ಅಪರಾಧ
Mangalore-ಮಂಗಳೂರು : ಇನ್ಸ್ಟಾದಲ್ಲಿ ಬೇಸರದ ರೀಲ್ಸ್, ಕಾಮೆಂಟ್ ಬಾಕ್ಸ್ನಲ್ಲಿ ಹುಡುಗಿಯರಿಗೆ ಗಾಳ – ವಿದೇಶದಲ್ಲಿ ಕೂತು ಹತ್ತಾರು ಹುಡುಗಿಯರ ಬದುಕು ಹಾಳು ಮಾಡಿದ ಪತಿಯ ವಿರುದ್ಧ ಸಿಡಿದೆದ್ದ ಪತ್ನಿ
ಸಾಮಾಜಿಕ ಜಾಲತಾಣಗಳಲ್ಲಿ ದುಃಖದ ಹಾಡುಗಳಿಗೆ ರೀಲ್ಸ್ ಮಾಡಿ, ಹುಡುಗಿಯರ ಕರುಣೆ ಗಿಟ್ಟಿಸಿ, ಬಳಿಕ ಪ್ರೀತಿಯ ನಾಟಕವಾಡಿ ಹಣ ಪೀಕುತ್ತಿದ್ದ ‘ಕಿಲಾಡಿ’ ಪತಿಯ ಬಣ್ಣವನ್ನು ಪತ್ನಿಯೇ ಬಯಲು ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಜಪೆ ನಿವಾಸಿ ಮನೀಶ್ ಎಂಬಾತನ ವಿರುದ್ಧ ಆತನ ಪತ್ನಿ ಪ್ರೀತಿ ಈಗ ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದುಃಖದ ಹಾಡುಗಳಿಗೆ ರೀಲ್ಸ್ ಮಾಡಿ, ಹುಡುಗಿಯರ ಕರುಣೆ ಗಿಟ್ಟಿಸಿ, ಬಳಿಕ ಪ್ರೀತಿಯ ನಾಟಕವಾಡಿ ಹಣ ಪೀಕುತ್ತಿದ್ದ ‘ಕಿಲಾಡಿ’ ಪತಿಯ ಬಣ್ಣವನ್ನು ಪತ್ನಿಯೇ ಬಯಲು ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಜಪೆ ನಿವಾಸಿ ಮನೀಶ್ ಎಂಬಾತನ ವಿರುದ್ಧ ಆತನ ಪತ್ನಿ ಪ್ರೀತಿ ಈಗ ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ದುಃಖದ ರೀಲ್ಸ್ ನೋಡಿ ಮರುಳಾಗಬೇಡಿ!
ವಿದೇಶದಲ್ಲಿ ಉದ್ಯೋಗದಲ್ಲಿರುವ ಮನೀಶ್, ಇನ್ಸ್ಟಾಗ್ರಾಮ್ ಹಾಗೂ ಟಿಕ್ಟಾಕ್ನಲ್ಲಿ ಸದಾ ವಿರಹದ ಹಾಗೂ ಬೇಸರದ ಹಾಡುಗಳಿಗೆ ರೀಲ್ಸ್ ಮಾಡುತ್ತಿದ್ದ. ಇದನ್ನು ನೋಡಿ ಮರುಗುವ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಈತ, ಅವರೊಂದಿಗೆ ಚಾಟಿಂಗ್ ನಡೆಸಿ ಸಲುಗೆ ಬೆಳೆಸಿಕೊಳ್ಳುತ್ತಿದ್ದ. ಪ್ರಮುಖವಾಗಿ ವಿದೇಶದಲ್ಲಿ ನೆಲೆಸಿರುವ ಕರಾವಳಿ ಮೂಲದ ಹುಡುಗಿಯರು ಹಾಗೂ ಮಂಗಳೂರಿನ ಯುವತಿಯರೇ ಈತನ ಮುಖ್ಯ ಟಾರ್ಗೆಟ್ ಆಗಿದ್ದರು. ಪರಿಚಯವಾದ ಕೆಲವೇ ದಿನಗಳಲ್ಲಿ ಪ್ರೀತಿಯ ನಾಟಕವಾಡಿ ಅವರನ್ನು ಸುತ್ತಾಡಿಸುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮದುವೆಗೆ ಮುನ್ನವೇ ಹೆಣೆದಿದ್ದ ಮಾಸ್ಟರ್ ಪ್ಲಾನ್!
