನ್ನು ನಡೆಸಿ ನಾವು ಏನು ತಪ್ಪು ಮಾಡುತ್ತಿದ್ದೇವೆ ಎಂಬುದನ್ನು ಮನವರಿಕೆ ಮಾಡಿಸಿ ತಿದ್ದುತ್ತಿದ್ದರು’ ಎಂದು  ಶ್ರಿಕೃಷ್ಣ ಪೆಜತ್ತಾಯ ತಿಳಿಸಿದರು.

ಶ್ರೀಕೃಷ್ಣ ಪೆಜತ್ತಾಯ ಅವರು ಸತೀಶ್‌ ಕುಮಾರ್‌ ‍ಪಿ.ಆರ್‌. ಮತ್ತು ಶ್ರೀವಿದ್ಯಾ ಪಿ.ಎಸ್‌ ದಂಪತಿಯ ಪುತ್ರ. ಅವರ ತಂದೆ ಬೆಂಗೂರಿನಲ್ಲಿ ಕೇಟರಿಂಗ್‌ ಉದ್ಯಮಿ.

ಕಾರ್ಪೊರೇಟ್‌ ಲಾ  ಓದುವೆ : ಆಚಲ್‌

‘ನಾನು ಯಾವುದೇ ಟ್ಯೂಷನ್‌ಗೆ ಹೋಗಿಲ್ಲ. ಕೆನರಾ ಪಿ.ಯು. ಕಾಲೇಜಿನ ಶಿಕ್ಷಕ ವರ್ಗ ತುಂಬಾ ಉತ್ತಮ ಬೆಂಬಲ ನೀಡಿದ್ದರಿಂದ ಇಷ್ಟು ಅಂಕ ಗಳಿಸಲು ಸಾಧ್ಯವಾಗಿದೆ. ಉತ್ತಮ ಅಂಕ ಬರುವ ನಿರೀಕ್ಷೆ ಇತ್ತು. ನನಗೆ ಕಾರ್ಪೊರೇಟ್‌ ಲಾ ಕಲಿಯುವಾಸೆ. ಬಿ.ಕಾಂ ಎಲ್ಎಲ್‌ಬಿ ವ್ಯಾಸಂಗ ಮಂದುವರಿಸುತ್ತೇನೆ’ ಎಂದು ಸುರತ್ಕಲ್‌ನ ಆಚಲ್‌ ಉಳ್ಳಾಲ್‌ ತಿಳಿಸಿದರು.

ಆಚಲ್‌ ಅವರು ಪ್ರವೀಣ್‌ ಉಳ್ಳಾಲ್‌ ಮತ್ತು ಅರ್ಚನಾ ದಂಪತಿಯ ಪುತ್ರ. ಆಚಲ್‌ ಅವರ ತಾಯಿ ಮೂಲ್ಕಿ ನಾರಾಯಣಗುರು ಪದವಿ ಕಾಲೇಜಿನಲ್ಲಿ ಭೌತವಿಜ್ಞಾನ ಉಪನ್ಯಾಸಕಿ. ತಂದೆ ಪ್ರವಿಣ್‌ ಅವರು ಕಂಪನಿಯೊಂದರಲ್ಲಿ ಸೇಲ್ಸ್‌ ಮತ್ತು ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾಗಿದ್ದಾರೆ.

