Connect with us

ಅಪರಾಧ

Mass rape case-ಸಾಮೂಹಿಕ ಅತ್ಯಾಚಾರ ಪ್ರಕರಣ; ಹಲವಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ; ಮೌನಮುರಿದ ಸಂತ್ರಸ್ಥೆಯಿಂದ ನ್ಯಾಯಕ್ಕಾಗಿ ಮೊರೆ

Published

on

Ad Widget

Ad Widget

Ad Widget

Ad Widget

ಬೆಂಗಳೂರು ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಮೌನಮುರಿದಿರುವ ಸಂತ್ರಸ್ಥ ಯುವತಿ ತಮ್ಮ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನ ಜಕ್ಕೂರು ಬಳಿಯ ರೆಕ್ಸ್ ವಿಲ್ಲಾ ಎಂಬ ಸ್ಥಳದಲ್ಲಿ ಪಾರ್ಟಿಗೆ ಹೋಗಿದ್ದ ಯುವತಿ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರವೆಸಗಿದ್ದರು.

Ad Widget

Ad Widget

Ad Widget

Ad Widget

ಬೆಂಗಳೂರು: ಬೆಂಗಳೂರು ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಮೌನಮುರಿದಿರುವ ಸಂತ್ರಸ್ಥ ಯುವತಿ ತಮ್ಮ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನ ಜಕ್ಕೂರು ಬಳಿಯ ರೆಕ್ಸ್ ವಿಲ್ಲಾ ಎಂಬ ಸ್ಥಳದಲ್ಲಿ ಪಾರ್ಟಿಗೆ ಹೋಗಿದ್ದ ಯುವತಿ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರವೆಸಗಿದ್ದರು.

Ad Widget

Ad Widget alt="Ad Widget"/>

Ad Widget

ಈ ಸಂಬಂಧ ಯುವತಿ ನೀಡಿದ ದೂರಿನ ಆಧಾರದ ಮೇಲೆ ಅಮೃತಹಳ್ಳಿ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಡಿಕ್ಸನ್ ಸ್ಯಾಂಡೋ (21) ಮತ್ತು ಅವನ ಸ್ನೇಹಿತ ನಿಖಿಲ್ (35)ರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರ ವಿರುದ್ಧವೂ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎನ್‌ಎಸ್), 2023 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ.

Ad Widget

Ad Widget <> Ad Widget

ದೂರಿನ ವಿವರ:
ಸಂತ್ರಸ್ಥ ಯುವತಿ ತಮಿಳುನಾಡು ಮೂಲದವರಾಗಿದ್ದು, ಬೆಂಗಳೂರಿನ ಖಾಸಗಿ ಕಾಲೇಜಿಗೆ ದಾಖಲಾದ ಮೊದಲ ವರ್ಷದ ಬಿಎ ವಿದ್ಯಾರ್ಥಿನಿ. ಆಕೆ ಸುಮಾರು ಒಂದು ತಿಂಗಳ ಹಿಂದೆ ಇನ್‌ಸ್ಟಾಗ್ರಾಮ್ ಮೂಲಕ ಪಶ್ಚಿಮ ಬಂಗಾಳ ಮೂಲದ ಡಿಕ್ಸನ್ ಸ್ಯಾಂಡೊ (21) ಎಂಬಾತನನ್ನು ಸಂಪರ್ಕಿಸಿದ್ದಳು. ಬೆಂಗಳೂರಿನ ಕೋರಮಂಗಲದಲ್ಲಿರುವ ಕೆಫೆಯಲ್ಲಿ ಇಬ್ಬರೂ ಭೇಟಿಯಾಗಿದ್ದರು.

ಫೆಬ್ರವರಿ 14 ರ ರಾತ್ರಿ, ಆರೋಪಿ ಡಿಕ್ಸನ್ ಜಕ್ಕೂರು ಬಳಿಯ ರೆಕ್ಸ್ ವಿಲ್ಲಾ ಎಂಬ ಸ್ಥಳದಲ್ಲಿ ಪಾರ್ಟಿಗೆ ಸಂತ್ರಸ್ಥೆಯನ್ನು ಆಹ್ವಾನಿಸಿದ್ದಾನೆ. ಹೀಗಾಗಿ ಯುವತಿ ಮಧ್ಯರಾತ್ರಿಯ ನಂತರ ವಿಲ್ಲಾಗೆ ಹೋಗಿದ್ದು, ಈ ವೇಳೆ ಡಿಕ್ಸನ್ ತನ್ನ ಸಹಚರ ನಿಖಿಲ್ (35) ಜೊತೆ ವಿಲ್ಲಾದಲ್ಲಿದ್ದರು, ನಿಖಿಲ್ ಸಕಲೇಶಪುರದ ನಿವಾಸಿ ಎಂದು ವರದಿಯಾಗಿದೆ.

