Connect with us

ಬಿಗ್ ನ್ಯೂಸ್

Puttur-Big Breaking: ಮಹಾಲಿಂಗೇಶ್ವರನ ಸ್ವತ್ತು ಮರುಸ್ವಾಧೀನ: 60 ವರ್ಷಗಳ ಬಳಿಕ ದೇವಳದ ವಶಕ್ಕೆ ನೆಲ್ಲಿಕಟ್ಟೆಯ ಜಮೀನು..! ‘ಪ್ರೀತಿಯಿಂದ ಬಿಟ್ಟುಕೊಡುತ್ತಿದ್ದೇವೆ’ – ವಾಲ್ಟರ್

Published

on

Ad Widget

Ad Widget

Ad Widget

Ad Widget

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಜಮೀನನ್ನು ಮರುಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಚುರುಕುಗೊಂಡಿದ್ದು, ಶನಿವಾರ ನೆಲ್ಲಿಕಟ್ಟೆ ಅಶ್ವತ್ಥ ಮರದ ಬಳಿ ಇದ್ದ ಮನೆಯೊಂದನ್ನು ಸೌಹಾರ್ದಯುತವಾಗಿ ತೆರವುಗೊಳಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸ್ಥಳೀಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಜಮೀನನ್ನು ಮರುಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಚುರುಕುಗೊಂಡಿದ್ದು, ಶನಿವಾರ ನೆಲ್ಲಿಕಟ್ಟೆ ಅಶ್ವತ್ಥ ಮರದ ಬಳಿ ಇದ್ದ ಮನೆಯೊಂದನ್ನು ಸೌಹಾರ್ದಯುತವಾಗಿ ತೆರವುಗೊಳಿಸಲಾಯಿತು.
​ಕಳೆದ ಒಂದು ವರ್ಷದಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರ ನೇತೃತ್ವದಲ್ಲಿ ದೇವಳದ ಸ್ವತ್ತುಗಳ ಸಂರಕ್ಷಣಾ ಕಾರ್ಯ ನಡೆಯುತ್ತಿದೆ. ಇದರ ಭಾಗವಾಗಿ ನೆಲ್ಲಿಕಟ್ಟೆಯಲ್ಲಿ ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿದ್ದ ವಾಲ್ಟರ್ ಲೋಬೋ ಎಂಬುವವರ ವಶದಲ್ಲಿದ್ಧ ಮನೆಯನ್ನು ಶನಿವಾರ ತೆರವುಗೊಳಿಸಿ, ಜಾಗವನ್ನು ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು. ಈ ಮೂಲಕ ದೇಗುಲಕ್ಕೆ 1ಕೋಟಿಗೂ ಅಧಿಕ ಮೌಲ್ಯದ ಸುಮಾರು 8 ಸೆಂಟ್ಸ್ ಜಾಗ ಸಿಕ್ಕಿದಂತಾಗಿದೆ

Ad Widget

Ad Widget alt="Ad Widget"/>

Ad Widget

​60 ವರ್ಷಗಳ ನೆನಪು: ಪ್ರೀತಿಯಿಂದ ಬಿಟ್ಟುಕೊಟ್ಟ ಮಾಲೀಕ
​ಸುಮಾರು 60 ವರ್ಷಗಳಿಂದ ಈ ಜಾಗದಲ್ಲಿ ಮನೆ ಹೊಂದಿದ್ದ ವಾಲ್ಟರ್ ಲೋಬೋ ಅವರು ದೇವಸ್ಥಾನದ ಅಭಿವೃದ್ಧಿ ದೃಷ್ಟಿಯಿಂದ ಯಾವುದೇ ಅಡ್ಡಿಪಡಿಸದೆ ಸ್ವಇಚ್ಛೆಯಿಂದ ಜಾಗ ಬಿಟ್ಟುಕೊಡಲು ಸಮ್ಮತಿಸಿದರು.

Ad Widget

Ad Widget <> Ad Widget

“ದೇವಸ್ಥಾನಕ್ಕೆ ಸೇರಿದ ಜಮೀನನ್ನು ಯಾವುದೇ ಸಂಘರ್ಷವಿಲ್ಲದೆ, ಪ್ರೀತಿ ಮತ್ತು ಸೌಹಾರ್ದತೆಯಿಂದ ಬಿಟ್ಟುಕೊಡುತ್ತಿದ್ದೇನೆ,” ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು. ಈ ಮನೆಯನ್ನು ಅವರು ಕಳೆದ ಹಲವು ವರ್ಷಗಳಿಂದ ಬಾಡಿಗೆಗೆ ನೀಡುತ್ತಿದ್ದರು ಎನ್ನಲಾಗಿದೆ

​ತೆರವು ಕಾರ್ಯದ ವೇಳೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ವಿನಯ ಸುವರ್ಣ, ಸುಭಾಷ್ ರೈ ಬೆಳ್ಳಿಪ್ಪಾಡಿ, ಈಶ್ವರ ಬೇಡೆಕರ್ ಉಪಸ್ಥಿತರಿದ್ದರು. ಭಕ್ತಾಧಿಗಳಾದ ಲೋಕೇಶ್ ಪಡ್ಡಾಯೂರು, ಪ್ರಕಾಶ್ ಗೌಡ ನೆಕ್ಕಿಲಾಡಿ, ರೋಹನ್ ರಾಜ್ ಹಾಗೂ ದೇವಳದ ಸಿಬ್ಬಂದಿಗಳು ಸಹಕರಿಸಿದರು.

