Connect with us

ಬಿಗ್ ನ್ಯೂಸ್

Puttur-BIG BREAKING: ಪುತ್ತೂರಿನ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಂದ ಪ್ರತಿಭಟನೆ – ಶಾಸಕರ ಜತೆ ವಾಗ್ವಾದ ಪ್ರಕರಣ : ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

Published

on



Ad Widget

Ad Widget

Ad Widget

Ad Widget

ವಿದ್ಯಾರ್ಥಿನಿಯರ ಪ್ರತಿಭಟನೆ ತಡೆಯಲು ವಿಫಲರಾದ ಹಾಗೂ ಆಡಳಿತಾತ್ಮಕ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಮತ್ತು ಸಹ ಪ್ರಾಧ್ಯಾಪಕಿ ವೇದಶ್ರೀ ನಿದ್ಯಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

​ಪುತ್ತೂರು: ವಿದ್ಯಾರ್ಥಿನಿಯರ ಪ್ರತಿಭಟನೆ ತಡೆಯಲು ವಿಫಲರಾದ ಹಾಗೂ ಆಡಳಿತಾತ್ಮಕ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಮತ್ತು ಸಹ ಪ್ರಾಧ್ಯಾಪಕಿ ವೇದಶ್ರೀ ನಿದ್ಯಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

​ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಫೆಬ್ರವರಿ 26ರಂದು ಈ ಆದೇಶ ಹೊರಡಿಸಿದ್ದಾರೆ.

Ad Widget

Ad Widget <> Ad Widget

​ಪ್ರಕರಣದ ಹಿನ್ನೆಲೆ:
​ಕಳೆದ ಫೆಬ್ರವರಿ 16ರಂದು ಕಾಲೇಜಿನ ವಿದ್ಯಾರ್ಥಿನಿಯರು ಮುನ್ಸೂಚನೆ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು. ಕಾಲೇಜಿನ ಸಮೀಪದ ಡಯಾಲಿಸಿಸ್ ಕೇಂದ್ರದ ನಿರ್ಮಾಣದಿಂದ ಉಂಟಾಗುತ್ತಿರುವ ಆರೋಗ್ಯ ಸಮಸ್ಯೆ ಹಾಗೂ ಮೂಲಸೌಕರ್ಯಗಳ ಕೊರತೆ ಬಗ್ಗೆ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದರು.



Ad Widget

​ಅಮಾನತಿಗೆ ಕಾರಣಗಳು:
​ಸರ್ಕಾರದ ಆದೇಶದ ಪ್ರತಿ ಪ್ರಕಾರ, ಅಮಾನತಿಗೆ ಈ ಕೆಳಗಿನ ಪ್ರಮುಖ ಕಾರಣಗಳನ್ನು ಉಲ್ಲೇಖಿಸಲಾಗಿದೆ:

Ad Widget

Ad Widget

​ಪ್ರಚೋದನೆಯ ಆರೋಪ: ವಿದ್ಯಾರ್ಥಿನಿಯರಿಗೆ ತಪ್ಪು ಮಾಹಿತಿ ನೀಡಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಪ್ರಚೋದನೆ ನೀಡಿದ್ದಾರೆ ಎಂಬ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

​ಮಾಹಿತಿ ನೀಡದ ಲೋಪ: ವಿದ್ಯಾರ್ಥಿನಿಯರ ಸಮಸ್ಯೆಗಳ ಬಗ್ಗೆ ಸ್ಥಳೀಯ ಶಾಸಕರಿಗಾಗಲಿ ಅಥವಾ ಕಾಲೇಜು ಅಭಿವೃದ್ಧಿ ಸಮಿತಿಗಾಗಲಿ (CDC) ಯಾವುದೇ ಲಿಖಿತ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ.
​ಸಭೆ ನಡೆಸದಿರುವುದು: ಸಮಸ್ಯೆಗಳ ಕುರಿತು ಚರ್ಚಿಸಲು ಸಿಬ್ಬಂದಿ ಅಥವಾ ಅಭಿವೃದ್ಧಿ ಸಮಿತಿಯೊಂದಿಗೆ ಯಾವುದೇ ಸಭೆ ನಡೆಸಿದ ದಾಖಲೆಗಳಿಲ್ಲ.

