ಸ್ಥಳೀಯ
Shivamogga-ಶಿವಮೊಗ್ಗ: SSLC ವಿದ್ಯಾರ್ಥಿಯ ಹತ್ಯೆ – 7 ಬಾಲಕರ ಬಂಧನ : ಹತ್ಯೆಯಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಕಾನೂನಡಿ ಶಿಕ್ಷೆಯಾಗುವಂತೆ ಮಾಡ್ತೇವೆ – ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿ ಸಿಎಂ
ನಗರದ ಹೊರವಲಯದ ಊರುಗಡೂರಿನಲ್ಲಿ ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಕ್ಷುಲ್ಲಕ ಗಲಾಟೆಯು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನ ಹತ್ಯೆಯಲ್ಲಿ ಅಂತ್ಯವಾಗಿದೆ. ಘಟನೆಗೆ ಸಂಬಂಧಿಸಿದಂತೆ ಏಳು ಮಂದಿ ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ: ನಗರದ ಹೊರವಲಯದ ಊರುಗಡೂರಿನಲ್ಲಿ ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಕ್ಷುಲ್ಲಕ ಗಲಾಟೆಯು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನ ಹತ್ಯೆಯಲ್ಲಿ ಅಂತ್ಯವಾಗಿದೆ. ಘಟನೆಗೆ ಸಂಬಂಧಿಸಿದಂತೆ ಏಳು ಮಂದಿ ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹತ್ಯೆಯಾದ ಬಾಲಕನನ್ನು ಊರುಗಡೂರು ಸರಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸಂಕೇತ್ (16) ಎಂದು ಗುರುತಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಶಾಲೆಯ ವಿಶೇಷ ತರಗತಿ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.
ಅಪ್ರಾಪ್ತರ ಕೃತ್ಯಕ್ಕೆ ಸಿಎಂ ದಿಗ್ಭ್ರಮೆ ಹಾಗೂ ಎಚ್ಚರಿಕೆ:
ವಿದ್ಯಾರ್ಥಿಯ ಹತ್ಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಕೊಲೆಯಲ್ಲಿ ಭಾಗಿಯಾದವರು ಚಿಕ್ಕಪ್ರಾಯದ ಹುಡುಗರು ಎಂದು ಕೇಳಿ ದಿಗ್ಭ್ರಮೆಯಾಯಿತು. ಭವಿಷ್ಯ ರೂಪಿಸಿಕೊಳ್ಳಬೇಕಾದ ಮಕ್ಕಳು ದುಶ್ಚಟ, ದ್ವೇಷಕ್ಕೆ ಬಲಿಯಾಗಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ. ಕೊಲೆಗೈದವರು ಯಾರೇ ಆಗಿರಲಿ, ಅವರಿಗೆ ಕಾನೂನಿನ ಮೂಲಕ ಕಠಿಣ ಶಿಕ್ಷೆ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ” ಎಂದಿದ್ದಾರೆ.
ಜೊತೆಗೆ, ಪೋಷಕರು ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು ಹಾಗೂ ಶಾಲೆಯ ಸುತ್ತಮುತ್ತ ಅಕ್ರಮಗಳು ನಡೆಯದಂತೆ ಆಡಳಿತ ಮಂಡಳಿ ಎಚ್ಚರ ವಹಿಸಬೇಕು ಎಂದು ಸಿಎಂ ಸಲಹೆ ನೀಡಿದ್ದಾರೆ. ಘಟನೆಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ:
ಮೃತ ವಿದ್ಯಾರ್ಥಿಯ ಪೋಷಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸೂಚನೆಯ ಮೇರೆಗೆ, ಮೃತನ ಕುಟುಂಬಕ್ಕೆ ಒಟ್ಟು 15 ಲಕ್ಷ ರೂ. ಪರಿಹಾರವನ್ನು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಘೋಷಿಸಿದ್ದಾರೆ. ಇದರಲ್ಲಿ 10 ಲಕ್ಷ ರೂ. ಸಿಎಂ ಪರಿಹಾರ ನಿಧಿಯಿಂದ ಹಾಗೂ 5 ಲಕ್ಷ ರೂ. ಶಿಕ್ಷಣ ಇಲಾಖೆಯಿಂದ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬಿಗಿ ಭದ್ರತೆ, ಗಣ್ಯರ ಭೇಟಿ:
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಾಜಿ ಸಂಸದ ಆಯನೂರು ಮಂಜುನಾಥ್ ಮೃತನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಊರುಗಡೂರು ಸೇರಿದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹತ್ಯೆ ಪ್ರಕರಣ ಕುರಿತು ಎಸ್ಪಿ ಹೇಳಿದ್ದೇನು?
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಮಂದಿ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಅವರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಕ್ರಿಕೆಟ್ ಆಟದ ವಿಚಾರವಾಗಿ ನಡೆದ ಕ್ಷುಲ್ಲಕ ಗಲಾಟೆಯು ಹತ್ಯೆಯಲ್ಲಿ ಅಂತ್ಯವಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮೃತ ಬಾಲಕನ ಜೊತೆ ಆರೋಪಿಗಳು ಕಳೆದ ಎರಡು ದಿನಗಳ ಹಿಂದೆಯೇ ಕ್ರಿಕೆಟ್ ಆಟದ ವಿಚಾರವಾಗಿ ಜಗಳವಾಡಿದ್ದರು. ಘಟನೆಯ ದಿನ ಬೇರೊಬ್ಬನ ಮೇಲೆ ಹಲ್ಲೆ ನಡೆಯುತ್ತಿದ್ದಾಗ ಜಗಳ ಬಿಡಿಸಲು ಹೋದ ಮೃತ ಬಾಲಕನ ಮೇಲೆ ಆರೋಪಿಗಳು ಕೈಯಿಂದ ತೀವ್ರವಾಗಿ ಗುದ್ದಿದ್ದಾರೆ. ಇದರಿಂದ ಗಂಭೀರ ಪೆಟ್ಟು ಬಿದ್ದು ಬಾಲಕ ಮೃತಪಟ್ಟಿದ್ದಾನೆ ಎಂದು ವಿವರಿಸಿದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್8 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ13 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು16 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized15 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್16 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ14 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















