ರಾಜಕೀಯ
Puttur-ಪುತ್ತೂರಿಗೆ ವೈದ್ಯಕೀಯ ಕಾಲೇಜು ಇನ್ನಷ್ಟೂ ಹತ್ತಿರ : 300 ಹಾಸಿಗೆಗಳ ಆಸ್ಪತ್ರೆಗೆ ಸಚಿವ ಸಂಪುಟ ಅಸ್ತು..!” ಅಪಹಾಸ್ಯ ಮಾಡಿದವರಿಗೆ ತಕ್ಕ ಉತ್ತರ” – ಶಾಸಕ ಅಶೋಕ್ ಕುಮಾರ್ ರೈ
ದಕ್ಷಿಣ ಕನ್ನಡ ಜಿಲ್ಲೆಯ ಜನರ ದಶಕಗಳ ಕನಸಾಗಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪುತ್ತೂರಿನಲ್ಲಿ 300 ಹಾಸಿಗೆಗಳ ಸುಸಜ್ಜಿತ ‘ಪುತ್ತೂರು ಮೆಡಿಕಲ್ ಹಾಸ್ಪಿಟಲ್’ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಅಧಿಕೃತ ಅನುಮೋದನೆ ನೀಡಿದೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರ ದಶಕಗಳ ಕನಸಾಗಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪುತ್ತೂರಿನಲ್ಲಿ 300 ಹಾಸಿಗೆಗಳ ಸುಸಜ್ಜಿತ ‘ಪುತ್ತೂರು ಮೆಡಿಕಲ್ ಹಾಸ್ಪಿಟಲ್’ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಅಧಿಕೃತ ಅನುಮೋದನೆ ನೀಡಿದೆ. ಫೆಬ್ರವರಿ 26ರಂದು ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ಕೈಗೊಂಡ ನಿರ್ಧಾರ, ಜಿಲ್ಲೆಯ ಆರೋಗ್ಯ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಹೊಸ ಮೈಲುಗಲ್ಲು ಎಂದೇ ಬಣ್ಣಿಸಲಾಗುತ್ತಿದೆ.
ಬನ್ನೂರಿನಲ್ಲಿ ಭವ್ಯ ಆಸ್ಪತ್ರೆ, ವೈದ್ಯಕೀಯ ಕಾಲೇಜಿಗೆ ಭದ್ರ ಬುನಾದಿ
ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ತೂರಿನ ಹಾಲಿ 100 ಹಾಸಿಗೆಗಳ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ವೈದ್ಯಕೀಯ ಕಾಲೇಜು ಸ್ಥಾಪಿಸುವ ಭರವಸೆ ನೀಡಿದ್ದರು. ಈ ಭರವಸೆಯ ಮುಂದುವರಿದ ಭಾಗವಾಗಿ, ಪುತ್ತೂರಿನ ಬನ್ನೂರಿನಲ್ಲಿ ವೈದ್ಯಕೀಯ ಕಾಲೇಜಿಗಾಗಿ ಗುರುತಿಸಲಾಗಿರುವ 40 ಎಕರೆ ವಿಸ್ತೀರ್ಣದ ಜಾಗದಲ್ಲಿ ಈ ಬೃಹತ್ ಆಸ್ಪತ್ರೆ ತಲೆ ಎತ್ತಲಿದೆ. ಇತ್ತೀಚೆಗಷ್ಟೇ ಮಡಿಕೇರಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಡೀನ್, ಆರೋಗ್ಯ ಇಲಾಖೆ ಹಾಗೂ ಉನ್ನತ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ, ಕಾರ್ಯಸಾಧ್ಯತೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ಸಂಪುಟದ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಆಸ್ಪತ್ರೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ. ಇದು ವೈದ್ಯಕೀಯ ಕಾಲೇಜು ಸ್ಥಾಪನೆಗೆ ಭದ್ರ ಬುನಾದಿಯಾಗಲಿದೆ.
ಶಾಸಕ ಅಶೋಕ್ ಕುಮಾರ್ ರೈ ಅವರ ನಿರಂತರ ಹೋರಾಟಕ್ಕೆ ಸಂದ ಜಯ
ಪುತ್ತೂರು ವೈದ್ಯಕೀಯ ಕಾಲೇಜು ಸ್ಥಾಪನೆಗೆ ಶಾಸಕ ಅಶೋಕ್ ಕುಮಾರ್ ರೈ ಅವರು ನಿರಂತರವಾಗಿ ಶ್ರಮಿಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ, ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಪೂರ್ವಾಪೇಕ್ಷಿತವಾದ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ತಕ್ಷಣವೇ 300 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
ಆರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಹಿತೇಶ್ ಸಿಂಗ್, ಕಾರ್ಯದರ್ಶಿ ಪಿ.ಸಿ.ಜಾಫರ್ (ಬಜೆಟ್) ಹಾಗೂ ಪ್ರಧಾನ ಕಾರ್ಯದರ್ಶಿ ಎಂಟಇ ವೇಜು (ವೆಚ್ಚ) ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಶಾಸಕರು ಸರಣಿ ಸಭೆಗಳನ್ನು ನಡೆಸಿದ್ದರು. ಇಲಾಖಾ ಅಧಿಕಾರಿಗಳ ಸಹಕಾರವೂ ವೈದ್ಯಕೀಯ ಕಾಲೇಜು ಕನಸನ್ನು ನನಸಾಗಿಸಲು ಅನಿವಾರ್ಯ ಎಂಬುದನ್ನು ಮನಗಂಡು, ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚಿಸಿದ್ದರು. ಈ ಎಲ್ಲ ಪ್ರಯತ್ನಗಳ ಫಲವಾಗಿಯೇ ಇದೀಗ 300 ಹಾಸಿಗೆಗಳ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.
“ಜಿಲ್ಲೆಗೆ ಬಹುದೊಡ್ಡ ಯೋಜನೆ, ಅಪಹಾಸ್ಯ ಮಾಡಿದವರಿಗೆ ತಕ್ಕ ಉತ್ತರ” – ಶಾಸಕ ಅಶೋಕ್ ಕುಮಾರ್ ರೈ
ಸಂಪುಟದ ಅನುಮೋದನೆ ಕುರಿತು ತೀವ್ರ ಹರ್ಷ ವ್ಯಕ್ತಪಡಿಸಿರುವ ಶಾಸಕ ಅಶೋಕ್ ಕುಮಾರ್ ರೈ, “ಇದು ದಕ್ಷಿಣ ಕನ್ನಡ ಜಿಲ್ಲೆಗೆ ದೊರೆತ ಬಹುದೊಡ್ಡ ಮತ್ತು ಬಹುನಿರೀಕ್ಷಿತ ಯೋಜನೆಯಾಗಿದೆ. ಬಜೆಟ್‌ಗೂ ಮುನ್ನವೇ ಆಸ್ಪತ್ರೆಗೆ ಅನುಮೋದನೆ ಸಿಗಬೇಕು ಎಂಬ ನಮ್ಮ ಆಶಯ ಈಡೇರಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿ ಆರಂಭವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ವೈದ್ಯಕೀಯ ಕಾಲೇಜು ವಿಚಾರದಲ್ಲಿ ಅಪಹಾಸ್ಯ ಮಾಡಿದವರಿಗೆ ಈ ಮೂಲಕ ತಕ್ಕ ಉತ್ತರ ದೊರೆತಂತಾಗಿದೆ. ಮುಂಬರುವ ಬಜೆಟ್‌ನಲ್ಲಿ ವೈದ್ಯಕೀಯ ಕಾಲೇಜಿಗೆ ಅನುದಾನ ಸಿಗುವ ಸಂಪೂರ್ಣ ವಿಶ್ವಾಸವಿದೆ” ಎಂದು ರೈ ಹೇಳಿದರು. ಈ ಯೋಜನೆಯು ಪುತ್ತೂರು ಮಾತ್ರವಲ್ಲದೆ, ನೆರೆಹೊರೆಯ ತಾಲೂಕುಗಳ ಜನರ ಆರೋಗ್ಯ ಸೇವೆಗೂ ದೊಡ್ಡ ಕೊಡುಗೆಯಾಗಲಿದೆ.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
ಪುತ್ತೂರು21 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು24 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್23 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ24 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ22 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ23 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ23 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
-
ಶಿಕ್ಷಣ24 hours agoPhilomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ


















