ಶಿಕ್ಷಣ
Ambika-ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಮೌಲ್ಯಾಧಾರಿತ ಶಿಕ್ಷಣಕ್ಕೆ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ಪ್ರದಾನ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಮೌಲ್ಯಾಧಾರಿತ ಶಿಕ್ಷಣಕ್ಕಾಗಿ ದಿ ಟೈಮ್ಸ್ ಆಫ್ ಇಂಡಿಯಾ ನೀಡುವ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ದೊರಕಿದೆ. ಮಂಗಳೂರಿನ ಅವತಾರ್ ಹೋಟೇಲ್‌ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ನೀಡಿ ಗೌರವಿಸಲಾಗಿದೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಮೌಲ್ಯಾಧಾರಿತ ಶಿಕ್ಷಣಕ್ಕಾಗಿ ದಿ ಟೈಮ್ಸ್ ಆಫ್ ಇಂಡಿಯಾ ನೀಡುವ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ದೊರಕಿದೆ. ಮಂಗಳೂರಿನ ಅವತಾರ್ ಹೋಟೇಲ್‌ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ನೀಡಿ ಗೌರವಿಸಲಾಗಿದೆ.
ಅಂತರಾಷ್ಟ್ರೀಯ ಬಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಪರವಾಗಿ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಹಾಗೂ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್. ಪ್ರಶಸ್ತಿಯನ್ನು ಸ್ವೀಕರಿಸಿದರು.
ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಬಪ್ಪಳಿಗೆಯಲ್ಲಿ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆ, ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯ, ಅಂಬಿಕಾ ಪದವಿ ಮಹಾವಿದ್ಯಾಲಯ ಹಾಗೂ ನೆಲ್ಲಿಕಟ್ಟೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಮುನ್ನಡೆಯುತ್ತಿವೆ.
ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮಾತ್ರವಲ್ಲದೆ ದೇಶಪ್ರೇಮ, ಧರ್ಮಜಾಗೃತಿ, ಸನಾತನ ಸಂಸ್ಕೃತಿ – ಸಂಸ್ಕಾರಗಳನ್ನು ಪ್ರತಿನಿತ್ಯ ವಿದ್ಯಾರ್ಥಿಗಳಲ್ಲಿ ಒಡಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಯೋಗವನ್ನು ಪಠ್ಯಕ್ರಮದಲ್ಲಿ ಸೇರಿಸಿದ ರಾಜ್ಯದ ಮೊದಲ ಪದವಿ ಪೂರ್ವ ಶಿಕ್ಷಣ ಸಂಸ್ಥೆಯಾಗಿ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಗುರುತಿಸಿಕೊಂಡಿವೆ.
ತಮ್ಮ ಮಕ್ಕಳು ಸಂಸ್ಕಾರವಂತರಾಗಿ ಬೆಳೆಯಬೇಕೆಂಬ ಉದ್ದೇಶದಿಂದಲೇ ಎಷ್ಟೋ ಮಂದಿ ಹೆತ್ತವರು ಅಂಬಿಕಾವನ್ನು ಅರಸಿ ಬರುತ್ತಿದ್ದಾರೆ. ಆಧುನಿಕ ದಿನಮಾನಗಳ ನಕಾರಾತ್ಮಕ ಆಕರ್ಷಣೆಗಳಿಗೆ ವಿದ್ಯಾರ್ಥಿಗಳು ಬಲಿಯಾಗದಂತೆ ಕಾಯುವುದಲ್ಲದೆ ಅತ್ಯುತ್ತಮ, ರಾಷ್ಟçಕ್ಕೆ ಪೂರವಾದ ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿಕೊಡಲಾಗುತ್ತಿದೆ. ದೇಶದ ಸಾಹಸಗಾಥೆಗಳ ನಿಜ ಇತಿಹಾಸವನ್ನು ವಿದ್ಯಾರ್ಥಿಗಳ ಮುಂದೆ ಅನಾರಣಗೊಳಿಸಿ ದೇಶದ ಬಗೆಗೆ ಹೆಮ್ಮೆ ಮೂಡುವಂತೆ ಮಾಡಲಾಗುತ್ತಿದೆ.
ನಮ್ಮ ಪ್ರತಿಯೊಬ್ಬ ವಿದ್ಯಾರ್ಥಿಯೂ ಈ ದೇಶದ ರಾಯಭಾರಿಯಂತಾಗಬೇಕು. ಭಗವದ್ಗೀತೆಯಂತಹ ಉತ್ಕೃಷ್ಟ ಹಾಗೂ ಪವಿತ್ರ ವಿಚಾರಗಳಿಂದ ನಮ್ಮ ಮಕ್ಕಳು ಪುನೀತರಾಗಿ ಬೆಳೆಯಬೇಕು. ನಮ್ಮ ಆಚಾರ ವಿಚಾರಗಳನ್ನು ಮನನ ಮಾಡಿಕೊಂಡು ಬೆಳೆದಾಗ ಅವರೆಲ್ಲರೂ ನಿಜಾರ್ಥದಲ್ಲಿ ಭಾರತೀಯರೆನಿಸುತ್ತಾರೆ. ಶಿಕ್ಷಣ ಸಂಸ್ಥೆಗಳು ದೇಶದ ಬಗೆಗೆ ಅಭಿಮಾನವಿಲ್ಲದವರನ್ನು ಸೃಷ್ಟಿಸಿದರೆ ಅದು ಈ ದೇಶಕ್ಕೆ ಮಾಡುವ ಅವಮಾನವೆನಿಸುತ್ತದೆ. – ಸುಬ್ರಮಣ್ಯ ನಟ್ಟೋಜ, ಅಧ್ಯಕ್ಷರು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
-
Uncategorized16 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್10 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು13 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized14 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ14 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ15 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ13 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್14 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















