ಅಂತರ ರಾಜ್ಯ
Edaneeru Shri-ಸಾಕ್ಷ್ಯವಿಲ್ಲದೆ ಶಬರಿಮಲೆ ತಂತ್ರಿಯ ಬಂಧನ ಭಕ್ತರ ನಂಬಿಕೆಗೆ ಮಾಡಿದ ಅಪಮಾನ- ಎಡನೀರು ಶ್ರೀ
ಶಬರಿಮಲೆ ಚಿನ್ನ ಹಗರಣ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ದೇವಾಲಯದ ತಂತ್ರಿಯವರನ್ನು ಆರೋಪಿಯನ್ನಾಗಿಸಿ ಬಂಧಿಸಿರುವುದು ಕೋಟ್ಯಂತರ ಭಕ್ತರ ನಂಬಿಕೆಗೆ ಮಾಡಿದ ಅಪಮಾನ ಎಂದು ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಸರಗೋಡು: ಶಬರಿಮಲೆ ಚಿನ್ನ ಹಗರಣ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ದೇವಾಲಯದ ತಂತ್ರಿಯವರನ್ನು ಆರೋಪಿಯನ್ನಾಗಿಸಿ ಬಂಧಿಸಿರುವುದು ಕೋಟ್ಯಂತರ ಭಕ್ತರ ನಂಬಿಕೆಗೆ ಮಾಡಿದ ಅಪಮಾನ ಎಂದು ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಬರಿಮಲೆ ಶ್ರೀ ಅಯ್ಯಪ್ಪ ದೇವಾಲಯದ ತಂತ್ರಿ ಶ್ರೀ ಕಂಠರರ್ ರಾಜೀವರ್ ಅವರಿಗೆ ಇತ್ತೀಚೆಗೆ ನ್ಯಾಯಾಲಯವು ಜಾಮೀನು ನೀಡಿದ್ದು, ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಡನೀರು ಶ್ರೀಗಳು, ತನಿಖಾ ಸಂಸ್ಥೆಗಳ ಆತುರದ ಕ್ರಮಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಹಿಂದೂ ನಂಬಿಕೆಗೆ ಧಕ್ಕೆ:
“ಹಿಂದೂ ದೇವಾಲಯಗಳ ಪರಂಪರೆಯಲ್ಲಿ ತಂತ್ರಿಗಳು ಕೇವಲ ವ್ಯಕ್ತಿಗಳಲ್ಲ, ಅವರು ತಲೆಮಾರುಗಳಿಂದ ಬಂದ ದೈವಿಕ ಹಾಗೂ ಆಧ್ಯಾತ್ಮಿಕ ಜವಾಬ್ದಾರಿಯ ಪ್ರತೀಕ. ಅಂಥವರನ್ನು ಪುರಾವೆಗಳಿಲ್ಲದೆ ಆರೋಪಿಯನ್ನಾಗಿಸಿ ಬಂಧಿಸುವುದು ಕೇವಲ ಕಾನೂನಿನ ಉಲ್ಲಂಘನೆಯಷ್ಟೇ ಅಲ್ಲ, ಅದು ಹಿಂದೂ ಧರ್ಮದ ಮೇಲಿನ ನಂಬಿಕೆಗೆ ಬಲವಾದ ಪೆಟ್ಟು ನೀಡಿದಂತಾಗಿದೆ” ಎಂದು ಶ್ರೀಗಳು ತಿಳಿಸಿದ್ದಾರೆ.
ದೇವಾಲಯಗಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ವಿಶೇಷ ತನಿಖಾ ತಂಡಗಳು (SIT) ಜಾಗರೂಕತೆ ಹಾಗೂ ಸಂಯಮ ಪಾಲಿಸಬೇಕು. ಸಾಕ್ಷ್ಯವಿಲ್ಲದೆ ತಂತ್ರಿಯವರನ್ನು ಬಂಧಿಸಿದ ಎಸ್.ಐ.ಟಿ.ಯ ಕ್ರಮದಿಂದ ಭಕ್ತರ ಮನಸ್ಸಿಗೆ ತೀವ್ರ ನೋವು ಹಾಗೂ ಅಶಾಂತಿ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಉಲ್ಲೇಖ:
ಇತ್ತೀಚಿನ ದಿನಗಳಲ್ಲಿ ಹಿಂದೂ ದೇವಾಲಯಗಳು ಹಾಗೂ ಆರಾಧನಾ ಕೇಂದ್ರಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಸುಳ್ಳು ಆರೋಪಗಳನ್ನು ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ ಎಂಬುದನ್ನು ಸ್ವಾಮೀಜಿಯವರು ಗಂಭೀರವಾಗಿ ಪ್ರಸ್ತಾಪಿಸಿದ್ದಾರೆ. “ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರಗಳು ಹಾಗೂ ಸುಳ್ಳು ಆರೋಪಗಳು ಸಮಾಜದ ಮೇಲೆ ಬೀರಿದ ದುಷ್ಪರಿಣಾಮಗಳೇ ಇದಕ್ಕೆ ಸ್ಪಷ್ಟ ನಿದರ್ಶನ. ಇಂತಹ ವಿಷಯಗಳಲ್ಲಿ ಸಮಾಜ ಎಚ್ಚೆತ್ತುಕೊಳ್ಳುವ ಕಟ್ಟುನಿಟ್ಟಿನ ಅಗತ್ಯವಿದೆ” ಎಂದು ಎಚ್ಚರಿಸಿದ್ದಾರೆ.
