Connect with us

ಸ್ಥಳೀಯ

Biryani Scam-70000 ಕೋಟಿಯ ‘ಬಿರಿಯಾನಿ ಸ್ಕ್ಯಾಮ್’ ಬಯಲು..! ಕರ್ನಾಟಕದಲ್ಲೇ ಹೆಚ್ಚು ವಂಚನೆ – ಎಐ ತಂತ್ರಜ್ಞಾನ ಬಳಸಿ ಐಟಿ ದಾಳಿ

Published

on

Ad Widget

Ad Widget

Ad Widget

Ad Widget

ಹೈದರಾಬಾದ್ ಮೂಲದ ಜನಪ್ರಿಯ ಬಿರಿಯಾನಿ ರೆಸ್ಟೋರೆಂಟ್‌ಗಳ ಸರಪಳಿಯಲ್ಲಿ (Chain of Restaurants) ಬರೋಬ್ಬರಿ 70,000 ಕೋಟಿ ರೂಪಾಯಿಗಳ ಬೃಹತ್ ತೆರಿಗೆ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಈ ಬಹುದೊಡ್ಡ ಹಗರಣವನ್ನು ಭೇದಿಸಿದ್ದು, ತೆರಿಗೆ ವಂಚನೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ.

Ad Widget

Ad Widget

Ad Widget

Ad Widget

ಹೈದರಾಬಾದ್ ಮೂಲದ ಜನಪ್ರಿಯ ಬಿರಿಯಾನಿ ರೆಸ್ಟೋರೆಂಟ್‌ಗಳ ಸರಪಳಿಯಲ್ಲಿ (Chain of Restaurants) ಬರೋಬ್ಬರಿ 70,000 ಕೋಟಿ ರೂಪಾಯಿಗಳ ಬೃಹತ್ ತೆರಿಗೆ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಈ ಬಹುದೊಡ್ಡ ಹಗರಣವನ್ನು ಭೇದಿಸಿದ್ದು, ತೆರಿಗೆ ವಂಚನೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ.

Ad Widget

Ad Widget alt="Ad Widget"/>

Ad Widget

ಹಗರಣ ಬಯಲಾಗಿದ್ದು ಹೇಗೆ?
ದೇಶಾದ್ಯಂತ ಸುಮಾರು 1.77 ಲಕ್ಷಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳು ಬಳಸುತ್ತಿದ್ದ ನಿರ್ದಿಷ್ಟ ಬಿಲ್ಲಿಂಗ್ ಸಾಫ್ಟ್‌ವೇರ್ ಮೇಲೆ ಹೈದರಾಬಾದ್‌ನ ಆದಾಯ ತೆರಿಗೆ ತನಿಖಾ ಘಟಕ ಕಣ್ಣಿಟ್ಟಿತ್ತು. ಅಧಿಕಾರಿಗಳು ‘ಬಿಗ್ ಡೇಟಾ ಅನಾಲಿಸಿಸ್’ (Big Data Analysis) ಹಾಗೂ ‘ಜೆನೆರೇಟಿವ್ ಎಐ’ (Generative AI) ತಂತ್ರಜ್ಞಾನದ ಮೂಲಕ ಈ ಸಾಫ್ಟ್‌ವೇರ್‌ನ ಬರೋಬ್ಬರಿ 60 ಟೆರಾಬೈಟ್‌ಗಳಷ್ಟು (TB) ವಹಿವಾಟಿನ ಡೇಟಾವನ್ನು ವಿಶ್ಲೇಷಿಸಿದ್ದಾರೆ.

Ad Widget

Ad Widget <> Ad Widget

ಈ ಪರಿಶೀಲನೆಯ ವೇಳೆ, 2019-20ರ ಹಣಕಾಸು ವರ್ಷದಿಂದ ಈವರೆಗೆ ನಡೆದ 2.43 ಲಕ್ಷ ಕೋಟಿ ರೂಪಾಯಿಗಳ ಒಟ್ಟು ವ್ಯವಹಾರದಲ್ಲಿ, ಕನಿಷ್ಠ 70,000 ಕೋಟಿ ರೂ. ಮೌಲ್ಯದ ಮಾರಾಟವನ್ನು ಹೋಟೆಲ್ ಮಾಲೀಕರು ಆದಾಯ ತೆರಿಗೆ ಇಲಾಖೆಯಿಂದ ಮುಚ್ಚಿಟ್ಟಿರುವುದು ಸಾಬೀತಾಗಿದೆ.

ವಂಚನೆಯ ವಿಧಾನ ಮತ್ತು ರಾಜ್ಯವಾರು ವಿವರ:
ಹೋಟೆಲ್‌ಗಳು ಗ್ರಾಹಕರಿಂದ ಹಣ ಪಡೆದ ಬಳಿಕ ಬಿಲ್ಲಿಂಗ್ ಸಾಫ್ಟ್‌ವೇರ್‌ನಿಂದ ಬಿಲ್‌ಗಳನ್ನು ಅಳಿಸಿಹಾಕುವ (Delete) ಮೂಲಕ ತೆರಿಗೆ ವಂಚಿಸಿವೆ. ಹೀಗೆ ಅಳಿಸಿಹಾಕಲಾದ ಬಿಲ್‌ಗಳ ಒಟ್ಟು ಮೊತ್ತವೇ 13,317 ಕೋಟಿ ರೂ.ಗಳಾಗಿವೆ.