​ಕರ್ತವ್ಯ ಲೋಪ: ಸಾರ್ವಜನಿಕ ಸ್ಥಳದಲ್ಲಿ ರಸ್ತೆ ತಡೆ ನಡೆಯುವಾಗ ಅದನ್ನು ತಡೆಯಲು ಅಥವಾ ಪರಿಸ್ಥಿತಿ ನಿಭಾಯಿಸಲು ಪ್ರಾಂಶುಪಾಲರು ವಿಫಲರಾಗಿದ್ದಾರೆ ಎಂದು ಪ್ರಾದೇಶಿಕ ಜಂಟಿ ನಿರ್ದೇಶಕರ ವರದಿ ತಿಳಿಸಿದೆ.

​”ವಿದ್ಯಾರ್ಥಿನಿಯರ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಆಡಳಿತಾತ್ಮಕ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ, ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳಡಿ ಶಿಸ್ತು ಕ್ರಮ ಜರುಗಿಸಿ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

​ಪ್ರಸ್ತುತ ಕಾಲೇಜಿನ ಹಿರಿಯ ಉಪನ್ಯಾಸಕರಿಗೆ ಪ್ರಾಂಶುಪಾಲರ ಜವಾಬ್ದಾರಿಯನ್ನು ಹಸ್ತಾಂತರಿಸಲು ಸೂಚಿಸಲಾಗಿದೆ.

Ad Widget
Click to comment

Leave a Reply

ಮಂಗಳೂರು

Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!

Published

on



Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget <> Ad Widget

“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.



Ad Widget
Ad Widget
Continue Reading

ಬಿಗ್ ನ್ಯೂಸ್

Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್

Published

on



Ad Widget

Ad Widget

Ad Widget

Ad Widget

ನಟ ದರ್ಶನ್‌ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ನಟ ದರ್ಶನ್‌ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈಗಾಗಲೇ ಪ್ರಕರಣದ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿರುವ ಅವರು, ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಈ ಬೆಳವಣಿಗೆ ಪ್ರಕರಣದ ಮುಂದಿನ ವಿಚಾರಣೆಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

Ad Widget

Ad Widget <> Ad Widget

ಇನ್ನೊಂದೆಡೆ, ಪ್ರಕರಣದ ಆರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದಿದೆ. ಜಾಮೀನು ಅರ್ಜಿಗಳ ಕುರಿತ ಆದೇಶವನ್ನು ನ್ಯಾಯಾಲಯ ಅಕ್ಟೋಬರ್ 17ಕ್ಕೆ ಕಾಯ್ದಿರಿಸಿದೆ.



Ad Widget

ವಿನಯ್ ಮಾಫಿ ಸಾಕ್ಷಿಯಾಗುವ ಅರ್ಜಿಯನ್ನು ವಾಪಸ್ ಪಡೆದಿರುವುದು ಪ್ರಕರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆದರೆ, ಈ ಬೆಳವಣಿಗೆಯಿಂದ ಪ್ರಕರಣದ ಇತರ ಆರೋಪಿಗಳ ಮೇಲೆ ಯಾವ ರೀತಿಯ ಪರಿಣಾಮ ಉಂಟಾಗಲಿದೆ ಎಂಬುದು ಮುಂದಿನ ಕಾನೂನು ಪ್ರಕ್ರಿಯೆಯಿಂದ ಸ್ಪಷ್ಟವಾಗಬೇಕಿದೆ.

Continue Reading

ಬಿಗ್ ನ್ಯೂಸ್

G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ವಿಶೇಷ ಕೊಡುಗೆ

Published

on



Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.



Ad Widget

ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading