Uncategorized
CM-‘ಬಿಜೆಪಿ ಆಡಳಿತದಲ್ಲಿ ಉರ್ದು ಜಾಹಿರಾತು ನೀಡಿ ಈಗ ನಮ್ಮ ಮೇಲೆ ಮುಗಿಬಿಳುವುದು ಅಸಹ್ಯದ ಪರಮಾವಧಿ’ – ದಾಖಲೆ ಬಿಡುಗಡೆ ಮಾಡಿ ಸಿಎಂ ತಿರುಗೇಟು
ಆರೋಗ್ಯ ಇಲಾಖೆಯ ಕಾರ್ಯಕ್ರಮವೊಂದರ ಉರ್ದು ಆಹ್ವಾನ ಪತ್ರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಬಿಜೆಪಿ ಅಧಿಕಾರದಲ್ಲಿದ್ದಾಗ ಉರ್ದು ಜಾಹೀರಾತುಗಳನ್ನು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುತ್ತಿರುವುದು ಅವರ ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ” ಎಂದು ಅವರು ಟೀಕಿಸಿದ್ದಾರೆ.
ಬೆಂಗಳೂರು: ಆರೋಗ್ಯ ಇಲಾಖೆಯ ಕಾರ್ಯಕ್ರಮವೊಂದರ ಉರ್ದು ಆಹ್ವಾನ ಪತ್ರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಬಿಜೆಪಿ ಅಧಿಕಾರದಲ್ಲಿದ್ದಾಗ ಉರ್ದು ಜಾಹೀರಾತುಗಳನ್ನು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುತ್ತಿರುವುದು ಅವರ ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ” ಎಂದು ಅವರು ಟೀಕಿಸಿದ್ದಾರೆ.
ಇತ್ತೀಚೆಗೆ ನೆಹರೂ ತಾರಾಲಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ಹಾಗೂ 108 ಆಂಬ್ಯುಲೆನ್ಸ್ ಸೇವೆಗಳ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ ಪ್ರಕಟಿಸಿದ್ದು ವಿಪಕ್ಷಗಳು ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಕುರಿತು ತಮ್ಮ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಸುದೀರ್ಘವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಹೇಳಿಕೆಯ ಪ್ರಮುಖ ಅಂಶಗಳು:
ಯಾರ ಓಲೈಕೆಗಾಗಿ ನೀಡಿದ್ದಿರಿ? ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದಾಗಲೂ ಉರ್ದು ಪತ್ರಿಕೆಗಳಿಗೆ ಜಾಹೀರಾತುಗಳನ್ನು ನೀಡಲಾಗಿತ್ತು. ಆಗ ಅವರು ಯಾರನ್ನು ಓಲೈಕೆ ಮಾಡಲು ಆ ಜಾಹೀರಾತು ನೀಡಿದ್ದರು ಎಂಬುದನ್ನು ಸ್ಪಷ್ಟಪಡಿಸಲಿ.
ಇದು ಸಾಮಾನ್ಯ ಪ್ರಕ್ರಿಯೆ:
ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಬೇಕು ಎಂಬ ಉದ್ದೇಶದಿಂದ, ಆಯಾ ಭಾಷೆಯ ಪತ್ರಿಕೆಗಳಲ್ಲಿ ಅದೇ ಭಾಷೆಯ ಜಾಹೀರಾತುಗಳನ್ನು ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಇದರಿಂದ ಓದುಗರಿಗೆ ಮಾಹಿತಿ ಸುಲಭವಾಗಿ ಅರ್ಥವಾಗುತ್ತದೆ.
ಬಿಜೆಪಿಯವರದ್ದು ಗೋಸುಂಬೆತನ:
ತಮ್ಮ ಕಾಲದಲ್ಲಿ ಉರ್ದು ಜಾಹೀರಾತು ನೀಡಿದಾಗ ಅವರಿಗೆ ಅದು ತುಷ್ಟೀಕರಣ ಎನಿಸಲಿಲ್ಲ. ಈಗ ನಮ್ಮ ಸರ್ಕಾರ ನೀಡಿದಾಗ ಮಾತ್ರ ಅವರೊಳಗಿನ ಕನ್ನಡಪ್ರೇಮ ಇದ್ದಕ್ಕಿದ್ದಂತೆ ಎಚ್ಚರವಾಗಿದೆ. ಬಿಜೆಪಿಯವರ ಈ ‘ಹಿಪೋಕ್ರಸಿ’ ಗೋಸುಂಬೆಯನ್ನೇ ನಾಚಿಸುವಂತಿದೆ.
