Uncategorized
Ramachandrapura Mat-ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತು – ಪ್ರಧಾನ ಮಠದ ಪುನರ್ನಿರ್ಮಾಣ ಸಹಸ್ರಮಾನದ ಕಾರ್ಯ : ರಾಘವೇಶ್ವರ ಶ್ರೀ; ಶಿಲಾನ್ಯಾಸದ ಸಂದರ್ಭದಲ್ಲಿ ಅಯೋಧ್ಯೆಯ ಪುಣ್ಯ ಮಣ್ಣಿನ ನಿಕ್ಷೇಪ; ಪುನರ್ನಿರ್ಮಾಣಕ್ಕೆ 1008 ದಿನಗಳ ಗುರಿ; ನಾಡಿನ ವಿವಿಧ ಭಾಗಗಳ ಸಹಸ್ರಾರು ಜನರು ಭಾಗಿ
- ಶ್ರೀ ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.
- ಶ್ರೀ ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.
- ಹೊಸನಗರದ ಶ್ರಿರಾಮಚಂದ್ರಾಪುರ ಮಠದ ಶರಾವತಿ ತೀರದಲ್ಲಿ ಪ್ರಧಾನಮಠ ಪುನ ನಿರ್ಮಾಣ ಸಮಿತಿಯವರು ಏರ್ಪಡಿಸಿದ್ದ ನವ ನಿರ್ಮಾಣದ ರಾಮಸಾನ್ನಿಧ್ಯದ ಶಿಲಾನ್ಯಾಸ ಕಾರ್ಯಕ್ರದಲ್ಲಿ ಶಿಲಾನ್ಯಾಸ ನೆರವೇರಿಸಿ ನಂತರದ ಧರ್ಮಸಭೆಯ ದಿವ್ಯಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.
- ರಾಮಚಂದ್ರಾಪುರಮಠದ ಕುರಿತು ಹೊರ ಜಗತ್ತಿನಲ್ಲಿ ಇರುವ ಕಲ್ಪನೆಯೇ ಬೇರೆ. ಅದು ಹಣವಿರುವ ಅತ್ಯಂತ ಸಂಪದ್ಬರಿತ ಮಠ, ಇಲ್ಲಿ ಹಣದ ಕೊಪ್ಪರಿಗೆಯೇ ಇದೆ ಎಂದು ಹಲವಾರು ಭಾವಿಸಿದ್ದಾರೆ. ಆದರೆ ನಿಜವಾಗಿಯೂ ನಮ್ಮಲ್ಲಿ ಹಣದ ಕೊಪ್ಪರಿಗೆ ಇಲ್ಲ. ಎಲ್ಲ ಯೋಜನೆಗಳು ಶೂನ್ಯದಿಂದಲೇ ಆರಂಭಗೊಳ್ಳುತ್ತದೆ. ಆದರೆ ನಮಗೆ ಶಿಷ್ಯರೇ ಸಂಪತ್ತಾಗಿದ್ದು, ನಮ್ಮ ಶಿಷ್ಯರು ಗುರುವಿನ ಯಾವ ಆದೇಶವನ್ನು ಮೀರಿ ನಡೆದವರಲ್ಲ. ಸಂಕಷ್ಟವಿದ್ದಾಗಲೂ ಸಂಭ್ರಮವಿರುವಾಗಲೂ ಮಠದೊಂದಿಗೆ ಅವರ ಭಾವನಾತ್ಮಕವಾದ ಸಂಬಂಧವಿದೆ ಹಾಗಾಗಿಯೇ ಗುರುಗಳು ಎಂತಹ ಯೋಜನೆಗಳನ್ನು ಮುಂದಿಟ್ಟರೂ ನಮ್ಮ ಮಠ ಎಂಬ ಪ್ರೀತಿಯಿಂದ ಸ್ವೀಕರಿಸುತ್ತಾರೆ ಎಂದರು.

- ಗೋಕರ್ಣದಲ್ಲಿ ಶಂಕರಾಚಾರ್ಯರು ಸಂಸ್ಥಾಪಿಸಿದ ಮಠವನ್ನು ಹೊಸನಗರದ ರಾಮಚಂದ್ರಾಪುರ ಮಠ ಶತಮಾನಗಳ ಮೊದಲು ತನ್ನತ್ತ ಎಳೆದುಕೊಂಡಿದೆ. ರಾಮನ ಬಾಣದಿಂದ ಹೊರಹೊಮ್ಮಿದ ಶರಾವತಿ ನದಿಯ ತೀರದಲ್ಲಿ ನಮ್ಮ ಪ್ರಧಾನ ಮಠ ನೆಲನಿಂತಿರುವುದು ವಿಶೇಷವಾಗಿದೆ. ಈ ಪುಣ್ಯ ನೆಲಕ್ಕೆ ವಿಶೇಷ ಮಹತ್ವವಿದೆ. ಹಾಗಾಗಿ ಸುಮ್ಮನೆ ಕಟ್ಟುವ ಕಟ್ಟಡವೂ ಗಟ್ಟಿಯಾಗುವುದು ಇಲ್ಲಿಯ ವಾಡಿಕೆ ಎಂದ ಅವರು ಇಂದಿನ ಶಿಲಾನ್ಯಾಸ ಸಹಸ್ರಮಾನದ ಇತಿಹಾಸಕ್ಕೆ ನಾಂದಿಯಾಗಲಿದೆ ಎಂದರು.
