Connect with us

ನಿಧನ ವಾರ್ತೆ

Suicide-ಹಸೆಮಣೆ ಏರಬೇಕಿದ್ದ ಸಹೋದರಿಯರ ಆತ್ಮಹತ್ಯೆ: ಮೆಹಂದಿ ಹಚ್ಚಿಕೊಂಡಿದ್ದ ಕೈಯಲ್ಲೇ ವಿಷ ಸೇವನೆ..!

Published

on



Ad Widget

Ad Widget

Ad Widget

Ad Widget

ಮದುವೆ ಮನೆ ಎಂದರೆ ಅಲ್ಲಿ ಹಾಸ್ಯ, ಹಾಡು, ಸಂಭ್ರಮ, ಸಡಗರ ಮನೆಮಾಡಿರುತ್ತದೆ. ಮೆಹಂದಿಯ ಸುಗಂಧ ಹಾಗೂ ಮಂಗಳ ವಾದ್ಯಗಳ ನಿನಾದದ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಕನಸುಗಳಿರುತ್ತವೆ. ಆದರೆ, ಹಸೆಮಣೆ ಏರಬೇಕಿದ್ದ ಇಬ್ಬರು ಸಹೋದರಿಯರು ಮದುವೆಯ ದಿನವೇ ಆತ್ಮಹತ್ಯೆಗೆ ಶರಣಾಗಿರುವ ಅತ್ಯಂತ ಕರುಣಾಜನಕ ಹಾಗೂ ಆಘಾತಕಾರಿ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಜೋಧ್‌ಪುರ (ರಾಜಸ್ಥಾನ): ಮದುವೆ ಮನೆ ಎಂದರೆ ಅಲ್ಲಿ ಹಾಸ್ಯ, ಹಾಡು, ಸಂಭ್ರಮ, ಸಡಗರ ಮನೆಮಾಡಿರುತ್ತದೆ. ಮೆಹಂದಿಯ ಸುಗಂಧ ಹಾಗೂ ಮಂಗಳ ವಾದ್ಯಗಳ ನಿನಾದದ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಕನಸುಗಳಿರುತ್ತವೆ. ಆದರೆ, ಹಸೆಮಣೆ ಏರಬೇಕಿದ್ದ ಇಬ್ಬರು ಸಹೋದರಿಯರು ಮದುವೆಯ ದಿನವೇ ಆತ್ಮಹತ್ಯೆಗೆ ಶರಣಾಗಿರುವ ಅತ್ಯಂತ ಕರುಣಾಜನಕ ಹಾಗೂ ಆಘಾತಕಾರಿ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ. ಈ ಘಟನೆಯಿಂದ ಇಡೀ ಮನಾಹಿ ಗ್ರಾಮವೇ ಬೆಚ್ಚಿಬಿದ್ದಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೆಹಂದಿ ಹಚ್ಚಿಕೊಂಡಿದ್ದ ಕೈಯಲ್ಲೇ ವಿಷ ಸೇವನೆ?
ಜೋಧ್‌ಪುರದ ಮನಾಹಿ ಗ್ರಾಮದ ನಿವಾಸಿಗಳಾದ ಶೋಭಾ (25) ಮತ್ತು ವಿಮಲಾ (23) ಮೃತಪಟ್ಟ ದುರ್ದೈವಿ ಸಹೋದರಿಯರು. ಇವರಿಬ್ಬರಿಗೂ ಶನಿವಾರ (ಫೆ. 21) ವಿವಾಹ ನಿಶ್ಚಯವಾಗಿತ್ತು. ಶುಕ್ರವಾರ ಮನೆಯಲ್ಲಿ ಮದುವೆಯ ಸಿದ್ಧತೆ, ಮೆಹಂದಿ ಶಾಸ್ತ್ರದ ಸಂಭ್ರಮ ಕಳೆಗಟ್ಟಿತ್ತು. ತಡರಾತ್ರಿ 2:30ರವರೆಗೂ ವಿವಿಧ ಶಾಸ್ತ್ರಗಳಲ್ಲಿ ನಗುನಗುತ್ತಲೇ ಪಾಲ್ಗೊಂಡಿದ್ದ ಅಕ್ಕ-ತಂಗಿ, ನಂತರ ತಮ್ಮ ಕೊಠಡಿಗೆ ನಿದ್ರಿಸಲು ತೆರಳಿದ್ದರು.

Ad Widget

Ad Widget <> Ad Widget

ಆದರೆ, ಮುಂಜಾನೆ 4 ಗಂಟೆ ಸುಮಾರಿಗೆ ಇಬ್ಬರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದೆ. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಇಬ್ಬರೂ ಆಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಸಂಭ್ರಮದಿಂದ ಮದುವೆ ಮಂಟಪ ಸಿದ್ಧವಾಗಬೇಕಿದ್ದ ಮನೆಯಲ್ಲಿ ಕ್ಷಣಾರ್ಧದಲ್ಲೇ ಆಕ್ರಂದನ ಮುಗಿಲುಮುಟ್ಟಿತ್ತು.



Ad Widget

ಅಂತ್ಯಕ್ರಿಯೆ ತಡೆದ ಪೊಲೀಸರು:
ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟ ಬಳಿಕ, ಕುಟುಂಬಸ್ಥರು ತರಾತುರಿಯಲ್ಲಿ ಮೃತದೇಹಗಳನ್ನು ಮನೆಗೆ ತಂದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಅಂತ್ಯಕ್ರಿಯೆಯನ್ನು ತಡೆದಿದ್ದಾರೆ. ಬಳಿಕ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

Ad Widget

Ad Widget

ಯಾವುದೇ ಡೆತ್‌ ನೋಟ್ ಪತ್ತೆಯಾಗಿಲ್ಲ:
ಘಟನೆ ಕುರಿತು ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ADCP) ರೋಷನ್ ಮೀನಾ, “ಪ್ರಾಥಮಿಕ ತನಿಖೆಯ ಪ್ರಕಾರ ಶೋಭಾ ಮತ್ತು ವಿಮಲಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಆದರೆ, ಸ್ಥಳದಲ್ಲಿ ಯಾವುದೇ ಡೆತ್ ನೋಟ್ (ಆತ್ಮಹತ್ಯೆ ಪತ್ರ) ಪತ್ತೆಯಾಗಿಲ್ಲ. ಯುವತಿಯರು ಈ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ನಿಗೂಢವಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ಸ್ಪಷ್ಟವಾಗಲಿದೆ” ಎಂದು ತಿಳಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು

Published

on



Ad Widget

Ad Widget

Ad Widget

Ad Widget

ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.

Ad Widget

Ad Widget

Ad Widget

Ad Widget

ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.

Ad Widget

Ad Widget <> Ad Widget

ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.



Ad Widget

ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Ad Widget

Ad Widget

ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

Ad Widget
Continue Reading

ನಿಧನ ವಾರ್ತೆ

Kasaragod-ಕಾಸರಗೋಡು: ಬೈಕ್‌-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ

Published

on



Ad Widget

Ad Widget

Ad Widget

Ad Widget

ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್‌-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್‌-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget <> Ad Widget

ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.



Ad Widget

ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ನಿಧನ ವಾರ್ತೆ

Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.



Ad Widget

ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.

ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading