ಕಾರ್ಯಕ್ರಮಗಳು
Gaaniga Sangama-2026-ಪುತ್ತೂರಿನಲ್ಲಿ ಮಾರ್ಚ್ 1ರಂದು ಪ್ರಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ‘ಗಾಣಿಗ ಸಂಗಮ-2026’ – ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಮುಖ್ಯ ಅತಿಥಿ
ಗಾಣಿಗ ಯಾನೆ ಸಪಲಿಗರ ಸಂಘ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ, ಇದೇ ಮಾರ್ಚ್ 1 ರಂದು ಪುತ್ತೂರಿನ ಸಾಲ್ಮರದಲ್ಲಿರುವ ಕೊಟೇಚಾ ಹಾಲ್‌ನಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ‘ಗಾಣಿಗ ಸಂಗಮ-2026’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಪುತ್ತೂರು: ಗಾಣಿಗ ಯಾನೆ ಸಪಲಿಗರ ಸಂಘ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ, ಇದೇ ಮಾರ್ಚ್ 1 ರಂದು ಪುತ್ತೂರಿನ ಸಾಲ್ಮರದಲ್ಲಿರುವ ಕೊಟೇಚಾ ಹಾಲ್‌ನಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ‘ಗಾಣಿಗ ಸಂಗಮ-2026’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಮಾಜ ಬಾಂಧವರ ಈ ಬೃಹತ್ ಸಮ್ಮೇಳನ ಬೆಳಗ್ಗಿನಿಂದ ಸಂಜೆಯವರೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಲಕ್ಷ್ಮೀಪ್ರಸಾದ್ ಬೆಟ್ಟ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರಹ್ಲಾದ್ ಮೋದಿ ಮುಖ್ಯ ಆಕರ್ಷಣೆ:
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಹಾಗೂ ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾದ ಮುಖ್ಯ ಸಲಹೆಗಾರರಾದ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಫೆ.28 ರಂದು ಮಂಗಳೂರಿಗೆ ಆಗಮಿಸಲಿರುವ ಅವರು, ಮಾ.1ರಂದು ಬೆಳಿಗ್ಗೆ ಶ್ರೀ ಲಕ್ಷ್ಮೀದೇವಿ ಬೆಟ್ಟ ಹಾಗೂ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಸಮಾರಂಭಕ್ಕೆ ಆಗಮಿಸಲಿದ್ದಾರೆ.
ಉದ್ಘಾಟನೆ ಮತ್ತು ಗಣ್ಯರ ಉಪಸ್ಥಿತಿ:
ಬೆಳಿಗ್ಗೆ 10 ಗಂಟೆಗೆ ಮುಂಬೈ ಸಾಪಲ್ಯ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಪಲ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಗೌರವ ಅತಿಥಿಗಳಾಗಿ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಮುಖ್ಯ ಅತಿಥಿಗಳಾಗಿ ದ.ಕ.ಸಂಸದ ಕ್ಯಾ।ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಅಖಿಲ ಕರ್ನಾಟಕ ಗಾಣಿಗರ ಸಂಘ ಬೆಂಗಳೂರು ಇದರ ಎಂ.ಆರ್.ರಾಜಶೇಖರ ಗಾಣಿಗ, ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಅಖಿಲ ಕರ್ನಾಟಕ ಜ್ಯೋತಿನಗರ ವೈಶ್ಯ ಗಾಣಿಗ ಸಂಘದ ಅಧ್ಯಕ್ಷಪಿ.ಜಿ.ವಿಜಯ್ ಕುಮಾರ್, ಗಿರಿಜಾ ವೆಲ್ ಫೇರ್ ಅಸೋಸಿಯೇಶನ್ ಮುಂಬೈ ಇದರ ಅಧ್ಯಕ್ಷ, ಉದ್ಯಮಿ ವಸಂತ ಜಿ ಸಪಲ್ಯ ಮುಂಬೈ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಬಂಟ್ವಾಳ ತಾ.ಪಂ.ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಮಾಧವ ಮಾವೆ, ಹರ್ಷ ಬಿಲ್ಡರ್ಸ್ ಮಂಗಳೂರು ಇದರ ಹರೀಶ್ ಕುತ್ತಾರು, ಗಾಣಿಗ ಸಂಘ ಉಪ್ಪಿನಂಗಡಿ ಇದರ ಅಧ್ಯಕ್ಷ ಹರಿರಾಮಚಂದ್ರ, ಉದ್ಯಮಿ ಭುವನೇಶ್ ರಘು ಸಪಲ್ಯ ಪಾಣೆಮಂಗಳೂರು ಆಗಮಿಸಲಿರುವರು. ಅದಲ್ಲದೇ ಊರ-ಪರವೂರ ಅತಿಥಿಗಣ್ಯರು ಆಗಮಿಸಲಿದ್ದಾರೆ ಎಂದವರು ಹೇಳಿದರು.
