Connect with us

ಅಪರಾಧ

Bantwal-ಬಂಟ್ವಾಳ: ಪಾರ್ಕಿಂಗ್ ಕಿರಿಕ್: ಕಳ್ಳತನದ ಆರೋಪ ಹೊರಿಸಿ ಹೊಟೇಲ್‌ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಹಕೀಂ ಕೂರ್ನಡ್ಕ – ದೂರು ದಾಖಲು

Published

on



Ad Widget

Ad Widget

Ad Widget

Ad Widget

ಕಾರು ಪಾರ್ಕಿಂಗ್ ಮಾಡುವ ವಿಚಾರವಾಗಿ ನಡೆದ ಸಣ್ಣ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಹೋಟೆಲ್ ಮ್ಯಾನೇಜರ್ ಒಬ್ಬರ ಮೇಲೆ ಹಲ್ಲೆ ನಡೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಕಾರು ಪಾರ್ಕಿಂಗ್ ಮಾಡುವ ವಿಚಾರವಾಗಿ ನಡೆದ ಸಣ್ಣ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಹೋಟೆಲ್ ಮ್ಯಾನೇಜರ್ ಒಬ್ಬರ ಮೇಲೆ ಹಲ್ಲೆ ನಡೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆಯ ವಿವರ:
ಬಂಟ್ವಾಳ ಕೆಳಗಿನ ಪೇಟೆಯ ನಿವಾಸಿ ಶಬೀಬ್ ರಹಮಾನ್ ಅವರು ಮಿತ್ತಬೈಲ್‌ನಲ್ಲಿರುವ ‘ಫಿಶ್ ಮಾಸ್ಟರ್’ ಹೋಟೆಲ್‌ನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಫೆಬ್ರವರಿ 16ರ ಮಧ್ಯಾಹ್ನ ಸುಮಾರು 1:20ಕ್ಕೆ ಅವರು ಹೋಟೆಲ್‌ಗೆ ಬಂದಾಗ, ಅಲ್ಲಿ ಕಾರು ಪಾರ್ಕ್ ಮಾಡಿದ್ದ ಪುತ್ತೂರು ಕೂರ್ನಡ್ಕದ ಹಕೀಂ ಎಂಬವರಿಗೆ ತಮ್ಮ ಕಾರನ್ನು ಸ್ವಲ್ಪ ಬದಿಗೆ ನಿಲ್ಲಿಸುವಂತೆ ವಿನಂತಿಸಿದ್ದರು.

Ad Widget

Ad Widget <> Ad Widget

ಇಲ್ಲಸಲ್ಲದ ಆರೋಪ, ಹಲ್ಲೆ:
ಶಬೀಬ್ ಅವರ ಮಾತಿನಿಂದ ಕೆರಳಿದ ಹಕೀಂ, “ನನ್ನ ಕಾರಿನಲ್ಲಿ ಚೆಕ್ ಬುಕ್ ಮತ್ತು ಪ್ರಮುಖ ದಾಖಲೆಗಳಿವೆ, ನೀನು ಅದನ್ನು ಕದಿಯಲು ಬಂದಿದ್ದೀಯಾ? ನೀನು ಕುಡಿದು ಬಂದಿದ್ದೀಯಾ?” ಎಂದು ಕೂಗಾಡಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಹೋಟೆಲ್‌ನಲ್ಲಿದ್ದ ಗ್ರಾಹಕರ ಮುಂದೆಯೇ ಶಬೀಬ್ ಅವರ ಮೇಲೆ ಹಲ್ಲೆ ನಡೆಸಿ ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.



Ad Widget

ಪೊಲೀಸ್ ದೂರು:
ತನ್ನ ಮೇಲೆ ಹಲ್ಲೆ ನಡೆಸಿ, ಇಲ್ಲಸಲ್ಲದ ಆರೋಪ ಹೊರಿಸಿ ಸಾರ್ವಜನಿಕವಾಗಿ ಅವಮಾನಿಸಿದ ಹಕೀಂ ಕೂರ್ನಡ್ಕ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಬೀಬ್ ರಹಮಾನ್ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Click to comment

Leave a Reply

ಅಂತರ ರಾಜ್ಯ

Honeytrap-ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್: ರಹಸ್ಯ ಮಾಹಿತಿ ಸೋರಿಕೆ ಮಾಡಿದ ನೌಕಾಪಡೆ ಸಿಬ್ಬಂದಿ ಬಂಧನ

Published

on



Ad Widget

Ad Widget

Ad Widget

Ad Widget

ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಕೊಯಮತ್ತೂರು: ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ (31) ಎಂದು ಗುರುತಿಸಲಾಗಿದೆ. 2014ರಲ್ಲಿ ನೌಕಾಪಡೆಗೆ ಸೇರ್ಪಡೆಯಾಗಿದ್ದ ಮುಖರ್ಜಿ, ವಿಶಾಖಪಟ್ಟಣದಲ್ಲಿರುವ ಈಸ್ಟರ್ನ್ ನೇವಲ್ ಕಮಾಂಡ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಕೆಲವು ತಿಂಗಳ ಹಿಂದೆ ಪಾಕಿಸ್ತಾನದ ಗುಪ್ತಚರ ಏಜೆಂಟ್ ಎಂದು ಶಂಕಿಸಲಾಗಿರುವ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಮುಖರ್ಜಿಯನ್ನು ಸಂಪರ್ಕಿಸಿದ್ದಳು. ಬಳಿಕ ಆಕೆಯೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದ ಆತ, ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಆಕೆಗೆ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.



Ad Widget

ಈ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಹನಿಟ್ರ್ಯಾಪ್ ಮೂಲಕ ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Ad Widget

ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಆರೋಪ: ಅಸ್ಸಾಂನಲ್ಲಿ ಇಬ್ಬರ ಬಂಧನ

ಗುವಾಹಟಿ: ಪಾಕಿಸ್ತಾನಕ್ಕೆ ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಬ್ಬರು ನಿವೃತ್ತ ಯೋಧ ಎಂದು ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ, ಬಂಧಿತರನ್ನು ಶೀಘ್ರದಲ್ಲೇ ಕೇಂದ್ರ ತನಿಖಾ ಸಂಸ್ಥೆಗಳ ವಶಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ

Published

on



Ad Widget

Ad Widget

Ad Widget

Ad Widget

ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ದೊರೆತ ಮಾಹಿತಿಯ ಆಧಾರದ ಮೇಲೆ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಶ್ಯದ ಮಯ್ಯ ಫಾರ್ಮ್ಸ್ನಿಂದ ಮುಂಜಾನೆ ಸುಮಾರು 3 ಗಂಟೆಗೆ ಬುಳೇರಿಕಟ್ಟೆ ಮಾರ್ಗವಾಗಿ ಗೋವುಗಳನ್ನು ಕೇರಳದತ್ತ ಸಾಗಿಸಲಾಗುತ್ತಿತ್ತು. ಗೋವುಗಳ ಕೈಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.



Ad Widget

ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

Ad Widget

Ad Widget

ಈ ಸಂಬಂಧ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading