ಮಂಗಳೂರು
Sharan Pampwel-ಜಗಳ ಬಿಡಿಸಲು ಹೋದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯ ಬರ್ಬರ ಹತ್ಯೆ : ಡ್ರಗ್ಸ್ ಜಾಲದ ಶಂಕೆ ವ್ಯಕ್ತಪಡಿಸಿ ಉನ್ನತ ತನಿಖೆಗೆ ಶರಣ್ ಪಂಪ್ವೆಲ್ ಆಗ್ರಹ
ನಗರದ ಹೊರವಲಯದ ಊರಗಡೂರಿನಲ್ಲಿ ಜಗಳ ಬಿಡಿಸಲು ಹೋದ 10ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಅನ್ಯಕೋಮಿನ ಅಪ್ರಾಪ್ತ ಬಾಲಕರು ಅಮಾನುಷವಾಗಿ ಹತ್ಯೆ ಮಾಡಿದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ), ಇದರ ಹಿಂದೆ ಡ್ರಗ್ಸ್ ಜಾಲದ ಕೈವಾಡವಿರುವ ಶಂಕೆ ವ್ಯಕ್ತಪಡಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದೆ.
ಶಿವಮೊಗ್ಗ: ನಗರದ ಹೊರವಲಯದ ಊರಗಡೂರಿನಲ್ಲಿ ಜಗಳ ಬಿಡಿಸಲು ಹೋದ 10ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಅನ್ಯಕೋಮಿನ ಅಪ್ರಾಪ್ತ ಬಾಲಕರು ಅಮಾನುಷವಾಗಿ ಹತ್ಯೆ ಮಾಡಿದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ), ಇದರ ಹಿಂದೆ ಡ್ರಗ್ಸ್ ಜಾಲದ ಕೈವಾಡವಿರುವ ಶಂಕೆ ವ್ಯಕ್ತಪಡಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದೆ.
ಮೃತ ವಿದ್ಯಾರ್ಥಿಯನ್ನು ಊರಗಡೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಸಂಕೇತ್ (16) ಎಂದು ಗುರುತಿಸಲಾಗಿದೆ.
ಘಟನೆಯ ಹಿನ್ನೆಲೆ:
ಮುಂಬರುವ ಬೋರ್ಡ್ ಪರೀಕ್ಷೆಯ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಶಾಲೆಯಲ್ಲಿ ಆಯೋಜಿಸಿದ್ದ ವಿಶೇಷ ತರಗತಿ (Special Class) ಮುಗಿಸಿ ಸಂಕೇತ್ ಮನೆಗೆ ಹಿಂದಿರುಗುತ್ತಿದ್ದ. ಈ ವೇಳೆ ವಿದ್ಯಾರ್ಥಿಗಳ ಗುಂಪಿನ ನಡುವೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಆತ ಮುಂದಾಗಿದ್ದ. ಈ ಸಂದರ್ಭದಲ್ಲಿ ಅನ್ಯಕೋಮಿನ ಸುಮಾರು 3-4 ಅಪ್ರಾಪ್ತರು ಸಂಕೇತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಆತ ಪ್ರಜ್ಞೆತಪ್ಪಿ ಕುಸಿದು ಬಿದ್ದಿದ್ದ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ (ಎಸ್ಪಿ) ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಉನ್ನತ ಮಟ್ಟದ ತನಿಖೆಗೆ ವಿಎಚ್ಪಿ ಆಗ್ರಹ:
ಸಂಕೇತ್ ಹತ್ಯೆಯನ್ನು ವಿಎಚ್ಪಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವಿಎಚ್ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್, ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
“ಸಂಕೇತ್ ಮೇಲೆ ನಾಲ್ವರು ಅನ್ಯಕೋಮಿನ ವಿದ್ಯಾರ್ಥಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದು ಅತ್ಯಂತ ಆತಂಕಕಾರಿ ಮತ್ತು ಖಂಡನೀಯ. ಕೊಲೆ ಮಾಡಿದ ಅಪ್ರಾಪ್ತರು ಡ್ರಗ್ಸ್ ಸೇವಿಸಿದ್ದರು ಎಂಬ ಮಾತುಗಳು ಕೇಳಿಬರುತ್ತಿವೆ. ಶಾಲಾ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುವ ದೊಡ್ಡ ಜಾಲವೇ ಇದರ ಹಿಂದೆ ಕೆಲಸ ಮಾಡುತ್ತಿರುವ ಅನುಮಾನವಿದೆ” ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.
“ಇಷ್ಟು ಚಿಕ್ಕ ವಯಸ್ಸಿನಲ್ಲೇ ಹತ್ಯೆ ಮಾಡುವಷ್ಟು ದ್ವೇಷದ ಮಾನಸಿಕತೆಯನ್ನು ಮಕ್ಕಳಲ್ಲಿ ತುಂಬಿದವರು ಯಾರು? ಇದರ ಹಿಂದೆ ಯಾರ ಪ್ರಚೋದನೆ ಇದೆ ಎಂಬುದು ಪತ್ತೆಯಾಗಬೇಕು. ಪ್ರಕರಣದ ಎಲ್ಲಾ ಆಯಾಮಗಳನ್ನು ಬಯಲಿಗೆಳೆದು, ಸಮಾಜಕ್ಕೆ ಸತ್ಯ ತಿಳಿಸಲು ರಾಜ್ಯ ಸರ್ಕಾರ ಕೂಡಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು” ಎಂದು ಶರಣ್ ಪಂಪುವೆಲ್ ಒತ್ತಾಯಿಸಿದ್ದಾರೆ.