ಸಾಧಕರಿಗೆ ಸನ್ಮಾನ:
ಸಭಾ ಕಾರ್ಯಕ್ರಮದ ನಡುವೆ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸ್ವಜಾತಿ ಬಾಂಧವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ.ದೇಶ ಕಾಯುವ ವೀರ ಯೋಧರು, ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಹಲವಾರು ಮಂದಿಯನ್ನು ಸನ್ಮಾನಿಸಲಾಗುವುದು ವಿಶೇಷವಾಗಿ ಸಮಾಜದಲ್ಲಿ ಕಲೆಯನ್ನು ಉಳಿಸಿಕೊಂಡು ಬಂದಿರುವ ಕೊಂಬು/ಕಹಳೆಯ ಸೇವೆ ಮಾಡುವವರನ್ನು ಗೌರವಿಸಲಾಗುವುದು ಎಂದು ಲಕ್ಷ್ಮೀಪ್ರಸಾದ್ ಬೆಟ್ಟ ತಿಳಿಸಿದರು.
ಬೇಡಿಕೆಯ ಮನವಿ:
ಸರಕಾರದಿಂದ ಸಮಾಜ ಬಾಂಧವರಿಗೆ ವಿವಿಧ ಸೌಲಭ್ಯದ ಬೇಡಿಕೆ ಕುರಿತು ಸಮಾರ೦ಭದಲ್ಲಿ ಸಂಬಂಧಪಟ್ಟವರಿಗೆ ಮನವಿ ನೀಡಲಿದ್ದೇವೆ. ಮುಂದೆ ಸಮಾಜದ ಬಾಂಧವರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ಸೌಲಭ್ಯ ನೀಡುವ ಕುರಿತೂ ಮನವಿ ಮಾಡಲಾಗುವುದು ಎಂದು ಲಕ್ಷ್ಮೀಪ್ರಸಾದ್ ಬೆಟ್ಟ ಹೇಳಿದರು.
ಡ್ಯಾನ್ಸ್ ಡ್ಯಾನ್ಸ್-‘ಗಾಣಿಗ ಟ್ರೋಫಿ 2026 :
ಮಧ್ಯಾಹ್ನದ ಬಳಿಕ ಡ್ಯಾನ್ಸ್ ಆ್ಯಂಡ್ ಡ್ಯಾನ್ಸ್ ಗಾಣಿಗ ಟ್ರೋಫಿ-2026 ನಡೆಯಲಿದೆ.ಸೆಮಿಕ್ಲಾಸಿಕಲ್, ಜಾನಪದ ನೃತ್ಯ, ಸಂಸ್ಕಾರಯುತವಾದ ಚಲನಚಿತ್ರ ಗೀತೆಯ ನೃತ್ಯಕ್ಕೆ ಅವಕಾಶ ನೀಡಲಾಗಿದ್ದು ಇದರಲ್ಲಿ ಪ್ರಥಮ ಬಹುಮಾನವಾಗಿ ರೂ.10 ಸಾವಿರ ಮತ್ತು ಗಾಣಿಗ ಟ್ರೋಫಿ, ದ್ವಿತೀಯ ರೂ.5 ಸಾವಿರ ಮತ್ತು ಗಾಣಿಗ ಟ್ರೋಫಿ, ತೃತೀಯ ರೂ.3 ಸಾವಿರ ಮತ್ತು ಗಾಣಿಗ ಟ್ರೋಫಿ ನೀಡಲಾಗುವುದು.ಸಂಜೆ ಸರಳ ಸಮಾರಂಭದಲ್ಲಿ ಸಮಾಜದ ಸಂಘದ ಪದಾಧಿಕಾರಿಗಳಿಗೆ ಸನ್ಮಾನ ಮತ್ತು ಬಹುಮಾನ ವಿತರಣೆ ನಡೆಯಲಿದೆ.ಬಳಿಕ ದಿನೇಶ್ ಕೊಡಪದವು ಅವರಿಂದ ‘ಯಕ್ಷ ತೆಲಿಕೆ’ ಹಾಸ್ಯ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸಂದೀಪ್ ನೆಲ್ಲಿಕಟ್ಟೆ ತಿಳಿಸಿದರು.