Ad Widget

Ad Widget

ಅತಿ ಹೆಚ್ಚು ಬಿಲ್ ಅಳಿಸಿಹಾಕಿ ವಂಚಿಸಿದ ಟಾಪ್ 3 ರಾಜ್ಯಗಳು:

  1. ಕರ್ನಾಟಕ: 2,000 ಕೋಟಿ ರೂ. (ಮೊದಲ ಸ್ಥಾನ)
  2. ತೆಲಂಗಾಣ: 1,500 ಕೋಟಿ ರೂ.
  3. ತಮಿಳುನಾಡು: 1,200 ಕೋಟಿ ರೂ.

  4. ಐಟಿ ರಿಟರ್ನ್ಸ್‌ನಲ್ಲೂ ಗೋಲ್‌ಮಾಲ್:
    ಕೆಲವು ಹೋಟೆಲ್ ಸಂಸ್ಥೆಗಳು ಬಿಲ್‌ಗಳನ್ನು ಅಳಿಸುವ ಸಾಹಸಕ್ಕೆ ಕೈಹಾಕದೆ, ನೇರವಾಗಿ ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವಾಗಲೇ ಒಟ್ಟು ಮಾರಾಟವನ್ನು ಕಡಿಮೆ ತೋರಿಸಿವೆ. ತನಿಖೆಯ ಪ್ರಕಾರ, ಒಟ್ಟು ಮಾರಾಟದ ಶೇ.27 ರಷ್ಟು ಆದಾಯವನ್ನು ಲೆಕ್ಕಕ್ಕೆ ತೋರಿಸದೆ ಮರೆಮಾಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನವೀನ ತಂತ್ರಜ್ಞಾನದ ಬಳಕೆಯಿಂದಾಗಿ ಹೋಟೆಲ್ ಉದ್ಯಮದಲ್ಲಿ ನಡೆಯುತ್ತಿದ್ದ ಈ ಬೃಹತ್ ಜಾಲೀ ವ್ಯವಹಾರ ಇದೀಗ ಜಗಜ್ಜಾಹೀರಾಗಿದೆ.
Ad Widget
Click to comment

Leave a Reply

ಸ್ಥಳೀಯ

Dharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ

Published

on

Ad Widget

Ad Widget

Ad Widget

Ad Widget

ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿದರು.

Ad Widget

Ad Widget

Ad Widget

Ad Widget

ಉಜಿರೆ: ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು.

Ad Widget

Ad Widget alt="Ad Widget"/>

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿ, ಜೀರ್ಣೋದ್ಧಾರ ಕಾರ್ಯವು ಸುಸೂತ್ರವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಹಾವೀರ ಅಜ್ರಿ ಉಪಸ್ಥಿತರಿದ್ದರು.

Ad Widget
Continue Reading

ನಿಧನ ವಾರ್ತೆ

Kankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್‌ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ಎರಡನೇ ತರಗತಿ ವಿದ್ಯಾರ್ಥಿಗೆ ಖಾಸಗಿ ಬಸ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ಮೂಲದ ಮಂಗಳೂರಿನಲ್ಲಿ ಕೂಲಿ ಕಾರ್ಮಿಕರಾಗಿರುವ ಲಕ್ಷ್ಮೀ – ಅಶೋಕ್ ಎಂಬ ದಂಪತಿಯ ಮಗ ವಿಶ್ವಾಸ್ (8) ಮೃತ ಬಾಲಕ.

Ad Widget

Ad Widget

Ad Widget

Ad Widget

ಶಾಲೆಯಿಂದ ಮನೆ ಕಡೆಗೆ ನಡೆದುಕೊಂಡು ರಸ್ತೆ ದಾಟುತ್ತಿದ್ದ ಎರಡನೇ ತರಗತಿ ವಿದ್ಯಾರ್ಥಿ ಬಾಲಕನಿಗೆ ಖಾಸಗಿ ಬಸ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಗದಗ ಜಿಲ್ಲೆಯ ರೋಣ ಮೂಲದ ಮಂಗಳೂರಿನಲ್ಲಿ ಕೂಲಿ ಕಾರ್ಮಿಕರಾಗಿರುವ ಲಕ್ಷ್ಮೀ – ಅಶೋಕ್ ಎಂಬ ದಂಪತಿಯ ಮಗ ವಿಶ್ವಾಸ್ (8) ಮೃತ ಬಾಲಕ.

