ಶಿಕ್ಷಣ
Vivekananda-ರಾಜ್ಯಮಟ್ಟದ ILAP ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ
ಸೇವಾ ಇನ್ ಆಕ್ಷನ್ ಹಾಗೂ ಕ್ವಿಜೇಬಲ್ಡ್ ಫೌಂಡೇಶನ್ ವತಿಯಿಂದ ಆಯೋಜಿಸಿದಂತಹ ಸೃಜನಾತ್ಮಕ ಕಲಿಕಾ ಚಟುವಟಿಕೆಗಳು ಹಾಗೂ ಮಾದರಿ ತಯಾರಿ – INNOVATIVE LEARNING ACTIVITIES & PPROJECTS CONTEST ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮೊದಲ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಸೇವಾ ಇನ್ ಆಕ್ಷನ್ ಹಾಗೂ ಕ್ವಿಜೇಬಲ್ಡ್ ಫೌಂಡೇಶನ್ ವತಿಯಿಂದ ಆಯೋಜಿಸಿದಂತಹ ಸೃಜನಾತ್ಮಕ ಕಲಿಕಾ ಚಟುವಟಿಕೆಗಳು ಹಾಗೂ ಮಾದರಿ ತಯಾರಿ – INNOVATIVE LEARNING ACTIVITIES & PPROJECTS CONTEST ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮೊದಲ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ರಾಜ್ಯಮಟ್ಟದ ಸ್ಪರ್ಧೆಗಳು ಬಿ ಎಂ ಎಸ್ ಇಂಜಿನಿಯರಿಂಗ್ ಕಾಲೇಜ್ ಬಸವನಗುಡಿ ಬೆಂಗಳೂರು ಇಲ್ಲಿ ದಿನಾಂಕ 7ನೇ ಫೆಬ್ರವರಿ 2026, ಶನಿವಾರದಂದು ನಡೆದಿರುತ್ತದೆ.
ILAP ಸ್ಪರ್ಧೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಅನ್ವೇಷ್ ಕೆ ಎಚ್ ಶ್ರೀ ಕೆ ಜಿ ಹರೀಶ್ ಕುಮಾರ್ ಮತ್ತು ಜಯಮಾಲಾ ಪಿ ಎನ್ ದಂಪತಿ ಪುತ್ರ) ಹಾಗೂ ಮಯೂರಿ ಕೆ ( ಶ್ರೀ ಉದಯರವಿ ಕೆ ಮತ್ತು ಶ್ರೀಮತಿ ಶ್ವೇತಾ ಕೆ ದಂಪತಿ
ಪುತ್ರಿ) ಇವರ ತಂಡ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಪ್ರಥಮ ಸ್ಥಾನವು ಪ್ರಶಸ್ತಿ ಫಲಕ ಪ್ರಮಾಣ ಪತ್ರ ಹಾಗೂ ₹10,000 ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ಸದ್ರಿ ವಿದ್ಯಾರ್ಥಿಗಳ ಮಾದರಿಯೂ ನಿರ್ಣಾಯಕರ ಹಾಗೂ ಸಂದರ್ಶಕರ ವಿಶೇಷ ಮನ್ನಣೆಗೆ ಪಾತ್ರವಾಗಿತ್ತು ಎಂದು ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸುತ್ತಾರೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು24 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಶಿಕ್ಷಣ23 hours agoVivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ




