‘ ಮೊದಲು ಬಿ.ಕಾಂ ಬಳಿಕ ಭವಿಷ್ಯದ ಯೋಚಿಸುತ್ತೇನೆ : ಮಲ್ಯ

Rank ಬರುತ್ತದೆ ಎಂದು ಭಾವಿಸಿಯೇ ಇರಲಿಲ್ಲ. ರಾಜ್ಯಕ್ಕೆ ದ್ವಿತೀಯ Rank  ಬಂದಿದ್ದು ತುಂಭಾ ಖುಷಿ ಕೊಟ್ಟಿದೆ. ಅಲೋಷಿಯಸ್‌ ಕಾಲೇಜಿನಲ್ಲಿ ಓದಿಗೆ ಉತ್ತಮ ಸಹಕಾರ ಸಿಕ್ಕಿದ್ದರಿಂದ  ಇಷ್ಟು ಉತ್ತಮ ಅಂಕ ಗಳಿಸಲು ಸಾಧ್ಯವಾಗಿದೆ. ನಾನು ಭವಿಷ್ಯದ ಬಗ್ಗೆ ನಿರ್ಧರಿಸಿಲ್ಲ. ಬಿ.ಕಾಂ ವ್ಯಾಸಂಗ ಮಾಡುತ್ತೇನೆ. ಮುಂದೇನಾಗಬೇಕೆಂದು ನಂತರ ಯೋಚಿಸುತ್ತೇನೆ‘ ಎಂದು ಅಶೋಕನಗರದ ಅನಿಶಾ ಮಲ್ಯ   ತಿಳಿಸಿದರು.

ಅನಿಶಾ ಮಲ್ಯ ಅವರು ಎಂ.ಪಾಂಡುರಂಗ ಮಲ್ಯ ಮತ್ತು ಶಾಂತಲಾ ಮಲ್ಯ ದಂಪತಿಯ ಪುತ್ರಿ. ಅವರ ತಂದೆ ಸಾಫ್ಟ್‌ವೇರ್‌ ಉದ್ಯಮಿಯಾಗಿದ್ದಾರೆ.

ದತ್ತು ವಿದ್ಯಾರ್ಥಿಯಾಗಿ ಕನ್ನಡ ಮಾಧ್ಯಮದಲ್ಲಿ ಕಲಿ‌ಯುತ್ತಿದ್ದೇನೆ : ಸಮರ್ಥ್

‘ಲೆಕ್ಕಪರಿಶೋಧಕ (ಸಿ.ಎ) ಆಗಬೇಕು ಎಂಬುದು ನನ್ನ ಕನಸು. ನಿತ್ಯ ಐದು ಗಂಟೆ ಓದುತ್ತಿದ್ದೆ. ಆಳ್ವಾಸ್‌ ಪಿ.ಯು. ಕಾಲೇಜಿನ ಗುರುಗಳು ಹಾಗೂ ಇಲ್ಲಿನ ವಿದ್ಯಾರ್ಥಿನಿಲಯದ ವಾರ್ಡನ್‌ ಕಲಿಕೆಗೆ ತುಂಬಾ ನೆರವಾಗಿದ್ದಾರೆ. 8ನೇ ತರಗತಿಯಿಂದ ಆಳ್ವಾಸ್‌ ವಿದ್ಯಾಸಂಸ್ಥೆಯಲ್ಲಿ ದತ್ತು ವಿದ್ಯಾರ್ಥಿಯಾಗಿ ಕನ್ನಡ ಮಾಧ್ಯಮದಲ್ಲಿ ಕಲಿ‌ಯುತ್ತಿದ್ದೇನೆ. ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದಿದ್ದರಿಂದ ಪಿ.ಯು.ಸಿಗೂ ಆಳ್ವಾಸ್‌ ವಿದ್ಯಾಸಂಸ್ಥೆ ನನ್ನನ್ನು ದತ್ತು ಪಡೆದು ವಿದ್ಯಾಭ್ಯಾಸಕ್ಕೆ ನೆರವಾಗಿದೆ’ ಎಂದು ಸಮರ್ಥ್ ತಿಳಿಸಿದರು.

ಸಮರ್ಥ್‌ ಅವರು ವಿಶ್ವನಾಥ ಜೋಷಿ ಮತ್ತು ಜಯಾ ಜೋಷಿ ದಂಪತಿಯ ಪುತ್ರ. ತಂದೆ ವಿಶ್ವನಾಥ ಜೋಷಿ ಶಿರ್ಸಿ ತಾಲ್ಲೂಕಿನಲ್ಲಿ ಕೃಷಿಕರಾಗಿದ್ದಾರೆ.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!