ಸರ್ಕಾರಕ್ಕೆ ಆಗ್ರಹ:
ಧಾರ್ಮಿಕ ಸಂಸ್ಥೆಗಳ ಗೌರವವನ್ನು ಕಾಪಾಡುವುದು ಮತ್ತು ಕಾನೂನಿನ ಪಾವಿತ್ರ್ಯವನ್ನು ರಕ್ಷಿಸುವುದು ಎರಡೂ ಒಟ್ಟಿಗೆ ಸಾಗಬೇಕು. ಶಬರಿಮಲೆ ತಂತ್ರಿಗಳ ವಿಚಾರದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರದಲ್ಲಿ ಆಗಿರುವ ತಪ್ಪುಗಳನ್ನು ಸರ್ಕಾರಗಳು ಕೂಡಲೇ ಸರಿಪಡಿಸಬೇಕು. ಅಲ್ಲದೆ, ಶಬರಿಮಲೆ ಚಿನ್ನ ಹಗರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಿ, ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಸರ್ಕಾರವನ್ನು ಬಲವಾಗಿ ಆಗ್ರಹಿಸಿದ್ದಾರೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Fire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ
ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.
ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.
ದೇವಗಢ್ ಬಾರಿಯಾ ಪುರಸಭೆಯ ಅಗ್ನಿಶಾಮಕ ವಾಹನವು ಧನ್‌ಪುರ್ ತಾಲೂಕಿನಲ್ಲಿರುವ ಬಿಜೆಪಿ ಶಾಸಕ ಬಚುಭಾಯ್ ಖಬಾದ್ ಅವರ ನಿವಾಸದ ಬಳಿ ನಿಂತಿದ್ದು, ಸಿಬ್ಬಂದಿ ಬಂಗಲೆಯ ಆವರಣ ಹಾಗೂ ಗೋಡೆಗಳಿಗೆ ಪೈಪ್ ಮೂಲಕ ನೀರು ಸಿಂಪಡಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ವಿಡಿಯೋ ವೈರಲ್ ಆದ ಬಳಿಕ ತುರ್ತು ಸೇವೆಗೆ ಮೀಸಲಾಗಿರುವ ಅಗ್ನಿಶಾಮಕ ವಾಹನವನ್ನು ವೈಯಕ್ತಿಕ ಬಳಕೆಗೆ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಖಬಾದ್ ಅವರಿಂದ ₹2,700 ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದೇವಗಢ್ ಬಾರಿಯಾ ಪುರಸಭೆ ಅಧ್ಯಕ್ಷ ಘಮೇಶ್ ಕಲಾಲ್, ಅಗ್ನಿಶಾಮಕ ವಾಹನ ಕಳುಹಿಸುವಂತೆ ಶಾಸಕರು ಕರೆ ಮಾಡಿದ್ದರು. ಯಾವುದಾದರೂ ಗಂಭೀರ ಘಟನೆ ಸಂಭವಿಸಿರಬಹುದು ಎಂದು ಭಾವಿಸಿ ತಕ್ಷಣ ಅಗ್ನಿಶಾಮಕ ದಳವನ್ನು ಸಂಪರ್ಕಿಸಿ ವಾಹನ ಕಳುಹಿಸಿದ್ದಾಗಿ ತಿಳಿಸಿದ್ದಾರೆ.
