Connect with us

ಬಿಗ್ ನ್ಯೂಸ್

High Court-ಪೊಲೀಸರಿಂದ ನಾಲ್ಕು ದಿನ ವ್ಯಕ್ತಿಯ ಅಕ್ರಮ ಕಸ್ಟಡಿ : 2.5 ಲಕ್ಷ ರೂ ದಂಡ ಪಾವತಿಸುವಂತೆ ಹೈಕೊರ್ಟ್ ಆದೇಶ

Published

on



Ad Widget

Ad Widget

Ad Widget

Ad Widget

ಅಕ್ರಮ ಬಂಧನಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್‌ ಭರ್ಜರಿ ಪರಿಹಾರ ಆದೇಶಿಸಿದೆ. ನಾಲ್ಕು ದಿನಗಳ ಕಾಲ ಪೊಲೀಸ್‌ ಠಾಣೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಇಲ್ಲದೆ ಅಕ್ರಮವಾಗಿ ಇರಿಸಿದ್ದ ಪ್ರಕರಣದಲ್ಲಿ, ಒಟ್ಟು ಎರಡೂವರೆ ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಅಕ್ರಮ ಬಂಧನಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್‌ ಭರ್ಜರಿ ಪರಿಹಾರ ಆದೇಶಿಸಿದೆ. ನಾಲ್ಕು ದಿನಗಳ ಕಾಲ ಪೊಲೀಸ್‌ ಠಾಣೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಇಲ್ಲದೆ ಅಕ್ರಮವಾಗಿ ಇರಿಸಿದ್ದ ಪ್ರಕರಣದಲ್ಲಿ, ಒಟ್ಟು ಎರಡೂವರೆ ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಗ್ಗೆರೆ ನಿವಾಸಿ ರವಿ ಅವರನ್ನು 2025ರ ಅಕ್ಟೋಬರ್‌ 14ರಂದು ಗಂಗಮ್ಮಗುಡಿ ಪೊಲೀಸ್‌ ಠಾಣಾ ಪೊಲೀಸರು ಬಂಧಿಸಿದ್ದರು. ಆದರೆ ಅಕ್ಟೋಬರ್‌ 17ರವರೆಗೆ ಯಾವುದೇ ಎಫ್‌ಐಆರ್‌ ದಾಖಲಿಸದೆ, ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸದೆ ಅಕ್ರಮವಾಗಿ ಠಾಣೆಯಲ್ಲೇ ಇರಿಸಲಾಗಿತ್ತು. ನಂತರ ಎಫ್‌ಐಆರ್‌ ದಾಖಲಿಸಿ ಅ.18ರಂದು ಕೋರ್ಟ್‌ಗೆ ಹಾಜರುಪಡಿಸಲಾಯಿತು.

Ad Widget

Ad Widget <> Ad Widget

ಇದರ ವಿರುದ್ಧ ರವಿಯ ಪತ್ನಿ ಎಂ.ವಿ. ವರಲಕ್ಷ್ಮಿ ಅವರು ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಅನು ಶಿವರಾಮನ್‌ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರಿದ್ದ ವಿಭಾಗೀಯ ಪೀಠವು ಅರ್ಜಿಯನ್ನು ಪುರಸ್ಕರಿಸಿ ಆದೇಶ ಹೊರಡಿಸಿದೆ.



Ad Widget

ನ್ಯಾಯಪೀಠ ಹೇಳಿದ್ದೇನೆಂದರೆ: ಬಂಧನದ ಸಮಯದಲ್ಲಿ ಬಿಎನ್‌ಎಸ್‌ಎಸ್‌-2023ರ ಅಧ್ಯಾಯ 5ರ ನಿಯಮಗಳು ಮತ್ತು ಸುಪ್ರೀಂ ಕೋರ್ಟ್‌ನ ಜೋಗಿಂದರ್‌ ಕುಮಾರ್‌ vs ಉತ್ತರ ಪ್ರದೇಶ ಸರಕಾರ ಪ್ರಕರಣದಲ್ಲಿ ನೀಡಿರುವ ಮಾರ್ಗದರ್ಶನಗಳನ್ನು ಪೊಲೀಸರು ಪಾಲಿಸಿಲ್ಲ. ಇದು ಸಂವಿಧಾನದ ಅನುಚ್ಛೇದ 21ರಡಿ ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸಿದೆ.
ವಾಯುವ್ಯ ವಲಯದ ಡಿಸಿಪಿ ಸಲ್ಲಿಸಿದ ವರದಿಯಿಂದಲೇ ಅಕ್ಟೋಬರ್‌ 14ರಿಂದ 17ರವರೆಗೆ ಅಕ್ರಮ ಬಂಧನ ಸ್ಪಷ್ಟವಾಗಿದೆ ಎಂದು ಪೀಠ ಗಮನಿಸಿದೆ.

Ad Widget

Ad Widget

ಪರಿಹಾರ ವಿವರ:
• ರವಿಗೆ ದೈಹಿಕ ಮತ್ತು ಮಾನಸಿಕ ಹಾನಿಗಾಗಿ 2 ಲಕ್ಷ ರೂಪಾಯಿ
• ಅರ್ಜಿದಾರೆಗೆ ವ್ಯಾಜ್ಯ ವೆಚ್ಚವಾಗಿ 50 ಸಾವಿರ ರೂಪಾಯಿ ಒಟ್ಟು 2.5 ಲಕ್ಷ ರೂಪಾಯಿ ಸರಕಾರ ಪಾವತಿಸಬೇಕು. ಈ ಮೊತ್ತವನ್ನು ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಇಲಾಖೆಯು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಲಾಗಿದೆ.

ರವಿ ಕಲ್ಲು ಒಡೆಯುವ ಕೆಲಸ ಮಾಡುತ್ತಿದ್ದರು. ಸಿಸಿಬಿ ಪೊಲೀಸರು ವಶಕ್ಕೆ ಪಡೆದ ನಂತರ ಪತ್ನಿ ವರಲಕ್ಷ್ಮಿ ನಾಪತ್ತೆ ದೂರು ದಾಖಲಿಸಲು ಯತ್ನಿಸಿದ್ದರು. ನಂತರ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಮಾಡಿ, ಅಂತಿಮವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Ad Widget
Click to comment

Leave a Reply

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

Published

on



Ad Widget

Ad Widget

Ad Widget

Ad Widget

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.

Ad Widget

Ad Widget <> Ad Widget

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.



Ad Widget

ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.

Ad Widget

Ad Widget

ಸುಮಾರು ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಅವರು ಆಪರೇಷನ್ ಸಫೇದ್ ಸಾಗರ್, ಆಪರೇಷನ್ ರಕ್ಷಕ್, ಕೋಪ್ ಇಂಡಿಯಾ ಹಾಗೂ ಆಪರೇಷನ್ ಸಿಂಧೂರ್ ಸೇರಿದಂತೆ ಹಲವು ಪ್ರಮುಖ ಸೇನಾ ಕಾರ್ಯಾಚರಣೆಗಳು ಮತ್ತು ಸಮರಾಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading