[…]" /> […]"> Blackmail-ಬೆಚ್ಚಿಬಿದ್ದ ಪೊಲೀಸರು..! ಮಹಿಳಾ ಅಧಿಕಾರಿಯ ಬೆಡ್‌ರೂಂನಲ್ಲಿ 11 ರಹಸ್ಯ ಕ್ಯಾಮೆರಾ..! ಆಪ್ತನೊಂದಿಗಿನ ಖಾಸಗಿ ಕ್ಷಣಗಳು ಸೆರೆ..! ₹50 ಲಕ್ಷ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರು ಯೂಟ್ಯೂಬರ್‌ಗಳು ಪೊಲೀಸ್ ಕಸ್ಟಡಿಗೆ..! - Nikhara News | Kannada News Website
Connect with us

ಸ್ಥಳೀಯ

Blackmail-ಬೆಚ್ಚಿಬಿದ್ದ ಪೊಲೀಸರು..! ಮಹಿಳಾ ಅಧಿಕಾರಿಯ ಬೆಡ್‌ರೂಂನಲ್ಲಿ 11 ರಹಸ್ಯ ಕ್ಯಾಮೆರಾ..! ಆಪ್ತನೊಂದಿಗಿನ ಖಾಸಗಿ ಕ್ಷಣಗಳು ಸೆರೆ..! ₹50 ಲಕ್ಷ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರು ಯೂಟ್ಯೂಬರ್‌ಗಳು ಪೊಲೀಸ್ ಕಸ್ಟಡಿಗೆ..!

Published

on

Ad Widget

Ad Widget

Ad Widget

Ad Widget

ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ರಹಸ್ಯ ಕ್ಯಾಮೆರಾಗಳನ್ನು ಇರಿಸಿ, ಅವರ ಖಾಸಗಿ ಕ್ಷಣಗಳನ್ನು ಸೆರೆಹಿಡಿದು ₹50 ಲಕ್ಷ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯೂಟ್ಯೂಬರ್‌ಗಳನ್ನು ಪೊಲೀಸರು ಮೂರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳಗಾವಿ: ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ರಹಸ್ಯ ಕ್ಯಾಮೆರಾಗಳನ್ನು ಇರಿಸಿ, ಅವರ ಖಾಸಗಿ ಕ್ಷಣಗಳನ್ನು ಸೆರೆಹಿಡಿದು ₹50 ಲಕ್ಷ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯೂಟ್ಯೂಬರ್‌ಗಳನ್ನು ಪೊಲೀಸರು ಮೂರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಗೋಕಾಕ ಮೂಲದ ಅಬ್ದುಲ್ ರಷೀದ್ ನಜರ್ ಅಹಮದ್ ಮಕಾನದಾರ (51), ಸಮೀರ್ ನಿಸಾರ್ ಅಹಮದ್ ಶೇಖ್ (32) ಹಾಗೂ ಗೋಕಾಕ ತಾಲ್ಲೂಕಿನ ಘಟಪ್ರಭಾದ ಮೊಹಮ್ಮದ್ ದಿಲಾವರ ನಜೀರ್‌ಅಹಮದ್ ಬಾಳೇಕುಂದ್ರಿ (45) ಕಸ್ಟಡಿಗೆ ಒಳಗಾದ ಆರೋಪಿಗಳು.

Ad Widget

Ad Widget <> Ad Widget

ಮಾಳಮಾರುತಿ ಠಾಣೆ ಪೊಲೀಸರು ಗುರುವಾರ ಈ ಮೂವರನ್ನು ಬೆಳಗಾವಿಯ 2ನೇ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ವ್ಯವಸ್ಥಿತ ಜಾಲದ ಶಂಕೆ:
ನ್ಯಾಯಾಲಯಕ್ಕೆ ತನಿಖೆಯ ವಿವರ ನೀಡಿದ ಪೊಲೀಸರು, “ಆರೋಪಿಗಳ ಮೊಬೈಲ್‌ಗಳಲ್ಲಿ ಕೇವಲ ಈ ಮಹಿಳಾ ಅಧಿಕಾರಿಯದ್ದಲ್ಲದೆ, ಇನ್ನೂ ಹಲವು ವ್ಯಕ್ತಿಗಳ ಖಾಸಗಿ ದೃಶ್ಯಾವಳಿಗಳು ಪತ್ತೆಯಾಗಿವೆ. ಇದೊಂದು ವ್ಯವಸ್ಥಿತ ಬ್ಲ್ಯಾಕ್‌ಮೇಲ್ ಜಾಲವಾಗಿರುವ ಸಾಧ್ಯತೆಯಿದೆ. ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದರೆ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ. ಅಲ್ಲದೆ, ಈ ಕೃತ್ಯದ ಹಿಂದಿರುವ ಪ್ರಮುಖ ರೂವಾರಿಯನ್ನು (ಮಾಸ್ಟರ್ ಮೈಂಡ್) ಪತ್ತೆಹಚ್ಚಬೇಕಿದೆ” ಎಂದು ತಿಳಿಸಿ ಕಸ್ಟಡಿಗೆ ಕೋರಿದರು.

Ad Widget

Ad Widget

ಬರೋಬ್ಬರಿ 11 ರಹಸ್ಯ ಕ್ಯಾಮೆರಾಗಳ ಬಳಕೆ!
ಪ್ರಕರಣದ ಬೆಚ್ಚಿಬೀಳಿಸುವ ಅಂಶವೆಂದರೆ, ಸಂತ್ರಸ್ತ ಮಹಿಳಾ ಅಧಿಕಾರಿ ತಮ್ಮ ಆಪ್ತನೊಂದಿಗೆ ಮನೆಯಲ್ಲಿ ಕಳೆದ ಖಾಸಗಿ ಕ್ಷಣಗಳನ್ನು ಸೆರೆಹಿಡಿಯಲು ಆರೋಪಿಗಳು ಮನೆಯ ಮೂಲೆಮೂಲೆಗಳಲ್ಲಿ ಬರೋಬ್ಬರಿ 11 ರಹಸ್ಯ ಕ್ಯಾಮೆರಾಗಳನ್ನು (Hidden Cameras) ಅಳವಡಿಸಿದ್ದರು. ಈ ನೀಚ ಕೃತ್ಯಕ್ಕೆ ಸಂತ್ರಸ್ತೆ ಕೆಲಸ ಮಾಡುತ್ತಿದ್ದ ಕಚೇರಿಯದೇ ಮತ್ತೊಬ್ಬ ಅಧಿಕಾರಿ ಸಹಕರಿಸಿದ್ದ. ಈ ಹಿನ್ನೆಲೆಯಲ್ಲಿ ಆ ಅಧಿಕಾರಿಯನ್ನೂ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳಿಂದ ಇನ್ನಷ್ಟು ಕರಾಳ ಸತ್ಯಗಳು ಹೊರಬರುವ ಸಾಧ್ಯತೆ ಇದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!