ಪತ್ನಿ ಪ್ರೀತಿಗೂ ಮನೀಶ್ ಪರಿಚಯವಾಗಿದ್ದು ಫೇಸ್ಬುಕ್ ಮೂಲಕ. ಮದುವೆ ನಿಶ್ಚಯವಾದ ಬಳಿಕ ಈತ ತನ್ನ ಅಸಲಿ ಆಟ ಶುರು ಮಾಡಿದ್ದ. ಮದುವೆಗೆ ಕೇವಲ ಮೂರು ದಿನ ಬಾಕಿ ಇರುವಾಗ “ನನ್ನ ಹತ್ತಿರ ಹಣವಿಲ್ಲ” ಎಂದು ಹೇಳಿ ಆತ್ಮಹತ್ಯೆಯ ನಾಟಕವಾಡಿದ್ದ. ಮಗಳ ಜೀವನ ಹಾಳಾಗಬಾರದೆಂದು ಪ್ರೀತಿಯ ಪೋಷಕರೇ ಮದುವೆಯ ಸಂಪೂರ್ಣ ಖರ್ಚನ್ನು ಭರಿಸಿ ಇವರ ಮದುವೆ ಮಾಡಿಸಿದ್ದರು. ಮದುವೆಯಾದ ಮೇಲೂ ಪತ್ನಿ ಪ್ರೀತಿ, ಮನೀಶ್ಗೆ ವಿದೇಶದಲ್ಲಿ ಕೆಲಸ ಕೊಡಿಸಲು ಬರೋಬ್ಬರಿ 2 ಲಕ್ಷ ರೂಪಾಯಿ ನೀಡಿ ಸಹಾಯ ಮಾಡಿದ್ದರು.
ದುಬೈನಲ್ಲಿ ಕೆಲಸ, ಬಹರೇನ್ ಸುಂದರಿಯೊಂದಿಗೆ ಲವ್ವಿಡವ್ವಿ!
ಪತ್ನಿಯ ಹಣದಲ್ಲಿ ದುಬೈಗೆ ಹಾರಿದ ಮನೀಶ್, ಅಲ್ಲಿಗೆ ಹೋದ ಮೇಲೂ ತನ್ನ ಹಳೇ ಚಾಳಿಯನ್ನು ಮುಂದುವರಿಸಿದ್ದ. ಈತ ಬಹರೇನ್ನಲ್ಲಿರುವ ಮಹಿಳೆಯೊಬ್ಬಳ ಜೊತೆ ಸಂಬಂಧ ಬೆಳೆಸಿರುವುದು ಪ್ರೀತಿಗೆ ತಿಳಿಯಿತು. ಇದರಿಂದ ಅನುಮಾನಗೊಂಡ ಪ್ರೀತಿ ತನ್ನ ಪತಿಯ ಇತಿಹಾಸವನ್ನು ಕೆದಕಿದಾಗ ಬೆಚ್ಚಿಬೀಳುವ ಸತ್ಯಗಳು ಹೊರಬಂದಿವೆ.
ಹಣ ಕೇಳಿದರೆ ‘ಬ್ರೈನ್ ಟ್ಯೂಮರ್’ ನಾಟಕ!
ಪ್ರೀತಿ ನಡೆಸಿದ ತನಿಖೆಯಲ್ಲಿ ಮನೀಶ್ ಮದುವೆಗಿಂತ ಮುಂಚೆಯೇ ಹತ್ತಾರು ಯುವತಿಯರಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ. ಆ ಯುವತಿಯರನ್ನು ಸಂಪರ್ಕಿಸಿದಾಗ ಅವರು ಮನೀಶ್ನ ಇನ್ನೊಂದು ಮುಖವನ್ನು ಬಿಚ್ಚಿಟ್ಟಿದ್ದಾರೆ. “ಪ್ರೀತಿಯ ನಾಟಕವಾಡಿ ಹಣ ಪಡೆದ ಬಳಿಕ, ವಾಪಸ್ ಕೇಳಿದರೆ ನನಗೆ ‘ಬ್ರೈನ್ ಟ್ಯೂಮರ್’ ಇದೆ, ನಾನು ಸಾಯುತ್ತೇನೆ ಎಂದು ನಾಟಕವಾಡಿ ಬ್ರೇಕ್ ಅಪ್ ಮಾಡಿಕೊಳ್ಳುತ್ತಿದ್ದ” ಎಂದು ಸಂತ್ರಸ್ತ ಯುವತಿಯರು ನೋವು ತೋಡಿಕೊಂಡಿದ್ದಾರೆ.
ಪತ್ನಿಯ ಕೆಚ್ಚೆದೆಯ ನಿರ್ಧಾರ:
ತನ್ನ ಬದುಕು ಹಾಳಾದಂತೆ ಇನ್ನೊಬ್ಬ ಯುವತಿಯ ಬದುಕು ಹಾಳಾಗಬಾರದು ಎಂದು ನಿರ್ಧರಿಸಿದ ಪ್ರೀತಿ, ಈಗ ಪತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ಇಂತಹ ಮೋಸಗಾರ ಗಂಡ ನನಗೆ ಬೇಡ, ಈತನ ಬಣ್ಣದ ಮಾತುಗಳಿಗೆ ಮರುಳಾಗಿ ಯಾರೂ ಮೋಸ ಹೋಗಬಾರದು” ಎಂದು ಅವರು ಮಾಧ್ಯಮಗಳ ಮುಂದೆ ಹಳಹಳಿಸಿದ್ದಾರೆ.
ಸದ್ಯ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದ ‘ಲವ್’ ಬಗ್ಗೆ ಯುವತಿಯರು ಜಾಗರೂಕರಾಗಿರಬೇಕು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
-
ಮಂಗಳೂರು22 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು22 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ16 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized23 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ21 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು17 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