- ಈಗಿರುವ ಮಠವನ್ನು ಗಮನಿಸಿದರೆ ಹಿಂದೆ ಯಾವುದೋ ಆಪತ್ಕಾಲದಲ್ಲಿ ಅದನ್ನು ನಿರ್ಮಿಸಿದಂತಿದೆ. ಅದನ್ನು ಸರಿಪಡಿಸುವ ಕಾರ್ಯಕ್ಕೆ ಇದೀಗ ಚಾಲನೆ ದೊರಕಿದ್ದು, ಅಯೋಧ್ಯೆಯ ಪುಣ್ಯ ಮಣ್ಣನ್ನು ಇಲ್ಲಿ ಶಿಲಾನ್ಯಾಸದ ಸಂದರ್ಭದಲ್ಲಿ ನಿಕ್ಷೇಪ ಮಾಡಲಾಗಿದೆ ಎಂದರು.
- ಪ್ರಧಾನ ಮಠದ ಪುನರ್ನಿರ್ಮಾಣಕ್ಕೆ 1008 ದಿನಗಳ ಗುರಿಯನ್ನು ನೀಡಲಾಗಿದ್ದು, ಆನಂತರ 8 ದಿನಗಳ ವೈಭವದ ಕಾರ್ಯಕ್ರಮದ ಮೂಲಕ ಪ್ರಧಾನ ಮಠದ ಲೋಕಾರ್ಪಣೆ ನೆರವೇರಲಿದೆ. ಇದು ಈ ಹಿಂದೆ ಇಲ್ಲಿ ನಡೆದ ರಾಮಾಯಣ ಮಹಾಸತ್ರ ಹಾಗೂ ವಿಶ್ವ ಗೋಸಮ್ಮೇಳನದ ವೈಭವವನ್ನು ನೆನಪಿಸುವಂತಿರಲಿದೆ ಎಂದು ತಿಳಿಸಿದರು.

- ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ನಮ್ಮ ಜೀವನದಲ್ಲಿ ನಿಜವಾದ ಪವಾಡಗಳನ್ನು ನೋಡುವಂತೆ ಮಾಡಿದ ಸ್ಥಳ ರಾಮಚಂದ್ರಾಪುರ ಮಠ ಹಾಗೂ ಇಲ್ಲಿನ ಗುರುಗಳು ಎಂದರು.
- ಸಾಗರದ ಹಾಗೂ ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಗೋಸಂರರಕ್ಷಣೆಯಿಂದಲೇ ಹೆಸರು ಪಡೆದಿರುವ ನಮ್ಮ ಮಠ ಅಭಿವೃದ್ದಿಯಾಗಬೇಕು ಎನ್ನುವುದು ನಮ್ಮ ಕನಸು ಮನಸ್ಸು ಎಲ್ಲವೂ ಹೌದು. ಆ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಹಕಾರಕ್ಕೆ ನಾನು ಬದ್ದನಿದ್ದೇನೆ ಎಂದರು.
- ಮಲೆನಾಡ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ 2007-08 ರಲ್ಲಿ ಶ್ರೀಮಠದಲ್ಲಿ ನಡೆದಿದ್ದ, ದೇಶ ವಿದೇಶಗಳ ಲಕ್ಷಾಂತರ ಜನರು ಬಂದಿದ್ದ ರಾಮಾಯಣ ಮಹಾಸತ್ರ ಹಾಗೂ ವಿಶ್ವ ಗೋಸಮ್ಮೇಳನದ ನೆನಪನ್ನು ಹಂಚಿಕೊಂಡರು.
- ಶಿಮುಲ್ ಅಧ್ಯಕ್ಷ ವಿದ್ಯಾಧರ ಗುರುಶಕ್ತಿ ಮಾತನಾಡಿ ಈ ಮಹಾನ್ ಕಾರ್ಯಕ್ಕೆ ತಮ್ಮ ಬೆಂಬಲವನ್ನು ತಿಳಿಸಿದರು.

- ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಪ್ರಧಾನಮಠದ ಪುನ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ್‍ರಾವ್ ಕಾರಣಗಿರಿ, ಸಮಿತಿಯ ಕಾರ್ಯಾಧ್ಯಕ್ಷ ಗಣಪತಿ ಭಟ್ ಜಟ್ಟಿಮನೆ, ಶಾಸನ ತಂತ್ರದ ಅಧ್ಯಕ್ಷ ಮೋಹನಭಾಸ್ಕರ ಹೆಗಡೆ ಮುಂತಾದವರು ಉಪಸ್ಥಿತಿತರಿದ್ದರು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಶಿಷ್ಯ – ಭಕ್ತರು ಕಾರ್ಯಕ್ರಮಗಳಿಗೆ ಸಾಕ್ಷಿಯಾದರು.

