ಮಂಗಳೂರು
Sumanth murder case-ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು
ಮಂಗಳೂರು: ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ, ತಕ್ಷಣ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಬಾಲಕನ ಪೋಷಕರು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.
ಮಂಗಳೂರು: ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ, ತಕ್ಷಣ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಬಾಲಕನ ಪೋಷಕರು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.
ಫೆಬ್ರವರಿ 17ರಂದು ಮಂಗಳೂರಿನಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು, ಗೇರುಕಟ್ಟೆ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಸುಮಂತ್ನ ಸಾವು ಸಂಶಯಾಸ್ಪದವಾಗಿದ್ದು, ತನಿಖೆ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು. ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆಂದು ಹೋಗುತ್ತಿದ್ದ ಸಂದರ್ಭದಲ್ಲಿ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದನು.
ಸಚಿವರ ಭರವಸೆ ಮತ್ತು ಸೂಚನೆ:
ಮನವಿಯನ್ನು ಸ್ವೀಕರಿಸಿದ ಗೃಹ ಸಚಿವರು, ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣ್ ಕುಮಾರ್ ಮತ್ತು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ಅವರಿಂದ ಪ್ರಕರಣದ ಸದ್ಯದ ಸ್ಥಿತಿಗತಿ ಹಾಗೂ ತನಿಖಾ ವರದಿಯನ್ನು ಪಡೆದರು. ಇಲ್ಲಿಯವರೆಗೆ ನಡೆದಿರುವ ತನಿಖೆಯ ಪ್ರಗತಿಯ ಬಗ್ಗೆ ಎಸ್ಪಿಯವರು ಸಚಿವರಿಗೆ ಮಾಹಿತಿ ನೀಡಿದರು.
ವರದಿಯನ್ನು ಪರಿಶೀಲಿಸಿದ ಸಚಿವರು, ಪ್ರಕರಣದ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿ ಶೀಘ್ರವಾಗಿ ಆರೋಪಿಗಳನ್ನು ಪತ್ತೆಹಚ್ಚುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಇದೇ ವೇಳೆ ನೊಂದ ಪೋಷಕರಿಗೆ ಸಾಂತ್ವನ ಹೇಳಿದ ಸಚಿವರು, ನ್ಯಾಯ ಕೊಡಿಸುವ ಭರವಸೆ ನೀಡಿದರು.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಮಂಗಳೂರು
Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತರಿದ್ದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
-
ಅಪರಾಧ15 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ21 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ20 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ15 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ20 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಬಿಗ್ ನ್ಯೂಸ್14 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸ್ಥಳೀಯ20 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ21 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