ಪ್ರತಿ ಮನೆಯ ಸಂಪರ್ಕ:
ಗಾಣಿಗ ಯಾನೆ ಸಪಲಿಗರ ಸಂಘವನ್ನು ಇತ್ತೀಚೆಗಷ್ಟೆ ಪುತ್ತೂರಿನಲ್ಲಿ ರಚನೆ ಮಾಡಲಾಗಿದ್ದು, ಸಂಘದ ಚುಟವಟಿಕೆಗೆ ಪೂರಕವಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾರ್ಯಕ್ರಮದ ಯಶಸ್ವಿಗಾಗಿ ಸಮಾಜದ ಪ್ರತಿ ಮನೆ ಮನೆ ಸಂಪರ್ಕ ಮಾಡಿ ಸಮಾಜ ಬಾಂಧವರ ಮನೆ ಸಂಖ್ಯೆ ಪಟ್ಟಿ ಮಾಡುತ್ತಿದ್ದೇವೆ. ಪುತ್ತೂರಿನಲ್ಲಿ ಈಗಾಗಲೇ ಸುಮಾರು 2 ಸಾವಿರಕ್ಕೂ ಮೇಲ್ಪಟ್ಟು ಸಮಾಜ ಬಾಂಧವರಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಜಯಂತ ಉರ್ಲಾಂಡಿ ಅವರು ತಿಳಿಸಿದ್ದಾರೆ.
ಬಡತನ ನಿರ್ಮೂಲನೆ, ಆರೋಗ್ಯ, ವಿದ್ಯಾಭ್ಯಾಸದ ಗುರಿ:
ಸಾಪಲ್ಯ ಸೇವಾ ಸಂಘ ಮುಂಬೈಯ ಸದಸ್ಯರು ಮತ್ತು ಪುತ್ತೂರು ಸಂಘದ ಗೌರವ ಸಲಹೆಗಾರರಾಗಿರುವ ಕಿರಣ್ ಕುಮಾರ್ ಸಪಲ್ಯ ಕಲ್ಲೇಗ ಅವರು ಮಾತನಾಡಿ ಸಮಾಜ ಬಾಂಧವರಲ್ಲಿ ಬಡತನ ನಿಮೂರ್ಲನೆ, ಆರೋಗ್ಯ, ವಿದ್ಯಾಭ್ಯಾಸದ ಗುರಿಯನ್ನು ಇಟ್ಟುಕೊಂಡು ಸಂಘ ಕೆಲಸ ಮಾಡಲಿದೆ.ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಸಂಘದ ಮೂಲಕ ಸಂಪರ್ಕಿಸಿ ಅವರ ಸಮಸ್ಯೆಗಳಿಗೆ ಸಂಘದ ಮೂಲಕ ಸ್ಪಂದನೆ ನೀಡುವ ಯೋಜನೆ ಹಮ್ಮಿಕೊಂಡು ಸಂಘಟನೆ ಬೆಳೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಗಾಣಿಗ ಯಾನ ಸಹಲಿಗರ ಸಂಘದ ಉಪಾಧ್ಯಕ್ಷ ಪ್ರದೀಪ್ ಬೊಳ್ಳಾರು, ಗೌರವ ಸಲಹೆಗಾರ ಹೇಮಚಂದ್ರ ಬೊಳ್ತಾರು ಉಪಸ್ಥಿತರಿದ್ದರು.