- ಇದಕ್ಕೂ ಮುನ್ನ ಬೆಳಗ್ಗೆ 9 ಗಂಟೆಗೆ ಶಿಲಾನ್ಯಾಸದ ಶಿಲೆಯ ಮೆರವಣಿಗೆ, ಗುರುನಿವಾಸ ನಿರ್ಮಾಣದ ಸ್ಥಳದಲ್ಲಿ ಶ್ರೀಗುರುಪಾದುಕಾ ಸ್ತೋತ್ರ ಸಮರ್ಪಣೆ, ಶ್ರೀರಾಮತಾರಕ ಜಪ, ಸಹಸ್ರಾಧಿಕ ಕುಂಕುಮಾರ್ಚನೆ, ಶತಾಧಿಕ ರುದ್ರಪಠಣಪೂರ್ವಕ ಅಭಿಷೇಕ, ಶಾರದಾಷ್ಟಕ ಪಠಣ, ಹಾಗೂ ವಿಶೇಷವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಸಾಗರ, ಕಾಸರಗೋಡು ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಶಿಷ್ಯರಿಂದ ಮುಷ್ಟದ್ರವ್ಯ ಸಮರ್ಪಣೆ ನಡೆಯಿತು.
Uncategorized
Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.
ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:
ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.
ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.
Uncategorized
Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.
ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.
ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.
ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.
ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು
ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ
ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ
Uncategorized
YouTuber Dhruv Rati-ಎಸ್ಐಆರ್ ವಿರುದ್ಧ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ : ಖ್ಯಾತ ಯೂಟ್ಯೂಬರ್ ದ್ರುವ್ ರಾಠಿ ಹೋರಾಟಕ್ಕೆ ಎಂಟ್ರಿ..!
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಖ್ಯಾತ ಯೂಟ್ಯೂಬರ್ ಧ್ರುವ ರಾಠಿ, ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ, ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರರಾದ ಪ್ರಕಾಶ್ ರಾಜ್ ಮತ್ತು ಕಿಶೋರ್, ಸಿಜೆಪಿ ಪ್ರಮುಖರಾದ ಅಭಿಜಿತ್ ದೀಪ್ಕೆ, ಅಶುತೋಷ್ ರಾಂಕಾ, ಆಯಿಷಾ ಘೋಷ್ ಹಾಗೂ ಸೌರವ್ ದಾಸ್, ಹಿರಿಯ ಸಾಹಿತಿ ದೇವನೂರ ಮಹಾದೇವ, ನೂರ್ ಶ್ರೀಧರ್, ಕೆ. ಮಹಾಂತೇಶ್, ತಾಹೇರ್ ಹುಸೇನ್, ಅಬ್ದುಲ್ ಮಜೀದ್, ಮುಹಮ್ಮದ್ ಯೂಸುಫ್ ಕನ್ನಿ, ಫಾ. ಅರುಣ್ ಲೂಯಿಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪ, ನಮೂನೆ-7ರ ದುರುಪಯೋಗ, ನೋಟಿಸ್ ನೀಡುವ ಪ್ರಕ್ರಿಯೆಯಲ್ಲಿನ ಗೊಂದಲ ಹಾಗೂ ಮತದಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ.
ರಾಜ್ಯದ ವಿವಿಧ ಭಾಗಗಳಿಂದ ಎಸ್‌ಐಆರ್‌ನಿಂದ ಸಂತ್ರಸ್ತರಾಗಿದ್ದಾರೆ ಎನ್ನಲಾದ ಮತದಾರರು, ನಾಗರಿಕ ಹಕ್ಕುಗಳ ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಸಾರ್ವಜನಿಕ ವಿಚಾರಣೆ ನಡೆಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಸಾಹಿತಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ‘ಜನತಾ ನ್ಯಾಯಾಲಯ’ದ ವಿಚಾರಣೆಯಲ್ಲಿ ಭಾಗವಹಿಸಲಿದ್ದಾರೆ. ವಿಚಾರಣೆಯ ಬಳಿಕ ಸಿದ್ಧಪಡಿಸುವ ವರದಿಯನ್ನು ಚುನಾವಣಾ ಆಯೋಗ ಹಾಗೂ ನ್ಯಾಯಾಲಯಗಳ ಗಮನಕ್ಕೆ ತರಲು ಆಯೋಜಕರು ಉದ್ದೇಶಿಸಿದ್ದಾರೆ.
ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಧ್ವನಿ ದಾಖಲಿಸುವಂತೆ ಎಸ್‌ಐಆರ್ ವಿರೋಧಿ ಒಕ್ಕೂಟ ಹಾಗೂ ನಾಗರಿಕ ಹಕ್ಕುಗಳ ಸಂಘಟನೆಗಳು ಕರೆ ನೀಡಿವೆ.
-
Uncategorized19 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized21 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ23 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized7 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್24 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಸ್ಥಳೀಯ23 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ6 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ


