ಆದರೆ, ಬಂಗಲೆ ಸ್ವಚ್ಛಗೊಳಿಸುವ ಉದ್ದೇಶಕ್ಕಾಗಿ ಅಗ್ನಿಶಾಮಕ ವಾಹನವನ್ನು ಬಳಸಲಾಗುತ್ತಿದೆ ಎಂಬುದು ತಮಗೆ ತಿಳಿದಿರಲಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಬಂಗಲೆ ತೊಳೆಯಲು ವಾಹನ ಬಳಸಲಾಗುತ್ತದೆ ಎಂಬ ಮಾಹಿತಿ ಮುಂಚಿತವಾಗಿ ನೀಡಲಾಗಿರಲಿಲ್ಲ. ಈ ಕಾರಣದಿಂದ ಅಚಾತುರ್ಯ ಸಂಭವಿಸಿದೆ. ಇದೀಗ ತಪ್ಪಿತಸ್ಥರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.
ವಿಡಿಯೋದಲ್ಲಿ ಏನಿದೆ?
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬೃಹತ್ ಬಂಗಲೆಯೊಂದರ ಮುಂಭಾಗ ಅಗ್ನಿಶಾಮಕ ವಾಹನ ನಿಂತಿರುವುದು ಕಾಣಿಸುತ್ತದೆ. ಅಗ್ನಿಶಾಮಕ ಸಿಬ್ಬಂದಿ ಪೈಪ್‌ಗಳ ಮೂಲಕ ಬಂಗಲೆಯ ಕಂಪೌಂಡ್ ಹಾಗೂ ಗೋಡೆಗಳಿಗೆ ನೀರು ಸಿಂಪಡಿಸಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.
ಸಿನೆಮಾ
Drishyam 3-ಮಲಯಾಳಂ ನ ದಾಖಲೆ ಮುರಿದು ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಧಮಾಕಾ; 4 ದಿನದಲ್ಲೇ ₹300 ಕೋಟಿ ಕ್ಲಬ್‌ಗೆ ಎಂಟ್ರಿ..!
ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ ಇದೀಗ ₹303 ಕೋಟಿ ತಲುಪಿದೆ.
ಮುಂಬೈ: ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ ಇದೀಗ ₹303 ಕೋಟಿ ತಲುಪಿದೆ.
ಬಿಡುಗಡೆಯ ನಾಲ್ಕನೇ ದಿನ ಚಿತ್ರವು ಭಾರತದಲ್ಲಿ 16,274 ಪ್ರದರ್ಶನಗಳಿಂದ ಸುಮಾರು ₹21 ಕೋಟಿ ನಿವ್ವಳ ಗಳಿಸಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ನಿವ್ವಳ ಗಳಿಕೆ ₹197.50 ಕೋಟಿಗೆ ತಲುಪಿದ್ದು, ಒಟ್ಟು ಕಲೆಕ್ಷನ್ ಸುಮಾರು ₹237 ಕೋಟಿ ಆಗಿದೆ.
ಚಿತ್ರಕ್ಕೆ ಭಾರತ ಮಾತ್ರವಲ್ಲದೆ ಸಾಗರೋತ್ತರ ಮಾರುಕಟ್ಟೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾಲ್ಕನೇ ದಿನ ವಿದೇಶಿ ಮಾರುಕಟ್ಟೆಯಲ್ಲಿ ಸುಮಾರು ₹5 ಕೋಟಿ ಗಳಿಸಿದ್ದು, ಇದರೊಂದಿಗೆ ವಿದೇಶದಲ್ಲಿನ ಒಟ್ಟು ಗಳಿಕೆ ₹66 ಕೋಟಿ ತಲುಪಿದೆ.
ಮಲಯಾಳಂ ‘ದೃಶ್ಯಂ 3’ ಗಳಿಕೆಯನ್ನೂ ಮೀರಿಸಿದ ಹಿಂದಿ ಸಿನಿಮಾ
ಅಜಯ್ ದೇವಗನ್ ಅಭಿನಯದ ಹಿಂದಿ ‘ದೃಶ್ಯಂ 3’ಗೂ ಮುನ್ನ ಮೋಹನ್‌ಲಾಲ್ ನಟನೆಯ ಮಲಯಾಳಂ ‘Drishyam 3: The Past Never Stays Silent’ ಬಿಡುಗಡೆಯಾಗಿತ್ತು. ಆ ಚಿತ್ರವು ವಿಶ್ವಾದ್ಯಂತ ₹237.70 ಕೋಟಿ ಗಳಿಕೆ ದಾಖಲಿಸಿತ್ತು ಎಂದು ವರದಿಯಾಗಿದೆ.
-
ದಕ್ಷಿಣ ಕನ್ನಡ20 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ20 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ19 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್14 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ18 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ19 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ಬಿಗ್ ನ್ಯೂಸ್19 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ
-
ರಾಜಕೀಯ19 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ


