ಶಿಕ್ಷಣ
Sahyadri-ವಿಟಿಯು ಮಂಗಳೂರು ವಿಭಾಗದ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಪುರುಷರ ತಂಡಕ್ಕೆ ರನ್ನರ್-ಅಪ್ ಪ್ರಶಸ್ತಿ
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ನ ಪುರುಷರ ಹ್ಯಾಂಡ್ಬಾಲ್ ತಂಡವು ಅಕ್ಟೋಬರ್ 15, 2026 ರಂದು ಮಂಗಳೂರಿನ ಬಿಐಟಿ (BIT) ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಮಂಗಳೂರು ವಿಭಾಗದ ಪುರುಷರ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ರನ್ನರ್-ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಮಂಗಳೂರು, ಅ.16: ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ನ ಪುರುಷರ ಹ್ಯಾಂಡ್ಬಾಲ್ ತಂಡವು ಅಕ್ಟೋಬರ್ 15, 2026 ರಂದು ಮಂಗಳೂರಿನ ಬಿಐಟಿ (BIT) ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಮಂಗಳೂರು ವಿಭಾಗದ ಪುರುಷರ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ರನ್ನರ್-ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಪಂದ್ಯಾವಳಿಯುದ್ದಕ್ಕೂ ತಂಡದ ಆಟಗಾರರು ಉತ್ತಮ ಸಂಘಟಿತ ಆಟ, ದೃಢಸಂಕಲ್ಪ ಮತ್ತು ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ತಂಡದ ಆಟಗಾರರ ವಿವರ:
- ಅಭಯ್ – 7ನೇ ಸೆಮಿಸ್ಟರ್, CSE
- ಹೃತಿಕ್ ಕೆ. ಸಿ. – 5ನೇ ಸೆಮಿಸ್ಟರ್, CSE
- ಕೆ. ಪಂಪಾಪತಿ – 5ನೇ ಸೆಮಿಸ್ಟರ್, CSE
- ವಿಕಾಸ್ – 3ನೇ ಸೆಮಿಸ್ಟರ್, ISE
- ಜಸ್ವಿತ್ ಎನ್. ಪೂಜಾರಿ – 3ನೇ ಸೆಮಿಸ್ಟರ್, AIML
- ಶಮಿತ್ ಜೆ. – 5ನೇ ಸೆಮಿಸ್ಟರ್, E&C (ತಂಡದ ನಾಯಕ)
- ಪ್ರಥೀಕ್ ಎನ್. ಕೊಟ್ಟಾರಿ – 3ನೇ ಸೆಮಿಸ್ಟರ್, E&C
- ರಿತೇಶ್ ಶೆಟ್ಟಿ – 3ನೇ ಸೆಮಿಸ್ಟರ್, E&C
- ಜ್ಯೇಷ್ಣ್ ಯು. ಕುಂದರ್ – 1ನೇ ಸೆಮಿಸ್ಟರ್, AIML
- ಮಿಲನ್ ಎನ್. ಬಿ. – 1ನೇ ಸೆಮಿಸ್ಟರ್, CSE
- ಪೃಥ್ವಿಕ್ – 1ನೇ ಸೆಮಿಸ್ಟರ್, ECE
- ಆಟಗಾರರ ಪರಿಶ್ರಮ, ಸಮರ್ಪಣೆ ಮತ್ತು ತಂಡದ ಸಂಘಟಿತ ಪ್ರಯತ್ನವೇ ಈ ಸಾಧನೆಗೆ ಕಾರಣವಾಗಿದೆ. ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸಂಸ್ಥೆಯು ನೀಡುತ್ತಿರುವ ನಿರಂತರ ಪ್ರೋತ್ಸಾಹವು ಇಂತಹ ಸಾಧನೆಗಳಿಗೆ ಪ್ರೇರಣೆಯಾಗಿದೆ.
- ಈ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ವರ್ಗ ಹಾಗೂ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದವರು ತಂಡದ ಎಲ್ಲಾ ಆಟಗಾರರನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದ್ದಾರೆ.
ಮಂಗಳೂರು
Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.
“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
-
ಬಿಗ್ ನ್ಯೂಸ್12 hours agoPuttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
-
ನಿಧನ ವಾರ್ತೆ15 hours agoಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ನಿಧನ
-
ಸ್ಥಳೀಯ10 hours agoKadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!
-
ಅಂತರ ರಾಜ್ಯ15 hours agoBJP minister-ಪತಿ ಎರಡು ಮದುವೆಯಾಗಿದ್ದರೆಂದು ದೂರು ದಾಖಲಿಸಿದ ಬಿಜೆಪಿ ಸಚಿವೆ..!
-
ಅಂತರ ರಾಜ್ಯ14 hours agoRamleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
-
ಕಾರ್ಯಕ್ರಮಗಳು13 hours agoMangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
-
ಅಪರಾಧ14 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
-
ಅಂತರ ರಾಜ್ಯ14 hours agoTruecaller service-ಟೆಲಿಕಾಂ ಸಂಸ್ಥೆಗಳೇ ಒದಗಿಸಲಿವೆ ಟ್ರೂ ಕಾಲರ್ ಸೇವೆ; ಅಪರಿಚಿತ ನಂಬರ್ನಿಂದ ಕರೆ ಬಂದರೂ ಹೆಸರು ಪ್ರದರ್ಶನ ಕಡ್ಡಾಯ?


