ಸೀರೆ ವಿತರಣೆ-ವಧು, ವರರ ಅನ್ವೇಷಣೆ
ಬೆಳಿಗ್ಗೆ 9ರಿಂದ 10ರ ಒಳಗೆ ಸಭಾಂಗಣದಲ್ಲಿ ಉಪಸ್ಥಿತರಿರುವ 20 ವರ್ಷ ಮೇಲಟ ಮಹಿಳೆಯರಿಗೆ ಉಚಿತ ಸೀರೆ ವಿತರಣೆ ನಡೆಯಲಿದೆ. ಇದರ ಜೊತೆಗೆ ವಧು-ವರರ ಅನ್ವೇಷಣೆಯ ನೋಂದಾವಣೆ ಕೂಡಾ ನಡೆಯಲಿದೆ ಎಂದು ಲಕ್ಷ್ಮೀಪ್ರಸಾದ್ ಬೆಟ್ಟ ತಿಳಿಸಿದ್ದಾರೆ.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
ಸ್ಥಳೀಯ
Savanoor-ಸವಣೂರು ಆದರ್ಶ ಸಹಕಾರ ಸಂಘದ ರಜತ ಮಹೋತ್ಸವ ಸಂಭ್ರಮ: ‘ಸಹಕಾರ ರಶ್ಮಿ’ ನೂತನ ಕಟ್ಟಡ ಉದ್ಘಾಟನೆ
ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.
ಪುತ್ತೂರು: ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ ನ.16ರಂದು ಸವಣೂರಿನಲ್ಲಿ ನಡೆಯಿತು.

ಆದರ್ಶ ರಜತ ಪ್ರಶಸ್ತಿ ಪ್ರದಾನ
ಹಿರಿಯ ಸಹಕಾರಿ, ಸಹಕಾರ ರತ್ನ ಜಾಕೆ ಮಾಧವ ಗೌಡ ಅವರಿಗೆ ಆದರ್ಶ ರಜತ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಅವರು ಪ್ರಶಸ್ತಿ ಪತ್ರ ವಾಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಗ್ಗೆ ಯಜೇಶ್ ಆಚಾರ್ ಮತ್ತು ಬಳಗ ಸುಬ್ರಹ್ಮಣ್ಯ ಇವರಿಂದ ಭಕ್ತಿ ಗಾನಾಮೃತ, ಉಮೇಶ್ ದೇವಾಡಿಗ ಪುತ್ತೂರು ಬಳಗದವರಿಂದ ರಾಗ್‌ರಂಗ್ ಸಂಗೀತ ಕಾರ್ಯಕ್ರಮ, ಅಪರಾಹ್ನಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ಮತ್ತು ಬಳಗದವರಿಂದ ಯಕ್ಷನೃತ್ಯ ರೂಪಕ ನಡೆಯಿತು. ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಸನ್ಮಾನ:
ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರನ್ನು ಅವರ ಶಿಷ್ಯ ವೃಂದದವರು ಸನ್ಮಾನಿಸಿ ಗೌರವಿಸಿದರು. ಸಂಘದ ಆಡಳಿತ ಮಂಡಳಿಯಲ್ಲಿ ಆರಂಭದಿಂದಲೇ ನಿರ್ದೇಶಕರಾಗಿರುವ ಎನ್.ಸುಂದರ ರೈ ಸವಣೂರು, ಎಸ್.ಎಮ್. ಬಾಪು ಸಾಹೇಬ್ ಸುಳ್ಯ, ಬಿ.ಮಹಾಬಲ ರೈ ಬೋಳಂತೂರು, ಪೂರ್ಣಿಮ ಎಸ್. ಆಳ್ವ ಮಂಗಳೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದಲ್ಲಿ ಆರಂಭದಿಂದಲೇ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಮಹಾಪ್ರಬಂಧಕರಾಗಿರುವ ವಸಂತ್ ಜಾಲಾಡಿ, ನಿವೃತ್ತರಾದ ಸಿಬ್ಬಂದಿಗಳಾದ ಮೋನಪ್ಪ ಗೌಡ ವಿಟ್ಲ, ಶ್ರೀನಿವಾಸ ತಂತ್ರಿ ಉಜಿರೆ, ಮನೋಜ್‌ಕುಮಾರ್ ಸುಳ್ಯ, ಸುರೇಖಾ ಬೆಳ್ತಂಗಡಿ, ನಿತ್ಯ ನಿಧಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ಶಾಖೆಯ ಕೃಷ್ಣಪ್ಪ, ಸುಬ್ರಹ್ಮಣ್ಯ ಶಾಖೆಯ ಶ್ರೀನಿವಾಸ ಡಿ., ಉಜಿರೆ ಶಾಖೆಯ ಮಂಜುನಾಥ ಶೆಟ್ಟಿ, ಸಂಘದ ಗುತ್ತಿಗೆದಾರ ಎಂ.ಎನ್.ಪ್ರಭಾಕರ್( ಡೆಕ್ಕನ್ ಡೀಲ್ ಪುತ್ತೂರು), ಕಟ್ಟಡದ ಇಂಜಿನಿಯರ್ ಸಚ್ಚಿದಾನಂದ (ನಿರ್ಮಾಣ್ ಅಸೋಸಿಯೇಟ್ಸ್ ಪುತ್ತೂರು) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮ ನಿರೂಪಿಸಿದ ರಾಕೇಶ್ ರೈ ಕೆಡೆಂಜಿಯವರಿಗೆ ಗೌರವಾರ್ಪಣೆ ಮಾಡಲಾಯಿತು.

ದಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಸವಣೂರು ಗ್ರಾ.ಪಂ.ಆಡಳಿತಾಧಿಕಾರಿ ಹರೀಶ್ ಕೆ., ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ ಸವಣೂರು, ಮಹಾಪ್ರಬಂಧಕ ವಸಂತ್ ಜಾಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೀತಾರಾಮ ರೈ ಅವರು ಎಡನೀರು ಮತ್ತು ಒಡಿಯೂರು ಶ್ರೀಗಳಿಗೆ ತುಳಸಿ ಹಾರ, ಫಲಪುಷ್ಪ ನೀಡಿ ಗೌರವಿಸಿದರು. ನಿರ್ದೇಶಕರಾದ ಎನ್.ಜಯಪ್ರಕಾಶ್ ರೈ ಸುಳ್ಯ, ಮಹಾಬಲ ರೈ ಬೋಳಂತೂರು, ಎಸ್.ಎಮ್.ಬಾಪೂ ಸಾಹೇಬ್, ಪೂರ್ಣಿಮಾ ಎಸ್.ಆಳ್ವ, ವಿ.ವಿ.ನಾರಾಯಣ ಭಟ್, ರಾಮಯ್ಯ ರೈ ತಿಂಗಳಾಡಿ, ಅಶ್ವಿನ್ ಎಲ್.ಶೆಟ್ಟಿ ಸವಣೂರು, ಸೀತಾರಾಮ ಶೆಟ್ಟಿ ಮಂಗಳೂರು, ಮಹಾದೇವ ಮಂಗಳೂರು, ಯಮುನಾ ಎಸ್ ರೈ ಗುತ್ತುಪಾಲ್, ಅರಿಯಡ್ಕ ಚಿಕ್ಕಪ್ಪ ನ್ಯಾಕ್, ರಶ್ಮಿ ಎಸ್.ರೈ ಸವಣೂರು ಅತಿಥಿಗಳನ್ನು ಗೌರವಿಸಿದರು.

ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು ವಂದಿಸಿದರು. ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ಪವಿತ್ರಾ ರೂಪೇಶ್ ಪುತ್ತೂರು ಪ್ರಾರ್ಥನೆಗೈದರು. ಸಂಘದ ಸಹಾಯಕ ಮಹಾಪ್ರಬಂಧಕ ಸುನಾರಾಜ್ ಶೆಟ್ಟಿ ಮತ್ತು ಸಿಬ್ಬಂದಿಗಳು ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಬೆಳಗ್ಗೆ – ಉಪಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
-
ಅಪರಾಧ15 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ22 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ21 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ15 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ20 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಬಿಗ್ ನ್ಯೂಸ್14 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸ್ಥಳೀಯ21 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ21 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ















