ನಿಧನ ವಾರ್ತೆ
Puttur-‘I AM DEAD’ ಇನ್ಸ್ಟಾಗ್ರಾಂ ಡಿಪಿ ಬದಲಿಸಿ ಪುತ್ತೂರಿನಲ್ಲಿ ರೈಲಿಗೆ ತಲೆಕೊಟ್ಟ ವ್ಯಾಪಾರಿ ಹಡಗಿನ ಉದ್ಯೋಗಿ
ಪುತ್ತೂರು ಸಮೀಪದ ಕಬಕ ಹಾರಾಡಿ ರೈಲ್ವೇ ಸೇತುವೆ ಬಳಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಉಪ್ಪಿನಂಗಡಿ ಸಮೀಪದ ಪುಳಿತ್ತಡಿ ಗೌಂಡತ್ತಿಗೆ ನಿವಾಸಿ, ಸುಮತಿ ಎಂಬವರ ಪುತ್ರ ಪವನ್ ಕುಮಾರ್ (26) ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ: ಪುತ್ತೂರು ಸಮೀಪದ ಕಬಕ ಹಾರಾಡಿ ರೈಲ್ವೇ ಸೇತುವೆ ಬಳಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಉಪ್ಪಿನಂಗಡಿ ಸಮೀಪದ ಪುಳಿತ್ತಡಿ ಗೌಂಡತ್ತಿಗೆ ನಿವಾಸಿ, ಸುಮತಿ ಎಂಬವರ ಪುತ್ರ ಪವನ್ ಕುಮಾರ್ (26) ಎಂದು ಗುರುತಿಸಲಾಗಿದೆ.
‘I AM DEAD’ ಇನ್ಸ್ಟಾಗ್ರಾಂ ಡಿಪಿ:
ವ್ಯಾಪಾರಿ ಹಡಗೊಂದರಲ್ಲಿ ಉದ್ಯೋಗಿಯಾಗಿದ್ದ ಪವನ್, ಕಳೆದ ಕೆಲವು ತಿಂಗಳುಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದಿದ್ದರು. ಫೆಬ್ರವರಿ 20ರಂದು ಮಧ್ಯಾಹ್ನ ಮನೆಯಿಂದ ಹೊರಡುವಾಗ ತನ್ನ ತಾಯಿಯ ಬಳಿ ‘ನಾನು ಸಾಯುತ್ತೇನೆ’ ಎಂದು ಹೇಳಿದ್ದನು. ಅಷ್ಟೇ ಅಲ್ಲದೆ, ತನ್ನ ಇನ್‌ಸ್ಟಾಗ್ರಾಮ್ ಖಾತೆಯ ಡಿಪಿಯನ್ನು ‘ಐ ಆ್ಯಮ್ ಡೆಡ್’ (I am dead) ಎಂದು ಬದಲಾಯಿಸಿಕೊಂಡಿದ್ದನು. ಪವನ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದನು ಎನ್ನಲಾಗಿದೆ.
ರೈಲ್ವೇ ಹಳಿಯಲ್ಲಿ ಮೃತದೇಹ ಪತ್ತೆ:
ಫೆಬ್ರವರಿ 20ರ ಸಂಜೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿಗೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ರೈಲಿನ ಪೈಲಟ್ ಮಾಹಿತಿ ನೀಡಿದ್ದರು. ಸ್ಥಳದಲ್ಲಿ ಕಪ್ಪು ಪ್ಯಾಂಟ್ ಮತ್ತು ಶರ್ಟ್ ಧರಿಸಿದ್ದ ಮೃತದೇಹ ಪತ್ತೆಯಾಗಿತ್ತು. ಪಕ್ಕದಲ್ಲೇ ಕಪ್ಪು ಬಣ್ಣದ ಬ್ಯಾಗ್ ಹಾಗೂ ನಜ್ಜುಗುಜ್ಜಾಗಿದ್ದ ಮೊಬೈಲ್ ಬಿದ್ದಿತ್ತು. ರೈಲ್ವೇ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಮಂಗಳೂರಿಗೆ ರವಾನಿಸಿದ್ದರು.
ಇತ್ತ, ಸಂಜೆಯಾದರೂ ಮಗ ಮನೆಗೆ ಬಾರದಿದ್ದಾಗ ಆತಂಕಗೊಂಡ ತಾಯಿ ಸುಮತಿ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಅತ್ರಮಜಲು ಅವರಿಗೆ ರಾತ್ರಿ ಮಾಹಿತಿ ನೀಡಿದ್ದರು. ಅವರು ವಿಚಾರಣೆ ನಡೆಸಿದಾಗ ರೈಲ್ವೇ ಹಳಿಯಲ್ಲಿ ಸಿಕ್ಕ ಮೃತದೇಹ ಪವನ್‌ನದ್ದೇ ಎಂಬುದು ಖಚಿತವಾಗಿದೆ.
ಆಪತ್ಬಾಂಧವನಾದ ಮಾಜಿ ಗ್ರಾ.ಪಂ. ಸದಸ್ಯ:
ಪವನ್ ಕುಟುಂಬ ತೀವ್ರ ಬಡತನದಲ್ಲಿದ್ದು, ತಂದೆಯನ್ನು ಕಳೆದುಕೊಂಡಿದ್ದ ಆತನನ್ನು ತಾಯಿ ಕೂಲಿ ಮಾಡಿ ಬೆಳೆಸಿದ್ದರು. ಆತನ ಸಹೋದರಿ ಕೂಡ ಕುಟುಂಬದ ನಿರ್ವಹಣೆಗಾಗಿ ಅರ್ಧದಲ್ಲೇ ಶಾಲೆ ಬಿಟ್ಟು ಕೆಲಸಕ್ಕೆ ಹೋಗುತ್ತಿದ್ದರು. ಈ ಕಷ್ಟದ ಸಮಯದಲ್ಲಿ ಕುಟುಂಬದ ನೆರವಿಗೆ ಧಾವಿಸಿದ ಸುರೇಶ್ ಅತ್ರಮಜಲು, ಮಂಗಳೂರಿನಲ್ಲಿ ಮರಣೋತ್ತರ ಪರೀಕ್ಷೆ ಸೇರಿದಂತೆ ಪೊಲೀಸ್ ಇಲಾಖೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಹಾಯ ಮಾಡಿದರು.
ಬಳಿಕ ಮೃತದೇಹವನ್ನು ಊರಿಗೆ ತಂದು ದುರ್ಗಾಗಿರಿ ಸ್ಮಶಾನದಲ್ಲಿ ಅಂತಿಮ ಸಂಸ್ಕಾರ ನೆರವೇರಿಸುವವರೆಗೆ ಕುಟುಂಬದ ಜೊತೆಯಲ್ಲೇ ಇದ್ದು, ಆರ್ಥಿಕ ನೆರವನ್ನೂ ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮೃತ ಪವನ್ ಕುಮಾರ್ ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
ಪುತ್ತೂರು22 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್24 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಅಪರಾಧ23 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
Uncategorized3 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized2 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ


