ಪಾಠ ಕಲಿಯುವ ಅಗತ್ಯವಿಲ್ಲ:
ನೆಲ, ಜಲ, ಭಾಷೆಯ ವಿಚಾರದಲ್ಲಿ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳುವ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ನನ್ನ ರಾಜಕೀಯ ಜೀವನವೇ ‘ಕನ್ನಡ ಕಾವಲು ಸಮಿತಿ’ಯ ಅಧ್ಯಕ್ಷನಾಗಿ ಶುರುವಾಗಿದೆ. ಕನ್ನಡ ನನಗೆ ಕೇವಲ ಭಾಷೆಯಲ್ಲ, ಅದು ನನ್ನ ಬದುಕು. ಕನ್ನಡಿಗರ ಹಿತ ಕಾಯುವ ವಿಚಾರದಲ್ಲಿ ನಾನು ಸದಾ ಮುಂಚೂಣಿಯಲ್ಲಿರುತ್ತೇನೆ. ಹೀಗೆ ಕಟು ಶಬ್ದಗಳಲ್ಲಿ ಪ್ರತಿಕ್ರಿಯಿಸುವ ಮೂಲಕ, ಉರ್ದು ಜಾಹೀರಾತಿನ ಕುರಿತ ಟೀಕೆಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
Uncategorized
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಸುಮಾರು 250 ಮಂದಿಯನ್ನು ದೆಹಲಿ ಪೊಲೀಸರು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದವರಲ್ಲಿ ಸುಮಾರು 50 ಸಂಸದರೂ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನಾಕಾರರನ್ನು ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನ್ಯೂ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗಿದೆ.
ಆಕಾಶವಾಣಿ ಭವನದ ಆವರಣವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ ಪೊಲೀಸರು, ರಾಹುಲ್ ಗಾಂಧಿ ಅವರೊಂದಿಗೆ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಕೆ. ಸುರೇಶ್, ಅಮರಿಂದರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮತ್ತು ಮುಖಂಡರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿದರು.
ಸಂಸತ್ ಭವನದ ರಸ್ತೆಯಲ್ಲಿರುವ ಆಕಾಶವಾಣಿ ಭವನದಿಂದ ಕೇವಲ 300 ಮೀಟರ್ ದೂರದಲ್ಲಿರುವ ಚುನಾವಣಾ ಆಯೋಗದ ಕಚೇರಿಯತ್ತ ವಿರೋಧ ಪಕ್ಷಗಳ ಸಂಸದರು ನಡೆಸುತ್ತಿದ್ದ ಮೆರವಣಿಗೆಯನ್ನು ಪೊಲೀಸರು ತಡೆದಿದ್ದರು.
ಇದರಿಂದಾಗಿ ರಾಹುಲ್ ಗಾಂಧಿ ಮತ್ತು ಇತರ ಮುಖಂಡರು ಆಕಾಶವಾಣಿ ಭವನದ ಆವರಣ ಪ್ರವೇಶಿಸಿ ಅಲ್ಲಿಯೇ ಧರಣಿ ಕುಳಿತಿದ್ದರು.
Uncategorized
Puttur Piligobbu Season-4 : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಶ್ರೀ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
Uncategorized
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ

ಮಂಗಳೂರು, ಅ. 6: ನ್ಯಾಯಾಲಯದ ದಸ್ತಗಿರಿ ವಾರೆಂಟ್ ಜಾರಿಯಾಗಿದ್ದ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪುತ್ತೂರು ತಾಲ್ಲೂಕಿನ ನೆಕ್ಕಿಲಾಡಿ ಗ್ರಾಮದ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಫಾ (36) ಬಂಧಿತ ಆರೋಪಿ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 394 ಜೊತೆಗೆ 34ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿಗೆ ಶಿಕ್ಷೆಯಾಗಿತ್ತು. ಈ ತೀರ್ಪಿನ ವಿರುದ್ಧ ಅರೋಪಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅಪೀಲು ಹಾಕಿದ್ದರು .
ಈ ಅಪೀಲು ದಾಖಲಿಸಿದ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ನಿರಂತರವಾಗಿ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ದಸ್ತಗಿರಿ ವಾರೆಂಟ್ ಜಾರಿಗೊಳಿಸಿತ್ತು.ವಾರೆಂಟ್ ಆಧರಿಸಿ ಮಂಗಳವಾರ ಬೆಳಿಗ್ಗೆ ಪುತ್ತೂರು ತಾಲ್ಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಸುಭಾಷ್‌ನಗರದಲ್ಲಿರುವ ಆರೋಪಿಯ ಮನೆಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದರು.
ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಅವರ ನಿರ್ದೇಶನದಂತೆ, ಮಂಗಳೂರು ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ ಠಾಣೆಯ ಸಿಬ್ಬಂದಿಯೂ ಸಹಕರಿಸಿದರು.
-
ದಕ್ಷಿಣ ಕನ್ನಡ15 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized21 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ21 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ22 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ21 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಅಪರಾಧ14 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್20 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು21 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