Ad Widget

Ad Widget <> Ad Widget

ಕಂಕನಾಡಿಯಲ್ಲಿ ಸೈಂಟ್ ಜೋಸೆಫ್ ಅನುದಾನಿತ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಬಾಲಕ ಬುಧವಾರ ಸಂಜೆ ಶಾಲೆ ಬಿಟ್ಟ ನಂತರ ಹೊರಗೆ ಬಂದಿದ್ದ. ಯಾವಾಗಲೂ ತಾಯಿ ಕರೆದೊಯ್ಯಲು ಬರುತ್ತಿದ್ದು ತಾಯಿ ಬರದೇ ಇದ್ದುದರಿಂದ ಶಾಲೆಯಿಂದ ಹೊರಗೆ ಬಂದಿದ್ದ ಹುಡುಗ ಕಂಕನಾಡಿ- ಫಳೀರ್ ರಸ್ತೆ ಬದಿಯಲ್ಲಿ ಮನೆ ಕಡೆಗೆ ನಡೆದು ಹೋಗಲು ರಸ್ತೆ ದಾಟಿದ್ದ. ಈ ವೇಳೆ, ಸ್ಟೇಟ್‌ ಬ್ಯಾಂಕ್‌ ಕಡೆಗೆ ತೆರಳುತ್ತಿದ್ದ ರಾಜಲಕ್ಷ್ಮಿ ಎನ್ನುವ 4 ನಂಬರಿನ ಬಸ್ ಡಿಕ್ಕಿಯಾಗಿದ್ದು ಅದರ ಎಡಬದಿಯ ಹಿಂಭಾಗದ ಚಕ್ರ ಹರಿದು ಬಾಲಕ ತೀವ್ರ ಗಾಯಗೊಂಡಿದ್ದಾನೆ.

ಕೂಡಲೇ ಬಾಲಕನನ್ನು ಬಸ್ಸಿನ ಸಿಬಂದಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಒಯ್ದಿದ್ದು ಸಂಜೆಯ ವೇಳೆಗೆ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬಸ್ ತಾಗಿದ ರಭಸಕ್ಕೆ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟಿದ್ದು ದೇಹದ ಒಂದು ಬದಿಗೆ ತೀವ್ರ ಪೆಟ್ಟು ಬಿದ್ದಿತ್ತು. ಬಸ್‌ ಚಾಲಕನ ನಿರ್ಲಕ್ಷ್ಯದ ಬಗ್ಗೆ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ನಿಧನ ವಾರ್ತೆ

Kolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ

Published

on

Ad Widget

Ad Widget

Ad Widget

Ad Widget

ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆಯ ಬಳಿ ಪಾರ್ಸೆಲ್‌ನಂತೆ ಕಟ್ಟಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆಯ ಬಳಿ ಪಾರ್ಸೆಲ್‌ನಂತೆ ಕಟ್ಟಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಈ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಪಾರ್ಸೆಲ್ ರೂಪದ ವಸ್ತುವೊಂದು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅದರಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ತಕ್ಷಣ ಬೇತಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರೊಳಗೆ ಮಹಿಳೆಯ ಮೃತದೇಹ ಇರುವುದು ಪತ್ತೆಯಾಗಿದೆ.

Ad Widget

Ad Widget <> Ad Widget

ಮೃತ ಮಹಿಳೆಗೆ ಸುಮಾರು 35 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ, ಮೃತದೇಹವನ್ನು ಕುಳಿತ ಭಂಗಿಯಲ್ಲಿ ಕೈಕಾಲುಗಳನ್ನು ಕಟ್ಟಿ ಗೋಣಿ ಚೀಲದಲ್ಲಿ ತುಂಬಿಸಲಾಗಿತ್ತು. ಬಳಿಕ ಅದರ ಮೇಲೆ ಪ್ಲಾಸ್ಟಿಕ್ ಕವರ್ ಸುತ್ತಿ, ಪಾರ್ಸೆಲ್ ಪ್ಲಾಸ್ಟರ್‌ನಿಂದ ಬಿಗಿಯಾಗಿ ಕಟ್ಟಲಾಗಿತ್ತು. ಮೃತದೇಹವನ್ನು ಸಾಗಿಸಲು ಅನುಕೂಲವಾಗುವಂತೆ ಟ್ರಾಲಿಯ ಮೇಲೆ ಇರಿಸಿ ಎಸೆದಿರುವುದು ಪೊಲೀಸರ ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದೆ.

ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ:
ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್, ಡಿವೈಎಸ್ಪಿ ಲಕ್ಷ್ಮಯ್ಯ ಸೇರಿದಂತೆ ಸೋಕೋ ತಂಡ, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಹಿಳೆಯ ಗುರುತು ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

ಸಿಸಿಟಿವಿ ಸುಳಿವು; ವಿಶೇಷ ತಂಡ ರಚನೆ:
ದುಷ್ಕರ್ಮಿಗಳು ಕಾರಿನಲ್ಲಿ ಬಂದು ಮೃತದೇಹವನ್ನು ಎಸೆದು ಹೋಗಿರುವ ದೃಶ್ಯಗಳು ಹೆದ್ದಾರಿಯ ಟೋಲ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ಸುಂದರಪಾಳ್ಯ ಅಂತಾರಾಜ್ಯ ಗಡಿ ಪ್ರದೇಶದಲ್ಲಿರುವ ಹಿನ್ನೆಲೆಯಲ್ಲಿ ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡು ಪೊಲೀಸರಿಗೂ ಮಾಹಿತಿ ರವಾನಿಸಲಾಗಿದೆ.

ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!