Ad Widget

Ad Widget

ಪಾರ್ಟಿ ವೇಳೆ ಮಾದಕವಸ್ತು!
ಪಾರ್ಟಿ ವೇಳೆ ಡಿಕ್ಸನ್ ತನಗೆ ಬಲವಂತವಾಗಿ ಗುಲಾಬಿ ಬಣ್ಣದ ಮಾತ್ರೆ ನೀಡಿದ್ದರು. ಬಳಿಕ ನನಗೆ ಪ್ರಜ್ಞೆ ತಪ್ಪಿತು. ಈ ವೇಳೆ ತನ್ನ ಇಚ್ಛೆಗೆ ವಿರುದ್ಧವಾಗಿ, ಆರೋಪಿಗಳಿಬ್ಬರೂ ವಿಲ್ಲಾದಲ್ಲಿನ ಒಂದು ಕೋಣೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮಾಲ್ ಬಳಿ ಬಿಡುವ ಮೊದಲು, ಆರೋಪಿಗಳಲ್ಲಿ ಒಬ್ಬನು ತನ್ನನ್ನು ಕೋಣೆಯಲ್ಲಿ ಹಲವಾರು ಗಂಟೆಗಳ ಕಾಲ ಬಂಧಿಸಿಟ್ಟಿದ್ದಾಗಿ ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ ಯಾರಿಗಾದರೂ ಈ ಕುರಿತು ಮಾಹಿತಿ ನೀಡಿದರೆ, ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಸಂತ್ರಸ್ಥೆ ಹೇಳಿದ್ದೇನು?
ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಈ ಕುರಿತು ವಿಡಿಯೋ ಹೇಳಿಕೆ ನೀಡಿರುವ ಸಂತ್ರಸ್ಥೆ, ‘ಡಿಕ್ಸನ್ ಮತ್ತು ನಿಖಿಲ್ ಇಬ್ಬರೂ ನನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇವರಿಬ್ಬರಿಗೂ ಇದೇ ಕೆಲಸ. ನನ್ನಂತಹ ಹಲವಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದಾರೆ. ನನಗೆ ನ್ಯಾಯಬೇಕು ಎಂದು ಹೇಳಿದ್ದಾರೆ.

ಪ್ರೀತಿ ಹೆಸರಲ್ಲಿ ಮೋಸ
ಪ್ರಮುಖ ಆರೋಪಿ ಡಿಕ್ಸನ್ ತನ್ನನ್ನು ಪ್ರೀತಿಸುವುದಾಗಿ ಹೇಳಿ ಮೋಸ ಮಾಡಿದ. ನನ್ನನ್ನು ಟ್ರಾಪ್ ಮಾಡಿ ತನ್ನ ಕೆಲಸಗಳಿಗೆ ಬಳಸಿಕೊಂಡ. ಇನ್ ಸ್ಟಾಗ್ರಾಮ್ ನಲ್ಲಿ ಡಿಕ್ಸನ್ ಪರಿಚಯವಾಗಿತ್ತು. ಫೋಟೋ ಶೂಟ್ ಮಾಡುವುದಾಗಿ ಹೇಳಿ ಆತ ಸ್ನೇಹ ಬೆಳೆಸಿದ್ದ.

ಬಳಿಕ ಪ್ರೀತಿಸುವುದಾಗಿ ಹೇಳಿದ್ದ. ಅವನ ಮಾತನ್ನು ನಂಬಿದ್ದೆ. ಒಂದು ದಿನ ಜಕ್ಕೂರಿನ ರೆಕ್ಸ್ ವಿಲ್ಲಾಗೆ ತೆರಳಿದಾಗ ನೀರಿನಲ್ಲಿ ನನಗೆ ಗುಲಾಬಿ ಬಣ್ಣದ ಮಾತ್ರೆ ಹಾಕಿ ಕೊಟ್ಟು ಪ್ರಜ್ಞಾಹೀನಾಳಾದ ಬಳಿಕ ಅತ್ಯಾಚಾರ ಮಾಡಿದರು. ಆರಂಭದಲ್ಲಿ ನಾನು ಇದಕ್ಕೆ ಪ್ರತಿರೋಧ ತೋರಿದೆ. ಆದರೆ ಸಮಯ ಕಳೆಯುತ್ತಿದ್ದಂತೆಯೇ ಪ್ರಜ್ಞೆ ತಪ್ಪಿತು. ಕೊಂಚ ಸಮಯದ ಬಳಿಕ ಎಚ್ಚರವಾದಾಗ ನನ್ನ ದೇಹದ ಮೇಲೆ ನಿಖಿಲ್ ಮತ್ತು ಕೆಳಗೆ ಡಿಕ್ಸನ್ ಇದ್ದರು. ಇಬ್ಬರೂ ಏಕಕಾಲದಲ್ಲಿ ನನ್ನ ಮೇಲೆ ಅತ್ಯಾಚಾರ ಮಾಡಿದರು ಎಂದು ಹೇಳಿದರು.

ಯಾವ ಹನಿಟ್ರ್ಯಾಪ್ ಇಲ್ಲ… ನಾನು ಯಾರಿಗೂ ಬ್ಲಾಕ್ ಮೇಲ್ ಮಾಡಿಲ್ಲ..
ಇದೇ ವೇಳೆ ವಿಡಿಯೋದಲ್ಲಿ ಯುವತಿ ತಾನು ಯಾರಿಗೂ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿಲ್ಲ.. ಅವರ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ.

Ad Widget
Click to comment

Leave a Reply

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!