Ad Widget

Ad Widget

ಈ ಕುರಿತು ಮಾಹಿತಿ ನೀಡಿರುವ ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ ಭಟ್‌ ಪಂಜಿಗುಡ್ಡೆ, “ದೇವಸ್ಥಾನದ ಜಾಗವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಶಾಸಕರು ಈ ಹಿಂದೆ ವಾಲ್ಟರ್‌ ಲೋಬೋ ಅವರೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ಅವರು ತೆರವಿಗೆ ಮೊದಲು 4 ತಿಂಗಳ ಕಾಲಾವಕಾಶ ಕೇಳಿದ್ದರು. ಆ ಬಳಿಕ 1 ತಿಂಗಳು ಹಾಗೂ ತದನಂತರ 15 ದಿನಗಳ ಕಾಲಾವಕಾಶ ಕೋರಿದ್ದರು. ಅವರ ಕೋರಿಕೆಯಂತೆ ದೇವಸ್ಥಾನದ ಸಮಿತಿಯೂ ಸ್ಪಂದಿಸಿ ಅವಕಾಶ ನೀಡಿತ್ತು. ಇದೀಗ ಫೆ. 28ರಂದು ತಾವು ನೀಡಿದ್ದ ಮಾತಿನಂತೆ ವಾಲ್ಟರ್ ಲೋಬೋ ಅವರು ಸೌಹಾರ್ದಯುತವಾಗಿ ಜಾಗವನ್ನು ದೇವಸ್ಥಾನಕ್ಕೆ ಬಿಟ್ಟುಕೊಟ್ಟಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪುರಾತನ ಅಶ್ವತ್ಥ ಮರಕ್ಕೆ ವಿಧಿವತ್ತಾದ ಸಂಸ್ಕಾರ:
“ತೆರವುಗೊಳಿಸಲಾದ ಈ ಜಾಗದಲ್ಲಿರುವ ಪುರಾತನ ಅಶ್ವತ್ಥ ಮರಕ್ಕೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದ ದಿ. ಸುಧಾಕರ ಶೆಟ್ಟಿಯವರು ಈ ಹಿಂದೆ ಕಟ್ಟೆಯನ್ನು ನಿರ್ಮಿಸಿದ್ದರು. ವಾರ್ಷಿಕ ಜಾತ್ರೋತ್ಸವದ ಎರಡನೇ ದಿನ ದೇವರು ನೆಲ್ಲಿಕಟ್ಟೆಗೆ ವಿಹಾರಕ್ಕೆ ತೆರಳುವ ಸಂದರ್ಭದಲ್ಲಿ ಇದೇ ಅಶ್ವತ್ಥ ಕಟ್ಟೆಯಲ್ಲಿ ದೇವರಿಗೆ ‘ಕಟ್ಟೆಪೂಜೆ’ ನೆರವೇರಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದೀಗ ಜಾಗ ದೇವಸ್ಥಾನದ ವಶಕ್ಕೆ ಬಂದಿರುವುದರಿಂದ, ಈ ಅಶ್ವತ್ಥ ಮರಕ್ಕೆ ಉಪನಯನ, ವಿವಾಹದಂತಹ ಸಾಂಪ್ರದಾಯಿಕ ಸಂಸ್ಕಾರ ಕಾರ್ಯಗಳನ್ನು ದೇವಸ್ಥಾನದ ವತಿಯಿಂದಲೇ ವಿಧಿವತ್ತಾಗಿ ನೆರವೇರಿಸಲಾಗುವುದು” ಎಂದು ಅವರು ಮಾಹಿತಿ ನೀಡಿದರು.

“ಸುಮಾರು 8ರಿಂದ 10 ಸೆಂಟ್ಸ್ ಜಾಗವನ್ನು ಮನಃಪೂರ್ವಕವಾಗಿ ದೇವಸ್ಥಾನಕ್ಕೆ ಬಿಟ್ಟುಕೊಟ್ಟಿರುವ ವಾಲ್ಟರ್‌ ಲೋಬೋ ಅವರ ಕಾರ್ಯ ಶ್ಲಾಘನೀಯ. ಅವರಿಗೆ ಹಾಗೂ ಅವರ ಕುಟುಂಬಕ್ಕೆ ಶ್ರೀ ಮಹಾಲಿಂಗೇಶ್ವರ ದೇವರು ಆಯುರಾರೋಗ್ಯ, ನೆಮ್ಮದಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಈಶ್ವರ ಭಟ್ ಪಂಜಿಗುಡ್ಡೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮೂರು ಮನೆಗಳಿಗೆ ಕಾಲಾವಕಾಶ:
ನೆಲ್ಲಿಕಟ್ಟೆಯಲ್ಲಿ ದೇವಸ್ಥಾನದ ಜಾಗದಲ್ಲಿರುವ ಇನ್ನೂ 3 ಮನೆಗಳನ್ನು ತೆರವುಗೊಳಿಸುವ ಕಾರ್ಯ ಬಾಕಿಯಿದೆ. ಈ ಪೈಕಿ ಒಂದು ಮನೆಯವರು ಮಕ್ಕಳ ಪರೀಕ್ಷೆಯ ಕಾರಣಕ್ಕೆ 2 ತಿಂಗಳು ಹಾಗೂ ಮತ್ತೊಂದು ಮನೆಯವರು ಮದುವೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ 3 ತಿಂಗಳ ಕಾಲಾವಕಾಶ ಕೋರಿದ್ದಾರೆ. ಮಾನವೀಯ ನೆಲೆಯಲ್ಲಿ ಅವರ ಕೋರಿಕೆಯನ್ನು ಪುರಸ್ಕರಿಸಲಾಗಿದ್ದು, ಆ ಅವಧಿ ಮುಗಿದ ಬಳಿಕ ಆ ಮನೆಗಳನ್ನೂ ಸೌಹಾರ್ದಯುತವಾಗಿ ತೆರವುಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!